• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಹುಬ್ಬಳ್ಳಿ ಧಾರವಾಡ
  • /ಡಿಕೆಶಿ ವಿರುದ್ಧ ನೇರವಾಗಿಯೇ ಪ್ರೊಟೆಸ್ಟ್‌ ಮಾಡಬೇಕಿತ್ತು: ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌

ಡಿಕೆಶಿ ವಿರುದ್ಧ ನೇರವಾಗಿಯೇ ಪ್ರೊಟೆಸ್ಟ್‌ ಮಾಡಬೇಕಿತ್ತು: ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌

ಮುಖ್ಯಮಂತ್ರಿಗಳು ಯೋಗ್ಯ ನಾಯಕರಲ್ಲ ಎಂದಾದರೆ ಅವರ ವಿರುದ್ಧ ಓಪನ್ ಆಗಿ ಪ್ರೊಟೆಸ್ಟ್ ಮಾಡಬೇಕಿತ್ತು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

Written ByYashaswini V
Published: Sep 18, 2026, 01:36 PM IST|Updated: Sep 18, 2026, 01:41 PM IST
joinshare
ಡಿಕೆಶಿ ವಿರುದ್ಧ ನೇರವಾಗಿಯೇ ಪ್ರೊಟೆಸ್ಟ್‌ ಮಾಡಬೇಕಿತ್ತು: ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌

About the Author

Yashaswini V

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 
Read More

Trending

  • News
  • Photos
  • Videos
ಇಂದಿನ ದಿನ ಭವಿಷ್ಯ: ಈ ರಾಶಿಯವರಿಗೆ ಸುಖದ ಸುಪ್ಪತ್ತಿಗೆ, ದಿಢೀರ್‌ ಧನಯೋಗ! 12 ರಾಶಿಗಳ ಭವಿಷ್ಯ ಇಲ್ಲಿದೆ

ಇಂದಿನ ದಿನ ಭವಿಷ್ಯ: ಈ ರಾಶಿಯವರಿಗೆ ಸುಖದ ಸುಪ್ಪತ್ತಿಗೆ, ದಿಢೀರ್‌ ಧನಯೋಗ! 12 ರಾಶಿಗಳ ಭವಿಷ್ಯ ಇಲ್ಲಿದೆ

2

ನಾವೂ ಯಾರಿಗೂ ಜೀವ ಬೆದರಿಕೆ‌ ಹಾಕಿಲ್ಲ: ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ

3

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

4

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

5

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಹುಬ್ಬಳ್ಳಿ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗೆ ಮತ ಬರಲ್ಲ, ಅವರು ಯೋಗ್ಯ ನಾಯಕರು ಅಲ್ಲ ಎನ್ನುವುದಾದರೆ ಓಪನ್ ಆಗಿ ಶಿವಕುಮಾರ್ ವಿರುದ್ಧ ಪ್ರೊಟೆಸ್ಟ್ ಮಾಡಬೇಕಿತ್ತು ಎಂದು ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಒತ್ತಾಯ ಮಾಡಿದರು.

ಹುಬ್ಬಳ್ಳಿ ನಗರದಲ್ಲಿ ಶುಕ್ರವಾರ (ಸೆ. 18) ಸುದ್ದಿಗಾರರ ಜೊತೆಗೆ ಮಾತನಾಡಿದ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌, ಮಾಜಿ ಸಿಎಂ ಸಿದ್ದರಾಮಯ್ಯಾ ಬಲಿಷ್ಠರಾಗಿದ್ದರೆ ಕಾಂಗ್ರೆಸ್‌ ಬಲಿಷ್ಠ, ಡಿ.ಕೆ ಶಿವಕುಮಾರ್ ಗೆ ಒಕ್ಕಲಿಗರು ಮಹತ್ವ ಕೊಡಲ್ಲ  ಎಂಬ ಮಾಜಿ ಸಚಿವ ಕೆ.ಎನ್ .ರಾಜಣ್ಣ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ.. ಪಕ್ಷದಲ್ಲಿ ಸಾಕಷ್ಟು ಭಿನ್ನಾಭಿಪ್ರಾಯ ಇವೆ ಎಂದು ಮಾಜಿ ಸಚಿವ ಕೆ.ಎನ್ ರಾಜಣ್ಣ ಹೇಳಿಕೆಯಿಂದ ಗೊತ್ತಾಗುತ್ತದೆ. ಸ್ವತಃ ಮುಖ್ಯಮಂತ್ರಿ ಶಿವಕುಮಾರ್ ಅವರಿಂದ ಮತ ಪಡೆಯಲು ಆಗಲ್ಲ ಎಂದರೆ ಯಾಕೆ ಸಿಎಂ ಆಗಿ ಆಯ್ಕೆ ಮಾಡಿದ್ದೀರಿ ಎಂದು ಪ್ರಶ್ನಿಸಿದರು. ಇದೇ ವೇಳೆ, ಡಿ.ಕೆ. ಶಿವಕುಮಾರ್‌ ಸಮರ್ಥ ನಾಯಕರಲ್ಲದಿದ್ದರೆ ನೇರವಾಗಿ ಅವರ ವಿರುದ್ಧ ಪ್ರೊಟೆಸ್ಟ್ ಮಾಡಬೇಕಿತ್ತು, ಈ ವಿಚಾರವನ್ನು ಅವರ ಪಕ್ಷದ ಹೈಕಮಾಂಡ್‌ ಗಮನಕ್ಕೂ ತರಬೇಕಿತ್ತು ಎಂದು ಹೇಳಿದರು.

