• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಹುಬ್ಬಳ್ಳಿ ಧಾರವಾಡ
  • /ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ನೂತನ ದಶ ಯೋಜನೆಗಳನ್ನು ಘೋಷಿಸಿದ ಸಿಎಂ ಡಿ ಕೆ ಶಿವಕುಮಾರ್‌

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ನೂತನ ದಶ ಯೋಜನೆಗಳನ್ನು ಘೋಷಿಸಿದ ಸಿಎಂ ಡಿ ಕೆ ಶಿವಕುಮಾರ್‌

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಂದ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ನೂತನ ದಶ ಯೋಜನೆಗಳ ಘೋಷಣೆ ಮಾಡಲಾಗಿದೆ. ಇವುಗಳಲ್ಲಿ ಐಟಿ ಪಾರ್ಕ್, ಕ್ರೀಡಾ ನಗರ, 50 ಸಾವಿರ ನಿವೇಶನ ಹಂಚಿಕೆ, ಕಲ್ಯಾಣ ಕರ್ನಾಟಕ ಭಾಗದಲ್ಲಿ 32 ಸಾವಿರ ಸರ್ಕಾರಿ ಹುದ್ದೆಗಳ ಭರ್ತಿ ಸೇರಿದಂತೆ ಹಲವು ಕಾರ್ಯಕ್ರಮಗಳು ಸೇರಿವೆ.

Written ByYashaswini V
Published: Sep 17, 2026, 12:42 PM IST|Updated: Sep 17, 2026, 12:48 PM IST
joinshare
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ನೂತನ ದಶ ಯೋಜನೆಗಳನ್ನು ಘೋಷಿಸಿದ ಸಿಎಂ ಡಿ ಕೆ ಶಿವಕುಮಾರ್‌

About the Author

Yashaswini V

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 
Read More

Trending

  • News
  • Photos
  • Videos
ನಾವೂ ಯಾರಿಗೂ ಜೀವ ಬೆದರಿಕೆ‌ ಹಾಕಿಲ್ಲ: ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ

ನಾವೂ ಯಾರಿಗೂ ಜೀವ ಬೆದರಿಕೆ‌ ಹಾಕಿಲ್ಲ: ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ

2

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

3

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

4

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

5

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಕಲಬುರ್ಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ 50 ಸಾವಿರ ನಿವೇಶನ ಹಂಚಿಕೆ, 30 ಎಕರೆ ಪ್ರದೇಶದಲ್ಲಿ ಐಟಿ ಪಾರ್ಕ್ ಅಭಿವೃದ್ಧಿ, ಕೀಡೆಗೆ ಪ್ರೋತ್ಸಾಹ ನೀಡಲು ಹಡಗಿಲ ಹಾರುತಿ ಗ್ರಾಮದಲ್ಲಿ ಕ್ರೀಡಾ ನಗರ ಸ್ಥಾಪನೆ, ಕೋಟಿ ವೃಕ್ಷ ಅಭಿಯಾನ ಸೇರಿದಂತೆ 10 ಹೊಸ ಕಾರ್ಯಕ್ರಮಗಳನ್ನು ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಸಿಎಂ‌ ಡಿ ಕೆ ಶಿವಕುಮಾರ್ ಅವರು ಘೋಷಿಸಿದರು.

 

79ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಅಂಗವಾಗಿ ಇಂದು ಕಲಬುರಗಿ ನಗರದ ಎಸ್‌.ವಿ.ಪಿ ವೃತ್ತದಲ್ಲಿ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದೆ.

ಈ ವೇಳೆ ಸಚಿವರಾದ ಶ್ರೀ ಪ್ರಿಯಾಂಕ್‌ ಖರ್ಗೆ, ಶಾಸಕರಾದ ಶ್ರೀ ಅಲ್ಲಮಪ್ರಭು ಪಾಟೀಲ್‌ ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಗಣ್ಯರು… pic.twitter.com/Oh02xVr3Y9

— DK Shivakumar (@DKShivakumar) September 17, 2026

 ಕಲಬುರ್ಗಿಯಲ್ಲಿ 79ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಸಿಎಂ ಡಿ ಕೆ ಶಿವಕುಮಾರ್ ಅವರು ಗುರುವಾರ (ಸೆ.17) ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ನೂತನ ದಶ ಯೋಜನೆಗಳನ್ನು ಘೋಷಿಸಿದರು.

