• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಹುಬ್ಬಳ್ಳಿ ಧಾರವಾಡ
  • /ರಾಜ್ಯದಲ್ಲಿ 4,500 ಕೋಟಿ ವೆಚ್ಚದಲ್ಲಿ ಕೆಪಿಎಸ್ ಶಾಲೆಗಳ ಅಭಿವೃದ್ಧಿ: ಸಚಿವ ಮಧು ಬಂಗಾರಪ್ಪ ಭರವಸೆ

ರಾಜ್ಯದಲ್ಲಿ 4,500 ಕೋಟಿ ವೆಚ್ಚದಲ್ಲಿ ಕೆಪಿಎಸ್ ಶಾಲೆಗಳ ಅಭಿವೃದ್ಧಿ: ಸಚಿವ ಮಧು ಬಂಗಾರಪ್ಪ ಭರವಸೆ

ನಾಗನೂರು ಪಿ.ಕೆ. ಶಾಲೆಯ ಶತಮಾನೋತ್ಸವದಲ್ಲಿ ಭಾಗಿಯಾಗಿದ್ದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ರಾಜ್ಯದಲ್ಲಿ 4,500 ಕೋಟಿ ವೆಚ್ಚದಲ್ಲಿ ಕೆಪಿಎಸ್ ಶಾಲೆಗಳ ಅಭಿವೃದ್ಧಿ ಮಾಡುವುದಾಗಿ ಭರವಸೆ ನೀಡಿದರು.

Written ByYashaswini V
Published: Oct 16, 2026, 03:27 PM IST|Updated: Oct 16, 2026, 03:36 PM IST
joinshare
ರಾಜ್ಯದಲ್ಲಿ 4,500 ಕೋಟಿ ವೆಚ್ಚದಲ್ಲಿ ಕೆಪಿಎಸ್ ಶಾಲೆಗಳ ಅಭಿವೃದ್ಧಿ: ಸಚಿವ ಮಧು ಬಂಗಾರಪ್ಪ ಭರವಸೆ

About the Author

Yashaswini V

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 
Read More

Trending

  • News
  • Photos
  • Videos
ಸಿದ್ದರಾಮಯ್ಯರಿಂದ ಅಧಿಕಾರಿ ಕಿತ್ತುಕೊಳ್ಳೊಕ್ಕೆ ಸ್ಟಿಂಗ್‌ ಪ್ಲಾನ್ ಮಾಡಿದ್ದೇ ಡಿಕೆಶಿ : ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಕಿಡಿ

ಸಿದ್ದರಾಮಯ್ಯರಿಂದ ಅಧಿಕಾರಿ ಕಿತ್ತುಕೊಳ್ಳೊಕ್ಕೆ ಸ್ಟಿಂಗ್‌ ಪ್ಲಾನ್ ಮಾಡಿದ್ದೇ ಡಿಕೆಶಿ : ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಕಿಡಿ

2

Bank Holiday: ನಾಳೆ 3ನೇ ಶನಿವಾರವಾದರೂ ಬ್ಯಾಂಕ್‌ಗಳಿಗೆ ರಜೆ.. ಎಲ್ಲಿ? ಏಕೆ? ಇಲ್ಲಿದೆ ಮಹತ್ವದ ಮಾಹಿತಿ

3

‘ಸ್ಟಿಂಗ್ ಸೃಷ್ಟಿಸಿದವರನ್ನ ಬಂಧಿಸಿ, ಫಾರ್ವರ್ಡ್ ಮಾಡಿದವರನ್ನಲ್ಲ!’: ಬಸವರಾಜ ಬೊಮ್ಮಾಯಿ

4

ಆಡುಗೋಡಿ ಟೆಕ್ಕಿ ಪೂಜಾ ದತ್ತಾ ಸಾವಿನ ರಹಸ್ಯ ಬಯಲು.. ಎಫ್‌ಎಸ್‌ಎಲ್ ರಿಪೋರ್ಟ್‌ನಲ್ಲಿ ಏನಿದೆ?

