• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಬೆಂಗಳೂರು
  • /ಪ್ರಜ್ವಲ್ ರೇವಣ್ಣ ಹಿಂಡಲಗಾ ಜೈಲು ಶಿಫ್ಟ್‌ಗೆ ಕೊನೆ ಕ್ಷಣದ ಬ್ರೇಕ್‌ ಬಿದ್ದಿದ್ದೇಕೆ?

ಪ್ರಜ್ವಲ್ ರೇವಣ್ಣ ಹಿಂಡಲಗಾ ಜೈಲು ಶಿಫ್ಟ್‌ಗೆ ಕೊನೆ ಕ್ಷಣದ ಬ್ರೇಕ್‌ ಬಿದ್ದಿದ್ದೇಕೆ?

Prajwal Revanna : ಬೆಳಗಾವಿಯ ಹಿಂಡಲಗಾ ಜೈಲು ಶಿಫ್ಟಿಂಗ್ ಗೆ ಬ್ರೇಕ್ ಬಿದ್ದಿದೆ. ಕಾರಾಗೃಹ ಇಲಾಖೆ ಡಿಜಿಪಿ ಆದೇಶದಂತೆ ಪ್ರಜ್ವಲ್ ರೇವಣ್ಣ ಅವರನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಲು ಸಿದ್ಧತೆ ನಡೆದಿತ್ತು.

Written ByChetana Devarmani
Published: Oct 12, 2026, 05:45 PM IST|Updated: Oct 12, 2026, 05:48 PM IST
joinshare
ಪ್ರಜ್ವಲ್ ರೇವಣ್ಣ ಹಿಂಡಲಗಾ ಜೈಲು ಶಿಫ್ಟ್‌ಗೆ ಕೊನೆ ಕ್ಷಣದ ಬ್ರೇಕ್‌ ಬಿದ್ದಿದ್ದೇಕೆ?

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

Trending

  • News
  • Photos
  • Videos
ತಿರುಪತಿ ಭಕ್ತರಿಗೆ ಸಿಹಿ ಸುದ್ದಿ: 'ವೆಂಕಟಾದ್ರಿ' ಸೂಪರ್ ಆಪ್ ಬಿಡುಗಡೆ, ಇಂಟರ್ನೆಟ್ ಸಹ ಬೇಕಿಲ್ಲ..

ತಿರುಪತಿ ಭಕ್ತರಿಗೆ ಸಿಹಿ ಸುದ್ದಿ: 'ವೆಂಕಟಾದ್ರಿ' ಸೂಪರ್ ಆಪ್ ಬಿಡುಗಡೆ, ಇಂಟರ್ನೆಟ್ ಸಹ ಬೇಕಿಲ್ಲ..

2

ಲವ್‌ ಅಫೇರ್‌ಗೆ ಅಜ್ಜಿ ಅಡ್ಡಿ : ಪ್ರಿಯಕರನ ಜೊತೆ ಸೇರಿ ವೃದ್ಧೆಯನ್ನೇ ಮುಗಿಸಿದ ಮೊಮ್ಮಗಳು

3

ಪ್ರಜ್ವಲ್ ರೇವಣ್ಣ ಹಿಂಡಲಗಾ ಜೈಲು ಶಿಫ್ಟ್‌ಗೆ ಕೊನೆ ಕ್ಷಣದ ಬ್ರೇಕ್‌ ಬಿದ್ದಿದ್ದೇಕೆ?

4

ಸ್ಟಿಂಗ್ ಆಪರೇಷನ್: ಕಾಲ ಉತ್ತರಿಸುತ್ತದೆ ಎನ್ನುವುದು ತನಿಖೆಗೆ ಪರ್ಯಾಯವಲ್ಲ- ಮುಖ್ಯಮಂತ್ರಿ ಡಿಕೆಶಿಗೆ HDK ತಿರುಗೇಟು

5

ಸಚಿನ್‌ ಮಗಳು ಸಾರಾ ತೆಂಡೂಲ್ಕರ್ ಗಳಿಕೆ ಎಷ್ಟು ಗೊತ್ತಾ? 29ನೇ ವಯಸ್ಸಿನಲ್ಲಿ ಕೋಟಿಗಳ ಒಡತಿ

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಂಗಳೂರು: ಅತ್ಯಾಚಾರ ಆರೋಪಿ ಪ್ರಜ್ವಲ್ ರೇವಣ್ಣ ಜೈಲು ಶಿಪ್ಟಿಂಗ್ ಗೆ ಬ್ರೇಕ್ ಬಿದ್ದಿದೆ. ಪರಪ್ಪನ ಅಗ್ರಹಾರ ಜೈಲಿನಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಕರೆದೊಯ್ಯುತ್ತಿದ್ದ ಪ್ರಜ್ವಲ್ ರೇವಣ್ಣರನ್ನ ಮಾರ್ಗಮಧ್ಯದಿಂದಲೇ ವಾಪಸ್ ಕರೆತರಲಾಗಿದೆ. ಈ ರೀತಿ ಏಕಾಏಕಿ ಯೂಟರ್ನ್ ಹೊಡೆದಿದ್ದು ನಾನಾ ಚರ್ಚೆಗೆ  ಕಾರಣವಾಗಿದೆ.

