• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಹುಬ್ಬಳ್ಳಿ ಧಾರವಾಡ
  • /ಬೀದಿ ಬದಿ ವ್ಯಾಪಾರಿಗಳ ಸಮುದಾಯ ಭವನ ನಿರ್ಮಾಣಕ್ಕೆ ಅನುದಾನದ ಭರವಸೆ

ಬೀದಿ ಬದಿ ವ್ಯಾಪಾರಿಗಳ ಸಮುದಾಯ ಭವನ ನಿರ್ಮಾಣಕ್ಕೆ ಅನುದಾನದ ಭರವಸೆ

ಗದಗನಲ್ಲಿ ಜಾರಿಯಾಗಿರುವ ಬೀದಿ ವ್ಯಾಪಾರಿಗಳ ಪರವಾದ ಕಾನೂನುಗಳನ್ನು ಇಡೀ ರಾಜ್ಯಕ್ಕೆ ವಿಸ್ತರಿಸುವ ಪ್ರಯತ್ನಕ್ಕೂ ಶಾಸಕ ಎಚ್ ಕೆ ಪಾಟೀಲ್ ಮುಂದಾಗಿದ್ದಾರೆ. ವ್ಯಾಪಾರಿಗಳ ಬದುಕಿಗೆ ಹೊಸ ಭರವಸೆ ಮೂಡಿಸಿದ ಕಾರ್ಯಕ್ರಮದ ವಿಶೇಷತೆ ಇಲ್ಲಿದೆ ನೋಡಿ..

Written ByChetana Devarmani
Published: Nov 04, 2026, 03:37 PM IST|Updated: Nov 04, 2026, 03:42 PM IST
joinshare
ಬೀದಿ ಬದಿ ವ್ಯಾಪಾರಿಗಳ ಸಮುದಾಯ ಭವನ ನಿರ್ಮಾಣಕ್ಕೆ ಅನುದಾನದ ಭರವಸೆ

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

Trending

  • News
  • Photos
  • Videos
ಅಗ್ನಿವೀರರಿಗೆ ಕೇಂದ್ರದ ಭರ್ಜರಿ ಗಿಫ್ಟ್: ಸೇವಾವಧಿ ಇನ್ನು 2 ವರ್ಷ ವಿಸ್ತರಣೆ!

ಅಗ್ನಿವೀರರಿಗೆ ಕೇಂದ್ರದ ಭರ್ಜರಿ ಗಿಫ್ಟ್: ಸೇವಾವಧಿ ಇನ್ನು 2 ವರ್ಷ ವಿಸ್ತರಣೆ!

2

ಐತಿಹಾಸಿಕ ದೇವೀರಮ್ಮ ಜಾತ್ರೆಗೆ ಕ್ಷಣಗಣನೆ : ವಯೋಮಿತಿ, ಸಮಯ ಸೇರಿ ಮಹತ್ವದ ಮಾರ್ಗಸೂಚಿ ಬಿಡುಗಡೆ

3

ಮಲ್ಟಿಬ್ಯಾಗರ್ ಷೇರುಗಳನ್ನು ಗುರುತಿಸುವುದು ಹೇಗೆ? ಷೇರು ಮಾರುಕಟ್ಟೆ ಸಂಶೋಧನೆಗೆ ಕ್ವಾಲಾ ಇಂಟೆಲ್‌ನ 7 ಸೂತ್ರಗಳು!

4

ದೀಪಾವಳಿಯ ಹಿಂದಿನ ರೋಚಕ ಕಥೆಯೇನು ಗೊತ್ತಾ? ಇಲ್ಲಿದೆ ಮಾಹಿತಿ..

