• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಹುಬ್ಬಳ್ಳಿ ಧಾರವಾಡ
  • /ಮಕ್ಕಳ ಬಿಸಿಯೂಟದಲ್ಲೂ ಲಂಚ : 15 ಸಾವಿರ ಪಡೆಯುವಾಗ ರೆಡ್ ಹ್ಯಾಂಡ್ ಸಿಕ್ಕಿಬಿದ್ದ ಅಧಿಕಾರಿ

ಮಕ್ಕಳ ಬಿಸಿಯೂಟದಲ್ಲೂ ಲಂಚ : 15 ಸಾವಿರ ಪಡೆಯುವಾಗ ರೆಡ್ ಹ್ಯಾಂಡ್ ಸಿಕ್ಕಿಬಿದ್ದ ಅಧಿಕಾರಿ

ಶಾಲಾ ಮಕ್ಕಳ ಬಿಸಿಯೂಟ ಯೋಜನೆಯ ದಾಖಲೆಗಳಲ್ಲೂ ಲಂಚದ ಹಾವಳಿ ತಲೆದೋರಿದ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ದೈಹಿಕ ಶಿಕ್ಷಣ ಶಿಕ್ಷಕರಿಂದ 15,000 ಲಂಚ ಸ್ವೀಕರಿಸುತ್ತಿದ್ದ ಹುಕ್ಕೇರಿ ತಾಲೂಕು ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕಿ ಸವಿತಾ ಹಲಕಿ ಅವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.. ಪ್ರಕರಣದ ಸಂಪೂರ್ಣ ವಿವರ ಇಲ್ಲಿದೆ..

Written ByKrishna NK
Published: Nov 26, 2026, 20:13 IST|Updated: Nov 26, 2026, 20:17 IST
joinshare
ಮಕ್ಕಳ ಬಿಸಿಯೂಟದಲ್ಲೂ ಲಂಚ : 15 ಸಾವಿರ ಪಡೆಯುವಾಗ ರೆಡ್ ಹ್ಯಾಂಡ್ ಸಿಕ್ಕಿಬಿದ್ದ ಅಧಿಕಾರಿ
Image Credit: Savita Halaki

About the Author

Krishna NK

Krishna NK

ಕೃಷ್ಣಕುಮಾರ್‌ ಎನ್‌.ಕೆ. (Krishna Kumar NK) 'ಜೀ ಕನ್ನಡ ನ್ಯೂಸ್‌' ಜಾಲತಾಣದ ಉಪ ಸಂಪಾದಕರಾಗಿ 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೂ ಮೊದಲು ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ "ಜೀ ನ್ಯೂಸ್‌ ಕನ್ನಡ" ವೆಬ್‌ ಸೈಟ್‌ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಮಕ್ಕಳ ಬಿಸಿಯೂಟದಲ್ಲೂ ಲಂಚ : 15 ಸಾವಿರ ಪಡೆಯುವಾಗ ರೆಡ್ ಹ್ಯಾಂಡ್ ಸಿಕ್ಕಿಬಿದ್ದ ಅಧಿಕಾರಿ

ಮಕ್ಕಳ ಬಿಸಿಯೂಟದಲ್ಲೂ ಲಂಚ : 15 ಸಾವಿರ ಪಡೆಯುವಾಗ ರೆಡ್ ಹ್ಯಾಂಡ್ ಸಿಕ್ಕಿಬಿದ್ದ ಅಧಿಕಾರಿ

2

ಪೋಸ್ಟ್ ಆಫೀಸ್‌ನಲ್ಲಿ ₹1,000 ಹೂಡಿಕೆ ಸಾಕು; ಬರೋಬ್ಬರಿ ₹4.40 ಲಕ್ಷ ಪಡೆಯುವ ಅವಕಾಶ!

3

ದರ್ಶನ್‌ ಅಭಿಮಾನಿಗಳಿಗೆ ಸಿಹಿ ಸುದ್ದಿ : ನಟನ ಬೆನ್ನು ನೋವಿಗೆ ಸಂಬಂಧಿಸಿ ಕೋರ್ಟ್‌ ಮಹತ್ವದ ಸೂಚನೆ..!

