• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಹುಬ್ಬಳ್ಳಿ ಧಾರವಾಡ
  • /ಕೆಪಿಎಸ್‌ಸಿ ಹಗರಣ ಬಿಜೆಪಿಯ ಕೂಸು: ಸಿಎಂ ಡಿ ಕೆ ಶಿವಕುಮಾರ್

ಕೆಪಿಎಸ್‌ಸಿ ಹಗರಣ ಬಿಜೆಪಿಯ ಕೂಸು: ಸಿಎಂ ಡಿ ಕೆ ಶಿವಕುಮಾರ್

ಹುಬ್ಬಳ್ಳಿಯ ಬಿವಿಬಿ ಎಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ ಪ್ರಯುಕ್ತ ಶನಿವಾರ ಹಮ್ಮಿಕೊಂಡಿದ್ದ 'ಪದವೀಧರರೊಂದಿಗೆ ಸಂವಾದ ಸಭೆ'ಯಲ್ಲಿ ಮಾತನಾಡಿದರು.

Written ByChetana Devarmani
Published: Oct 17, 2026, 10:52 PM IST|Updated: Oct 17, 2026, 10:55 PM IST
joinshare
ಕೆಪಿಎಸ್‌ಸಿ ಹಗರಣ ಬಿಜೆಪಿಯ ಕೂಸು: ಸಿಎಂ ಡಿ ಕೆ ಶಿವಕುಮಾರ್

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

Trending

  • News
  • Photos
  • Videos
ಕೆಪಿಎಸ್‌ಸಿ ಹಗರಣ ಬಿಜೆಪಿಯ ಕೂಸು: ಸಿಎಂ ಡಿ ಕೆ ಶಿವಕುಮಾರ್

ಕೆಪಿಎಸ್‌ಸಿ ಹಗರಣ ಬಿಜೆಪಿಯ ಕೂಸು: ಸಿಎಂ ಡಿ ಕೆ ಶಿವಕುಮಾರ್

2

ಸರ್ಕಾರಿ ನೌಕರರಿಗೆ ₹14,000 ಬೋನಸ್.. ಈ ತಿಂಗಳು ಕೈ ಸೇರುವ ಸಂಬಳದ ಮೊತ್ತ ಎಷ್ಟು?

3

ಬ್ರಹ್ಮಕುಂಡಿಕೆಯಿಂದ ಉಕ್ಕಿಬಂದ ಕಾವೇರಿ : ಕರುನಾಡ ಜೀವನದಿ ಕಂಡು ಭಕ್ತಗಣ ಪುಳಕಿತ

4

ರಾಖಿ ಸಾವಂತ್‌ ವಿರುದ್ಧ ಜಾಮೀನು ರಹಿತ ಅರೆಸ್ಟ್‌ ವಾರೆಂಟ್‌ ಜಾರಿ..! 16 ವರ್ಷದ ಹಳೆ ಕೇಸ್‌ಗೆ ಮಹತ್ವದ ತಿರುವು

5

ಸಿಜೆಪಿ ಹೋರಾಟಕ್ಕೆ ಕಾಂಗ್ರೆಸ್ ಬೆಂಬಲ, ಫಂಡಿಂಗ್ ಆರೋಪಕ್ಕೆ ಹರಿಪ್ರಸಾದ್ ತಿರುಗೇಟು

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಹುಬ್ಬಳ್ಳಿ: ಕೆಪಿಎಸ್‌ಸಿ ಹಗರಣ ಬಿಜೆಪಿಯ ಕೂಸು. ವಿದ್ಯಾರ್ಥಿಗಳು ಮತ್ತು ಪದವೀಧರರಿಗೆ ಅವರ ಅರ್ಹತೆಯ ಆಧಾರದ ಮೇಲೆ ಉದ್ಯೋಗ ದೊರೆಯಬೇಕು. ಹಣದ ವ್ಯವಹಾರ, ಒತ್ತಡ ಅಥವಾ ಪ್ರಭಾವಕ್ಕೆ ಅವಕಾಶವಿಲ್ಲದ ನ್ಯಾಯಸಮ್ಮತ ಪರೀಕ್ಷಾ ವ್ಯವಸ್ಥೆಯನ್ನು ರೂಪಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು.