5

ಬೆಟ್ಟದ ನೆಲ್ಲಿಕಾಯಿಯ ರಸವನ್ನು ಇದರಲ್ಲಿ ಬೆರೆಸಿ ತಲೆಗೆ ಹಚ್ಚಿದ್ರೆ ಕಡು ಕಪ್ಪಾಗುತ್ತೆ ಬಿಳಿಕೂದಲು!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಗದಗ: ಬೀದಿ ಬದಿ ವ್ಯಾಪಾರಿಗಳು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಬೇಕು. ಅವರ ವ್ಯಾಪಾರಕ್ಕೆ ಭದ್ರತೆ ಸಿಗಬೇಕು. ಆರ್ಥಿಕವಾಗಿ ಸಬಲರಾಗಬೇಕು. ಇದಕ್ಕಾಗಿ ಗದಗನಲ್ಲಿ ಮಹತ್ವದ ಹೆಜ್ಜೆ ಇಡಲಾಗಿದೆ. ಬೀದಿ ವ್ಯಾಪಾರಿಗಳ ಸಮುದಾಯ ಭವನ ನಿರ್ಮಾಣಕ್ಕೆ ಮಾಜಿ ಸಚಿವ ಹಾಗೂ ಶಾಸಕ ಎಚ್.ಕೆ. ಪಾಟೀಲ್ ಅವರಿಂದ ಒಂದು ಕೋಟಿ ರೂಪಾಯಿ ಅನುದಾನದ ಭರವಸೆ ಸಿಕ್ಕಿದೆ. ಅಷ್ಟೇ ಅಲ್ಲ, ಗದಗನಲ್ಲಿ ಜಾರಿಯಾಗಿರುವ ಬೀದಿ ವ್ಯಾಪಾರಿಗಳ ಪರವಾದ ಕಾನೂನುಗಳನ್ನು ಇಡೀ ರಾಜ್ಯಕ್ಕೆ ವಿಸ್ತರಿಸುವ ಪ್ರಯತ್ನಕ್ಕೂ ಶಾಸಕ ಎಚ್ ಕೆ ಪಾಟೀಲ್ ಮುಂದಾಗಿದ್ದಾರೆ. ವ್ಯಾಪಾರಿಗಳ ಬದುಕಿಗೆ ಹೊಸ ಭರವಸೆ ಮೂಡಿಸಿದ ಕಾರ್ಯಕ್ರಮದ ವಿಶೇಷತೆ ಇಲ್ಲಿದೆ ನೋಡಿ..

ಇದು ಬೀದಿ ಬದಿ ವ್ಯಾಪಾರಿಗಳಲ್ಲಿ ಹೊಸ ಉತ್ಸಾಹ ಮೂಡಿಸಿದ ಸಂಭ್ರಮದ ವೇದಿಕೆ. ಗದಗ ನಗರದ ಕೆ.ಎಚ್. ಪಾಟೀಲ್ ವೃತ್ತದ ಸಮೀಪ ಕರ್ನಾಟಕ ಸಂಭ್ರಮ-53ರ ಅಂಗವಾಗಿ ಬೀದಿ ವ್ಯಾಪಾರಿಗಳ ವಿವಿಧ ಯೋಜನೆಗಳ ಅನುಷ್ಠಾನ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಬೀದಿ ವ್ಯಾಪಾರಿಗಳ ಸಮುದಾಯ ಭವನಕ್ಕೆ ಶಂಕುಸ್ಥಾಪನೆ, ಸಾಂಸ್ಕೃತಿಕ ಕಾರ್ಯಕ್ರಮದ ಸಂಭ್ರಮದ ನಡುವೆ ಶಾಸಕ ಎಚ್.ಕೆ. ಪಾಟೀಲ್ ವ್ಯಾಪಾರಿಗಳ ಅಭಿವೃದ್ಧಿಗೆ ಮಹತ್ವದ ಭರವಸೆ ನೀಡಿದ್ರು. ಬೀದಿ ಬದಿ ವ್ಯಾಪಾರಿಗಳು ಕೇವಲ ವ್ಯಾಪಾರಿಗಳಲ್ಲ. ಅವರು ತಮ್ಮ ಪರಿಶ್ರಮದಿಂದ ಕುಟುಂಬವನ್ನು ನಿರ್ವಹಿಸುವ ಸ್ವಾಭಿಮಾನಿ ಶ್ರಮಜೀವಿಗಳು. ಅವರ ಆರ್ಥಿಕ ಸ್ವಾವಲಂಬನೆಗೆ ಬಡವರ ಕಲ್ಯಾಣ ಕಾನೂನುಗಳು ಪರಿಣಾಮಕಾರಿಯಾಗಿ ಜಾರಿಯಾಗಬೇಕು. ಜೊತೆಗೆ ವ್ಯಾಪಾರಿಗಳ ಹಕ್ಕುಗಳನ್ನು ಗೌರವಿಸಿ, ರಕ್ಷಿಸುವ ಕೆಲಸ ನಿರಂತರವಾಗಿ ನಡೆಯಬೇಕು ಎಂದು ಪ್ರತಿಪಾದಿಸಿದ್ರು.

