SOCIAL MEDIA

Newsletter

PARTNER SITES
Select Language Select State

ಕಬ್ಬಿಗೆ ₹4,200 ಬೆಂಬಲ ಬೆಲೆಗೆ ಪಟ್ಟು: ಮುಧೋಳದಲ್ಲಿ ಸಾವಿರಾರು ರೈತರಿಂದ ಬೃಹತ್ ಪಾದಯಾತ್ರೆ!

ಕಬ್ಬಿಗೆ ಪ್ರತಿ ಟನ್‌ಗೆ ₹4,200 ಬೆಂಬಲ ಬೆಲೆ ನಿಗದಿಪಡಿಸಬೇಕು ಎಂಬುದು ರೈತರ ಪ್ರಮುಖ ಬೇಡಿಕೆಯಾಗಿದೆ.

Written By Chetana Devarmani
Published: Nov 11, 2026, 23:04 IST | Updated: Nov 11, 2026, 23:05 IST
Join

ಬಾಗಲಕೋಟೆ: ಕಬ್ಬಿಗೆ ಪ್ರತಿ ಟನ್‌ಗೆ ₹4,200 ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಬಾಗಲಕೋಟೆ ಜಿಲ್ಲೆಯ ಮುಧೋಳ ಪಟ್ಟಣದಲ್ಲಿ ಕಬ್ಬು ಬೆಳೆಗಾರ ರೈತರು ಬೃಹತ್ ಹೋರಾಟ ಆರಂಭಿಸಿದ್ದಾರೆ. ತಮ್ಮ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಸಾವಿರಾರು ಸಂಖ್ಯೆಯಲ್ಲಿ ರೈತರು ಬೀದಿಗಿಳಿದಿದ್ದು, ಟ್ರ್ಯಾಕ್ಟರ್‌ಗಳ ಸಮೇತ ಬೃಹತ್ ಪಾದಯಾತ್ರೆ ನಡೆಸುತ್ತಿದ್ದಾರೆ.

ಮುಧೋಳ ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ರೈತರ ಪಾದಯಾತ್ರೆ ಆರಂಭವಾಗಿದೆ. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಾಗುವ ಮೆರವಣಿಗೆ ಮುಧೋಳ ತಹಶೀಲ್ದಾರ್ ಕಚೇರಿವರೆಗೆ ನಡೆಯಲಿದೆ. ಕಬ್ಬಿಗೆ ಪ್ರತಿ ಟನ್‌ಗೆ ₹4,200 ಬೆಂಬಲ ಬೆಲೆ ನಿಗದಿಪಡಿಸಬೇಕು ಎಂಬುದು ರೈತರ ಪ್ರಮುಖ ಬೇಡಿಕೆಯಾಗಿದೆ.

ಕಬ್ಬು ಬೆಳೆಗಾರರ ಹೋರಾಟಕ್ಕೆ ಸಾವಿರಾರು ಸಂಖ್ಯೆಯಲ್ಲಿ ರೈತರು ಕೈಜೋಡಿಸಿದ್ದಾರೆ. ಕೇವಲ ಪಾದಯಾತ್ರೆಗೆ ಸೀಮಿತವಾಗದೆ ಟ್ರ್ಯಾಕ್ಟರ್‌ಗಳ ಸಮೇತ ಮೆರವಣಿಗೆಯಲ್ಲಿ ಭಾಗವಹಿಸುವ ಮೂಲಕ ತಮ್ಮ ಒಗ್ಗಟ್ಟನ್ನು ಪ್ರದರ್ಶಿಸಿದ್ದಾರೆ. ರೈತರ ಬೃಹತ್ ಮೆರವಣಿಗೆಯಲ್ಲಿ ಮಹಿಳೆಯರೂ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದಾರೆ.

ಸಂಗೊಳ್ಳಿ ರಾಯಣ್ಣ ವೃತ್ತದಿಂದ ಆರಂಭವಾದ ಈ ಪಾದಯಾತ್ರೆಯಲ್ಲಿ ರೈತರು ತಮ್ಮ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಘೋಷಣೆಗಳನ್ನು ಕೂಗುತ್ತಿದ್ದಾರೆ. ಸರ್ಕಾರದ ವಿರುದ್ಧ ಧಿಕ್ಕಾರ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು ಮತ್ತು ಬೆಂಬಲ ಬೆಲೆ ವಿಚಾರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತಿದ್ದಾರೆ.

ಕಬ್ಬು ಬೆಳೆಯಲು ರೈತರು ಸಾಕಷ್ಟು ಶ್ರಮ ಹಾಗೂ ಬಂಡವಾಳ ಹೂಡಿಕೆ ಮಾಡಬೇಕಾಗುತ್ತದೆ. ಕೃಷಿ ವೆಚ್ಚ, ಕಾರ್ಮಿಕರ ವೆಚ್ಚ ಸೇರಿದಂತೆ ವಿವಿಧ ಖರ್ಚುಗಳನ್ನು ಭರಿಸುವ ರೈತರಿಗೆ ಸೂಕ್ತ ಬೆಲೆ ಸಿಗಬೇಕು ಎಂಬುದು ಬೆಳೆಗಾರರ ಆಗ್ರಹವಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿ ಟನ್ ಕಬ್ಬಿಗೆ ₹4,200 ಬೆಂಬಲ ಬೆಲೆ ನೀಡಬೇಕೆಂದು ರೈತರು ಪಟ್ಟು ಹಿಡಿದಿದ್ದಾರೆ. ಈ ಬೇಡಿಕೆಯನ್ನು ಸರ್ಕಾರದ ಗಮನಕ್ಕೆ ತರುವ ಉದ್ದೇಶದಿಂದ ಮುಧೋಳದಲ್ಲಿ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ರೈತರು ತಹಶೀಲ್ದಾರ್ ಕಚೇರಿವರೆಗೆ ತೆರಳಿ ತಮ್ಮ ಹೋರಾಟವನ್ನು ಮುಂದುವರಿಸಲಿದ್ದಾರೆ.

ಪಾದಯಾತ್ರೆಯಲ್ಲಿ ಭಾಗವಹಿಸಿರುವ ರೈತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದು, ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ. ಮಹಿಳಾ ರೈತರು ಕೂಡ ಹೋರಾಟದಲ್ಲಿ ಭಾಗಿಯಾಗಿರುವುದು ಪ್ರತಿಭಟನೆಯ ಗಮನಾರ್ಹ ಸಂಗತಿಯಾಗಿದೆ. ಟ್ರ್ಯಾಕ್ಟರ್‌ಗಳು ಹಾಗೂ ಅಪಾರ ಸಂಖ್ಯೆಯ ರೈತರ ಭಾಗವಹಿಸುವಿಕೆಯಿಂದ ಮುಧೋಳದಲ್ಲಿ ರೈತರ ಹೋರಾಟದ ಕಾವು ಹೆಚ್ಚಾಗಿದೆ.

 

Add Zee News as a Preferred Source
TAGS:

About the Author

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

ZEENEWS TRENDING STORIES