5

ಅರ್ಷದೀಪ್‌ಗೆ ಗಾಯ, ಭುವಿಗೆ ಬುಲಾವ್‌! ಬೆಂಗಳೂರು ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಬದಲಾವಣೆ

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಣದ ಪಾತ್ರ ಮಹತ್ವದ್ದಾಗಿದ್ದು, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ನಮ್ಮ ಸರ್ಕಾರ ಹಲವು ಯೋಜನೆ ರೂಪಿಸಿದೆ. ಇದರಲ್ಲಿ ʻಕರ್ನಾಟಕ ಪಬ್ಲಿಕ್‌ ಶಾಲೆʼಗಳ ಸ್ಥಾಪನೆ ಕೂಡ ಒಂದು. ನಾಗನೂರು ಪಿ.ಕೆ. ಗ್ರಾಮದ ಸರ್ಕಾರಿ ಶಾಲೆಯನ್ನು ಮುಂದೆ ʻಕರ್ನಾಟಕ ಪಬ್ಲಿಕ್‌ ಶಾಲೆ (ಕೆಪಿಎಸ್‌) ಯಾಗಿ ಉನ್ನತೀಕರಿಸಲು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಘೋಷಿಸಿದರು.

ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ನಾಗನೂರು ಪಿ.ಕೆ. ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದ ಸಚಿವ ಮಧು ಬಂಗಾರಪ್ಪ, 1926ರಲ್ಲಿ ಆರಂಭವಾದ ಈ ಶಾಲೆಯಲ್ಲಿ ಮಾನ್ಯ ಸಚಿವರಾಗಿರುವ ಶ್ರೀ ಲಕ್ಷ್ಮಣ ಸವದಿ ಅವರ ತಂದೆಯೂ ವಿದ್ಯಾಭ್ಯಾಸ ಮಾಡಿದ್ದರು. ನಂತರ ಲಕ್ಷ್ಮಣ ಸವದಿ ಅವರು ಶಾಲೆಯ ಅಭಿವೃದ್ಧಿಗೆ ಹೆಚ್ಚಿನ ಕೊಡುಗೆ ನೀಡುವ ಮೂಲಕ ಇಂದು ಭವ್ಯ ಶಾಲೆಯಾಗಿ ರೂಪುಗೊಳ್ಳಲು ಕಾರಣರಾಗಿದ್ದಾರೆ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ಶಿಕ್ಷಣವೇ ಮಕ್ಕಳ ಭವಿಷ್ಯಕ್ಕೆ ಭದ್ರ ಬುನಾದಿ: 
ಹಣ ಕೊಟ್ಟು ಹಲವು ವಸ್ತುಗಳನ್ನು ಖರೀದಿಸಬಹುದು. ಆದರೆ ಶಿಕ್ಷಣವನ್ನು ಹಾಗೆ ಪಡೆಯಲು ಸಾಧ್ಯವಿಲ್ಲ. ಶಿಕ್ಷಣ ನಿರಂತರವಾಗಿ ದೊರೆಯಬೇಕು. ಅದನ್ನು ಶಿಕ್ಷಕರಿಂದ ಮಾತ್ರ ಸಮರ್ಥವಾಗಿ ನೀಡಲು ಸಾಧ್ಯ. ಮಕ್ಕಳ ಭವಿಷ್ಯವನ್ನು ರೂಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು.

ತಮ್ಮ ತಂದೆ, ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಿ ಶಾಲೆಗಳಲ್ಲಿ ಓದಿ ಉನ್ನತ ಸ್ಥಾನಕ್ಕೇರಿದ್ದಾರೆ. ಆದರೆ ತಮಗೆ ಸರ್ಕಾರಿ ಶಾಲೆಯಲ್ಲಿ ಓದುವ ಅವಕಾಶ ಸಿಗದೆ ಕಾನ್ವೆಂಟ್‌ನಲ್ಲಿ ವಿದ್ಯಾಭ್ಯಾಸ ಮಾಡಬೇಕಾಯಿತು ಎಂದು ತಿಳಿಸಿದರು.

'ನಮ್ಮ ಶಾಲೆ, ನಮ್ಮ ಜವಾಬ್ದಾರಿ' ಕಾರ್ಯಕ್ರಮ: 
ಶಿಕ್ಷಣ ಸಚಿವನಾದ ಬಳಿಕ ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ 'ನಮ್ಮ ಶಾಲೆ, ನಮ್ಮ ಜವಾಬ್ದಾರಿ' ಎಂಬ ಕಾರ್ಯಕ್ರಮವನ್ನು ಜಾರಿಗೊಳಿಸಿದ್ದೇನೆ. ಈ ಕಾರ್ಯಕ್ರಮದಡಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ಅವರು ವಿದ್ಯಾಭ್ಯಾಸ ಮಾಡಿದ ಸರ್ಕಾರಿ ಶಾಲೆಯ ಅಭಿವೃದ್ಧಿಗಾಗಿ ವೈಯಕ್ತಿಕವಾಗಿ 10 ಲಕ್ಷ ರೂಪಾಯಿ ನೀಡುವಂತೆ ಮನವಿ ಮಾಡಿದ್ದೆ. ಬಳಿಕ ಅವರ ಸಹಕಾರದಿಂದ 10 ಲಕ್ಷ ರೂಪಾಯಿ ಪಡೆದು ಅವರು ಓದಿದ ಶಾಲೆಯ ಅಭಿವೃದ್ಧಿಗೆ ಬಳಸಲಾಯಿತು ಎಂದು ವಿವರಿಸಿದರು.