4

ಮೈಸೂರು ಸಂವಿಧಾನ ದಿನಾಚರಣೆ: ಹೊರಗೆ ಬಿಜೆಪಿ ವಿರುದ್ಧ ಸಮರ, ಒಳಗೆ ಕಾಂಗ್ರೆಸ್ ನಾಯಕತ್ವದ ಲೆಕ್ಕಾಚಾರ

5

UP Polls: ನಿರುದ್ಯೋಗಿಗಳಿಗೆ ₹5,000 ಭತ್ಯೆ, 25 ಲಕ್ಷ ಉದ್ಯೋಗದ ಭರವಸೆ! ಪ್ರತ್ಯೇಕ ಪ್ರಣಾಳಿಕೆಯಿಂದ SP-Congress ಮೈತ್ರಿಯಲ್ಲಿ ಬಿರುಕು?

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಳಗಾವಿ : ಹಿಂದಿನ ಅವಧಿಯ ಬಿಸಿಯೂಟ ಕ್ಯಾಶ್ ಬುಕ್ ಸರಿಪಡಿಸುವ ಸಂಬಂಧ ದೈಹಿಕ ಶಿಕ್ಷಣ (PE) ಶಿಕ್ಷಕರೊಬ್ಬರಿಂದ ₹15,000 ಲಂಚ ಸ್ವೀಕರಿಸುತ್ತಿದ್ದ ವೇಳೆ ಹುಕ್ಕೇರಿ ತಾಲೂಕು ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕಿ ಸವಿತಾ ಹಲಕಿ ಅವರು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕು ಪಂಚಾಯತ್ ಆವರಣದಲ್ಲಿರುವ ಅಕ್ಷರ ದಾಸೋಹ ಯೋಜನೆಯ ಕಚೇರಿಯಲ್ಲಿ ಈ ಕಾರ್ಯಾಚರಣೆ ನಡೆದಿದೆ. ಲೋಕಾಯುಕ್ತ ಇನ್ಸ್ಪೆಕ್ಟರ್ ವೆಂಕಟೇಶ್ ಯಡಹಳ್ಳಿ ಅವರ ನೇತೃತ್ವದ ತಂಡವು ಖಚಿತ ಮಾಹಿತಿಯ ಆಧಾರದ ಮೇಲೆ ದಾಳಿ ನಡೆಸಿ, ಆರೋಪಿ ಅಧಿಕಾರಿಯನ್ನು ಲಂಚದ ಹಣ ಸಮೇತ ವಶಕ್ಕೆ ಪಡೆದಿದೆ.

ಪ್ರಕರಣದ ಹಿನ್ನೆಲೆ ಏನು?
ದೂರುದಾರರಾದ ದೈಹಿಕ ಶಿಕ್ಷಣ ಶಿಕ್ಷಕ ಪಿ.ಎಂ. ಹೆಜ್ಜೆ ಅವರು ಈ ಹಿಂದೆ ಶಿಪ್ಪೂರ ಹೈಸ್ಕೂಲ್‌ನಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಅವರು ಬೆಳಗಾವಿ ತಾಲೂಕಿನ ಮುತ್ನಾಳ ಹೈಸ್ಕೂಲ್‌ನಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಹಿಂದಿನ ಅವಧಿಯಲ್ಲಿ ನಿರ್ವಹಿಸಲಾಗಿದ್ದ ಬಿಸಿಯೂಟ ಯೋಜನೆಯ ಕ್ಯಾಶ್ ಬುಕ್‌ಗೆ ಸಂಬಂಧಿಸಿದ ದಾಖಲೆಗಳನ್ನು ಸರಿಪಡಿಸಿ ಕೊಡಲು ಹುಕ್ಕೇರಿ ತಾಲೂಕು ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕಿ ಸವಿತಾ ಹಲಕಿ ಅವರು ಶಿಕ್ಷಕ ಪಿ.ಎಂ. ಹೆಜ್ಜೆ ಅವರಿಂದ ₹15,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಲೋಕಾಯುಕ್ತ ಅಧಿಕಾರಿಗಳ ಕಾರ್ಯಾಚರಣೆ
ತಮ್ಮ ಕಾನೂನುಬದ್ಧ ಕೆಲಸಕ್ಕೂ ಲಂಚ ಕೇಳುತ್ತಿರುವುದರಿಂದ ಬೇಸತ್ತ ಶಿಕ್ಷಕ ಪಿ.ಎಂ. ಹೆಜ್ಜೆ ಅವರು ಈ ಕುರಿತು ಬೆಳಗಾವಿ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಲೋಕಾಯುಕ್ತ ಪೊಲೀಸರು, ಆರೋಪಿಯನ್ನು ಬಲೆಗೆ ಕೆಡವಲು ಯೋಜನೆ ರೂಪಿಸಿದ್ದರು.

