• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಹುಬ್ಬಳ್ಳಿ ಧಾರವಾಡ
  • /ಬೆಳಗಾವಿಯಲ್ಲಿ ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ.. ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

ಬೆಳಗಾವಿಯಲ್ಲಿ ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ.. ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

ನೂರಾರು ಕಾರ್ಯಕರ್ತೆಯರು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ತಮಗೆ ನೀಡುತ್ತಿರುವ ಮಾಸಿಕ ವೇತನ ಸಾಲುತ್ತಿಲ್ಲ. ತಕ್ಷಣವೇ 15 ಸಾವಿರ ರೂಪಾಯಿ ಗೌರವಧನ ನಿಗದಿಪಡಿಸಬೇಕು.

Written ByBhimappa
Published: Oct 07, 2026, 04:34 PM IST|Updated: Oct 07, 2026, 04:35 PM IST
joinshare
ಬೆಳಗಾವಿಯಲ್ಲಿ ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ.. ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ
Image Credit: ​Asha workers

About the Author

Bhimappa

Bhimappa

ಭೀಮಪ್ಪ (Bhimappa) ಜೀ ಕನ್ನಡ ನ್ಯೂಸ್‌ನಲ್ಲಿ ಸದ್ಯ ಡಿಜಿಟಲ್ (ವೆಬ್‌ಸೈಟ್‌) ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ರಾಜಕೀಯ, ಸ್ಫೋರ್ಟ್ಸ್‌, ಸಿನಿಮಾ, ಆರೋಗ್ಯ, ಎಂಟರ್ಟೈನ್‌ಮೆಂಟ್, ಲೈಫ್‌ಸ್ಟೈಲ್‌, ವೈರಲ್‌ ಸುದ್ದಿಗಳನ್ನು ಓದುಗರಿಗೆ ನೀಡುತ್ತಿದ್ದಾರೆ. ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಪತ್ರಿಕೋದ್ಯಮವನ್ನು ಅಧ್ಯಯನ ಮಾಡಿರುವ ಇವರು ಪ್ರಜಾವಾಣಿಯಲ್ಲಿ ಒಂದು ವರ್ಷ ಅಪ್ರೆಂಟಿಸ್‌ ಹಾಗೂ ನ್ಯೂಸ್‌ಫಸ್ಟ್‌ನಲ್ಲಿ ಡಿಜಿಟಲ್ ವಿಭಾಗದಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. 
Read More

Trending

  • News
  • Photos
  • Videos
ಈ ರಾಜ್ಯದ ಸರ್ಕಾರಿ ನೌಕರರಿಗೆ ದಸರಾ ಬಂಪರ್ ಗಿಫ್ಟ್;‌ ಶೇ 3ರಷ್ಟು DA ಶೇ 2ರಷ್ಟು HRA ಹೆಚ್ಚಳ! ಎಷ್ಟಾಗಲಿದೆ ಒಟ್ಟು ಸಂಬಳ?

ಈ ರಾಜ್ಯದ ಸರ್ಕಾರಿ ನೌಕರರಿಗೆ ದಸರಾ ಬಂಪರ್ ಗಿಫ್ಟ್;‌ ಶೇ 3ರಷ್ಟು DA ಶೇ 2ರಷ್ಟು HRA ಹೆಚ್ಚಳ! ಎಷ್ಟಾಗಲಿದೆ ಒಟ್ಟು ಸಂಬಳ?

2

ಐಐಎಸ್‌ಸಿ ಪ್ರೊ. ಮಹೇಶ್ ಕಾಕ್ಡೆಗೆ ರಾಮಾನುಜನ್ ಪ್ರಶಸ್ತಿ! ಗಣಿತ ಕ್ಷೇತ್ರದ ಸಾಧನೆಗೆ ಜಾಗತಿಕ ಮನ್ನಣೆ

3

ಸಿದ್ದರಾಮಯ್ಯ ವಿರುದ್ಧ ಡಿ.ಕೆ. ಶಿವಕುಮಾರ್ ಸ್ಟಿಂಗ್ ಆಪರೇಶನ್! ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

4

ಕರ್ನಾಟಕದಲ್ಲಿ ಬಸ್ ಟಿಕೆಟ್ ದರದ ಏರಿಕೆಯಾಗೋದು ಪಕ್ಕಾ!!

