• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಬೆಂಗಳೂರು
  • /ಹೃದಯಾಘಾತದ ನಾಟಕವಾಡಿ ಗಂಡನನ್ನೇ ಕೊಂದ ಕಿಲಾಡಿ ಪತ್ನಿ! ಪ್ರಿಯಕರನ ಜೊತೆ ಸೇರಿ ಮರ್ಡರ್‌ ಸ್ಕೆಚ್‌

ಹೃದಯಾಘಾತದ ನಾಟಕವಾಡಿ ಗಂಡನನ್ನೇ ಕೊಂದ ಕಿಲಾಡಿ ಪತ್ನಿ! ಪ್ರಿಯಕರನ ಜೊತೆ ಸೇರಿ ಮರ್ಡರ್‌ ಸ್ಕೆಚ್‌

ತಾಳಿ ಕಟ್ಟಿದ ಗಂಡನನ್ನೇ ಪ್ರಿಯಕರನ ಜೊತೆ ಸೇರಿ ಉಸಿರುಗಟ್ಟಿಸಿ ಕೊಲೆ ಮಾಡಿ, ಸಹಜ ಸಾವು ಎಂದು ಬಿಂಬಿಸಲು ಯತ್ನಿಸಿದ್ದ ಕಿಲಾಡಿ ಪತ್ನಿಯ ಕೃತ್ಯ ಪೊಲೀಸರ ತನಿಖೆಯಲ್ಲಿ ಬಟಾಬಯಲಾಗಿದೆ.

Written ByChetana Devarmani
Published: Nov 09, 2026, 21:43 IST|Updated: Nov 09, 2026, 21:44 IST
joinshare
ಹೃದಯಾಘಾತದ ನಾಟಕವಾಡಿ ಗಂಡನನ್ನೇ ಕೊಂದ ಕಿಲಾಡಿ ಪತ್ನಿ! ಪ್ರಿಯಕರನ ಜೊತೆ ಸೇರಿ ಮರ್ಡರ್‌ ಸ್ಕೆಚ್‌

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಂಗಳೂರು: ಅಯ್ಯೋ ನನ್ನ ಗಂಡ ಹೃದಯಾಘಾತದಿಂದ ಸಾವನ್ನಪ್ಪಿದ್ರು ಅಂತ ಕಣ್ಣೀರು ಹಾಕಿ ಎಲ್ಲರ ಮುಂದೆ ನಾಟಕವಾಡಿದ್ದ ಪತ್ನಿಯ ಅಸಲಿ ಮುಖವಾಡ ಈಗ ಕಳಚಿಬಿದ್ದಿದೆ. ತಾಳಿ ಕಟ್ಟಿದ ಗಂಡನನ್ನೇ ಪ್ರಿಯಕರನ ಜೊತೆ ಸೇರಿ ಉಸಿರುಗಟ್ಟಿಸಿ ಕೊಲೆ ಮಾಡಿ, ಸಹಜ ಸಾವು ಎಂದು ಬಿಂಬಿಸಲು ಯತ್ನಿಸಿದ್ದ ಕಿಲಾಡಿ ಪತ್ನಿಯ ಕೃತ್ಯ ಪೊಲೀಸರ ತನಿಖೆಯಲ್ಲಿ ಬಟಾಬಯಲಾಗಿದೆ. ಗಂಡನ ಸಾವು ಹೃದಯಾಘಾತವಲ್ಲ, ಅದೊಂದು ವ್ಯವಸ್ಥಿತ ಕೊಲೆ ಅನ್ನೋ ಸತ್ಯ ಮರಣೋತ್ತರ ಪರೀಕ್ಷೆಯ ವರದಿಯಿಂದ ಹೊರಬಂದಿದೆ. ಅಷ್ಟಕ್ಕೂ ಆ ರಾತ್ರಿ ನಡೆದಿದ್ದೇನು, ಕೊಲೆ ರಹಸ್ಯ ಬಯಲಾಗಿದ್ದು ಹೇಗೆ, ಇಲ್ಲಿದೆ ನೋಡಿ ಕಂಪ್ಲೀಟ್ ಸ್ಟೋರಿ.

