• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಹುಬ್ಬಳ್ಳಿ ಧಾರವಾಡ
  • /ಪಹಣಿ ತಿದ್ದುಪಡಿಗೆ ಲಂಚ ಪಡೆಯುತ್ತಿದ್ದ ಎಸಿ ಕಚೇರಿ ಎಫ್‌ಡಿಎ ರೆಡ್‌ಹ್ಯಾಂಡ್ ಟ್ರ್ಯಾಪ್!

ಪಹಣಿ ತಿದ್ದುಪಡಿಗೆ ಲಂಚ ಪಡೆಯುತ್ತಿದ್ದ ಎಸಿ ಕಚೇರಿ ಎಫ್‌ಡಿಎ ರೆಡ್‌ಹ್ಯಾಂಡ್ ಟ್ರ್ಯಾಪ್!

ಈ ಭರ್ಜರಿ ಕಾರ್ಯಾಚರಣೆಯು ಲೋಕಾಯುಕ್ತ ಎಸ್‌ಪಿ ಕವಲೇಪುರೆ ಹಾಗೂ ಡಿವೈಎಸ್‌ಪಿ ಕಲಾವತಿ ಅವರ ಮಾರ್ಗದರ್ಶನ ಮತ್ತು ನೇತೃತ್ವದಲ್ಲಿ ನಡೆದಿದೆ. ಲೋಕಾಯುಕ್ತದ ಇತರ ಇನ್ಸ್‌ಪೆಕ್ಟರ್‌ಗಳು ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.

Reported ByManjunath NaragundEdited ByManjunath Naragund
Published: Sep 24, 2026, 07:00 PM IST|Updated: Sep 24, 2026, 07:06 PM IST
joinshare
ಪಹಣಿ ತಿದ್ದುಪಡಿಗೆ ಲಂಚ ಪಡೆಯುತ್ತಿದ್ದ ಎಸಿ ಕಚೇರಿ ಎಫ್‌ಡಿಎ ರೆಡ್‌ಹ್ಯಾಂಡ್ ಟ್ರ್ಯಾಪ್!
Image Credit: Chitradurga

About the Author

Manjunath Naragund

Manjunath Naragund

ಮಂಜುನಾಥ ನರಗುಂದ (Manjunath Naragund) 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಚಿತ್ರದುರ್ಗ: ಖಾತೆ ತಿದ್ದುಪಡಿ ಹಾಗೂ ಪಹಣಿ ತಿದ್ದುಪಡಿಗಾಗಿ ಅಲೆಯುತ್ತಿದ್ದ ರೈತನಿಂದ ಹಣ ಪೀಕಲು ಯತ್ನಿಸಿದ ಸರ್ಕಾರಿ ಅಧಿಕಾರಿಯೊಬ್ಬರು ಕೊನೆಗೂ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚಿತ್ರದುರ್ಗ ಸಹಾಯಕ ಆಯುಕ್ತರ (ಎಸಿ) ಕಚೇರಿಯ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ರೆಡ್‌ಹ್ಯಾಂಡ್‌ ಆಗಿ ಹಿಡಿದಿದ್ದಾರೆ. ಈ ದಿಢೀರ್ ದಾಳಿಯಿಂದಾಗಿ ಎಸಿ ಕಚೇರಿ ಆವರಣದಲ್ಲಿ ಕೆಲ ಕಾಲ ತೀವ್ರ ಸಂಚಲನ ಹಾಗೂ ಕುತೂಹಲದ ವಾತಾವರಣ ನಿರ್ಮಾಣವಾಗಿತ್ತು.

ಚಿತ್ರದುರ್ಗ ಎಸಿ ಕಚೇರಿಯಲ್ಲಿ ಎಫ್‌ಡಿಎ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಎಚ್.ಜೆ. ಬಸವರಾಜ ಎಂಬುವವರೇ ಲೋಕಾಯುಕ್ತ ಟ್ರ್ಯಾಪ್‌ಗೆ ಒಳಗಾದ ಅಧಿಕಾರಿ. ಹೊಸದುರ್ಗ ತಾಲೂಕಿನ ಕೆಲ್ಲೋಡು ಗ್ರಾಮದ ನಿವಾಸಿ ಹನುಮಂತಪ್ಪ ಎಂಬುವವರು ತಮ್ಮ ಜಮೀನಿನ ಪಹಣಿ (RTC) ತಿದ್ದುಪಡಿ ಮಾಡಿಕೊಡುವಂತೆ ಕೋರಿ ಎಸಿ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ನಿಯಮಾನುಸಾರ ಕೆಲಸ ಮಾಡಿಕೊಡಬೇಕಿದ್ದ ಎಫ್‌ಡಿಎ ಬಸವರಾಜ, ಕೆಲಸ ಮಾಡಿಕೊಡಲು 40 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಬಡ ರೈತ ಹನುಮಂತಪ್ಪ ಅವರಿಗೆ ಲಂಚ ನೀಡಲು ಮನಸ್ಸಿರಲಿಲ್ಲ. ಹೀಗಾಗಿ ಅವರು ಲೋಕಾಯುಕ್ತ ಅಧಿಕಾರಿಗಳನ್ನು ಸಂಪರ್ಕಿಸಿ ದೂರು ನೀಡಿದ್ದರು. ದೂರಿನ ಸತ್ಯಾಸತ್ಯತೆಯನ್ನು ಪರಿಶೀಲಿಸಿದ ಲೋಕಾಯುಕ್ತ ಸಿಬ್ಬಂದಿ, ಅಧಿಕಾರಿಯನ್ನು ಸೆರೆಹಿಡಿಯಲು ಪಕ್ಕಾ ಪ್ಲಾನ್ ರೂಪಿಸಿದರು. ಅದರಂತೆ, ಮೊದಲ ಕಂತಿನ ರೂಪದಲ್ಲಿ 25 ಸಾವಿರ ರೂಪಾಯಿ ಲಂಚದ ಹಣವನ್ನು ಎಫ್‌ಡಿಎ ಬಸವರಾಜ ಅವರಿಗೆ ಹನುಮಂತಪ್ಪ ನೀಡುತ್ತಿದ್ದಾಗ, ಮುಂಚಿತವಾಗಿಯೇ ಹೊಂಚು ಹಾಕಿ ಕುಳಿತಿದ್ದ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಲಂಚದ ಹಣದೊಂದಿಗೆ ಬಸವರಾಜ ಅವರನ್ನು ಸ್ಥಳದಲ್ಲೇ ವಶಕ್ಕೆ ಪಡೆದಿದ್ದಾರೆ.