ಅದರಂತೆ ನವೆಂಬರ್ 26 ರಂದು ಹುಕ್ಕೇರಿ ತಾಲೂಕು ಪಂಚಾಯತ್ ಆವರಣದಲ್ಲಿರುವ ಅಕ್ಷರ ದಾಸೋಹ ಯೋಜನೆಯ ಕಚೇರಿಯಲ್ಲಿ ಶಿಕ್ಷಕ ಪಿ.ಎಂ. ಹೆಜ್ಜೆ ಅವರಿಂದ ಸಹಾಯಕ ನಿರ್ದೇಶಕಿ ಸವಿತಾ ಹಲಕಿ ಅವರು ₹15,000 ಲಂಚದ ಹಣವನ್ನು ಪಡೆಯುತ್ತಿದ್ದಾಗ, ಹೊಂಚು ಹಾಕಿ ಕುಳಿತಿದ್ದ ಲೋಕಾಯುಕ್ತ ಇನ್ಸ್ಪೆಕ್ಟರ್ ವೆಂಕಟೇಶ್ ಯಡಹಳ್ಳಿ ಹಾಗೂ ಸಿಬ್ಬಂದಿ ತಕ್ಷಣ ದಾಳಿ ನಡೆಸಿ ಅವರನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ವಿಚಾರಣೆ ಹಾಗೂ ಮುಂದಿನ ಕ್ರಮ
ಲಂಚದ ಹಣವನ್ನು ವಶಪಡಿಸಿಕೊಂಡಿರುವ ಲೋಕಾಯುಕ್ತ ಅಧಿಕಾರಿಗಳು, ಹುಕ್ಕೇರಿ ತಾಲೂಕು ಪಂಚಾಯತ್ ಆವರಣದಲ್ಲಿರುವ ಕಚೇರಿಯಲ್ಲಿಯೇ ಆರೋಪಿ ಸಹಾಯಕ ನಿರ್ದೇಶಕಿ ಸವಿತಾ ಹಲಕಿ ಅವರನ್ನು ಸುದೀರ್ಘ ವಿಚಾರಣೆಗೆ ಒಳಪಡಿಸಿದ್ದಾರೆ. ಲೋಕಾಯುಕ್ತ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿ ತಂಡವು ಕಚೇರಿಯ ದಾಖಲೆಗಳು ಮತ್ತು ಕಡತಗಳ ಪರಿಶೀಲನೆ ನಡೆಸುತ್ತಿದ್ದು, ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗಿದೆ.

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಹಾಗೂ ನೌಕರರ ಕೆಲಸ ಕಾರ್ಯಗಳಿಗೆ ಲಂಚಕ್ಕೆ ಬೇಡಿಕೆ ಇಡುವ ಪ್ರವೃತ್ತಿಯ ವಿರುದ್ಧ ಲೋಕಾಯುಕ್ತ ಇಲಾಖೆ ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದು, ಈ ಪ್ರಕರಣವು ಜಿಲ್ಲೆಯ ಶಿಕ್ಷಣ ಹಾಗೂ ತಾಲೂಕು ಆಡಳಿತ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

Add Zee News as a Preferred Source
TAGS:
Crime