• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಹುಬ್ಬಳ್ಳಿ ಧಾರವಾಡ
  • /ಸಿಜೆಪಿ ಹೋರಾಟಕ್ಕೆ ಕಾಂಗ್ರೆಸ್ ಬೆಂಬಲ, ಫಂಡಿಂಗ್ ಆರೋಪಕ್ಕೆ ಹರಿಪ್ರಸಾದ್ ತಿರುಗೇಟು

ಸಿಜೆಪಿ ಹೋರಾಟಕ್ಕೆ ಕಾಂಗ್ರೆಸ್ ಬೆಂಬಲ, ಫಂಡಿಂಗ್ ಆರೋಪಕ್ಕೆ ಹರಿಪ್ರಸಾದ್ ತಿರುಗೇಟು

ಸಿಜೆಪಿ ಪ್ರತಿಭಟನೆಗೆ ಕಾಂಗ್ರೆಸ್ ಫಂಡಿಂಗ್ ಮಾಡಿದೆ ಎಂಬ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಆರೋಪಕ್ಕೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತಿರುಗೇಟು ನೀಡಿದ್ದಾರೆ.

Written ByChetana Devarmani
Published: Oct 17, 2026, 08:41 PM IST|Updated: Oct 17, 2026, 08:43 PM IST
joinshare
ಸಿಜೆಪಿ ಹೋರಾಟಕ್ಕೆ ಕಾಂಗ್ರೆಸ್ ಬೆಂಬಲ, ಫಂಡಿಂಗ್ ಆರೋಪಕ್ಕೆ ಹರಿಪ್ರಸಾದ್ ತಿರುಗೇಟು

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

Trending

  • News
  • Photos
  • Videos
ಬ್ರಹ್ಮಕುಂಡಿಕೆಯಿಂದ ಉಕ್ಕಿಬಂದ ಕಾವೇರಿ : ಕರುನಾಡ ಜೀವನದಿ ಕಂಡು ಭಕ್ತಗಣ ಪುಳಕಿತ

ಬ್ರಹ್ಮಕುಂಡಿಕೆಯಿಂದ ಉಕ್ಕಿಬಂದ ಕಾವೇರಿ : ಕರುನಾಡ ಜೀವನದಿ ಕಂಡು ಭಕ್ತಗಣ ಪುಳಕಿತ

2

ರಾಖಿ ಸಾವಂತ್‌ ವಿರುದ್ಧ ಜಾಮೀನು ರಹಿತ ಅರೆಸ್ಟ್‌ ವಾರೆಂಟ್‌ ಜಾರಿ..! 16 ವರ್ಷದ ಹಳೆ ಕೇಸ್‌ಗೆ ಮಹತ್ವದ ತಿರುವು

3

ಸಿಜೆಪಿ ಹೋರಾಟಕ್ಕೆ ಕಾಂಗ್ರೆಸ್ ಬೆಂಬಲ, ಫಂಡಿಂಗ್ ಆರೋಪಕ್ಕೆ ಹರಿಪ್ರಸಾದ್ ತಿರುಗೇಟು

4

ರಾಜ್ಯದಲ್ಲಿ ವರುಣಾರ್ಭಟ ಮುಂದುವರಿಕೆ.. ಈ ಜಿಲ್ಲೆಗಳಿಗೆ ಅ.19ರವರೆಗೆ ಎಲ್ಲೊ ಅಲರ್ಟ್ ಘೋಷಣೆ!

5

ಹಸೆಮಣೆ ಏರಲು ಸಜ್ಜಾದ ಕಾವ್ಯಾ ಮಾರನ್‌ ರಿಯಲ್‌ ವಯಸ್ಸು ಎಷ್ಟು ಗೊತ್ತಾ?

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಧಾರವಾಡ: ಸಿಜೆಪಿ ಪ್ರತಿಭಟನೆಗೆ ಕಾಂಗ್ರೆಸ್ ಫಂಡಿಂಗ್ ಮಾಡಿದೆ ಎಂಬ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಆರೋಪಕ್ಕೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತಿರುಗೇಟು ನೀಡಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಹೋರಾಟಗಾರರಿಗೆ ಬೆಂಬಲ ನೀಡುವುದು ಬೇರೆ, ಹಣಕಾಸಿನ ನೆರವು ನೀಡುವುದು ಬೇರೆ ಎಂದು ಸ್ಪಷ್ಟಪಡಿಸಿದರು.

“ಅನಾವಶ್ಯಕವಾಗಿ ಮತ್ತು ಕಾನೂನುಬಾಹಿರವಾಗಿ ಮಕ್ಕಳನ್ನು ಜೈಲಿಗೆ ಹಾಕಿದಾಗ ಅವರನ್ನು ಬಿಡುಗಡೆ ಮಾಡಿಸಲು ಮುಂದಾಗುವವರು ಯಾರು? ಅವರಿಗೆ ವಕೀಲರಿಗೆ ಶುಲ್ಕ ನೀಡುವಷ್ಟು ಹಣವಿದೆಯೇ?” ಎಂದು ಪ್ರಶ್ನಿಸಿದ ಹರಿಪ್ರಸಾದ್, ಹೋರಾಟಗಾರರಿಗೆ ಅಗತ್ಯವಿರುವ ಕಾನೂನು ನೆರವು ಒದಗಿಸುವುದು ತಪ್ಪೇ ಎಂದು ಕೇಳಿದರು.

