• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಬೆಂಗಳೂರು
  • /ಪ್ರಕೃತಿ ಪರಿಸರ ಉಳಿದರೆ ಮಾತ್ರ ಜಗತ್ತಿನ ಉಳಿವು ಸಾಧ್ಯ: ಸಚಿವ ಈಶ್ವರ್ ಖಂಡ್ರೆ

ಪ್ರಕೃತಿ ಪರಿಸರ ಉಳಿದರೆ ಮಾತ್ರ ಜಗತ್ತಿನ ಉಳಿವು ಸಾಧ್ಯ: ಸಚಿವ ಈಶ್ವರ್ ಖಂಡ್ರೆ

‘ಜೀ ಕನ್ನಡ ನ್ಯೂಸ್‌’ ವತಿಯಿಂದ ಆಯೋಜಿಸಲಾಗಿದ್ದ ಪ್ರತಿಷ್ಠಿತ ‘ವೀರ ಕನ್ನಡಿಗ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಬಿ. ಖಂಡ್ರೆ ಅವರು ಭಾಗವಹಿಸಿ, ಪ್ರಕೃತಿ ಮತ್ತು ಪರಿಸರ ಸಂರಕ್ಷಣೆಯ ಮಹತ್ವದ ಕುರಿತು ಪ್ರಬಲ ಸಂದೇಶ ನೀಡಿದರು. ನಾಡು-ನುಡಿಯ ಹೆಮ್ಮೆ, ಸಾಧಕರ ನಿಸ್ವಾರ್ಥ ಸೇವೆ ಹಾಗೂ ಸರ್ಕಾರದ ಮುಂದಿರುವ ಸವಾಲುಗಳ ಕುರಿತು ಮಹತ್ವದ ಮಾಹಿತಿಗಳನ್ನು ಹಂಚಿಕೊಂಡರು.. ಸಂಪೂರ್ಣ ವರದಿ ಇಲ್ಲಿದೆ..

Written ByKrishna NK
Published: Nov 18, 2026, 15:57 IST|Updated: Nov 18, 2026, 15:59 IST
joinshare
ಪ್ರಕೃತಿ ಪರಿಸರ ಉಳಿದರೆ ಮಾತ್ರ ಜಗತ್ತಿನ ಉಳಿವು ಸಾಧ್ಯ: ಸಚಿವ ಈಶ್ವರ್ ಖಂಡ್ರೆ
Image Credit: Ishwar khandre

About the Author

Krishna NK

Krishna NK

ಕೃಷ್ಣಕುಮಾರ್‌ ಎನ್‌.ಕೆ. (Krishna Kumar NK) 'ಜೀ ಕನ್ನಡ ನ್ಯೂಸ್‌' ಜಾಲತಾಣದ ಉಪ ಸಂಪಾದಕರಾಗಿ 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೂ ಮೊದಲು ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ "ಜೀ ನ್ಯೂಸ್‌ ಕನ್ನಡ" ವೆಬ್‌ ಸೈಟ್‌ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಂಗಳೂರು: ಪ್ರಕೃತಿ ಮತ್ತು ಪರಿಸರ ಉಳಿದರೆ ಮಾತ್ರ ಜಗತ್ತಿನ ಉಳಿವು ಸಾಧ್ಯ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಬಿ. ಖಂಡ್ರೆ ಅವರು ಕರೆ ನೀಡಿದರು. ಅಲ್ಲದೆ ಹಲವಾರು ವಿಚಾರಗಳ ಕುರಿತು ಅರ್ಥಪೂರ್ಣವಾಗಿ ಮಾತನಾಡಿದರು..