 

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ನೂತನ ದಶ ಯೋಜನೆಗಳು:
"ಕಲ್ಯಾಣ ಕರ್ನಾಟಕ ಭಾಗದಲ್ಲಿ ಗಂಭೀರ ಸಮಸ್ಯೆಯಾದ ರಕ್ತಹೀನತೆ ಆರೋಗ್ಯ ತಡೆ ಯೋಜನೆ, ಅಪರಾಧ ತಡೆ, ಸಂಚಾರ ನಿಯಂತ್ರಣ ಕ್ಕೆ ಎಐ ಆಧಾರಿತ ಸಿಸಿಟಿವಿ ಕ್ಯಾಮೆರಾ, ಸೇಡಂ ರಸ್ತೆಯ ರಿಂಗ್ ರೋಡ್‌ನಲ್ಲಿ ಮೇಲ್ಸೇತುವೆ ನಿರ್ಮಾಣ, ಹೊಸ ಪೆರಿಫೆರಲ್ ರಿಂಗ್ ರಸ್ತೆಗೆ ಯೋಜನಾ ವರದಿ, ಸ್ಟಾರ್ಟ್‌ಅಪ್‌ಗಳು ಮತ್ತು ಯುವ ಉದ್ಯಮಿಗಳನ್ನು ಉತ್ತೇಜಿಸಲು ಕ್ರಿಯಾ (KRIYA) (Kalaburagi Research, Innovation and Youth Accelerator) ಸ್ಥಾಪನೆ, ಕಲ್ಯಾಣ ಕರ್ನಾಟಕ ಎಕಾನಮಿ ಮಿಷನ್ ಸ್ಥಾಪನೆ, ಜೈವಿಕ ಆರ್ಥಿಕ ಮಿಷನ್, 50 ಕೋಟಿ ವೆಚ್ಚದಲ್ಲಿ ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿ ಈ ಹೊಸ ಘೋಷಣೆಗಳಲ್ಲಿ ಒಳಗೊಂಡಿದೆ" ಎಂದರು.

ಕಲ್ಯಾಣ ಕರ್ನಾಟಕ ಭಾಗಕ್ಕೆ ಪ್ರತಿವರ್ಷ 5 ಸಾವಿರ ಕೋಟಿ: 
"ಬೆಂಗಳೂರು ಕರ್ನಾಟಕದ ಕಿರೀಟ. ಕಲ್ಯಾಣ ಕರ್ನಾಟಕ ಶಕ್ತಿಪೀಠ. ಕಲ್ಯಾಣ ಕರ್ನಾಟಕದ ಕಲ್ಯಾಣವೇ ನಮ್ಮ ಆದ್ಯತೆ. ಕಲ್ಯಾಣ ಕರ್ನಾಟಕದಲ್ಲಿ ತುಂಗಭದ್ರಾ, ಕೃಷ್ಣೆಯಂತೆ ಅಭಿವೃದ್ದಿ ತುಂಬಿ ಹರಿಯುತ್ತಿದೆ. ಈ ಭಾಗದ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಪ್ರತಿವರ್ಷ 5 ಸಾವಿರ ಕೋಟಿ ನೀಡಿದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿಯಿಂದ ಸಮಗ್ರ ಕರ್ನಾಟಕದ ಪ್ರಗತಿ" ಎಂದು ಹೇಳಿದರು.

ಕಲ್ಯಾಣ ಕರ್ನಾಟಕದ ʻಕಲ್ಯಾಣʼವೇ ನಮ್ಮ ಆದ್ಯತೆ

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ–2026ರ ಅಂಗವಾಗಿ ಕಲಬುರಗಿಯ ಪೊಲೀಸ್ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ, ಪಥಸಂಚಲನ ವೀಕ್ಷಿಸಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್‌ ಅಂಬೇಡ್ಕರ್‌, ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರ ಭಾವಚಿತ್ರಕ್ಕೆ ಪುಷ್ಪನಮನ… pic.twitter.com/dU64aMFhgG