ಪರಪ್ಪನ ಅಗ್ರಹಾರ ಜೈಲಿನಿಂದ  ಶಿಫ್ಟ್ ಆಗಬೇಕಿದ್ದ ಪ್ರಜ್ವಲ್ ರೇವಣ್ಣಗೆ ಕೊನೆ ಕ್ಷಣದಲ್ಲಿ ರಿಲೀಪ್ ಸಿಕ್ಕಿದೆ. ಬೆಳಗಾವಿಯ ಹಿಂಡಲಗಾ ಜೈಲು ಶಿಫ್ಟಿಂಗ್ ಗೆ ಬ್ರೇಕ್ ಬಿದ್ದಿದೆ. ಕಾರಾಗೃಹ ಇಲಾಖೆ ಡಿಜಿಪಿ ಆದೇಶದಂತೆ ಪ್ರಜ್ವಲ್ ರೇವಣ್ಣ ಅವರನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಲು ಸಿದ್ಧತೆ ನಡೆದಿತ್ತು. ಅದರಂತೆ CAR ಎಸ್ಕಾರ್ಟ್ ಸಿಬ್ಬಂದಿ ಪ್ರಜ್ವಲ್ ನನ್ನು ಬೆಂಗಳೂರಿನಿಂದ ಕರೆದೊಯ್ಯುತ್ತಿದ್ದರು. ಆದರೆ ಮಾರ್ಗಮಧ್ಯೆ ಹಿರಿಯ ಅಧಿಕಾರಿಗಳಿಂದ ಕರೆ ಬಂದ ಹಿನ್ನೆಲೆ ಪ್ರಜ್ವಲ್ ನನ್ನು ವಾಪಸ್ ಕರೆತರಲಾಗಿದೆ. ಆದರೆ ಈ ಬೆಳವಣಿಗೆ ಹಲವು ಚರ್ಚೆ ಹುಟ್ಟುಹಾಕಿದೆ.

ನಕಲಿ ಸುಪ್ರಿಂ ಕೋರ್ಟ್ ಆದೇಶ ಸೃಷ್ಟಿಸಿ ಕೈದಿಯನ್ನ ಬಿಡುಗಡೆ ಮಾಡಿದ ಆರೋಪದಲ್ಲಿ ಕಾರಗೃಹ ಇಲಾಖೆಯ ಉತ್ತರ ವಲಯದ ಡಿಜಿಪಿ ಸೋಮಶೇಖರ್ ಜೈಲು ಸೇರಿದ್ದಾರೆ. ಇದರ‌ ನಡುವೆ ಹಿಂಡಲಗಾ ಜೈಲಿನಲ್ಲಿ ಪ್ರಜ್ವಲ್ ರೇವಣ್ಣಗೆ ಸೂಕ್ತ ಭದ್ರತೆ ಒದಗಿಸಲು ತೊಂದರೆಯಾಗಲಿದೆ ಎಂದು ಅಲ್ಲಿನ ಜೈಲಿನ ಅಧೀಕ್ಷಕರು ವರದಿ ನೀಡಿದ್ದಾರೆ. ಹೀಗಾಗಿ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡುವ ಆದೇಶ ಹಿಂಪಡೆಯಲಾಗಿದೆ.‌ ಈಗ ಬೇರೆ ಜೈಲಿಗೆ ಸ್ಥಳಾಂತರಿಸುವ ಕುರಿತು ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ ತೀರ್ಮಾನಿಸಲಾಗುವುದು ಅಂತ ಕಾರಾಗೃಹ ಇಲಾಖೆಯ ಡಿಜಿ ಅಲೋಕ್ ಕುಮಾರ್ ಮಾಹಿತಿ ನೀಡಿದ್ದಾರೆ.

ಮತ್ತೊಂದೆಡೆ, ಪ್ರಜ್ವಲ್ ರೇವಣ್ಣ ವಿರುದ್ಧದ ಎರಡು ಪ್ರಕರಣಗಳ ವಿಚಾರಣೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿದೆ.ವಿಚಾರಣೆಯ ಕೆಲವು ಹಂತಗಳಲ್ಲಿ ಆರೋಪಿಗಳು ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗಬೇಕಾದ ಅಗತ್ಯವಿರುತ್ತದೆ. ಹೀಗಾಗಿ ನ್ಯಾಯಾಲಯದ ವಿಚಾರಣೆ ಹಾಗೂ ಭದ್ರತಾ ವ್ಯವಸ್ಥೆಯನ್ನು ಗಮನದಲ್ಲಿಟ್ಟುಕೊಂಡು ಜೈಲು ಸ್ಥಳಾಂತರದ ಬಗ್ಗೆ ಅಧಿಕಾರಿಗಳು ನಿರ್ಧಾರ ಕೈಗೊಳ್ಳಬೇಕಿದೆ.

ಒಟ್ಟಿನಲ್ಲಿ, ಪ್ರಜ್ವಲ್ ರೇವಣ್ಣ ಜೈಲು ಸ್ಥಳಾಂತರ ಸದ್ಯಕ್ಕೆ ಮುಂದೂಡಿಕೆಯಾಗಿದೆ. ಹೀಗಾಗಿ ಸದ್ಯ ಪ್ರಜ್ವಲ್ ರೇವಣ್ಣ ಪರಪ್ಪನ ಅಗ್ರಹಾರದಲ್ಲಿದ್ದಾರೆ. ಶಿಫ್ಟಿಂಗ್ ನಿರ್ಧಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ಪ್ರಜ್ವಲ್ ಪರ ವಕೀಲರು ಮುಂದಾಗಿದ್ದಾರೆ. ಅದರೆ ಈಗ ಶಿಫ್ಟಿಂಗ್ ಗೆ ತಾತ್ಕಲಿಕ ಬ್ರೇಕ್ ಬಿದ್ದಿರೋದು ಪ್ರಜ್ವಲ್ ರೇವಣ್ಣ ನಿಟ್ಟುಸಿರು ಬಿಡುವಂತಾಗಿದೆ.
 

Add Zee News as a Preferred Source
TAGS:
Crime