SOCIAL MEDIA

Newsletter

PARTNER SITES
Select Language Select State

ಕುಂದಾನಗರಿಯಲ್ಲಿ ಕನ್ನಡದ ಹಬ್ಬದ ಸಂಭ್ರಮ.. ಮಧ್ಯರಾತ್ರಿಯಿಂದಲೇ ರಾಜ್ಯೋತ್ಸವದ ಕಳೆ, ಪಟಾಕಿ ಸಿಡಿಸಿ ಕನ್ನಡಿಗರ ಸಡಗರ!

Belagavi Kannada Rajyotsava celebrations: ನಾಡಿನಾದ್ಯಂತ ಇಂದು ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆಮಾಡಿದೆ. ಅದರಲ್ಲೂ ಕುಂದಾನಗರಿ ಬೆಳಗಾವಿಯಲ್ಲಿ ಕನ್ನಡದ ಹಬ್ಬದ ಕಳೆ ಮತ್ತಷ್ಟು ಜೋರಾಗಿದೆ. ಬರದ ಕಾರ್ಮೋಡದ ನಡುವೆಯೂ ಕನ್ನಡಿಗರು ಅದ್ಧೂರಿಯಾಗಿ ರಾಜ್ಯೋತ್ಸವ ಆಚರಿಸುತ್ತಿದ್ದಾರೆ. ಮಧ್ಯರಾತ್ರಿಯಿಂದಲೇ ಸಂಭ್ರಮಾಚರಣೆ ಶುರುವಾಗಿದ್ದು, ಚನ್ನಮ್ಮ ವೃತ್ತದಲ್ಲಿ ಮೇಯರ್ ಪ್ರೀತಿ ಕೇಕ್ ಕತ್ತರಿಸುವ ಮೂಲಕ ಸಂಭ್ರಮಕ್ಕೆ ಚಾಲನೆ ನೀಡಿದ್ದಾರೆ. ಪಟಾಕಿ ಸಿಡಿಸಿ, ಕನ್ನಡದ ಬಾವುಟ ಹಾರಿಸಿ ಕನ್ನಡಿಗರು ಸಂಭ್ರಮಿಸಿದ್ದಾರೆ.

Written By Ramya. R. Gowda
Published: Nov 01, 2026, 11:04 AM IST | Updated: Nov 01, 2026, 11:12 AM IST
Join

Belagavi Kannada Rajyotsava celebrations: ನಾಡಿನಾದ್ಯಂತ ಇಂದು ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆಮಾಡಿದೆ. ಅದರಲ್ಲೂ ಕುಂದಾನಗರಿ ಬೆಳಗಾವಿಯಲ್ಲಿ ಕನ್ನಡದ ಹಬ್ಬದ ಕಳೆ ಮತ್ತಷ್ಟು ಜೋರಾಗಿದೆ. ಬರದ ಕಾರ್ಮೋಡದ ನಡುವೆಯೂ ಕನ್ನಡಿಗರು ಅದ್ಧೂರಿಯಾಗಿ ರಾಜ್ಯೋತ್ಸವ ಆಚರಿಸುತ್ತಿದ್ದಾರೆ. ಮಧ್ಯರಾತ್ರಿಯಿಂದಲೇ ಸಂಭ್ರಮಾಚರಣೆ ಶುರುವಾಗಿದ್ದು, ಚನ್ನಮ್ಮ ವೃತ್ತದಲ್ಲಿ ಮೇಯರ್ ಪ್ರೀತಿ ಕೇಕ್ ಕತ್ತರಿಸುವ ಮೂಲಕ ಸಂಭ್ರಮಕ್ಕೆ ಚಾಲನೆ ನೀಡಿದ್ದಾರೆ. ಪಟಾಕಿ ಸಿಡಿಸಿ, ಕನ್ನಡದ ಬಾವುಟ ಹಾರಿಸಿ ಕನ್ನಡಿಗರು ಸಂಭ್ರಮಿಸಿದ್ದಾರೆ.