“ನಾವು ಹೋರಾಟ ಮಾಡುವಾಗ, ತ್ರಿವರ್ಣ ಧ್ವಜ ಹಿಡಿದು ಪ್ರತಿಭಟನೆ ನಡೆಸುವಾಗ ಅಗತ್ಯವಿರುವ ಕಾನೂನು ನೆರವು ನೀಡುತ್ತೇವೆ. ವಕೀಲರಿಗೆ ನೀಡುವ ಶುಲ್ಕ ಫಂಡಿಂಗ್ ಆಗುತ್ತದೆಯೇ? ತ್ರಿವರ್ಣ ಧ್ವಜ ಹೊಲಿಸಲು ಕೊಡುವ ಹಣವೂ ಫಂಡಿಂಗ್ ಆಗುತ್ತದೆಯೇ? ಪ್ರತಿಭಟನೆ ಸಂದರ್ಭದಲ್ಲಿ ಏನು ಸಹಕಾರ ನೀಡಬೇಕೋ ಅದನ್ನು ನೀಡುತ್ತೇವೆ. ಸಹಕಾರ ನೀಡುವುದಕ್ಕೂ ಫಂಡಿಂಗ್ ಮಾಡುವುದಕ್ಕೂ ವ್ಯತ್ಯಾಸವಿದೆ. ಲಂಚ ಹೊಡೆಯುವವರಿಗೆ ಮತ್ತು ಭ್ರಷ್ಟಾಚಾರಿಗಳಿಗೆ ಮಾತ್ರ ಫಂಡಿಂಗ್ ಬಗ್ಗೆ ಗೊತ್ತಿರುತ್ತದೆ” ಎಂದು ಅವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.

ಸಂವಿಧಾನವನ್ನು ಉಳಿಸಲು ಹೋರಾಟ ಮಾಡುವವರಿಗೆ ಕಾಂಗ್ರೆಸ್ ಬೆಂಬಲ ನೀಡಲಿದೆ ಎಂದು ತಿಳಿಸಿದ ಅವರು, ಹಕ್ಕುಗಳಿಗಾಗಿ ಹೋರಾಡುವ ಎಲ್ಲರೂ ತಮ್ಮವರೇ ಎಂದರು. ಸಿಜೆಪಿ ಮತ್ತು ಕಾಂಗ್ರೆಸ್ ಒಂದೇ ಎಂಬ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗೆ ಸಂಬಂಧಿಸಿದಂತೆ, ಹೋರಾಟಗಾರರಿಗೆ ಬೆಂಬಲ ನೀಡುವುದು ತಮ್ಮ ನಿಲುವು ಎಂದು ಹೇಳಿದರು.

ಇದೇ ವೇಳೆ, ಸ್ಟಿಂಗ್ ಕಾರ್ಯಾಚರಣೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಹರಿಪ್ರಸಾದ್, “ಈ ವಿಚಾರದಲ್ಲಿ ನಿಮ್ಮ ಟಿಆರ್‌ಪಿ ಹೆಚ್ಚಾಗುತ್ತಿದೆ. ಅದರ ಬಗ್ಗೆ ಈಗ ನಾನು ಮಾತನಾಡುವುದಿಲ್ಲ. ತನಿಖೆ ನಡೆಯುತ್ತಿದೆ. ತನಿಖೆ ಪೂರ್ಣಗೊಳ್ಳಲಿ, ಆಮೇಲೆ ಮಾತನಾಡುತ್ತೇನೆ. ನಂತರ ಅಗತ್ಯವಿದ್ದರೆ ಉನ್ನತ ಮಟ್ಟದ ತನಿಖೆಯ ಬಗ್ಗೆಯೂ ಮಾತನಾಡುತ್ತೇನೆ” ಎಂದು ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಾರಿ ನಿರ್ದೇಶನಾಲಯ (ಇಡಿ) ಮತ್ತು ಆದಾಯ ತೆರಿಗೆ ಇಲಾಖೆ (ಐಟಿ) ತನಿಖೆಯ ಬಗ್ಗೆ ಏಕೆ ಪ್ರಸ್ತಾಪಿಸಲಿಲ್ಲ, ಕೇವಲ ಸಿಬಿಐ ತನಿಖೆಗೆ ಮಾತ್ರ ಏಕೆ ಒತ್ತಾಯಿಸಿದರು ಎಂದು ಪ್ರಶ್ನಿಸಿದ ಅವರು, ಈ ಮಟ್ಟದ ರಾಜಕೀಯವನ್ನು ಜನರು ನಿರೀಕ್ಷಿಸಿರಲಿಲ್ಲ ಎಂದರು.

ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ವಿಚಾರದ ಚರ್ಚೆ ಜೋರಾಗಿರುವ ಹೊತ್ತಲ್ಲೇ, ಗದಗದಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ. ಸ್ಟಿಂಗ್ ಆಪರೇಷನ್ ಪಿತಾಮಹ ದೇಶದಲ್ಲಿ ಯಾರಾದರೂ ಇದ್ದರೆ ಅದು ನರೇಂದ್ರ ಮೋದಿ ಎಂದು ಹರಿಪ್ರಸಾದ್ ಹೇಳಿದ್ದಾರೆ.

ಇನ್ನು ಸದ್ಯದ ಸ್ಟಿಂಗ್ ಆಪರೇಷನ್ ವಿಚಾರದ ತನಿಖೆ ನಡೆಯುತ್ತಿದೆ. ಹೀಗಾಗಿ ಈ ಸಂದರ್ಭದಲ್ಲಿ ತಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹರಿಪ್ರಸಾದ್ ಸ್ಪಷ್ಟಪಡಿಸಿದ್ದಾರೆ. ಇತ್ತ ದಸರಾ ನಂತರ ಸಿಜೆಪಿ ನಡೆಸಲು ಉದ್ದೇಶಿಸಿರುವ ಹೋರಾಟದ ವಿಚಾರವಾಗಿಯೂ ಪ್ರತಿಕ್ರಿಯಿಸಿರುವ ಹರಿಪ್ರಸಾದ್, ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಪ್ರತಿಭಟನೆ ನಡೆಸುವ ಹಕ್ಕಿದೆ ಎಂದಿದ್ದಾರೆ. ಸಿಜೆಪಿ ಪ್ರತಿಭಟನೆಗೂ ಅವಕಾಶ ನೀಡಬೇಕು ಎಂದು ಹೇಳಿದ್ದಾರೆ.

ಸಿಜೆಪಿ ಹೋರಾಟಕ್ಕೆ ಕಾಂಗ್ರೆಸ್ ಫಂಡಿಂಗ್ ಮಾಡುತ್ತಿದೆ ಎಂಬ ಆರೋಪದ ಬಗ್ಗೆಯೂ ಹರಿಪ್ರಸಾದ್ ಪ್ರತಿಕ್ರಿಯಿಸಿ, ಪ್ರತಿಭಟನೆ ವೇಳೆ ಬಂಧನವಾದರೆ ವಕೀಲರ ನೆರವು, ಧ್ವಜ, ಮೈಕ್ ಸೇರಿದಂತೆ ಅಗತ್ಯ ವ್ಯವಸ್ಥೆಗಳಿಗೆ ಕಾಂಗ್ರೆಸ್ ಬೆಂಬಲ ನೀಡುತ್ತದೆ. ಇದನ್ನು ಹಣಕಾಸಿನ ನೆರವು ಎಂದು ಕರೆಯುವ ಬದಲು ಲಾಜಿಸ್ಟಿಕ್ ಸಪೋರ್ಟ್ ಎಂದು ಪರಿಗಣಿಸಬೇಕು ಎಂದರು.

ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿಯ ವಿಚಾರವಾಗಿ ಮಾತನಾಡಿದ ಹರಿಪ್ರಸಾದ್, ಅವರಿಬ್ಬರ ನಡುವೆ ಏನು ಚರ್ಚೆಯಾಗಿದೆ ಎಂಬುದು ತನಗೆ ತಿಳಿದಿಲ್ಲ ಎಂದಿದ್ದಾರೆ. ಸಿದ್ದರಾಮಯ್ಯ ಅನುಭವಿ ರಾಜಕಾರಣಿಯಾಗಿದ್ದು, ಮುಂದೇನು ಮಾಡಬೇಕು ಎಂಬುದನ್ನು ಅವರೇ ನಿರ್ಧರಿಸುತ್ತಾರೆ ಎಂದು ಹೇಳಿದ್ದಾರೆ.

ಇದೇ ವೇಳೆ, ಸ್ಟಿಂಗ್ ಆಪರೇಷನ್ ಸರ್ಕಾರ ಎಂಬ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೂ ಪ್ರತಿಕ್ರಿಯಿಸಿರುವ ಹರಿಪ್ರಸಾದ್, ಗುಜರಾತ್‌ನಲ್ಲಿ ನರೇಂದ್ರ ಮೋದಿ ತಮ್ಮ ಪ್ರತಿಸ್ಪರ್ಧಿಯಾಗಿದ್ದ ಸಂಜಯ್ ಜೋಶಿ ವಿರುದ್ಧ ಸ್ಟಿಂಗ್ ಆಪರೇಷನ್ ನಡೆಸಿ ಅವರನ್ನು ರಾಜಕೀಯದಿಂದ ನಿವೃತ್ತಿಯಾಗುವಂತೆ ಮಾಡಿದರು ಎಂದು ಆರೋಪಿಸಿದರು.
 

Add Zee News as a Preferred Source
TAGS:
Karnataka Politics