— DK Shivakumar (@DKShivakumar) September 17, 2026

32 ಸಾವಿರ ಸರ್ಕಾರಿ ಹುದ್ದೆಗಳ ಭರ್ತಿ: 
"371 ಜೆ ಜಾರಿಯಾದ ನಂತರ ಅದರಲ್ಲಿ 79,383 ಹುದ್ದೆಗಳನ್ನು ಈಗಾಗಲೇ ಭರ್ತಿ ಮಾಡಲಾಗಿದೆ. ಹೊಸದಾಗಿ ಭರ್ತಿ ಮಾಡುತ್ತಿರುವ 72 ಸಾವಿರ ಹುದ್ದೆಗಳಲ್ಲಿ 32 ಸಾವಿರ ಹುದ್ದೆಗಳು ಈ ಭಾಗದ ಯುವಜನರಿಗೆ ದೊರೆಯಲಿವೆ. ಕೆಕೆಆರ್‌ಡಿಬಿಗೆ 2013-14ನೆೇ ರಿಂದ 2025-26ನೆೇ ಸಾಲಿನವರೆಗೆ 24,780 ಕೋಟಿ ಅನುದಾನ ನೀಡಲಾಗಿದೆ. ಇದರಲ್ಲಿ 14,000 ಕೋಟಿ ರೂ.‌ಅನುದಾನ ಖರ್ಚು ಮಾಡಲಾಗಿದೆ. 41,103 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. 32,985 ಕಾಮಗಾರಿಗಳು ಪೂರ್ಣಗೊಂಡಿವೆ. 8,118 ಕಾಮಗಾರಿಗಳು ವಿವಿಧ ಹಂತದಲ್ಲಿ ಪ್ರಗತಿಯಲ್ಲಿವೆ" ಎಂದರು.

ಕಾಂಗ್ರೆಸ್ ಪಕ್ಷ ಕಲ್ಯಾಣ ಕರ್ನಾಟಕದ ವಿಮೋಚನೆಗೆ ರಕ್ತ, ಬೆವರು ಹರಿಸಿದೆ!
"ನಮ್ಮೊಂದಿಗೆ ನೀವು, ನಿಮ್ಮೊಂದಿಗೆ ನಾವು ಸೇರಿ ಮುನ್ನಡೆಯುವುದೇ ಅಭಿವೃದ್ಧಿ. ಬಸವಣ್ಣನವರ ಹೋರಾಟದ ನೆಲ. ಸಮಾನತೆ, ಮಾನವೀಯತೆ, ಸಹಬಾಳ್ವೆಯ ಸಂದೇಶ ನೀಡಿದ ಪುಣ್ಯಭೂಮಿ ಕಲ್ಯಾಣ ಕರ್ನಾಟಕ. ಆಗ ಬಾ, ಈಗ ಬಾ, ಹೋಗಿ ಬಾ ಎನ್ನದೇ, ಈಗಲೇ ಕೊಡುವುದೇ ಮಾನವಧರ್ಮ ಎಂದು ವಚನಕಾರ ಸರ್ವಜ್ಞ ಹೇಳಿದ್ದಾರೆ. ನೀರಿನಿಂದ ಸ್ನಾನ ಮಾಡಿದವನು ಬಟ್ಟೆ ಬದಲಾಯಿಸುತ್ತಾನೆ.ಬೆವರಿನಿಂದ ಸ್ನಾನ ಮಾಡಿದವನು ಇತಿಹಾಸ ನಿರ್ಮಿಸುತ್ತಾನೆ ಎಂದು ಸಂತ ಸೇವಾಲಾಲ್ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷ ಕಲ್ಯಾಣ ಕರ್ನಾಟಕದ ವಿಮೋಚನೆಗೆ ರಕ್ತ, ಬೆವರು ಹರಿಸಿದೆ" ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಉಲ್ಲೇಖಿಸಿದರು.

 

ಕಲ್ಯಾಣ ಕರ್ನಾಟಕ ರಾಜ್ಯದ ಶಕ್ತಿಪೀಠ

ನಾವು ಮತಕ್ಕಾಗಿ ಅಲ್ಲ, ರಾಜ್ಯದ ಹಿತಕ್ಕಾಗಿ ಕೆಲಸ ಮಾಡುತ್ತೇವೆ. ಪ್ರಜಾಸೇವೆಯೇ ದೇವರ ಸೇವೆ. ಅದಕ್ಕಾಗಿ ಪ್ರಜಾಸೇವೆ ಇಲಾಖೆಯನ್ನೇ ಸ್ಥಾಪಿಸಿದ್ದೇವೆ. ಸರ್ಕಾರವನ್ನೇ ನಿಮ್ಮ ಮನೆ ಬಾಗಿಲಿಗೆ ತಂದು ನಿಮ್ಮ ಸಮಸ್ಯೆಗಳನ್ನು ಪರಿಹರಿಸುತ್ತಿದ್ದೇವೆ. ಪ್ರತಿ 2ನೇ ಹಾಗೂ 4ನೇ ಶನಿವಾರ ನಾನೂ ಸೇರಿದಂತೆ ನಮ್ಮ… pic.twitter.com/EMxvqgmpfC