ಅದೇ ರೀತಿ, ತಾವು ಕೂಡ ತಮ್ಮ ತಂದೆ ಓದಿದ ಸರ್ಕಾರಿ ಶಾಲೆಯ ಅಭಿವೃದ್ಧಿಗಾಗಿ 10 ಲಕ್ಷ ರೂಪಾಯಿ ನೀಡಿರುವುದಾಗಿ ತಿಳಿಸಿದರು.

ಶಿಕ್ಷಣ ಇಲಾಖೆಯ ಜವಾಬ್ದಾರಿ ಸವಾಲಿನದ್ದಾಗಿದ್ದರೂ, ಉತ್ತಮ ಕೆಲಸ ಮಾಡಿದರೆ ಉತ್ತಮ ಹೆಸರು ಗಳಿಸಬಹುದು ಎಂದು ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಗೆ ತಿಳಿಸಿದ್ದರು. ವಿಧಾನ ಪರಿಷತ್ತಿನಲ್ಲಿಯೂ ಶಿಕ್ಷಣ ಇಲಾಖೆಯ ವಿಚಾರಗಳಲ್ಲಿ ಸಮರ್ಥವಾಗಿ ಉತ್ತರಿಸಿದ್ದೇನೆ. ಪಕ್ಷಾತೀತವಾಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತಿದ್ದೇನೆ. ಎರಡನೇ ಬಾರಿ ಸಚಿವ ಸ್ಥಾನ ಸಿಕ್ಕಾಗ ಸಿಎಂ ಡಿ ಕೆ ಶಿವಕುಮಾರ್ ಅವರು ಕಾಲ್ ಮಾಡಿ ಬೇರೆ ಖಾತೆ ಏನಾದ್ರೂ ಬೇಕಾ ಎಂದು ಕೇಳಿದರು. ನನಗೆ ಮಕ್ಕಳ ಸೇವೆ ಮಾಡುವ ಇಲಾಖೆಯೇ ಇರಲಿ ಎಂದು ತಿಳಿಸಿದೆ ಎಂದರು.

₹4,500 ಕೋಟಿ ವೆಚ್ಚದಲ್ಲಿ ಕೆಪಿಎಸ್ ಶಾಲೆಗಳ ಅಭಿವೃದ್ಧಿ: 
ತಮ್ಮ ಇಲಾಖೆಯ ವ್ಯಾಪ್ತಿಯಲ್ಲಿ ಸುಮಾರು 1.16 ಕೋಟಿ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ ಸುಮಾರು ₹4,500 ಕೋಟಿ ವೆಚ್ಚದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ಕೆಪಿಎಸ್) ಅಭಿವೃದ್ಧಿಪಡಿಸಲಾಗುತ್ತಿದೆ. ಪೂರ್ವ ಪ್ರಾಥಮಿಕದಿಂದ ಪಿಯುಸಿ ವರೆಗೆ ಒಂದೇ ಆವರಣದಲ್ಲಿ ಶಿಕ್ಷಣ ಪಡೆಯುವ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಮೊದಲ ಹಂತದಲ್ಲಿ 1,200 ಕೆಪಿಎಸ್ ಶಾಲೆಗಳನ್ನು ಅಭಿವೃದ್ಧಿಪಡಿಸುವ ಯೋಜನೆಯಿದೆ ಎಂದು ಹೇಳಿದರು.

ಕೆಪಿಎಸ್ ಶಾಲೆಗಳಿಗೆ ಉಚಿತ ಸರ್ಕಾರಿ ಶಾಲಾ ವಾಹನ ವ್ಯವಸ್ಥೆ ಕಲ್ಪಿಸುವ ಉದ್ದೇಶವಿದೆ. ರಾಜ್ಯದಲ್ಲಿ ದ್ವಿಭಾಷಾ ನೀತಿಯನ್ನು ಜಾರಿಗೆ ತರಲಾಗಿದೆ. ಈಗಾಗಲೇ 13,500 ಶಿಕ್ಷಕರ ನೇಮಕಾತಿ ಮಾಡಲಾಗಿದ್ದು, ಹೆಚ್ಚುವರಿಯಾಗಿ 17,500 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿಸಿದರು.