ಹೌದು.. ಇದು ಕುಂದಾನಗರಿ ಬೆಳಗಾವಿಯ ಕನ್ನಡದ ಅಭಿಮಾನದ ಸಂಭ್ರಮ.. ನವೆಂಬರ್ 1ರ ಮಧ್ಯರಾತ್ರಿಯಿಂದಲೇ ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವದ ಕಳೆ ರಂಗೇರಿದೆ.ಚನ್ನಮ್ಮ ವೃತ್ತದಲ್ಲಿ ಕನ್ನಡಿಗರ ಸಂಭ್ರಮ ಮುಗಿಲುಮುಟ್ಟಿದೆ. ಮೇಯರ್ ಪ್ರೀತಿ ಕೇಕ್ ಕತ್ತರಿಸುವ ಮೂಲಕ ರಾಜ್ಯೋತ್ಸವ ಆಚರಣೆಗೆ ಚಾಲನೆ ನೀಡಿದ್ರು. ಬಳಿಕ ಕನ್ನಡಿಗರು ಪಟಾಕಿ ಸಿಡಿಸಿ, ಜೈ ಕನ್ನಡಾಂಬೆ ಘೋಷಣೆ ಮೊಳಗಿಸಿ ಸಂಭ್ರಮಿಸಿದರು.
ಬರದ ಕಾರ್ಮೋಡದ ನಡುವೆಯೂ ಕನ್ನಡದ ಹಬ್ಬದ ಉತ್ಸಾಹ ಮಾತ್ರ ಕಿಂಚಿತ್ತೂ ಕಡಿಮೆಯಾಗಿಲ್ಲ. ರಸ್ತೆಗಳೆಲ್ಲ ಕನ್ನಡದ ಬಾವುಟಗಳಿಂದ ಕಂಗೊಳಿಸುತ್ತಿದ್ದು, ಎಲ್ಲೆಲ್ಲೂ ಕನ್ನಡದ ಕಂಪು ಪಸರಿಸಿದೆ.

ಒಟ್ಟಿನಲ್ಲಿ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕನ್ನಡದ ಮೇಲಿನ ಅಭಿಮಾನ ಮತ್ತೊಮ್ಮೆ ಅನಾವರಣಗೊಂಡಿದೆ. ನಾಡು, ನುಡಿ, ಭಾಷೆಯ ಮೇಲಿನ ಪ್ರೀತಿ ಹಾಗೂ ಅಭಿಮಾನಕ್ಕೆ ಸಾಕ್ಷಿಯಾಗಿದೆ ಕುಂದಾನಗರಿಯ ರಾಜ್ಯೋತ್ಸವ ಸಂಭ್ರಮ.

ಇತ್ತ ಯಾದಗಿರಿಯಲ್ಲೂ 71ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ..!

ಯಾದಗಿರಿ: ಜಿಲ್ಲೆಯಾದ್ಯಂತ 71ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸುವ ಮೂಲಕ ನಾಡಹಬ್ಬಕ್ಕೆ ಚಾಲನೆ ನೀಡಿದರು.ಕಾರ್ಯಕ್ರಮದ ಆರಂಭದಲ್ಲಿ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವ ಅರ್ಪಿಸಲಾಯಿತು. ಬಳಿಕ ಧ್ವಜಾರೋಹಣ ನೆರವೇರಿಸಿದ ಸಚಿವರು ಗೌರವ ವಂದನೆ ಸ್ವೀಕರಿಸಿದರು. ನಂತರ ವಿವಿಧ ತಂಡಗಳಿಂದ ನಡೆದ ಆಕರ್ಷಕ ಪಥಸಂಚಲನವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಇನ್ನು ಕಾರ್ಯಕ್ರಮದಲ್ಲಿ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು, ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ತುಕಾರಾಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು. ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು, ಗಣ್ಯರು ಹಾಗೂ ನೂರಾರು ಶಾಲಾ ಮಕ್ಕಳು ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿ ಪಾಲ್ಗೊಂಡಿದ್ದರು. ಕನ್ನಡದ ಕಹಳೆ ಮೊಳಗಿಸುವ ಮೂಲಕ ಯಾದಗಿರಿಯಲ್ಲಿ ನಾಡಹಬ್ಬವನ್ನು ಅದ್ಧೂರಿಯಾಗಿ ಆಚರಿಸಲಾಯಿತು.