— DK Shivakumar (@DKShivakumar) September 17, 2026

 "ಇಡುವ ಹೆಜ್ಜೆ ಚಿಕ್ಕದಿರಬಹುದು. ಆದರೆ ಆಲೋಚನೆ ದೊಡ್ಡದಿರಬೇಕು. ಸರ್ದಾರ್ ವಲ್ಲಭಾಯಿ ಪಟೇಲ್, ನೆಹರು ಅವರು ಕಲ್ಯಾಣ ಕರ್ನಾಟಕವನ್ನ ಕಾಪಾಡಿದರು. ಕಟ್ಟಡಗಳ ನಿರ್ಮಾಣದ ಜೊತೆಗೆ ಕಟ್ಟ ಕಡೆಯ ವ್ಯಕ್ತಿಯ ನೆಮ್ಮದಿ ಬದುಕೇ ಅಭಿವೃದ್ಧಿ ಈ‌ ನಿಟ್ಟಿನಲ್ಲಿ ಸೋನಿಯಾ ಗಾಂಧಿ, ಮನಮೋಹನ್ ಸಿಂಗ್, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಅವರು‌ ಈ ಭಾಗದ ಅಭಿವೃದ್ಧಿಗೆ ಮುನ್ನುಡಿ ಬರೆದರು. 1990 ರಲ್ಲಿ ಮಾಜಿ ಸಿಎಂ ಧರ್ಮಸಿಂಗ್ ಅವರ ನೇತೃತ್ವದಲ್ಲಿ ಹೈದರಾಬಾದ್-ಕರ್ನಾಟಕ ಅಭಿವೃದ್ಧಿ ಮಂಡಳಿ ಸ್ಥಾಪನೆಯಾಯಿತು. ಹೀಗೆ ಪ್ರಾರಂಭವಾದ ಅಭಿವೃದ್ಧಿ ಪರ್ವ ಮುಂದುವರೆಯುತ್ತಿದೆ" ಎಂದರು.

 

371 ಜೆ ಸೋನಿಯಾ ಗಾಂಧಿ, ಮನಮೋಹನ್ ಸಿಂಗ್,  ಮಲ್ಲಿಕಾರ್ಜುನ ಖರ್ಗೆ ಅವರ ಕೊಡುಗೆ: 
"ನಮ್ಮ ಅತಿ ದೊಡ್ಡ ಸಂಪನ್ಮೂಲಗಳು ನಮ್ಮ ಹೃದಯದಲ್ಲಿ ಇರುತ್ತವೆ.‌ ಅದನ್ನು ಕೊಡುವ ದೊಡ್ದ ಮನಸು ಮಾಡಬೇಕು. 371 ಜೆ ಸೋನಿಯಾ ಗಾಂಧಿ ಅವರು ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಕೊಡುಗೆ. ಸೋನಿಯಾ ಗಾಂಧೀ ಅವರು ಈ ತಿದ್ದುಪಡಿಗೆ ಲೋಕಸಭೆಯಲ್ಲಿ 404 ಸದಸ್ಯರ ಬೆಂಬಲ ಕೊಡಿಸಿದರು" ಎಂದು ಹೇಳಿದರು.