ಸ್ವತಃ ಸಿದ್ದರಾಮಯ್ಯ ಅವರೇ ಹೀಗೆ ಹೇಳಿದ್ದಾರೆ...!
ಇನ್ನು ಸ್ವತಃ ಸಿದ್ದರಾಮಯ್ಯ ಸಹ ನನ್ನ ಮಾತು ಎಲ್ಲಿ ನಡೆಯುತ್ತದೆ ಎಂದು ಹೇಳಿದ್ದಾರೆ. ಇನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ ಕೆ. ಹರಿಪ್ರಸಾದ್ ಹಾಗೂ  ಶಿವಕುಮಾರ್ ನಡುವೆ ಭಿನ್ನಾಭಿಪ್ರಾಯ ಹೆಚ್ಚಾಗಿದೆ. ಜಗಳ ಬಿಡಿಸಲು ಮಲ್ಲಿಕಾರ್ಜುನ ಖರ್ಗೆ, ವೇಣುಗೋಪಾಲ ಸುರ್ಜೇವಾಲ್ ಸಹ ಬಂದು ಹೋದರು. ಆದರೂ ಸಹ ಯಾವುದೇ ಭಿನ್ನಾಭಿಪ್ರಾಯ ಬಗೆಹರಿಸಲು ಆಗಿಲ್ಲ. ಇದೊಂದು ಅಸ್ಥಿರ ಸರಕಾರಕ್ಕೆ ಕಾರಣ ಆಗುತ್ತದೆ.  ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರಕಾರಕ್ಕೆ ಕಷ್ಟ ದಿನಗಳು, ಬಹಳಷ್ಟು ಡೇಂಜರಸ್ ಎಂದರು.‌

ಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲ!
ಕಲಬುರಗಿಯಲ್ಲಿ ಸಿಎಂ ಶಿವಕುಮಾರ್ ಭೇಟಿ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಮೂರ್ತಿ ತೆರವು ವಿಚಾರವಾಗಿ ಪ್ರತಿಕ್ರಿಯಿಸಿದ ಜಗದೀಶ್‌ ಶೆಟ್ಟರ್‌, ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿ ಇಲ್ಲ ಅಂತಾ ಗೊತ್ತಾಗುತ್ತದೆ. ಕಾಂಗ್ರೆಸ್ ಸಣ್ಣ ಸರಕಾರ, ಕಾಂಗ್ರೆಸ್ ನಾಯಕರ ಮೂರ್ತಿ ಅದು. ಭಾರತೀಯ ಜನತಾ ಪಕ್ಷದ ನಾಯಕರು ಅಲ್ಲಾ ವಾಜಪೇಯಿ ಮೂರ್ತಿ ಅಲ್ಲಾ. ಸಿಎಂ ಶಿವಕುಮಾರ್ ಬರುವ ಮುನ್ನವೇ ಸಿದ್ದರಾಮಯ್ಯನವರ ಮೂರ್ತಿ ತೆರವು ಮಾಡಲಾಗಿದೆ ಎಂದರೆ ಗೊತ್ತಾಗುತ್ತದೆ ಕಾಂಗ್ರೆಸ್ ನಲ್ಲಿ ಏನು ನಡೆತಾ ಇದೆ ಅಂತಾ ಎಂದು ಲೇವಡಿ ಮಾಡಿದರು.
 

 

Add Zee News as a Preferred Source
TAGS:
D K Shivakumar
Karnataka Politics
BJP
Congress
Siddaramaiah