• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಹುಬ್ಬಳ್ಳಿ ಧಾರವಾಡ
  • /ಕಬ್ಬು ಬೆಳೆಗಾರರ ಹೋರಾಟಕ್ಕೆ ಸ್ಪಂದನೆ: ಅ. 26ಕ್ಕೆ ಬೆಳಗಾವಿ ಸುವರ್ಣ ಸೌಧದಲ್ಲಿ ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ!

ಕಬ್ಬು ಬೆಳೆಗಾರರ ಹೋರಾಟಕ್ಕೆ ಸ್ಪಂದನೆ: ಅ. 26ಕ್ಕೆ ಬೆಳಗಾವಿ ಸುವರ್ಣ ಸೌಧದಲ್ಲಿ ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ!

ಕಬ್ಬು ಬೆಳೆಗಾರರ ಹೋರಾಟಕ್ಕೆ ಕೊನೆಗೂ ಸರ್ಕಾರ ಸ್ಪಂದಿಸಿದ್ದು ಇದೇ ಅಕ್ಟೋಬರ್‌ 26ಕ್ಕೆ ಬೆಳಗಾವಿಯಲ್ಲಿ ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯುವ ಸಾಧ್ಯತೆ ಇದೆ. ಈ ಸಭೆಯಲ್ಲಿ ಕಬ್ಬು ದರ ನಿಗದಿ ಕುರಿತು ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗಿದೆ.

Written ByYashaswini V
Published: Oct 20, 2026, 03:39 PM IST|Updated: Oct 20, 2026, 03:41 PM IST
joinshare
ಕಬ್ಬು ಬೆಳೆಗಾರರ ಹೋರಾಟಕ್ಕೆ ಸ್ಪಂದನೆ: ಅ. 26ಕ್ಕೆ ಬೆಳಗಾವಿ ಸುವರ್ಣ ಸೌಧದಲ್ಲಿ ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ!

About the Author

Yashaswini V

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 
Read More

Trending

  • News
  • Photos
  • Videos
ಬೆಂಗಳೂರು–ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ದಿನಾಂಕ ಫಿಕ್ಸ್! ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

ಬೆಂಗಳೂರು–ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ದಿನಾಂಕ ಫಿಕ್ಸ್! ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

2

ದಸರಾ ಸಂಭ್ರಮಕ್ಕೆ ಹೊಸ ಕಾರು ಖರೀದಿ.. ಡೆಲಿವರಿ ವೇಳೆ ಭೀಕರ ಅಪಘಾತ!

3

ಬೆಂಗಳೂರಿನಲ್ಲಿ 3 ದಿನ ಎಣ್ಣೆ ಸಿಗಲ್ಲ! 11 ಪೊಲೀಸ್ ವಿಭಾಗಗಳಲ್ಲಿ ಮದ್ಯ ಮಾರಾಟ ಬಂದ್‌!

4

ಕಬ್ಬು ಬೆಳೆಗಾರರ ಹೋರಾಟಕ್ಕೆ ಸ್ಪಂದನೆ: ಅ. 26ಕ್ಕೆ ಬೆಳಗಾವಿ ಸುವರ್ಣ ಸೌಧದಲ್ಲಿ ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ!

5

ಕಾರು ಮಕ್ಕಳ ಆಟಿಕೆಯಲ್ಲ, ರಸ್ತೆ ಆಟದ ಮೈದಾನವಲ್ಲ! ಕರ್ನಾಟಕ ಹೈಕೋರ್ಟ್

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಪ್ರತಿ ಟನ್ ಕಬ್ಬಿಗೆ  5,500 ರೂಪಾಯಿ ದರ ನಿಗದಿಪಡಿಸುವಂತೆ ಕಬ್ಬು ಬೆಳೆಗಾರರು ನಡೆಸುತ್ತಿರುವ ಹೋರಾಟ ಕೊನೆಗೂ ಮಹತ್ವದ ಗಟ್ಟಕ್ಕೆ ತಲುಪಿದೆ. ರೈತರ ಹೋರಾಟದ ಬೆನ್ನಲ್ಲೇ ಅಕ್ಟೋಬರ್ 26ರಂದು ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್‌ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಈ ಸಭೆಯಲ್ಲಿ ರೈತರು ಹಾಗೂ ಸಕ್ಕರೆ ಕಾರ್ಖಾನೆಗಳ ಮಾಲೀಕರು ಭಾಗಿಯಾಗಲಿದ್ದಾರೆ. ಸಭೆಯ ಬಳಿಕ ರಾಜ್ಯದಲ್ಲಿ ಕಬ್ಬು ನುರಿಸುವ ಹಂಗಾಮು ಆರಂಭವಾಗುತ್ತಾ ಎಂಬ ಕುತೂಹಲ ಮೂಡಿದೆ. ಈ ನಡುವೆ ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ರೈತ ಮುಖಂಡ ಚೂನಪ್ಪ ಪೂಜಾರಿ ಮನವಿ ಮಾಡಿದ್ದಾರೆ.

