• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಬೆಂಗಳೂರು
  • /ಸದನದಲ್ಲಿ ಸಿಎಂ ಎರಡನೇ ಮದುವೆ ಬಾಂಬ್! ಡಿ.ಕೆ.ಶಿವಕುಮಾರ್‌ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಸದನದಲ್ಲಿ ಸಿಎಂ ಎರಡನೇ ಮದುವೆ ಬಾಂಬ್! ಡಿ.ಕೆ.ಶಿವಕುಮಾರ್‌ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಸದನದಲ್ಲಿ ಕೆಲವು ಶಾಸಕರು ಎರಡೆರಡು ಮದುವೆಯಾಗಿದ್ದಾರೆ ಎಂಬ ಸಿಎಂ ಡಿಕೆಶಿ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಸಿಎಂ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

Written ByChetana Devarmani
Published: Sep 26, 2026, 05:33 PM IST|Updated: Sep 26, 2026, 05:35 PM IST
joinshare
ಸದನದಲ್ಲಿ ಸಿಎಂ ಎರಡನೇ ಮದುವೆ ಬಾಂಬ್! ಡಿ.ಕೆ.ಶಿವಕುಮಾರ್‌ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿ

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಂಗಳೂರು: ಸದನದಲ್ಲಿ ಶಾಸಕರ ವೈಯಕ್ತಿಕ ವಿಚಾರ ಪ್ರಸ್ತಾಪಿಸಿ ಎರಡು ಮದುವೆಯಾಗಿದ್ದಾರೆ ಎಂದ ಸಿಎಂ ಹೇಳಿಕೆಗೆ ಇದೀಗ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಯಾಗ್ತಿದೆ. ‌ಇತ್ತ ವಿಪಕ್ಷಗಳು ಸಿಎಂ ವಿರುದ್ದ ತೀವ್ರ ಕಿಡಿಕಾರಿದ್ದು ಮೊದಲು ಯಾರೇರು ಅಂತ ಬಹಿರಂಗ ಪಡಿಸಲಿ ಎಂದು ಗುಡುಗಿದ್ದಾರೆ. ಈ ಬಗ್ಗೆ ಸಿಎಂ ವಿರುದ್ದ ಕಿಡಿಕಾರಿದ ಮಾಜಿ ಸಿಎಂ ಎಚ್ ಡಿಕೆ ಕಾಂಗ್ರೆಸ್ ಪಕ್ಷವನ್ನು ಆ ದೇವರೇ ಕಾಪಾಡಬೇಕು ಎಂದು ವ್ಯಂಗ್ಯವಾಡಿದ್ದಾರೆ.. ಎಂತಹ ಮುಖ್ಯಮಂತ್ರಿಯನ್ನು ಇಟ್ಟುಕೊಂಡಿದ್ದೇವೆ ಎಂದು ಕಾಂಗ್ರೆಸ್ ಶಾಸಕರೇ ಸ್ವತಃ ಯೋಚಿಸುವಂತಾಗಿದೆ.. ಒಬ್ಬ ಮುಖ್ಯಮಂತ್ರಿಯ ಸ್ಥಾನದಲ್ಲಿದ್ದುಕೊಂಡು ಸದನದಲ್ಲಿ ಇಂತಹ ಹಗುರ ಹೇಳಿಕೆ ನೀಡಿದ್ದಕ್ಕೆ ಕಾಂಗ್ರೆಸ್‌ನವರೇ ಮೊದಲು ಪ್ರತಿಭಟನೆ ಮಾಡಬೇಕಿತ್ತು. ವಿಧಾನಸಭೆಯ ಎಲ್ಲಾ 224 ಶಾಸಕರೂ ಈ ಹೇಳಿಕೆಯ ವಿರುದ್ಧ ಧ್ವನಿ ಎತ್ತಬೇಕಿತ್ತು ಎಂದು ಎಚ್ ಡಿಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಎಂ ಅವರ ಎರಡು ಮದುವೆ ಹೇಳಿಕೆ ಈಗ ಶಾಸಕರ ಕೌಟುಂಬಿಕ ಜೀವನದಲ್ಲಿ ಬಿರುಗಾಳಿ ಎಬ್ಬಿಸಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದ್ದಾರೆ. ಸಿಎಂ ನೀಡಿದ ಈ ಒಂದೇ ಒಂದು ಹೇಳಿಕೆಯಿಂದ ಪ್ರತಿಯೊಬ್ಬ ಶಾಸಕರ ಮೇಲೆಯೂ ಅನುಮಾನ ಮೂಡುವಂತಾಗಿದೆ. ಇದರಿಂದ ಹಲವು ಶಾಸಕರ ಮನೆಗೆ ಬೆಂಕಿ ಬಿದ್ದಂತಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ಗೊಂದಲ ಹಾಗೂ ಅನುಮಾನಕ್ಕೆ ಸ್ವತಃ ಮುಖ್ಯಮಂತ್ರಿಗಳೇ ಸೂಕ್ತ ಪರಿಹಾರ ನೀಡಬೇಕು. ನಿಜವಾಗಿಯೂ ಎರಡೆರಡು ಮದುವೆಯಾಗಿರುವ ಶಾಸಕರು ಯಾರು ಎಂಬುದನ್ನು ಸಿಎಂ ಬಹಿರಂಗಪಡಿಸಿ, ತಕ್ಷಣವೇ ಆ ಶಾಸಕರ ಪಟ್ಟಿಯನ್ನು ಬಿಡುಗಡೆ ಮಾಡಲಿ ಎಂದು ಛಲವಾದಿ ಅಗ್ರಹಿಸಿದ್ದಾರೆ..