ಅದು ನೋಡಲು ಸಹಜ ಸಾವು, ಪತ್ನಿಯ ಕಣ್ಣಲ್ಲಿ ದುಃಖ, ಗಂಡನನ್ನು ಕಳೆದುಕೊಂಡ ನೋವಿನ ನಾಟಕ, ಆದರೆ ಈ ಸಾವಿನ ಹಿಂದೆ ಅಡಗಿದ್ದದ್ದು ಭೀಕರ ಕೊಲೆ ರಹಸ್ಯ. ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಉಸಿರುಗಟ್ಟಿಸಿ ಕೊಲೆ ಮಾಡಿದ್ದ ಪತ್ನಿ, ಅದನ್ನು ಹೃದಯಾಘಾತದ ಸಾವು ಎಂದು ನಂಬಿಸಲು ಹೊರಟಿದ್ದಳು. ಅಕ್ಟೋಬರ್ 12ರಂದು ಬೆಂಗಳೂರು ಹೊರವಲಯದ ದೊಡ್ಡತೋಗೂರಿನ ಮನೆಯಲ್ಲಿ ಉಪೇಂದ್ರ ಅನುಮಾನಾಸ್ಪದವಾಗಿ ಮೃತಪಟ್ಟಿದ್ದರು. ಪತ್ನಿ ಅನಿತಾ ನೀಡಿದ್ದ ಮಾಹಿತಿಯ ಆಧಾರದ ಮೇಲೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು. ಆದರೆ, ಆರಂಭದಲ್ಲಿ ಸಹಜ ಸಾವಿನಂತೆ ಕಂಡಿದ್ದ ಪ್ರಕರಣಕ್ಕೆ ಮರಣೋತ್ತರ ಪರೀಕ್ಷೆಯ ವರದಿ ಹೊಸ ತಿರುವು ನೀಡಿತ್ತು. ಉಪೇಂದ್ರ ಹೃದಯಾಘಾತದಿಂದ ಮೃತಪಟ್ಟಿಲ್ಲ, ಬದಲಿಗೆ ಉಸಿರುಗಟ್ಟಿಸಿ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂಬ ಆಘಾತಕಾರಿ ವಿಚಾರ ಬೆಳಕಿಗೆ ಬಂದಿತ್ತು.

ಇನ್ನು ಪೊಲೀಸರ ತನಿಖೆಯಲ್ಲಿ ಪತ್ನಿ ಅನಿತಾ ಹೇಳಿದ್ದ ಕಥೆಯೇ ಅನುಮಾನಕ್ಕೆ ಕಾರಣವಾಗಿತ್ತು. ಅಂದು ಮಧ್ಯರಾತ್ರಿ ಪತಿ ಉಪೇಂದ್ರ ಬಿಯರ್ ಕುಡಿದು ಕಬಾಬ್ ಮತ್ತು ಚಪಾತಿ ತಿಂದು ಜಾರಿ ಬಿದ್ದಿದ್ದರು. ಬಳಿಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಅನಿತಾ ಹೇಳಿಕೆ ನೀಡಿದ್ದಳು. ಆದರೆ ಮರಣೋತ್ತರ ಪರೀಕ್ಷೆಯಲ್ಲಿ ಹೊಟ್ಟೆಯಲ್ಲಿ ಯಾವುದೇ ಆಹಾರದ ಅಂಶವಾಗಲಿ, ಆಲ್ಕೋಹಾಲ್ ಕುಡಿದಿರುವ ಕುರುಹಾಗಲಿ ಪತ್ತೆಯಾಗಿರಲಿಲ್ಲ. ಹೀಗಾಗಿ ಅನಿತಾ ಹೇಳಿದ್ದ ಕಥೆಯ ಮೇಲೆ ಪೊಲೀಸರಿಗೆ ಮತ್ತಷ್ಟು ಅನುಮಾನ ಮೂಡಿತ್ತು. ಇಲ್ಲಿಂದ ಶುರುವಾಯ್ತು ಪೊಲೀಸರ ಅಸಲಿ ತನಿಖೆ. ಮನೆಯ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದಾಗ ಘಟನೆಯ ರಾತ್ರಿ ಹೆಲ್ಮೆಟ್ ಧರಿಸಿದ್ದ ಅಪರಿಚಿತ ವ್ಯಕ್ತಿಯೊಬ್ಬ ಮನೆಗೆ ಬಂದಿರುವುದು ಪೊಲೀಸರ ಗಮನಕ್ಕೆ ಬಂದಿತ್ತು. ಆ ವ್ಯಕ್ತಿಯ ಗುರುತು ಪತ್ತೆಹಚ್ಚಿದಾಗ ಆತ ಅನಿತಾಳ ಕ್ಲಾಸ್‌ಮೇಟ್ ಹಾಗೂ ಪ್ರಿಯಕರ ಮಧುಸೂಧನ್ ರೆಡ್ಡಿ ಎಂಬ ವಿಚಾರ ಬಯಲಾಗಿತ್ತು. ಅಕ್ಟೋಬರ್ 11ರ ರಾತ್ರಿ ಉಪೇಂದ್ರ ಹಾಗೂ ಅನಿತಾ ನಡುವೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಈ ವೇಳೆ ಕೋಪಗೊಂಡ ಅನಿತಾ ತನ್ನ ಪ್ರಿಯಕರ ಮಧುಸೂಧನ್ ರೆಡ್ಡಿಯನ್ನು ಮನೆಗೆ ಕರೆಸಿಕೊಂಡಿದ್ದಳು. ಮಧ್ಯರಾತ್ರಿ ಬೆಡ್‌ರೂಮ್‌ಗೆ ಬಂದ ಮಧುಸೂಧನ್, ಮಲಗಿದ್ದ ಉಪೇಂದ್ರ ಮೇಲೆ ಕುಳಿತು ಹಲ್ಲೆ ನಡೆಸಿದ್ದ. ಈ ವೇಳೆ ಪತ್ನಿ ಅನಿತಾ ಗಂಡನ ಬಾಯಿ ಮತ್ತು ಮೂಗನ್ನು ಬಿಗಿಯಾಗಿ ಮುಚ್ಚಿ ಕೊಲೆಗೆ ಸಾಥ್ ನೀಡಿದ್ದಳು. ಬಳಿಕ ಮಧುಸೂಧನ್ ಉಪೇಂದ್ರನ ಕತ್ತು ಹಿಸುಕಿ ಕೊಲೆ ಮಾಡಿದ್ದ ಎನ್ನುವುದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.

