SOCIAL MEDIA

Newsletter

PARTNER SITES
Select Language Select State

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಗದಗನಲ್ಲಿ ಬಿಜೆಪಿ ಕಾರ್ಯಕರ್ತರ ಬೃಹತ್ ಪ್ರತಿಭಟನೆ

ಗದಗ ಬಸ್ ನಿಲ್ದಾಣದಿಂದ ಜಿಮ್ಸ್ ಆಸ್ಪತ್ರೆಗೆ ಹೋಗುತ್ತಿದ್ದ ಈ ಬಾಣಂತಿ, ಶಿಶು, ಪಾಲಕರು. ಅನಾರೋಗ್ಯ ಸಮಸ್ಯೆಯಿಂದ ಬಾಣಂತಿ ಹಾಗೂ ಶಿಶು ನರಳಾಡುತ್ತಿದ್ದರು. ಬಸ್ ಹಾಗೂ ಆಟೋ ಸಿಗದಕ್ಕೆ ಕೈನಲ್ಲಿ ಶಿಶು ಹೊತ್ತುಕೊಂಡು ಅಲೆದಾಡುವ ದೃಶ್ಯ ಎಲ್ಲರ ಮನಕಲಕುವಂತಿತ್ತು.

Written By Chetana Devarmani
Published: Nov 14, 2026, 16:07 IST | Updated: Nov 14, 2026, 16:08 IST
Join

ಗದಗ: ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಸರ್ಕಾರದ ಗದಗನಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ಮಾಡಿದರು. ಗದಗ‌ ನಗರದ ಕಾರ್ಯಪ್ಪ ಸರ್ಕಲ್ ನಿಂದ ಪಂಡಿತ ಪುಟ್ಟರಾಜ ಕವಿ ಗವಾಯಿಗಳ ಬಸ್ ನಿಲ್ದಾಣದ ವರೆಗೆ ನಡೆದ ಪ್ರತಿಭಟನಾ ರ‌್ಯಾಲಿ ನಡೆಸಿದರು. ಈ ವೇಳೆ ಕೆಲಕಾಲ ಬಸ್ ಸಂಚಾರ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ನಗರ ಬಸ್ ನಿಲ್ದಾಣ ಬಿಕೋ ಅಂತಿದೆ.

ಬಸ್ ಹಾಗೂ ಆಟೋ ಸಿಗದಕ್ಕೆ ರೋಗಿಗಳು, ವೃದ್ಧರು, ಮಕ್ಕಳು, ಮಹಿಳೆಯರು ಸಾರ್ವಜನಿಕರು ಪರದಾಡಿದರು. ಕೊಪ್ಪಳ ಜಿಲ್ಲೆ ಎರೆಹಂಚಿನಾಳ ದಿಂದ ಬಂದಿದ್ದ ಬಾಣಂತಿ, ಶಿಶು ಹಾಗೂ ಪಾಲಕರು ಬಸ್ ಹಾಗೂ ಆಟೋ ಸಿಗದಕ್ಕೆ ಪರದಾಡಿದರು. ಗದಗ ಬಸ್ ನಿಲ್ದಾಣದಿಂದ ಜಿಮ್ಸ್ ಆಸ್ಪತ್ರೆಗೆ ಹೋಗುತ್ತಿದ್ದ ಈ ಬಾಣಂತಿ, ಶಿಶು, ಪಾಲಕರು. ಅನಾರೋಗ್ಯ ಸಮಸ್ಯೆಯಿಂದ ಬಾಣಂತಿ ಹಾಗೂ ಶಿಶು ನರಳಾಡುತ್ತಿದ್ದರು. ಬಸ್ ಹಾಗೂ ಆಟೋ ಸಿಗದಕ್ಕೆ ಕೈನಲ್ಲಿ ಶಿಶು ಹೊತ್ತುಕೊಂಡು ಅಲೆದಾಡುವ ದೃಶ್ಯ ಎಲ್ಲರ ಮನಕಲಕುವಂತಿತ್ತು.