ಸದನದಲ್ಲಿ ಸಿಎಂ ಹಾಗೂ ನಾಯಕರ ನಡುವೆ ನಡೆದ ಈ ಎರಡನೇ ಮದುವೆ ಚರ್ಚೆಗೆ ಸಂಸದ ಎಂ.ಸಿ. ಸುಧಾಕರ್ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎರಡೆರಡು ಮದುವೆಯಾಗುವುದು ಸಂವಿಧಾನಾತ್ಮಕವೋ ಅಥವಾ ಅಸಂವಿಧಾನಾತ್ಮಕವೋ ಎಂಬ ಕನಿಷ್ಠ ಜ್ಞಾನ ಸಿಎಂ ಸ್ಥಾನದಲ್ಲಿರುವವರಿಗೆ ಇರಬೇಕಿತ್ತು ಎಂದು ಟೀಕಿಸಿದ್ದಾರೆ. ಮುಖ್ಯಮಂತ್ರಿಯಂತಹ ಅತ್ಯುನ್ನತ ಮತ್ತು ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು, ಪವಿತ್ರವಾದ ಸದನದ ಒಳಗೆ ಶಾಸಕರ ವೈಯಕ್ತಿಕ ವಿಚಾರಗಳ ಬಗ್ಗೆ ಈ ರೀತಿ ಲಘುವಾಗಿ ಮಾತನಾಡುವುದು ಸರಿಯಲ್ಲ ಎಂದ್ರು..

ರಾಜ್ಯದ ಜಲ, ಗಡಿ, ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚೆಯಾಗಬೇಕಿದ್ದ ಶಾಸನಸಭೆಯಲ್ಲಿ ಶಾಸಕರ ಎರಡು ಮದುವೆ ವಿಷಯ ಪ್ರಸ್ತಾಪವಾಗಿರುವುದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಸಿಎಂ ನೀಡಿದ ಹೇಳಿಕೆಯನ್ನು ವಿಪಕ್ಷಗಳು ತೀವ್ರವಾಗಿ ಖಂಡಿಸಿದ್ದು, ಸರ್ಕಾರವನ್ನು ಮುಜುಗರಕ್ಕೆ ಈಡುಮಾಡಲು ಇದನ್ನು ಪ್ರಬಲ ಅಸ್ತ್ರವಾಗಿ ಬಳಸಿಕೊಳ್ಳೋದು‌ಪಕ್ಕ. ಡಿ.ಕೆ. ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಬೆಂಗಳೂರಿಗೆ ಬಂದ ಹಲವು ಶಾಸಕರು ಎರಡೆರಡು ಮದುವೆಯಾಗಿದ್ದಾರೆ ಎಂದು ಹೇಳಿದ್ದು, ಈ ಹೇಳಿಕೆ ರಾಜಕೀಯ ಚರ್ಚೆಗೆ ಕಾರಣವಾಗಿದೆ.

Add Zee News as a Preferred Source
TAGS:
Karnataka Politics