ಹುಬ್ಬಳ್ಳಿಯ ಬಿವಿಬಿ ಎಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ ಪ್ರಯುಕ್ತ ಶನಿವಾರ ಹಮ್ಮಿಕೊಂಡಿದ್ದ 'ಪದವೀಧರರೊಂದಿಗೆ ಸಂವಾದ ಸಭೆ'ಯಲ್ಲಿ ಮಾತನಾಡಿದರು. "ನೀಟ್, ಎಸ್‌ಐ ಸೇರಿದಂತೆ ವಿವಿಧ ನೇಮಕಾತಿ ಮತ್ತು ಪರೀಕ್ಷಾ ವ್ಯವಸ್ಥೆಗಳಲ್ಲಿ ಹಗರಣಗಳ ಆರೋಪಗಳು ಕೇಳಿಬರುತ್ತಿವೆ. ದೇಶದಲ್ಲಿ ಉದ್ಯೋಗದ ಸಮಸ್ಯೆ ತೀವ್ರವಾಗಿರುವ ಸಂದರ್ಭದಲ್ಲಿ ಪರೀಕ್ಷಾ ವ್ಯವಸ್ಥೆಯ ವಿಶ್ವಾಸಾರ್ಹತೆಯನ್ನು ಕಾಪಾಡುವುದು ಅತ್ಯಂತ ಮುಖ್ಯ" ಎಂದು ತಿಳಿಸಿದರು.

"ಕೆಪಿಎಸ್‌ಸಿ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ದೂರು ಸಲ್ಲಿಕೆಯಾದ ಬಳಿಕ ಸರ್ಕಾರವೂ ವರದಿ ತರಿಸಿಕೊಂಡು ಪರಿಶೀಲನೆ ನಡೆಸಿದೆ. ಹಗರಣ ನಡೆದಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳುವ ಪ್ರಕ್ರಿಯೆಗೆ ಸರ್ಕಾರ ಸಹಕಾರ ನೀಡಿದೆ. ತನಿಖೆಯ ಮೂಲಕ ಸತ್ಯಾಂಶ ಹೊರಬರಬೇಕು ಎಂಬುದು ಸರ್ಕಾರದ ನಿಲುವು" ಎಂದು ಹೇಳಿದರು.

"ಬಿಜೆಪಿಯವರು ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂಬ ಕಾರಣಕ್ಕೆ ಹೆಸರಿಗಷ್ಟೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದಾರೆ. ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ಅಭ್ಯರ್ಥಿಯನ್ನು ನಿಲ್ಲಿಸಿದಂತೆ ಕಾಣುತ್ತಿಲ್ಲ. ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯನ್ನು ಆಯ್ಕೆ ಮಾಡುವ ವಿಚಾರದಲ್ಲಿ ಸಾಕಷ್ಟು ಗೊಂದಲ ಎದುರಿಸಿತ್ತು. ಹೊಸ ಅಭ್ಯರ್ಥಿಯನ್ನು ಹುಡುಕಲು ಸಾಧ್ಯವಾಗದೆ ಕೊನೆಗೆ ನಿರ್ಧಾರ ಕೈಗೊಂಡಿದ್ದಾರೆ. ಹೀಗಿರುವಾಗ ಬಿಜೆಪಿ ಅಭ್ಯರ್ಥಿಗೆ ಮತ ನೀಡುವುದರಿಂದ ಏನು ಪ್ರಯೋಜನ ಎಂಬುದನ್ನು ಮತದಾರರು ಆಲೋಚಿಸಬೇಕು. ಕಾಂಗ್ರೆಸ್ ಅಭ್ಯರ್ಥಿ ಮೋಹನ್ ಲಿಂಬಿಕಾಯಿ ಅವರಿಗೆ ಮತ ನೀಡಿ" ಎಂದು ಮನವಿ ಮಾಡಿದರು.

