SOCIAL MEDIA

Newsletter

PARTNER SITES
Select Language Select State

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಬಾ*ಬ್ ಬೆದರಿಕೆ ಮೇಲ್: ದೀಪಾವಳಿ ಹಬ್ಬದ ದಿನವೇ ಆತಂಕ!

ದೀಪಾವಳಿ ಹಬ್ಬದ ದಿನವೇ ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಗೆ ಬಾ*ಬ್‌ ಬೆದರಿಕೆಯ ಮೇಲ್‌ ಬಂದಿದ್ದು, ಇದರಲ್ಲಿ ಖಲಿಸ್ತಾನ್ ಪರ ಘೋಷಣೆಗಳ ಜೊತೆಗೆ 1984ರ ಸಿಖ್ ನರಮೇಧದ ಬಗ್ಗೆಯೂ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

Written By Yashaswini V
Published: Nov 09, 2026, 14:46 IST | Updated: Nov 09, 2026, 15:00 IST
Join

ಹುಬ್ಬಳ್ಳಿ: ದೀಪಾವಳಿ ಹಬ್ಬದ ಸಂಭ್ರಮದ ನಡುವೆಯೇ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಬಾಂಬ್ ಸ್ಫೋಟದ ಬೆದರಿಕೆ ಸಂದೇಶವೊಂದು ಬಂದಿದ್ದು, ಸಾರ್ವಜನಿಕ ವಲಯದಲ್ಲಿ ಆತಂಕ ಮೂಡಿಸಿದೆ.

ಇಂದು (ನವೆಂಬರ್‌ 09) ಬೆಳಿಗ್ಗೆ 11:35ರ ಸುಮಾರಿಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಿಗೆ ಬಾಂಬ್ ಸ್ಫೋಟದ ಬಗ್ಗೆ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ರವಾನೆಯಾಗಿದೆ. 'ವೆಯಿಟ್ ಸ್ಮಿತ್' (Weit Smith) ಎಂಬ ಹೆಸರಿನಲ್ಲಿ weismith3727@gmail.com ವಿಳಾಸದಿಂದ ಈ ಮೇಲ್ ಬಂದಿರುವುದಾಗಿ ತಿಳಿದುಬಂದಿದೆ.

ಮೇಲ್‌ನಲ್ಲಿ ಖಲಿಸ್ತಾನ್ ಪರ ಘೋಷಣೆ:
ಮೇಲ್‌ನಲ್ಲಿ ಖಲಿಸ್ತಾನ್ ಪರ ಘೋಷಣೆಗಳ ಜೊತೆಗೆ 1984ರ ಸಿಖ್ ನರಮೇಧದ ಉಲ್ಲೇಖ ಮಾಡಲಾಗಿದೆ. ಅಲ್ಲದೆ, ನವೆಂಬರ್ 29ರಂದು ಬೆಂಗಳೂರಿನ NICE ಸೆಂಟರ್ ಸ್ಟೇಜ್‌ನಲ್ಲಿ ನಡೆಯಲಿರುವ ಗಾಯಕ ದಲ್ಜಿತ್ ದೋಸಾಂಜ್ ಅವರ ಕಾರ್ಯಕ್ರಮದ ಸ್ಥಳದಲ್ಲಿ ಐಇಡಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ.

ನ. 27ರಂದು ಬಾಲಿವುಡ್‌ ನಟನ ಮನೆ ಸಮೀಪ ಸ್ಫೋಟದ ಬಗ್ಗೆ ಎಚ್ಚರಿಕೆ:
ನವೆಂಬರ್ 27ರಂದು ಬಾಲಿವುಡ್‌ ಖ್ಯಾತ ನಟ ಅಮಿತಾಭ್ ಬಚ್ಚನ್ ಅವರ ಮನೆ ಸಮೀಪ ಸ್ಫೋಟ ಸಂಭವಿಸಲಿದೆ ಎಂಬ ಎಚ್ಚರಿಕೆಯನ್ನೂ ಸಂದೇಶದಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದು ಬಂದಿದೆ.

ಬೆಂಗಳೂರಿನ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಐಇಡಿ ಬಾಂಬ್‌ ಇರಿಸಿರುವುದಾಗಿ ಬೆದರಿಕೆ:
ಇಷ್ಟಕ್ಕೇ ನಿಲ್ಲದ ಬೆದರಿಕೆ ಸಂದೇಶದಲ್ಲಿ ಬೆಂಗಳೂರಿನ ಮೆಟ್ರೋ ನಿಲ್ದಾಣಗಳಲ್ಲಿ ಐಇಡಿ ಬಾಂಬ್ ಇರಿಸಿರುವುದಾಗಿ ಹೇಳಲಾಗಿದ್ದು, ನವೆಂಬರ್ 29ರಂದು ಮೆಟ್ರೋದಲ್ಲಿ ಪ್ರಯಾಣಿಸದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಮಧ್ಯಾಹ್ನ 3:11ರಿಂದ ರಾತ್ರಿ 11:11ರವರೆಗಿನ ಸಮಯವನ್ನೂ ಉಲ್ಲೇಖಿಸಲಾಗಿದೆ. NICE ಮೈದಾನಕ್ಕೆ ತೆರಳದಂತೆ ಹಾಗೂ ಎಲ್ಲಿಯಾದರೂ ಐಫೋನ್ ಬಿದ್ದಿರುವುದು ಕಂಡುಬಂದರೆ ಅದನ್ನು ಮುಟ್ಟದಂತೆ ಸಂದೇಶದಲ್ಲಿ ಸೂಚಿಸಲಾಗಿದೆ.

ಇದಲ್ಲದೆ, ಖಲಿಸತಾನ ನ್ಯಾಷನಲ್‌ ಆರ್ಮಿ (Khalistan National Army) ಮತ್ತು Babbar Khalsa (Parmar-Canada) ಸಂಘಟನೆಗಳ ಹೆಸರುಗಳನ್ನೂ ಮೇಲ್‌ನಲ್ಲಿ ಉಲ್ಲೇಖಿಸಲಾಗಿದೆ. ಹಲವು ವ್ಯಕ್ತಿಗಳ ಹೆಸರುಗಳನ್ನು ಪ್ರಸ್ತಾಪಿಸಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

ದೀಪಾವಳಿ ಹಬ್ಬದ ದಿನವೇ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಗೆ ಬಂದಿರುವ ಈ ಬೆದರಿಕೆ ಸಂದೇಶ ಗಂಭೀರ ಚರ್ಚೆಗೆ ಕಾರಣವಾಗಿದ್ದು, ಪೊಲೀಸರು ಹಾಗೂ ಭದ್ರತಾ ಸಂಸ್ಥೆಗಳು ಈ ಸಂದೇಶವನ್ನು ಗಂಭೀರವಾಗಿ ಪರಿಗಣಿಸಿ ಪರಿಶೀಲಿಸುವ ಅಗತ್ಯವಿದೆ. ಇ-ಮೇಲ್‌ನ ಮೂಲ, ಬೆದರಿಕೆಯ ವಿಶ್ವಾಸಾರ್ಹತೆ ಮತ್ತು ಇದರ ಹಿಂದಿರುವ ವ್ಯಕ್ತಿಗಳ ಬಗ್ಗೆ ತನಿಖೆಯಿಂದಷ್ಟೇ ಸ್ಪಷ್ಟ ಮಾಹಿತಿ ಹೊರಬರಬೇಕಿದೆ.
 

Add Zee News as a Preferred Source
TAGS:

About the Author

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 
Read More

ZEENEWS TRENDING STORIES