ಸಕ್ಕರೆ ನಾಡು ಮಂಡ್ಯದಲ್ಲೂ ಕನ್ನಡ ಹಬ್ಬದ ಕಂಪು


ಕನ್ನಡ ರಾಜ್ಯೋತ್ಸವದ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ಅದರಂತೆ ಸಕ್ಕರೆ ನಾಡು ಮಂಡ್ಯದಲ್ಲೂ ಕನ್ನಡ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಮಂಡಣ ಜಿಲ್ಲೆಯ ಸರ್.ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ನಗರಸಭೆ ವತಿಯಿಂದ ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಚಿವ ಎನ್. ಚಲುವರಾಯಸ್ವಾಮಿ ಧ್ವಜಾರೋಹಣ ನೆರವೇರಿಸಿ ಕನ್ನಡಾಂಬೆಗೆ ಗೌರವ ಸಲ್ಲಿಸಿದರು.ಮಂಡ್ಯದಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮ ಕಳೆಗಟ್ಟಿತ್ತು. ಸರ್.ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಕನ್ನಡದ ಬಾವುಟ ರಾರಾಜಿಸಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ನಗರಸಭೆ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಚಿವ ಎನ್. ಚಲುವರಾಯಸ್ವಾಮಿ ಧ್ವಜಾರೋಹಣ ನೆರವೇರಿಸಿದರು. ಇದಕ್ಕೂ ಮುನ್ನ ತಾಯಿ ಭುವನೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸಿ ನಮನ ಸಲ್ಲಿಸಿದರು.

ಬಳಿಕ ರಾಷ್ಟ್ರಗೀತೆ, ನಾಡಗೀತೆ ಹಾಗೂ ರೈತಗೀತೆಗೆ ಗೌರವ ಸಮರ್ಪಿಸಲಾಯಿತು. ತೆರೆದ ವಾಹನದಲ್ಲಿ ಸಂಚರಿಸಿದ ಸಚಿವರು ಪೊಲೀಸ್ ತುಕಡಿಗಳು ಹಾಗೂ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳ ಪಥಸಂಚಲನವನ್ನು ವೀಕ್ಷಿಸಿ ಗೌರವ ವಂದನೆ ಸ್ವೀಕರಿಸಿದರು. ಪೊಲೀಸ್ ಇಲಾಖೆಯ ತುಕಡಿಗಳು ಸೇರಿದಂತೆ ವಿವಿಧ ಶಾಲೆಗಳ ಮಕ್ಕಳು ಶಿಸ್ತಿನಿಂದ ಪಥಸಂಚಲನ ನಡೆಸಿ ಗಮನ ಸೆಳೆದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪಂಚಾಯಿತಿ ಸಿಇಒ ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾರಾಣಿ ಸೇರಿದಂತೆ ಹಲವು ಗಣ್ಯರು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ಕನ್ನಡದ ಕಹಳೆ ಮೊಳಗಿಸುವ ಮೂಲಕ ಮಂಡ್ಯದಲ್ಲಿ ರಾಜ್ಯೋತ್ಸವದ ಸಂಭ್ರಮ ಮತ್ತಷ್ಟು ರಂಗೇರಿತ್ತು.

 

Add Zee News as a Preferred Source
TAGS:

About the Author

ರಮ್ಯಾ. ಆರ್‌ ಗೌಡ (Ramya. R. Gowda) : 2022ರಿಂದ ಮಾಧ್ಯಮ ಲೋಕದಲ್ಲಿದ್ದು ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಡೆಸ್ಕ್'ನಲ್ಲಿಯೂ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ. 2025ರಿಂದ ʼಜೀ ಕನ್ನಡ ನ್ಯೂಸ್‌' ವೆಬ್ ವಿಭಾಗದಲ್ಲಿ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಇವರು ಇತ್ತೀಚಿನ ಸುದ್ದಿಗಳ ಜೊತೆಗೆ ಮನರಂಜನೆ, ಕ್ರೀಡೆ, ವೈರಲ್‌, ಲೈಫ್‌ಸ್ಟೈಲ್‌ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ.

ZEENEWS TRENDING STORIES