"ಮೋಹನ್ ಅವರು ನಮ್ಮ ಪಕ್ಷದ ಸಕ್ರಿಯ ಮುಖಂಡರಾಗಿದ್ದಾರೆ. ಲೋಕಸಭೆ ಚುನಾವಣೆಯ ಸಂದರ್ಭದಲ್ಲಿಯೂ ಅವರ ಹೆಸರು ಮುಂಚೂಣಿಯಲ್ಲಿತ್ತು. ಪದವೀಧರ ಕ್ಷೇತ್ರದ ಚುನಾವಣೆಗೆ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಮೊದಲು ಸಮೀಕ್ಷೆ ನಡೆಸಲಾಗಿದ್ದು, ಸಮೀಕ್ಷೆಯಲ್ಲಿ ಹೆಚ್ಚಿನವರು ಮೋಹನ್ ಲಿಂಬಿಕಾಯಿ ಅವರ ಹೆಸರನ್ನು ಸೂಚಿಸಿದ್ದರು. ಪಕ್ಷದ ಹಲವು ನಾಯಕರೊಂದಿಗೆ ಚರ್ಚಿಸಿ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ" ಎಂದು ತಿಳಿಸಿದರು.

"ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಪದವೀಧರ ಮತದಾರರು ಒಗ್ಗಟ್ಟಿನಿಂದ ಕೆಲಸ ಮಾಡಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಬೇಕು" ಎಂದು ಮನವಿ ಮಾಡಿದರು.

"ದೇಶದಲ್ಲಿ ನಿರುದ್ಯೋಗ ಸಮಸ್ಯೆ ಗಂಭೀರವಾಗಿದೆ. ಕೇಂದ್ರ ಸರ್ಕಾರ ವರ್ಷಕ್ಕೆ ಕೋಟ್ಯಂತರ ಉದ್ಯೋಗಗಳನ್ನು ಸೃಷ್ಟಿಸುವ ಭರವಸೆ ನೀಡಿತ್ತು. ಆದರೆ ಆ ಭರವಸೆ ಈಡೇರಿಲ್ಲ. ರಾಜ್ಯ ಸರ್ಕಾರ ಉದ್ಯೋಗ ಸೃಷ್ಟಿ ಮತ್ತು ಯುವಜನರಿಗೆ ಅವಕಾಶ ಕಲ್ಪಿಸಲು ಹಲವು ಕ್ರಮಗಳನ್ನು ಕೈಗೊಂಡಿದೆ" ಎಂದರು.

"ಖಾಸಗಿ ವಲಯದಲ್ಲಿಯೂ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಉದ್ದೇಶದಿಂದ ಖಾಸಗಿ ಉದ್ಯೋಗ ವಿನಿಮಯ ವ್ಯವಸ್ಥೆಯನ್ನು ರೂಪಿಸಲಾಗುತ್ತಿದೆ. ಉದ್ಯೋಗ ನೀಡುವ ಸಂಸ್ಥೆಗಳು ಮತ್ತು ಉದ್ಯೋಗ ಹುಡುಕುವ ಅಭ್ಯರ್ಥಿಗಳು ಒಂದೇ ವೇದಿಕೆಯಲ್ಲಿ ನೋಂದಾಯಿಸಿಕೊಂಡು, ಅರ್ಹತೆಗೆ ಅನುಗುಣವಾಗಿ ಉದ್ಯೋಗ ಪಡೆಯಲು ಇದರಿಂದ ನೆರವಾಗಲಿದೆ" ಎಂದು ತಿಳಿಸಿದರು.