ಸತ್ಯಕ್ಕೆ ಸಮನಿಲ್ಲ. ಹಸ್ತಕ್ಕಿಂತ ಅಧಿಕ ಹಿತವಿಲ್ಲ:
"ಸತ್ಯಕ್ಕೆ ಸಮನಿಲ್ಲ. ಹಸ್ತಕ್ಕಿಂತ ಅಧಿಕ ಹಿತವಿಲ್ಲ. ಈ ಹಸ್ತದಿಂದಲೇ ದೇಶದ ಅಭಿವೃದ್ಧಿ ಹಾಗೂ ಈ ಕರ್ನಾಟಕ ಅಭಿವೃದ್ಧಿ. ಈ ಭಾಗದ ಯುವಕರು 371 ಜೆ ತಿದ್ದುಪಡಿಯ ಕಾರಣಕ್ಕೆ ಬದುಕನ್ನು ಕಟ್ಟಿಕೊಳ್ಳುತ್ತಿದ್ದಾರೆ ನಾವು ಮತಕ್ಕಾಗಿ, ಅಲ್ಲ ರಾಜ್ಯದ ಹಿತಕ್ಕಾಗಿ ಕೆಲಸ ಮಾಡುತ್ತೇವೆ. ಆರ್ಟಿಕಲ್ 371 ಜೆ ಜಾರಿಯಾಗಿ 12 ವರ್ಷಗಳಾಗಿವೆ. ಅಲ್ಲಿಂದ ‌ಇಲ್ಲಿಯವರೆಗೆ ಸಾಕಷ್ಟು ಬದಲಾವಣೆಗಳು, ಅಭಿವೃದ್ಧಿ ಕೆಲಸಗಳು ಈ ಭಾಗದಲ್ಲಿ ‌ನಡೆದಿವೆ. ಮಲ್ಲಿಕಾರ್ಜುನ ಖರ್ಗೆ ಅವರು ಅತೀ ದೊಡ್ಡ ಇಎಸ್ ಐ ಆಸ್ಪತ್ರೆ ಕಟ್ಟಿಸಿದ್ದಾರೆ. ಕಲ್ಯಾಣ ಕರ್ನಾಟಕ ಹೆಲ್ತ್ ಹಬ್ ಆಗಿ ಬೆಳೆಯುತ್ತಿದೆ. ಇದರಿಂದ ಈ ಭಾಗದ ಜನರು ಬೆಂಗಳೂರು, ಹೈದರಾಬಾದ್ ಗೆ ಹೋಗುವುದು ತಪ್ಪುತ್ತಿದೆ" ಎಂದು ಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

"ಮಲ್ಲಿಕಾರ್ಜುನ ಖರ್ಗೆ ಅವರು ರೈಲ್ವೇ ಸಚಿವರಾಗಿದ್ದಾಗ ಗುಲ್ಬರ್ಗ - ವಾಡಿ ಹೊಸ ರೈಲು ಮಾರ್ಗ ನೀಡಿದರು. ಇಂದಿರಾಗಾಂಧಿ ತಾಯಿ- ಮಕ್ಕಳ ಆಸ್ಪತ್ರೆ, ಕಿದ್ವಾಯಿ, ಜಯದೇವ ಆಸ್ಪತ್ರೆಗಳು ಜನರ ಸೇವೆಗೆ ಸಿದ್ದವಾಗಿವೆ. ನಾವೆಲ್ಲರೂ ಸೋನಿಯಾ ಗಾಂಧಿಯವರ ನೇತೃತ್ವದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಮಾಡಿದ ಅಭಿವೃದ್ಧಿಯ ಕ್ರಾಂತಿಯನ್ನು ಎಲ್ಲರೂ ಸ್ಮರಿಸಿಕೊಳ್ಳಬೇಕು" ಎಂದು ಹೇಳಿದರು.

"ಬಂಜಾರರನ್ನು ಪರಿಶಿಷ್ಟ ಪಟ್ಟಿಗೆ ಸೇರ್ಪಡೆ ಮಾಡಿದ್ದು ಕಾಂಗ್ರೆಸ್ ಪಕ್ಷ. ‌2024ರ ಲೋಕಸಭಾ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕದ ಭಾಗದ ಜನರು ಕಾಂಗ್ರೆಸ್‌ ಪಕ್ಷದ ಕೈ ಹಿಡಿದಿದ್ದಾರೆ. ನಮ್ಮ ಕೈಹಿಡಿದ ನಿಮ್ಮನ್ನು ಕೈಬಿಡುವ ಪ್ರಶ್ನೆಯೇ ಇಲ್ಲ" ಎಂದು ಸಿಎಂ ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

"ಈ ಭಾಗದ ರಸ್ತೆಗಳ ಸುಧಾರಣೆಗೆ ಕಲ್ಯಾಣಪಥ ಯೋಜನೆ ರೂಪಿಸಿದ್ದೇವೆ. 38 ವಿಧಾನಸಭಾ ಕ್ಷೇತ್ರಗಳಲ್ಲಿ 1,150 ಕಿ.ಮೀ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ 1 ಸಾವಿರ ಕೋಟಿ ನೀಡಲಾಗಿದೆ. ಪ್ರತಿ ಕ್ಷೇತ್ರಕ್ಕೆ 120 ಕೋಟಿ ತೆಗೆದಿರಿಸಿದ್ದೇವೆ. ಕಲಬುರಗಿಯಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ₹11,770 ಕೋಟಿ ಮೊತ್ತದ ಬೃಹತ್ ಯೋಜನೆಗಳಿಗೆ ನಿರ್ಧಾರ ಮಾಡಿದ್ದೇವೆ" ಎಂದರು.

