SOCIAL MEDIA

Newsletter

PARTNER SITES
Select Language Select State

ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ಬಾಲಿವುಡ್ ನಟರಿಗೆ ಬೆದರಿಕೆ; ಬೆಂಗಳೂರಿನಲ್ಲಿ ಐಟಿ ಎಂಜಿನಿಯರ್ ಬಂಧನ!

ಇದೇ ವೇಳೆ, ನಟ ತುಷಾರ್ ಕಪೂರ್ ಅವರಿಂದ ಬರೋಬ್ಬರಿ 5 ಕೋಟಿ ರೂಪಾಯಿ ಹಣ ನೀಡುವಂತೆ ಬೇಡಿಕೆಯಿಟ್ಟಿದ್ದ ಎಂಬ ಆರೋಪವೂ ಕೇಳಿಬಂದಿದೆ. ಹಣ ನೀಡದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂಬ ರೀತಿಯಲ್ಲಿ ಬೆದರಿಕೆ ಸಂದೇಶ ಕಳುಹಿಸಲಾಗಿತ್ತು ಎನ್ನಲಾಗಿದೆ.

Written By Chetana Devarmani
Published: Nov 04, 2026, 11:34 PM IST | Updated: Nov 04, 2026, 11:35 PM IST
Join

ಬಾಲಿವುಡ್ ಚಿತ್ರರಂಗದ ನಟರಿಗೆ ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆಯಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು ಬೆಂಗಳೂರಿನಲ್ಲಿ 30 ವರ್ಷದ ಆರೋಪಿ ವೈಭವ್ ಮಿಶ್ರಾನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಐಟಿ ಎಂಜಿನಿಯರ್ ಆಗಿದ್ದು, ಬಾಲಿವುಡ್ ನಟರಾದ ತುಷಾರ್ ಕಪೂರ್ ಮತ್ತು ಆಯುಷ್ಮಾನ್ ಖುರಾನಾ ಸೇರಿದಂತೆ ಹಲವು ಸೆಲೆಬ್ರಿಟಿಗಳಿಗೆ ಬೆದರಿಕೆ ಹಾಕಿರುವ ಶಂಕೆ ವ್ಯಕ್ತವಾಗಿದೆ.

ಮಾಹಿತಿಯ ಪ್ರಕಾರ, ನಟ ತುಷಾರ್ ಕಪೂರ್ ಅವರಿಗೆ ಇನ್‌ಸ್ಟಾಗ್ರಾಂ ಮೂಲಕ ಅನಾಮಧೇಯ ಆಡಿಯೋ ಸಂದೇಶವೊಂದು ಬಂದಿತ್ತು. ಈ ಸಂದೇಶದಲ್ಲಿ ಮಾತನಾಡಿದ್ದ ವ್ಯಕ್ತಿ, ತಾನು ಬಿಷ್ಣೋಯ್ ಗ್ಯಾಂಗ್‌ನ ಪ್ರಮುಖ ಶೂಟರ್ ಎಂದು ಹೇಳಿಕೊಂಡಿದ್ದ. ಅಲ್ಲದೆ, ತನ್ನನ್ನು ‘ಹ್ಯಾರಿ ಬಾಕ್ಸರ್’ ಎಂದು ಪರಿಚಯಿಸಿಕೊಂಡು ನಟನಿಗೆ ಬೆದರಿಕೆ ಹಾಕಿದ್ದ ಎನ್ನಲಾಗಿದೆ.

ಇದೇ ವೇಳೆ, ನಟ ತುಷಾರ್ ಕಪೂರ್ ಅವರಿಂದ ಬರೋಬ್ಬರಿ 5 ಕೋಟಿ ರೂಪಾಯಿ ಹಣ ನೀಡುವಂತೆ ಬೇಡಿಕೆಯಿಟ್ಟಿದ್ದ ಎಂಬ ಆರೋಪವೂ ಕೇಳಿಬಂದಿದೆ. ಹಣ ನೀಡದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂಬ ರೀತಿಯಲ್ಲಿ ಬೆದರಿಕೆ ಸಂದೇಶ ಕಳುಹಿಸಲಾಗಿತ್ತು ಎನ್ನಲಾಗಿದೆ.

ಇನ್ನು ನಟ ಆಯುಷ್ಮಾನ್ ಖುರಾನಾ ಅವರಿಗೂ ಇದೇ ಮಾದರಿಯಲ್ಲಿ ಆಡಿಯೋ ಕ್ಲಿಪ್ ಕಳುಹಿಸಿ ಬೆದರಿಕೆ ಹಾಕಲಾಗಿತ್ತು ಎಂದು ತಿಳಿದುಬಂದಿದೆ. ಇಬ್ಬರು ನಟರಿಗೆ ಮಾತ್ರವಲ್ಲದೆ, ಬಾಲಿವುಡ್‌ನ ಇನ್ನೂ ಹಲವು ಸೆಲೆಬ್ರಿಟಿಗಳಿಗೂ ಆರೋಪಿ ಇದೇ ರೀತಿಯಲ್ಲಿ ಬೆದರಿಕೆ ಹಾಕಿರುವ ಸಾಧ್ಯತೆಯ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು ತಾಂತ್ರಿಕ ಮಾಹಿತಿ ಹಾಗೂ ಇತರ ಸುಳಿವುಗಳನ್ನು ಆಧರಿಸಿ ತನಿಖೆ ಕೈಗೊಂಡಿದ್ದರು. ಈ ವೇಳೆ ಬೆಂಗಳೂರಿನಲ್ಲಿ ಆರೋಪಿ ವೈಭವ್ ಮಿಶ್ರಾ ಇರುವುದನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ. ಬಳಿಕ ಆತನನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಗಾಗಿ ಮುಂಬೈಗೆ ಕರೆದುಕೊಂಡು ಹೋಗಿದ್ದಾರೆ.

ಐಟಿ ಎಂಜಿನಿಯರ್ ಆಗಿರುವ ವೈಭವ್ ಮಿಶ್ರಾ, ಬಿಷ್ಣೋಯ್ ಗ್ಯಾಂಗ್‌ನ ಹೆಸರನ್ನು ಬಳಸಿಕೊಂಡು ಸೆಲೆಬ್ರಿಟಿಗಳನ್ನು ಬೆದರಿಸುತ್ತಿದ್ದನೇ ಅಥವಾ ಈ ಪ್ರಕರಣದಲ್ಲಿ ಬೇರೆ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.

ಒಟ್ಟಿನಲ್ಲಿ, ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ಬಾಲಿವುಡ್ ನಟರಿಗೆ ಬೆದರಿಕೆ ಹಾಕಿ ಕೋಟ್ಯಂತರ ರೂಪಾಯಿ ಹಣಕ್ಕೆ ಬೇಡಿಕೆಯಿಟ್ಟಿರುವ ಪ್ರಕರಣ ಚಿತ್ರರಂಗದಲ್ಲಿ ಆತಂಕ ಮೂಡಿಸಿದೆ. ಆರೋಪಿಯ ಬಂಧನದ ಬಳಿಕ ಈ ಬೆದರಿಕೆ ಜಾಲದ ಹಿಂದೆ ಇರುವ ಇತರ ವ್ಯಕ್ತಿಗಳ ಬಗ್ಗೆಯೂ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.
 

Add Zee News as a Preferred Source
TAGS:

About the Author

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."

ZEENEWS TRENDING STORIES