5

8ನೇ ವೇತನ ಆಯೋಗ: ಸರ್ಕಾರಿ ನೌಕರರ ಮೂಲ ವೇತನ ₹47,600 ದಿಂದ ₹1,22,332 ಮೀರುವ ಸಾಧ್ಯತೆ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

​Asha workers stage massive protest: ಬೆಳಗಾವಿಯಲ್ಲಿ ಆಶಾ ಕಾರ್ಯಕರ್ತೆಯರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೀದಿಗಿಳಿದು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಮಾಸಿಕ 15 ಸಾವಿರ ರೂಪಾಯಿ ಗೌರವಧನ ನೀಡಬೇಕು ಮತ್ತು ಬಾಕಿ ಇರುವ ಪ್ರೋತ್ಸಾಹ ಧನವನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಜಿಲ್ಲಾ ಪಂಚಾಯತ್ ಆವರಣದವರೆಗೆ ಆಶಾ ಕಾರ್ಯಕರ್ತೆಯರು ಬೃಹತ್ ಪಾದಯಾತ್ರೆ ನಡೆಸಿದರು. ನೂರಾರು ಸಂಖ್ಯೆಯಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.  

​ಬೆಳಗಾವಿಯ ಸರ್ದಾರ್ ಮೈದಾನದಿಂದ ಆರಂಭಗೊಂಡ ಆಶಾ ಕಾರ್ಯಕರ್ತೆಯರ ಬೃಹತ್ ಪಾದಯಾತ್ರೆ ಚೆನ್ನಮ್ಮ ವೃತ್ತದ ಮಾರ್ಗವಾಗಿ ಜಿಲ್ಲಾ ಪಂಚಾಯತಿ ಆವರಣಕ್ಕೆ ತಲುಪಿತು. ನೂರಾರು ಕಾರ್ಯಕರ್ತೆಯರು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ತಮಗೆ ನೀಡುತ್ತಿರುವ ಮಾಸಿಕ ವೇತನ ಸಾಲುತ್ತಿಲ್ಲ. ತಕ್ಷಣವೇ 15 ಸಾವಿರ ರೂಪಾಯಿ ಗೌರವಧನ ನಿಗದಿಪಡಿಸಬೇಕು. ಮೂಲ ಸೌಕರ್ಯಗಳನ್ನು ಸರಿಯಾಗಿ ಒದಗಿಸಬೇಕು. ಸರ್ಕಾರ ನಮಗೆ ಗೌರವಧನ ನಿಗದಿಪಡಿಸಲೇಬೇಕು ಎಂದು ಒತ್ತಾಯಿಸಿದ್ದಾರೆ.

​ಇದೇ ವೇಳೆ, 'ಸಮಸ್ತ ಆ್ಯಪ್' ಮೂಲಕ ನೀಡುವ ತಾಂತ್ರಿಕ ಒತ್ತಡಕ್ಕೆ ತಕ್ಷಣವೇ ಬ್ರೇಕ್ ಹಾಕಬೇಕು ಎಂದು ಕಾರ್ಯಕರ್ತೆಯರು ಆಗ್ರಹಿಸಿದರು. ಹಲವು ತಿಂಗಳುಗಳಿಂದ ಬಾಕಿ ಇರುವ ಪ್ರೋತ್ಸಾಹ ಧನವನ್ನು ಶೀಘ್ರ ಬಿಡುಗಡೆ ಮಾಡಬೇಕು ಎಂದು ಜಿಲ್ಲಾ ಪಂಚಾಯತಿ ಆವರಣದಲ್ಲಿ ಮನವಿ ಸಲ್ಲಿಕೆ ಮಾಡಿದರು. ದೊಡ್ಡ ಸಂಖ್ಯೆಯಲ್ಲಿ ಬಂದಿದ್ದ ಆಶಾ ಕಾರ್ಯಕರ್ತೆಯರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು.

ಸರ್ಕಾರ ತಕ್ಷಣವೇ ತಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸದಿದ್ದರೆ, ಮುಂಬರುವ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಕೈಗೆತ್ತಿಕೊಳ್ಳುವುದಾಗಿ ಪ್ರತಿಭಟನಾಕಾರರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿಯಲ್ಲಿ ಆಶಾ ಕಾರ್ಯಕರ್ತೆಯರು ನೀಡಿರುವ ಈ ಎಚ್ಚರಿಕೆ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದು, ಮುಂದಿನ ದಿನಗಳಲ್ಲಿ ಸರ್ಕಾರ ಯಾವ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಒಂದು ಸರ್ಕಾರ ಆಶಾ ಕಾರ್ಯಕರ್ತೆಯರು ಬೇಡಿಕೆಗಳನ್ನು ಈಡೇರಿಸದಿದ್ದರೇ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಬೃಹತ್‌ ಹೋರಾಟ ಕೈಗೊಳ್ಳುವುದಾಗಿ ಎಚ್ಚರಿಕೆ ರವಾನೆ ಮಾಡಿದ್ದಾರೆ. ಸರ್ಕಾರ ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನ ಈಡೇರಿಸುತ್ತದಯೇ, ಇಲ್ಲವೇ ಎಂದು ಮುಂದಿನ ದಿನಗಳಲ್ಲಿ ಕಾದು ನೋಡಬೇಕು. ಒಂದು ವೇಳೆ ಸರ್ಕಾರ ಸುಮ್ಮನೆ ಕುಳಿತರೇ ಆಶಾ ಕಾರ್ಯಕರ್ತೆಯರು ಮತ್ತೊಮ್ಮೆ ಸಿಡಿದೆದ್ದರೇ ರಾಜ್ಯಾದ್ಯಂತ ಬೃಹತ್‌ ಹೋರಾಟ ಫಿಕ್ಸ್‌ ಎಂದು ಹೇಳಬಹುದು. 