ಇನ್ನು ಬೀದಿ ವ್ಯಾಪಾರಿಗಳ ಬಹುದಿನಗಳ ಕನಸಾಗಿರುವ ಸಮುದಾಯ ಭವನ ನಿರ್ಮಾಣಕ್ಕೆ ತಮ್ಮ ಶಾಸಕ ನಿಧಿಯಿಂದ ಬರೋಬ್ಬರಿ ಒಂದು ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಎಚ್ ಕೆ ಪಾಟೀಲ್ ಘೋಷಿಸಿದ್ರು. ಮುಂದಿನ ವರ್ಷದ ಕರ್ನಾಟಕ ಸಂಭ್ರಮದ ವೇಳೆಗೆ ಸಮುದಾಯ ಭವನ ಉದ್ಘಾಟಿಸಿ, ಅಲ್ಲಿಂದಲೇ ಕನ್ನಡ ಸಂಭ್ರಮಕ್ಕೆ ಚಾಲನೆ ನೀಡುವ ಆಶಯ ಸಹ ವ್ಯಕ್ತಪಡಿಸಿದ್ರು. ಇದ್ರಿಂದ ಬೀದಿ ಬದಿ ವ್ಯಾಪಾರಸ್ಥರಿಗೆ ಶಾಸಕರ ಮಾತುಗಳಿಂದ ಮತ್ತಷ್ಟು ಬಲ ಸಿಕ್ಕಂತಾಯಿತು.

ಇನ್ನೊಂದೆಡೆ ಬೀದಿ ವ್ಯಾಪಾರಿಗಳ ಹಕ್ಕು ಮತ್ತು ಸೌಲಭ್ಯಗಳಿಗಾಗಿ ನಿರಂತರ ಹೋರಾಟ ನಡೆಸುತ್ತಿರುವ ಸಂಘಟನೆಗೆ ಈ ಕಾರ್ಯಕ್ರಮ ಹೊಸ ಶಕ್ತಿ ನೀಡಿದೆ. ಗದಗ ಜಿಲ್ಲೆಯಲ್ಲಿ ಬೀದಿ ವ್ಯಾಪಾರಿಗಳ ಪರವಾಗಿ ಅನುಷ್ಠಾನವಾಗಿರುವ ಕಾನೂನುಗಳು ರಾಜ್ಯದ ಎಲ್ಲ ಜಿಲ್ಲೆಗಳಿಗೂ ವಿಸ್ತರಣೆಯಾಗಬೇಕು ಎಂಬುದು ಸಂಘಟನೆಯ ಆಶಯ. ಆ ನಿಟ್ಟಿನಲ್ಲಿ 20 ಜನರ ನಿಯೋಗದೊಂದಿಗೆ ಬೆಂಗಳೂರಿಗೆ ಬಂದು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡುವಂತೆ ಎಚ್.ಕೆ. ಪಾಟೀಲ್ ಆಹ್ವಾನ ನೀಡಿದ್ದು, ವ್ಯಾಪಾರಿಗಳ ಬೇಡಿಕೆಗಳಿಗೆ ಮತ್ತಷ್ಟು ಬಲ ಸಿಕ್ಕಂತಾಗಿದೆ.