"ಬೆಂಗಳೂರು ಹೊರಗಿನ ನಗರಗಳಲ್ಲಿಯೂ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಸರ್ಕಾರ ಗಮನಹರಿಸಿದ್ದು, 'ಬಿಯಾಂಡ್ ಬೆಂಗಳೂರು' ಯೋಜನೆಗೆ ಒತ್ತು ನೀಡಲಾಗಿದೆ. ಹುಬ್ಬಳ್ಳಿ, ಧಾರವಾಡ, ಬೆಳಗಾವಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಕೈಗಾರಿಕೆಗಳು ಮತ್ತು ಸಂಸ್ಥೆಗಳು ಸ್ಥಾಪನೆಯಾಗುವ ಮೂಲಕ ಸ್ಥಳೀಯ ಯುವಜನರಿಗೆ ಉದ್ಯೋಗ ದೊರೆಯಬೇಕು ಎಂಬುದು ಸರ್ಕಾರದ ಆಶಯವಾಗಿದೆ. ಎರಡನೇ ಮತ್ತು ಮೂರನೇ ಹಂತದ ನಗರಗಳಲ್ಲಿ ಕಾರ್ಖಾನೆಗಳು ಹಾಗೂ ಸಂಸ್ಥೆಗಳನ್ನು ಆರಂಭಿಸುವವರಿಗೆ ಸರ್ಕಾರದಿಂದ ಪ್ರೋತ್ಸಾಹಧನ ನೀಡುವ ತೀರ್ಮಾನ ಕೈಗೊಳ್ಳಲಾಗಿದೆ" ಎಂದರು.

"ಈ ಮಧ್ಯದಲ್ಲಿ ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನ ಇತ್ತು. ಎಲ್ಲಾ ಶಿಕ್ಷಕರಿಗೆ ಗೌರವ ಕೊಡಬೇಕು ಅನ್ನೋ ದೃಷ್ಟಿಯಿಂದ, ಅವರ ಹೆಸರು ಮುಂದೆ ಟಿಆರ್ ಎಂಬ ವೃತ್ತಿ ಪದನಾಮ ಸೇರಿಸಿಕೊಳ್ಳಲು ಸರ್ಕಾರ ಆದೇಶ ಮಾಡಿದ್ದು, ಇಡೀ ದೇಶದಲ್ಲಿ ನಮ್ಮ ನಿರ್ಧಾರಕ್ಕೆ ದೊಡ್ಡ ಮೆಚ್ಚುಗೆಯನ್ನು ವ್ಯಕ್ತಪಡಿಸಿದೆ" ಎಂದರು.

"ಎಸ್ ಐಆರ್ ಮೂಲಕ ಮತಗಳನ್ನು ತೆಗೆದುಗಾಕಲಾಗುತ್ತಿದೆ. ಇದರ ಬಗ್ಗೆಯೂ ಗಮನ ಹರಿಸಬೇಕು. ವಿದ್ಯಾವಂತರು ಎಚ್ಚರಿಕೆಯಿಂದ ಇರಬೇಕು. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ವಿಚಾರದಲ್ಲೂ ಕಾಂಗ್ರೆಸ್‌ ಹೋರಾಟ ನಡೆಸಿದೆ. ಒಂದು ಕ್ಷೇತ್ರದಲ್ಲಿ 10ರಿಂದ 12 ಸಾವಿರ ಮತಗಳನ್ನು ಅಳಿಸಲು ಪ್ರಯತ್ನ ನಡೆದಿತ್ತು. ಈ ಸಂದರ್ಭದಲ್ಲಿ ಸಚಿವರು ಮತ್ತು ಶಾಸಕರು ತಮ್ಮ ಕೆಲಸಗಳನ್ನು ಬದಿಗಿಟ್ಟು ಹೋರಾಟ ನಡೆಸಿ, ಮತದಾರರ ಹಕ್ಕುಗಳನ್ನು ರಕ್ಷಿಸಲು ಮುಂದಾಗಿದ್ದರು. ಪ್ರತಿಯೊಬ್ಬರಿಗೂ ಮತದಾನದ ಹಕ್ಕು ದೊರೆಯಬೇಕು ಎಂಬ ಉದ್ದೇಶದಿಂದ ದೆಹಲಿಗೂ ತೆರಳಿ ಹೋರಾಟ ನಡೆಸಿದ್ದೇವೆ. ನನಗೆ 48 ವರ್ಷವಿದ್ದಾಗ ಪದವಿಯನ್ನು ಪಡೆದುಕೊಂಡೆ ಈಗ ನಾನು ಕೂಡ ಪದವೀಧರ ನನಗೂ ಸಹ ಮತದಾನ ಮಾಡುವ ಹಕ್ಕು ಬಂದಿದೆ" ಎಂದು ತಿಳಿಸಿದರು.

 

Add Zee News as a Preferred Source
TAGS:
Karnataka Politics