ಬಾಗಲಕೋಟೆಯಲ್ಲಿ ಕಲಾವಿದರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ

ಬಾಗಲಕೋಟೆಯಲ್ಲಿ ಕಲಾವಿದರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. ಇಂದಿನಿಂದ 3 ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಯಲಿದೆ. ನವನಗರದ ಜಿಲ್ಲಾಡಳಿತ ಭವನದ ಎದುರು ಈ ಉಪವಾಸ ಸತ್ಯಾಗ್ರಹ ನಡೆಯುತ್ತಿದೆ. ಕರ್ನಾಟಕ ರಾಜ್ಯ ಸರ್ವ ಕಲಾವಿದರ ಸಂಘ ಮತ್ತು ಕರ್ನಾಟಕ ರಕ್ಷಣಾ ವೇದಿಕೆ ಸಹಯೋಗದಲ್ಲಿ ಸತ್ಯಾಗ್ರಹ ನಡೆಯುತ್ತಿದೆ. ಕಲಾವಿದರಿಗೆ ನೇರವಾಗಿ ಹಣ ಸಂದಾಯ ಮಾಡುವುದು, ಪ್ರಾಯೋಜನೆ ಮೊತ್ತ ಹೆಚ್ಚಿಸುವುದು ಹಾಗೂ ಜಿಲ್ಲೆಯ ಸಹಾಯಕ ನಿರ್ದೇಶಕ ಹುದ್ದೆಗೆ ಖಾಯಂ  ನೇಮಿಸಬೇಕು ಎಂದು ಆಗ್ರಹ ಮಾಡಲಾಗುತ್ತಿದೆ. ಉಪವಾಸ ಸತ್ಯಾಗ್ರಹದಲ್ಲಿ ನಗರ ಹಾಗೂ ಗ್ರಾಮೀಣ ಭಾಗದ ಅನೇಕ ಕಲಾವಿದರು ಭಾಗಿಯಾಗಿದ್ದು ಬಾಗಲಕೋಟೆಯ ನವನಗರದಲ್ಲಿನ ಜಿಲ್ಲಾಡಳಿತ ಭವನದಲ್ಲಿ ಮಾಡಲಾಗುತ್ತಿದೆ.

ಬಾಗಲಕೋಟೆಯಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬಾಗಲಕೋಟೆ ಡಿಸಿ ಕಚೇರಿ ಎದುರು ವಿವಿಧ ಕಲಾವಿದರಿಂದ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. 3 ದಿನಗಳ ಕಾಲ ಧರಣಿ ಸತ್ಯಗ್ರಹ ನಡೆಯಲಿದೆ. ಕರ್ನಾಟಕ ರಾಜ್ಯ ಸರ್ವ ಕಲಾವಿದರ ಸಂಘ ಮತ್ತು ಕರ್ನಾಟಕ ರಕ್ಷಣಾ ವೇದಿಕೆ ಸಹಯೋಗದಲ್ಲಿ ಸತ್ಯಾಗ್ರಹ ನಡೆಯುತ್ತಿದೆ. ಕಲಾವಿದರಿಗೆ ನೇರವಾಗಿ ಹಣ ಸಂದಾಯ ಮಾಡುವುದು, ಪ್ರಾಯೋಜನೆ ಮೊತ್ತ ಹೆಚ್ಚಿಸುವುದು ಹಾಗೂ ಜಿಲ್ಲೆಯ ಸಹಾಯಕ ನಿರ್ದೇಶಕ ಹುದ್ದೆಗೆ ಖಾಯಂ ಅಧಿಕಾರಿ ನೇಮಿಸಬೇಕು ಎಂದು ಕಲಾವಿದರು ಆಗ್ರಹ ವ್ಯಕ್ತಪಡಿಸಿದ್ದಾರೆ. ಉಪವಾಸ ಸತ್ಯಾಗ್ರಹದಲ್ಲಿ ನಗರ ಹಾಗೂ ಗ್ರಾಮೀಣ ಭಾಗದ ಹಲವಾರು ಕಲಾವಿದರು ಭಾಗಿಯಾಗಿದ್ದಾರೆ.   

Add Zee News as a Preferred Source
TAGS:
Kannada News