ದಾಖಲೆಗಳ ಸುದೀರ್ಘ ಪರಿಶೀಲನೆ, ಆತಂಕದಲ್ಲಿ ಸಿಬ್ಬಂದಿ

ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆಯೇ ಕಚೇರಿಯಲ್ಲಿದ್ದ ಇತರೆ ಸಿಬ್ಬಂದಿ ಹಾಗೂ ಸಾರ್ವಜನಿಕರು ಆಶ್ಚರ್ಯಚಕಿತರಾದರು. ಹಣವನ್ನು ವಶಪಡಿಸಿಕೊಂಡ ಅಧಿಕಾರಿಗಳು, ಬಸವರಾಜ ಅವರ ಟೇಬಲ್‌ನಲ್ಲಿದ್ದ ಪಹಣಿ ತಿದ್ದುಪಡಿಗೆ ಸಂಬಂಧಿಸಿದ ಪ್ರಮುಖ ಕಡತಗಳು, ಅರ್ಜಿಗಳು ಹಾಗೂ ಇತರ ದಾಖಲೆಗಳನ್ನು ವಶಕ್ಕೆ ಪಡೆದು ಸುದೀರ್ಘ ತನಿಖೆಗೆ ಒಳಪಡಿಸಿದರು. ಲಂಚದ ಬೇಡಿಕೆ ಹಾಗೂ ಹಣದ ವ್ಯವಹಾರದ ಕುರಿತು ಸಂಪೂರ್ಣ ಮಾಹಿತಿಯನ್ನು ಕಲೆಹಾಕಲಾಗುತ್ತಿದೆ.

ಈ ಭರ್ಜರಿ ಕಾರ್ಯಾಚರಣೆಯು ಲೋಕಾಯುಕ್ತ ಎಸ್‌ಪಿ ಕವಲೇಪುರೆ ಹಾಗೂ ಡಿವೈಎಸ್‌ಪಿ ಕಲಾವತಿ ಅವರ ಮಾರ್ಗದರ್ಶನ ಮತ್ತು ನೇತೃತ್ವದಲ್ಲಿ ನಡೆದಿದೆ. ಲೋಕಾಯುಕ್ತದ ಇತರ ಇನ್ಸ್‌ಪೆಕ್ಟರ್‌ಗಳು ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಹೆಚ್ಚಾಗುತ್ತಿರುವ ದೂರುಗಳ ಹಿನ್ನೆಲೆಯಲ್ಲಿ ಈ ದಾಳಿ ನಡೆದಿರುವುದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

ಸರ್ಕಾರಿ ಕೆಲಸಗಳು ಯಾವುದೇ ಅಕ್ರಮ ಹಣದ ವ್ಯವಹಾರವಿಲ್ಲದೆ, ನಿಯಮಾನುಸಾರ ಹಾಗೂ ಪಾರದರ್ಶಕವಾಗಿ ನಡೆಯಬೇಕು ಎಂಬುದು ಸಾಮಾನ್ಯ ಜನರ ಆಶಯವಾಗಿದೆ. ಜಮೀನು, ಪಹಣಿ, ಖಾತೆ ಬದಲಾವಣೆಯಂತಹ ಕೆಲಸಗಳಿಗೆ ಲಂಚ ಕೇಳುವ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಹಿಂಜರಿಯದೆ ದೂರು ನೀಡಬೇಕು. ಲಂಚದ ಬೇಡಿಕೆ ಕುರಿತು ದೂರುಗಳು ಬಂದಲ್ಲಿ ಇಂತಹ ಭ್ರಷ್ಟರ ವಿರುದ್ಧ ಕಾನೂನು ಪ್ರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಲೋಕಾಯುಕ್ತ ಸಂಸ್ಥೆ ಸದಾ ಸಿದ್ಧವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Add Zee News as a Preferred Source
TAGS:
Kannada News