ಹೀಗೆ ಸುಮಾರು ಎರಡು ಗಂಟೆಗಳ ಕಾಲ ಬಸ್ ಇಲ್ಲದಕ್ಕೆ ಜನ್ರು ಸಾಕಷ್ಟು ಪರದಾಡಿದ್ರು. ಬಿಜೆಪಿ ಕಾರ್ಯಕರ್ತರು ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ ಎಂಬ ಘೋಷಣೆ ಕೂಗುತ್ತಾ ಕಾಂಗ್ರೆಸ್ ಸರ್ಕಾರದ ವಿರುದ್ಧ ಪೋಸ್ಟರ್ ನೆಲಕ್ಕೆ ಹಾಕಿ ಚಪ್ಪಲಿಯಿಂದ ತುಳಿದು, ಹರಿದುಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಬಸ್ ದರ ಏರಿಕೆ ಖಂಡಿಸಿ, ಬಸ್ ಹತ್ತಿ ಪ್ರತಿಭಟಿಸಿದರು. ಈ ವೇಳೆ ಅನೇಕ ಮುಖಂಡರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಭ್ರಷ್ಟ ಕಾಂಗ್ರೆಸ್ ಸರ್ಕಾರ, ಬಡವರ ರಕ್ತ ಹೀರುತ್ತಿರುವ ಕೈ ಸರ್ಕಾರ, ಕಿತ್ತುಕೊಂಡು ತಿಂತಿದೆ ಕಿತ್ತೋದ ಕೈ ಸರ್ಕಾರ, ಬೆಲೆ ಏರಿಕೆಯ ಈ ದುಬಾರಿ ಸರ್ಕಾರ ತೊಲಗಲಿ ಅಂತೆಲ್ಲಾ ನಾಮಫಲ ಹಿಡಿದು ಧಿಕ್ಕಾರ ಕೂಗಿದರು. ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಕೇಂದ್ರ ಸರ್ಕಾರ ದೇಶದ ಅಭಿವೃದ್ಧಿ ಮಾಡುತ್ತಿದ್ದರೆ, ರಾಜ್ಯ ಸರ್ಕಾರ ಅಭಿವೃದ್ಧಿಗೆ ಅಡ್ಡಿಪಡಿಸುತ್ತಿದೆ.

ಎಸ್.ಐ.ಆರ್ ಬಗ್ಗೆ ಅಪಪ್ರಚಾರ ಮಾಡ್ತಿದ್ದಾರೆ. ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ ನಾಲ್ಕು ಬಾರಿ ಹಾಲಿನ ದರ ಏರಿಕೆ ಮಾಡಿದ ತುಟ್ಟಿ ಸರ್ಕಾರ, ಬಡವರ ರಕ್ತ ಹೀರುವ ಸರ್ಕಾರ ಅಂತ ಲೇವಡಿ ಮಾಡಿದರು. ಪಂಚ ಗ್ಯಾರಂಟಿಗಳ ಹೆಸರಿನಲ್ಲಿ ಜನರಿಗೆ ವಂಚನೆ ಮಾಡಲಾಗುತ್ತಿದೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಖಜಾನೆ ಖಾಲಿಯಾಗಿದೆ. ರಾಜ್ಯವನ್ನು ದಿವಾಳಿ ಮಾಡಿದ್ದಾರೆ. ಇಂಧನ ದರ ಏರಿಕೆಯಿಂದ ಸಾರಿಗೆ ಸಂಸ್ಥೆಗೂ ನಷ್ಟವಾಗುತ್ತಿದೆ.

ಗ್ಯಾರಂಟಿ ಯೋಜನೆಗಳನ್ನು ಬದಿಗಿಟ್ಟು ಪ್ರಾಮಾಣಿಕ ಆಡಳಿತ ನೀಡಬೇಕು. ಇಲ್ಲವೇ ಕೂಡಲೇ ಡಿ.ಕೆ. ಶಿವಕುಮಾರ್ ಸಿಎಂ ಸ್ಥಾನದಿಂದ ರಾಜೀನಾಮೆ ನೀಡುವಂತೆ ಆಗ್ರಹಿಸಿದರು. ಈ ವೇಳೆ ಶಿರಹಟ್ಟಿ ಕ್ಷೇತ್ರದ ಶಾಸಕ ಡಾ ಚಂದ್ರು ಲಮಾಣಿ, ವಿಧಾನ ಪರಿಷತ್ ಸದಸ್ಯ ಎಸ್.ವಿ ಸಂಕನೂರು, ಬಿಜೆಪಿ ಜಿಲ್ಲಾಧ್ಯಕ್ಷ ಸೇರಿದಂತೆ ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
 

Add Zee News as a Preferred Source
TAGS:

About the Author

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

ZEENEWS TRENDING STORIES