ಅಜೀಂ ಪ್ರೇಮ್‌ಜಿ ಫೌಂಡೇಶನ್ ಸರ್ಕಾರಿ ಶಾಲೆಗಳ ಮಕ್ಕಳಿಗೆ ಮೊಟ್ಟೆ ವಿತರಣೆಗಾಗಿ ₹1,591 ಕೋಟಿ ನೀಡುತ್ತಿದೆ. ಮುಂದಿನ ವರ್ಷದಿಂದ ಪಿಯುಸಿ ವರೆಗಿನ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕಗಳ ಜೊತೆಗೆ ಉಚಿತ ನೋಟ್‌ಬುಕ್‌ಗಳನ್ನೂ ವಿತರಿಸಲು ಉದ್ದೇಶಿಸಲಾಗಿದೆ. ಮಕ್ಕಳ ಶಿಕ್ಷಣಕ್ಕಾಗಿ ಪೋಷಕರ ಮೇಲೆ ಆರ್ಥಿಕ ಹೊರೆ ಬೀಳಬಾರದು ಎಂಬುದೇ ಈ ಯೋಜನೆಗಳ ಉದ್ದೇಶ ಎಂದು ಹೇಳಿದರು.

ಬಂಗಾರಪ್ಪ ಅವರ ಜನಪರ ಯೋಜನೆಗಳ ಸ್ಮರಣೆ: 
ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಅಭಿಮಾನಿಗಳು ರಾಜ್ಯಾದ್ಯಂತ ಇದ್ದಾರೆ. 1990ರಲ್ಲಿ ಅವರು ಜಾರಿಗೆ ತಂದ ಉಚಿತ ವಿದ್ಯುತ್ ಪಂಪ್‌ಸೆಟ್ ಯೋಜನೆಯಿಂದ ರೈತರಿಗೆ ಅನುಕೂಲವಾಯಿತು. ದೇವಸ್ಥಾನಗಳ ಅಭಿವೃದ್ಧಿಗಾಗಿ ಆರಾಧನಾ ಯೋಜನೆ ಹಾಗೂ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸುವ ಉದ್ದೇಶದ ಅಕ್ಷರ ಯೋಜನೆಯನ್ನೂ ಜಾರಿಗೆ ತಂದಿದ್ದರು ಎಂದು ಸ್ಮರಿಸಿದರು.

ಅಕ್ಷರ ಯೋಜನೆಯಡಿ ಸರ್ಕಾರಿ ಶಾಲೆಗಳಲ್ಲಿ ಓದುವ ಪ್ರತಿ ಮಗುವಿಗೂ ಅಂದಿನ ಕಾಲದಲ್ಲಿ ದಿನಕ್ಕೆ ಒಂದು ರೂಪಾಯಿ ನೀಡಲಾಗುತ್ತಿತ್ತು. ಬಂಗಾರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಾಗಿತ್ತು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಾಲೆಯ ಶತಮಾನೋತ್ಸವದ ಅಂಗವಾಗಿ ಶಾಲೆಯ ಇತಿಹಾಸ, ಶೈಕ್ಷಣಿಕ ಸಾಧನೆ ಹಾಗೂ ಅಭಿವೃದ್ಧಿಯ ಪಯಣವನ್ನು ಸ್ಮರಿಸಲಾಯಿತು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವ ಮೂಲಕ ಗ್ರಾಮಗಳ ಅಭಿವೃದ್ಧಿಗೆ ಪೋಷಕರು ಸಹಕರಿಸಬೇಕು ಎಂದು ಸಚಿವರು ಕರೆ ನೀಡಿದರು.

ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಹಕಾರಿ ಸಚಿವ ಲಕ್ಷ್ಮಣ ಸವದಿ, ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ,  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಧಾರವಾಡದ ಅಪರ ಆಯುಕ್ತರಾದ ಈಶ್ವರ ಉಳ್ಳಾಗಡ್ಡಿ, ಅಥಣಿ ತಹಶೀಲ್ದಾರರಾದ ಸಿದ್ರಾಮ ಬೋಸಗಿ ( ಅಥಣಿ), ಉಪ ವಿಭಾಗಾಧಿಕಾರಿ ಸುಭಾಸ ಸಂಪಗಾವಿ, ಎಸ್‌ಡಿಎಂಸಿ ಅಧ್ಯಕ್ಷರಾದ ಕಾಶಿನಾಥ ಸವದಿ ಉಪಸ್ಥಿತರಿದ್ದರು.

 

Add Zee News as a Preferred Source
TAGS:
Education