ಇನ್ನು ಕೊಲೆ ಮಾಡಿದ ಬಳಿಕವೂ ಆರೋಪಿಗಳು ಸುಮ್ಮನೆ ಕುಳಿತಿರಲಿಲ್ಲ. ಪ್ರಕರಣದ ಮೇಲೆ ಯಾರಿಗೂ ಅನುಮಾನ ಬಾರದಂತೆ ಸಾವನ್ನು ಸಹಜ ಸಾವಿನಂತೆ ಬಿಂಬಿಸಲು ಸಂಚು ರೂಪಿಸಿದ್ದರು. ಉಪೇಂದ್ರ ಜಾರಿ ಬಿದ್ದು ಮೃತಪಟ್ಟಿದ್ದಾರೆ, ಹೃದಯಾಘಾತವಾಗಿದೆ ಎಂಬ ಸುಳ್ಳಿನ ಕಥೆ ಕಟ್ಟಿ ಪೊಲೀಸರನ್ನೇ ದಾರಿ ತಪ್ಪಿಸಲು ಯತ್ನಿಸಿದ್ದರು. ಆದರೆ ಮರಣೋತ್ತರ ಪರೀಕ್ಷೆಯ ವರದಿ, ಸಿಸಿಟಿವಿ ದೃಶ್ಯಗಳು ಹಾಗೂ ಪೊಲೀಸರ ತಾಂತ್ರಿಕ ತನಿಖೆ ಆರೋಪಿಗಳ ಸಂಚನ್ನು ಬಯಲಿಗೆಳೆದಿದೆ. ಸದ್ಯ ಪತ್ನಿ ಅನಿತಾ ಮತ್ತು ಆಕೆಯ ಪ್ರಿಯಕರ ಮಧುಸೂಧನ್ ರೆಡ್ಡಿಯನ್ನು ಬಂಧಿಸಿರುವ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ಗಂಡನ ಸಾವಿನ ಸುತ್ತ ಅನುಮಾನವೇ ಇಲ್ಲದಂತೆ ಸುಳ್ಳಿನ ಕಥೆ ಹೆಣೆದು, ಕಣ್ಣೀರು ಹಾಕಿ ನಾಟಕವಾಡಿದ್ದ ಪತ್ನಿಯ ರಹಸ್ಯ ಕೊನೆಗೂ ಬಯಲಾಗಿದೆ. ಒಂದು ಕಡೆ ಮರಣೋತ್ತರ ಪರೀಕ್ಷೆಯ ವೈಜ್ಞಾನಿಕ ವರದಿ, ಮತ್ತೊಂದೆಡೆ ಸಿಸಿಟಿವಿ ದೃಶ್ಯಗಳು ಪೊಲೀಸರ ತನಿಖೆಗೆ ಮಹತ್ವದ ಸುಳಿವು ನೀಡಿವೆ. ಸಹಜ ಸಾವು ಎಂದು ಮುಚ್ಚಿಹೋಗಬೇಕಿದ್ದ ಪ್ರಕರಣವನ್ನು ಕೊಲೆ ಪ್ರಕರಣವನ್ನಾಗಿ ಬಯಲಿಗೆಳೆದಿದ್ದು ಪೊಲೀಸರ ತನಿಖಾ ಚಾತುರ್ಯ. ಪ್ರೀತಿಯ ಹೆಸರಿನಲ್ಲಿ ಆರಂಭವಾದ ಸಂಬಂಧ ಕೊನೆಗೆ ಒಂದು ಜೀವವನ್ನೇ ಬಲಿಪಡೆದಿರುವುದು ದುರಂತವೇ ಸರಿ.

 

Add Zee News as a Preferred Source
TAGS:
Crime