ಹೌದು... ನಗರದ ಪ್ರತಿಷ್ಠಿತ ‘ದಿ ಲಲಿತ್ ಅಶೋಕ್’ ಹೋಟೆಲ್‌ನಲ್ಲಿ ‘ಜೀ ಕನ್ನಡ ನ್ಯೂಸ್‌’ ವತಿಯಿಂದ ನವೆಂಬರ್ 17ರಂದು ಸಂಜೆ ಅದ್ದೂರಿಯಾಗಿ ಆಯೋಜಿಸಲಾಗಿದ್ದ ಪ್ರತಿಷ್ಠಿತ ‘ಜೀ ಕನ್ನಡ ನ್ಯೂಸ್‌ ವೀರ ಕನ್ನಡಿಗ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ರಾಜ್ಯದ ಮುಂಚೂಣಿಯ ಸಾಧಕರನ್ನು ಗುರುತಿಸಿ ಈ ವೇದಿಕೆಯಲ್ಲಿ ಸನ್ಮಾನಿಸಲಾಯಿತು. ಸಮಾಜ ಸೇವೆ, ಕಲೆ, ಸಾಹಿತ್ಯ, ಸಿನಿಮಾ, ಕ್ರೀಡೆ, ಶಿಕ್ಷಣ, ವೈದ್ಯಕೀಯ, ಉದ್ಯಮ, ಪೊಲೀಸ್ ಹಾಗೂ ಸಾರ್ವಜನಿಕ ಸೇವೆ ಸೇರಿದಂತೆ ಹತ್ತು ಹಲವು ಕ್ಷೇತ್ರಗಳಲ್ಲಿ ವಿಶಿಷ್ಟ ಕೊಡುಗೆ ನೀಡಿದ ಸಾಧಕರಿಗೆ ‘ವೀರ ಕನ್ನಡಿಗ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರಶಸ್ತಿ ಸ್ವೀಕರಿಸಿದ ಎಲ್ಲರಿಗೂ ಸಚಿವರು ಶುಭ ಕೋರಿದರು.

ಈ ವೇಳೆ ಕನ್ನಡ ನಾಡು-ನುಡಿಯ ಹೆಮ್ಮೆಯನ್ನು ಕೊಂಡಾಡಿದ ಸಚಿವರು, ಕರ್ನಾಟಕಕ್ಕೆ ಎರಡು ಸಾವಿರ ವರ್ಷಗಳ ಸುದೀರ್ಘ ಹಾಗೂ ಶ್ರೀಮಂತ ಇತಿಹಾಸವಿದೆ ಎಂದರು. ಕರ್ನಾಟಕ ಬರೀ ಹೆಸರಲ್ಲ, ಅದೊಂದು ಚೇತನ. ಕನ್ನಡ ಎಂದರೆ ಕೇವಲ ಭಾಷೆಯಲ್ಲ, ಅದು ಏಳು ಕೋಟಿ ಕನ್ನಡಿಗರ ಅಸ್ಮಿತೆ. ಸಾಹಿತ್ಯ, ವಿಜ್ಞಾನ, ತಂತ್ರಜ್ಞಾನ, ಆಧ್ಯಾತ್ಮ ಹಾಗೂ ಕಲೆ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲೂ ಕನ್ನಡಿಗರು ನಾಡು ಮತ್ತು ರಾಷ್ಟ್ರ ಕಟ್ಟುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ತಿಳಿಸಿದರು.

ಸಮಾಜ ಸೇವೆ ಮಾಡುವವರ ಕುರಿತು ಮಾತನಾಡುತ್ತಾ ಮಹಾತ್ಮ ಗಾಂಧೀಜಿಯವರ ನುಡಿಗಳನ್ನು ನೆನಪಿಸಿದ ಸಚಿವರು, ನಿಸ್ವಾರ್ಥ ಸೇವೆ ಮಾಡುವವರನ್ನು ಗುರುತಿಸಿ ನಾಗರಿಕ ಸಮಾಜ ಗೌರವಿಸುವುದು ಮತ್ತು ಪ್ರೋತ್ಸಾಹಿಸುವುದು ಅತ್ಯಂತ ಅವಶ್ಯಕ ಎಂದರು. ಮನುಷ್ಯ, ಸಂಸ್ಥೆಗಳು ಹಾಗೂ ಸಾಮ್ರಾಜ್ಯಗಳು ಹುಟ್ಟಿ ಅಳಿಯುತ್ತವೆ, ಆದರೆ ಸಮಾಜ ಸೇವಕರು ಮಾಡುವ ಜನಕಲ್ಯಾಣದ ಕೆಲಸಗಳು ಮಾತ್ರ ಶಾಶ್ವತವಾಗಿ ಉಳಿಯುತ್ತವೆ ಎಂದು ಬಣ್ಣಿಸಿದರು. ಪ್ರಶಸ್ತಿಗಳು ಎಂದರೆ ಕೇವಲ ಗೌರವವಲ್ಲ, ಬದಲಿಗೆ ನಮ್ಮ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುತ್ತವೆ ಎಂದರು.