"350 ಕೆಪಿಎಸ್ ಶಾಲೆಗಳ ನಿರ್ಮಾಣದ ಗುರಿ ಹೊಂದಲಾಗಿದೆ. 371‌‌‌ ಜೆ ಕಾರಣಕ್ಕೆ ವೈದ್ಯಕೀಯ ಕ್ಷೇತ್ರದಲ್ಲಿ 10,000ಕ್ಕೂ ಹೆಚ್ಚು ಹಾಗೂ ಎಂಜಿನಿಯರಿಂಗ್‌ನಲ್ಲಿ 31,000ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರವೇಶ ದೊರಕಿದೆ. ಆರೋಗ್ಯ ಕ್ಷೇತ್ರಕ್ಕೆ 1,797 ಕೋಟಿ ರೂ., ಸಣ್ಣ ಕೈಗಾರಿಕೆಗಳಿಗೆ 200 ಕೋಟಿ ರೂ. ನೀಡಲಾಗಿದೆ. ಕಲಬುರಗಿಯಲ್ಲಿ 120 ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳು ಸ್ಥಾಪನೆಯಾಗಿವೆ. 500ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳನ್ನು 2030ರ ಒಳಗೆ ನಿರ್ಮಿಸುವ ಗುರಿ ಹೊಂದಿದೆ" ಎಂದು ಹೇಳಿದರು.

"ಶಕ್ತಿ ಯೋಜನೆಯಡಿ ಮಹಿಳೆಯರು 117.6 ಕೋಟಿ ಟ್ರಿಪ್‌ ಉಚಿತ ಪ್ರಯಾಣ ಮಾಡಿದ್ದು ಇದಕ್ಕಾಗಿ 4,287 ಕೋಟಿ ವೆಚ್ಚ ಮಾಡಲಾಗಿದೆ. ಗೃಹಜ್ಯೋತಿ ಯೋಜನೆಯಡಿ 21.42 ಲಕ್ಷ ಗ್ರಾಹಕರು ಉಚಿತ ವಿದ್ಯುತ್ ಸೌಲಭ್ಯ  ₹2,328 ಕೋಟಿ ವಿನಿಯೋಗ. ಗೃಹಲಕ್ಷ್ಮಿ ಯೋಜನೆಯಡಿ 24.78 ಲಕ್ಷ ಮಹಿಳೆಯರಿಗೆ  ₹9,650 ಕೋಟಿ ವಿತರಿಸಲಾಗಿದೆ. ಯುವನಿಧಿ ಯೋಜನೆಗೆ ₹172 ಕೋಟಿ ವೆಚ್ಚ ಮಾಡಲಾಗಿದೆ. 7,200 ಕೋಟಿ ಅಂದಾಜು ವೆಚ್ಚದಲ್ಲಿ ಕಲ್ಯಾಣ ಕರ್ನಾಟಕದ ಕುಡಿಯುವ ನೀರಿನ ಯೋಜನೆ ಕೈಗೆತ್ತಿಕೊಳ್ಳಲಾಗುತ್ತಿದೆ" ಎಂದು ಹೇಳಿದರು.

"ಎಲ್ಲರೂ ಒಟ್ಟಾಗಿ ನಡೆಯೋಣ. ನವ ಕರ್ನಾಟಕ ಸದೃಡ ಕರ್ನಾಟಕ ನಮ್ಮ ಸಂಕಲ್ಪ. ಅಭಿವೃದ್ಧಿ ಪರವಾದ ಗ್ಯಾರಂಟಿಗೆಯನ್ನು ನಮ್ಮ ಸರ್ಕಾರ ನೀಡಿದೆ, ನೀಡಲಿದೆ" ಎಂದು ಹೇಳಿದರು.
 

Add Zee News as a Preferred Source
TAGS:
Kannada News
D K Shivakumar
Priyank Kharge