SOCIAL MEDIA

Newsletter

PARTNER SITES
Select Language Select State

ಬಾಗಲಕೋಟೆ ಮುಳುಗಡೆ ಸಂತ್ರಸ್ತರಿಂದ ಹೆದ್ದಾರಿ ತಡೆದು ಆಕ್ರೋಶ

ಬಾಗಲಕೋಟೆಯ ನ್ಯೂ ಐಬಿ ಬಳಿ ರಾಯಚೂರು-ಬೆಳಗಾವಿ ಹೆದ್ದಾರಿಯನ್ನು ತಡೆದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Written By Chetana Devarmani
Published: Oct 27, 2026, 09:42 PM IST | Updated: Oct 27, 2026, 09:44 PM IST
Join

ಬಾಗಲಕೋಟೆ: ಮುಳುಗಡೆ ಸಂತ್ರಸ್ತರ ಮನವಿ ಸ್ವೀಕರಿಸಲು ಶಾಸಕ ಉಮೇಶ್ ಮೇಟಿ ಸ್ಥಳಕ್ಕೆ ಬಾರದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಪ್ರತಿಭಟನಾಕಾರರು ರಸ್ತೆ ತಡೆ ನಡೆಸಿದ್ದಾರೆ. ಬಾಗಲಕೋಟೆಯ ನ್ಯೂ ಐಬಿ ಬಳಿ ರಾಯಚೂರು-ಬೆಳಗಾವಿ ಹೆದ್ದಾರಿಯನ್ನು ತಡೆದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಳೆ ಬಾಗಲಕೋಟೆಯ ನಡುಗಡ್ಡೆ ಪ್ರದೇಶದ ಜನರನ್ನು ಸ್ಥಳಾಂತರಿಸಬೇಕು ಹಾಗೂ ಹಳೆ ಬಾಗಲಕೋಟೆಯನ್ನು ಸಂಪೂರ್ಣವಾಗಿ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿ ಸಂತ್ರಸ್ತರು ಇಂದು ಪ್ರತಿಭಟನೆ ನಡೆಸಿದರು. ಬೆಳಿಗ್ಗೆ ಹಳೆ ಬಾಗಲಕೋಟೆಯಿಂದ ಪಾದಯಾತ್ರೆ ಮೂಲಕ ಪ್ರತಿಭಟನಾ ಮೆರವಣಿಗೆ ನಡೆಸಿದ ಹೋರಾಟಗಾರರು, ಬಳಿಕ ಬಿಟಿಡಿಎ ಕಚೇರಿ ಎದುರು ಧರಣಿ ಕುಳಿತರು.

ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮನವಿ ಸಲ್ಲಿಸಲು ಪ್ರತಿಭಟನಾಕಾರರು ಕಾಯುತ್ತಿದ್ದರು. ಆದರೆ, ಸಂಜೆಯಾದರೂ ಶಾಸಕ ಉಮೇಶ್ ಮೇಟಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿರಲಿಲ್ಲ ಎನ್ನಲಾಗಿದೆ. ಮನವಿ ಸ್ವೀಕರಿಸಲು ಶಾಸಕರು ಬಾರದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ ಸಂತ್ರಸ್ತರು ನ್ಯೂ ಐಬಿ ಬಳಿ ರಾಯಚೂರು-ಬೆಳಗಾವಿ ಹೆದ್ದಾರಿಯನ್ನು ತಡೆದು ಪ್ರತಿಭಟನೆ ತೀವ್ರಗೊಳಿಸಿದರು.

ಹಳೆ ಬಾಗಲಕೋಟೆಯ ಸಂಪೂರ್ಣ ಸ್ಥಳಾಂತರ ಸೇರಿದಂತೆ ತಮ್ಮ ಬೇಡಿಕೆಗಳ ಕುರಿತು ಸರ್ಕಾರ ಹಾಗೂ ಜನಪ್ರತಿನಿಧಿಗಳು ಗಮನಹರಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಶಾಸಕ ಉಮೇಶ್ ಮೇಟಿ ಸ್ಥಳಕ್ಕೆ ಬಾರದಿರುವುದೇ ರಸ್ತೆ ತಡೆಗೆ ಕಾರಣವಾಗಿದ್ದು, ಈ ಬೆಳವಣಿಗೆಯಿಂದ ಸ್ಥಳದಲ್ಲಿ ಪ್ರತಿಭಟನೆಯ ಕಾವು ಹೆಚ್ಚಾಗಿದೆ.
 

Add Zee News as a Preferred Source
TAGS:

About the Author

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."

ZEENEWS TRENDING STORIES