ಇಂದಿನ ದಿನಗಳಲ್ಲಿ ಹವಾಮಾನ ಬದಲಾವಣೆ ನಮ್ಮ ಎದುರುಗಡೆ ಇರುವ ದೊಡ್ಡ ಸವಾಲು ಎಂದು ಕಳವಳ ವ್ಯಕ್ತಪಡಿಸಿದ ಸಚಿವರು, ಪ್ರಕೃತಿ ಮತ್ತು ಪರಿಸರವನ್ನು ಸಂರಕ್ಷಿಸಿ ಅರಣ್ಯ ಉಳಿಸಿದರೆ ಮಾತ್ರ ಜಗತ್ತು ಉಳಿಯಲು ಸಾಧ್ಯ ಎಂದು ಪ್ರತಿಪಾದಿಸಿದರು. ಹಾಗೆಯೇ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮೂಲಕ ಗ್ರಾಮೀಣ ಭಾಗದ ಅಭಿವೃದ್ಧಿ ಮಾಡುವುದು ಕೂಡ ದೊಡ್ಡ ಸವಾಲಾಗಿದೆ ಎಂದರು.

ಕುಡಿಯ ನೀರಿನ ಸಮಸ್ಯೆ ನಿವಾರಣೆ ಮತ್ತು ರೈತರಿಗೆ ಬೆಳೆ ಪರಿಹಾರ ಒದಗಿಸುವಂತಹ ಅನೇಕ ಸವಾಲುಗಳು ಸರ್ಕಾರದ ಮುಂದಿವೆ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಎಲ್ಲರ ಸಹಕಾರದೊಂದಿಗೆ ಜನಪರ ಹಾಗೂ ಉತ್ತಮ ಆಡಳಿತ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದು ತಿಳಿಸಿದರು. ಎಲ್ಲರ ಉದ್ದೇಶವೂ ಅಭಿವೃದ್ಧಿಯೇ ಆಗಿದ್ದು, ಎಲ್ಲರೂ ಕೈಜೋಡಿಸಿ ರಾಜ್ಯವನ್ನು ಮುನ್ನಡೆಸೋಣ ಎಂದು ಕರೆ ನೀಡಿದರು.

ಇದರ ನಡುವೆ ಇಂತಹ ಅರ್ಥಪೂರ್ಣ ಹಾಗೂ ಸಾಧಕರನ್ನು ಗುರುತಿಸಿ ಸ್ಫೂರ್ತಿ ತುಂಬುವ ಅತ್ಯುತ್ತಮ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ‘ಜೀ ಕನ್ನಡ ನ್ಯೂಸ್‌’ ವಾಹಿನಿಯ ತಂಡಕ್ಕೆ ಸಚಿವರು ವಿಶೇಷ ಅಭಿನಂದನೆಗಳನ್ನು ಸಲ್ಲಿಸಿದರು. ವಿಶೇಷವಾಗಿ ಜೀ ಕನ್ನಡ ನ್ಯೂಸ್‌ ಸಂಪಾದಕರಾದ ರವಿ ಎಸ್‌ ಗೌಡ್‌ ಅವರ ಕಾರ್ಯವೈಖರಿಯನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು

ಒಟ್ಟಾರೆಯಾಗಿ, ಪರಿಸರ ಸಂರಕ್ಷಣೆ ಮತ್ತು ಗ್ರಾಮೀಣಾಭಿವೃದ್ಧಿಯಂತಹ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ಮೂಲಕ ಮಾತ್ರ ನಿಜವಾದ ಪ್ರಗತಿ ಸಾಧ್ಯ ಎಂಬ ಗಂಭೀರ ಸಂದೇಶವನ್ನು ಈ ಕಾರ್ಯಕ್ರಮ ನೀಡಿದೆ. ಸಮಾಜಕ್ಕಾಗಿ ನಿಸ್ವಾರ್ಥವಾಗಿ ಶ್ರಮಿಸುತ್ತಿರುವ ಸಾಧಕರನ್ನು ಗುರುತಿಸಿ ಗೌರವಿಸುವುದು ಅಂತಹ ವ್ಯಕ್ತಿಗಳಿಗೆ ಸ್ಫೂರ್ತಿ ನೀಡುವುದಲ್ಲದೆ, ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುತ್ತದೆ. ನಾಡು, ಭಾಷೆ ಹಾಗೂ ಪರಿಸರವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕಾದ ಅವಶ್ಯಕತೆಯನ್ನು ಸಚಿವರು ಸ್ಪಷ್ಟಪಡಿಸಿದರು.

Add Zee News as a Preferred Source
TAGS:
Kannada News