ಬೀದಿ ವ್ಯಾಪಾರಿಗಳಿಗೆ ಕೇವಲ ಭರವಸೆಗಳಲ್ಲ, ಶಾಶ್ವತ ಸೌಲಭ್ಯಗಳು ಬೇಕು. ಸಮುದಾಯ ಭವನದ ಜೊತೆಗೆ ಸೂಕ್ತ ವ್ಯಾಪಾರ ಸ್ಥಳ, ಕಾನೂನು ರಕ್ಷಣೆ ಮತ್ತು ಸರ್ಕಾರದ ಯೋಜನೆಗಳು ಪ್ರತಿಯೊಬ್ಬ ಅರ್ಹ ವ್ಯಾಪಾರಿಗೂ ತಲುಪಬೇಕು. ಸಂಘಟನೆಯ ಮೂಲಕ ವ್ಯಾಪಾರಿಗಳನ್ನು ಒಗ್ಗೂಡಿಸಿ ಅವರ ಬದುಕಿನಲ್ಲಿ ಬದಲಾವಣೆ ತರುವ ಸಂಕಲ್ಪವನ್ನು ಅಧ್ಯಕ್ಷರು ವ್ಯಕ್ತಪಡಿಸಿದ್ರು.

ಇದೇ ಸಂದರ್ಭದಲ್ಲಿ ಗದಗ ನಗರದ ಹೃದಯ ಭಾಗದಲ್ಲಿರುವ ವಕಾರ್ ಸಾಲಿನ 32 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಲಿರುವ ವಾಣಿಜ್ಯ ಸಂಕೀರ್ಣದಲ್ಲಿ, ಬೀದಿ ವ್ಯಾಪಾರಿಗಳಿಗೆ ವ್ಯಾಪಾರ ನಡೆಸಲು ಅವಕಾಶ ಕಲ್ಪಿಸುವ ಬಗ್ಗೆಯೂ ಶಾಸಕ ಎಚ್.ಕೆ. ಪಾಟೀಲ್ ಭರವಸೆ ನೀಡಿದ್ರು. ಗದಗಿನ ಹೆಮ್ಮೆಯ ಹುಯಿಲಗೋಳ ನಾರಾಯಣರಾವ್ ಅವರ 'ಉದಯವಾಗಲಿ ಚೆಲುವ ನಮ್ಮ ಕನ್ನಡ ನಾಡು' ಗೀತೆಯನ್ನು ಸ್ಮರಿಸುವ ಮೂಲಕ ಕನ್ನಡಾಭಿಮಾನಕ್ಕೂ ಸಾಕ್ಷಿಯಾದ್ರು. ಬೀದಿ ಬದಿ ವ್ಯಾಪಾರಿಗಳ ಬದುಕಿಗೆ ಭದ್ರತೆ. ಅವರ ಕನಸಿಗೆ ಸಮುದಾಯ ಭವನದ ಬಲ. ವ್ಯಾಪಾರಕ್ಕೆ ಸೂಕ್ತ ಸ್ಥಳಾವಕಾಶ. ಈ ಮೂರು ಆಶಯಗಳು ಸಾಕಾರಗೊಂಡರೆ ಗದಗ ಜಿಲ್ಲೆಯ ಬೀದಿ ವ್ಯಾಪಾರಿಗಳ ಬದುಕಿನಲ್ಲಿ ಹೊಸ ಅಧ್ಯಾಯ ಆರಂಭವಾಗಲಿದೆ ಅನ್ನೋದ್ರಲ್ಲಿ ಸಂಶಯವೇ ಇಲ್ಲ.

 

Add Zee News as a Preferred Source
TAGS:
Kannada News