ಹೌದು... ಕಬ್ಬಿಗೆ ಟನ್‌ಗೆ 5,500 ರೂಪಾಯಿ ದರ ನಿಗದಿಪಡಿಸಬೇಕೆಂದು ಪಟ್ಟು ಹಿಡಿದಿರುವ ಕಬ್ಬು ಬೆಳೆಗಾರರು. ತಮ್ಮ ಬೇಡಿಕೆ ಈಡೇರಿಕೆಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ತೀವ್ರವಾದ ಹೋರಾಟ ನಡೆಸಿದ್ದರು. ರೈತರ ಹೋರಾಟದ ಪರಿಣಾಮ ಇದೀಗ ರಾಜ್ಯ ಸರ್ಕಾರ ಮಹತ್ವದ ಸಭೆ ನಡೆಸಲು ಮುಂದಾಗಿದ್ದು ಅಕ್ಟೋಬರ್ 26ರಂದು ಮುಖ್ಯಮಂತ್ರಿ ನೇತೃತ್ವದಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸಭೆ ನಡೆಯಲಿದೆ. ಕಬ್ಬು ಬೆಳೆಗಾರರು ಹಾಗೂ ಸಕ್ಕರೆ ಕಾರ್ಖಾನೆಗಳ ಮಾಲೀಕರ ಜೊತೆ ಮುಖ್ಯಮಂತ್ರಿ ಚರ್ಚೆ ನಡೆಸಲಿದ್ದಾರೆ. ಕಬ್ಬಿನ ದರ ನಿಗದಿ ಹಾಗೂ ಹಂಗಾಮು ಆರಂಭದ ವಿಚಾರವಾಗಿ ಈ ಸಭೆ ಮಹತ್ವ ಪಡೆದುಕೊಂಡಿದೆ. ಇನ್ನು ಸಭೆ ನಡೆಯುವ ಬಗ್ಗೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯಾಧ್ಯಕ್ಷ ಚೂನಪ್ಪ ಪೂಜಾರಿ ಅವರಿಗೆ ಜಿಲ್ಲಾಡಳಿತದಿಂದ ಮಾಹಿತಿ ರವಾನೆಯಾಗಿದೆ. ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಸಭೆಯ ಕುರಿತು ಮಾಹಿತಿ ನೀಡಿದ್ದಾರೆ ಎಂದು ಚೂನಪ್ಪ ಪೂಜಾರಿ ತಿಳಿಸಿದ್ದಾರೆ.

ಇನ್ನೂ‌ ಇತ್ತೀಚೆಗೆ ಕಿತ್ತೂರಿನಲ್ಲಿ ಹೋರಾಟಕ್ಕೆ ಬೆಂಬಲಿಸಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದಸರಾ ಹಬ್ಬದ ಬಳಿಕ ಸಭೆ ನಡೆಸುವುದಾಗಿ ಘೋಷಿಸಿದ್ದರು. ರೈತರಿಗೆ ಕೊಟ್ಟ ಭರವಸೆಯಂತೆ ಸಿಎಂ ಸಭೆ ದಿನಾಂಕ ನಿಗದಿಯಾಗಿರುವುದು ಕಬ್ಬು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ. ಆದರೆ, ರೈತರ ಪ್ರಮುಖ ಬೇಡಿಕೆಯಾಗಿರುವ ಟನ್‌ಗೆ 5,500 ರೂಪಾಯಿ ದರದ ಕುರಿತು ಸಭೆಯಲ್ಲಿ ಯಾವ ನಿರ್ಧಾರ ಕೈಗೊಳ್ಳಲಾಗುತ್ತದೆಯೇ? ಸಕ್ಕರೆ ಕಾರ್ಖಾನೆಗಳ ಮಾಲೀಕರು ರೈತರ ಬೇಡಿಕೆಗೆ ಸ್ಪಂದಿಸುತ್ತಾರಾ? ಸಭೆಯ ಬಳಿಕ ರಾಜ್ಯದಲ್ಲಿ ಸಕ್ಕರೆ ಕಾರ್ಖಾನೆಗಳು ಕಾರ್ಯಾರಂಭ ಮಾಡಲಿವೆಯಾ? ಎಂಬ ಪ್ರಶ್ನೆಗಳಿಗೆ ಸಿಎಂ ಸಭೆಯಲ್ಲಿ ಸ್ಪಷ್ಟವಾದ ಉತ್ತರ ಸಿಗಲಿದೆ. ಯಾಕೆಂದರೆ ಎಂಎಸ್‌ಪಿ 60 ನಿಗದಿಗಾಗಿ ಕೇಂದ್ರ ಸರ್ಕಾರಕ್ಕೆ ನವೆಂಬರ್ 26 ವರೆಗೂ ಒಂದು ತಿಂಗಳ ಕಾಲಾವಕಾಶ ಕೊಟ್ಟಿದೆ. ಮತ್ತೊಂದೆಡೆ ಸಕ್ಕರೆ ಕಾರ್ಖಾನೆಗಳು ಟನ್ ಗೆ 500 ರುಪಾಯಿ ಮತ್ತು ರಾಜ್ಯ ರಾಜ್ಯ ಸರ್ಕಾರ 1000 ಸಾವಿರ ರುಪಾಯಿ ಬೆಂಬಲ ಬೆಲೆ ಒತ್ತಾಯಿಸುತ್ತಾ ಬಂದಿದ್ದಾರೆ.

ಒಟ್ಟಿನಲ್ಲಿ ಕಬ್ಬಿನ ದರದ ವಿಚಾರವಾಗಿ ನಡೆಯುತ್ತಿರುವ ಹೋರಾಟಕ್ಕೆ ಅಕ್ಟೋಬರ್ 26ರ ಸಭೆ ನಿರ್ಣಾಯಕವಾಗುವ ಸಾಧ್ಯತೆಯಿದೆ. ರೈತರ ಬೇಡಿಕೆಗೆ ಸರ್ಕಾರ ಯಾವ ರೀತಿಯಲ್ಲಿ ಸ್ಪಂದಿಸಲಿದೆ? ಕಬ್ಬು ನುರಿಸುವ ಹಂಗಾಮಿಗೆ ಹಸಿರು ನಿಶಾನೆ ಸಿಗಲಿದೆಯಾ? ಎಂಬುದಕ್ಕೆ ಸಭೆಯ ಬಳಿಕ ಉತ್ತರ ಸಿಗಬೇಕಿದೆ.
 

Add Zee News as a Preferred Source
TAGS:
D K Shivakumar
Kannada News