• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಹುಬ್ಬಳ್ಳಿ ಧಾರವಾಡ
  • /ಕಲಬುರಗಿಯಲ್ಲಿ ವಿಮಾನ ತುರ್ತು ಭೂಸ್ಪರ್ಶ! ತಪ್ಪಿದ ಭಾರೀ ದುರಂತ

ಕಲಬುರಗಿಯಲ್ಲಿ ವಿಮಾನ ತುರ್ತು ಭೂಸ್ಪರ್ಶ! ತಪ್ಪಿದ ಭಾರೀ ದುರಂತ

ವಿಮಾನದಲ್ಲಿ ಏಕಾಏಕಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದೆ ಇದನ್ನು ಅರಿತ ಸಿಬ್ಬಂದಿ ತಕ್ಷಣವೇ ವಿಮಾನವನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ.

Written ByChetana Devarmani
Published: Oct 06, 2026, 09:25 PM IST|Updated: Oct 06, 2026, 09:27 PM IST
joinshare
ಕಲಬುರಗಿಯಲ್ಲಿ ವಿಮಾನ ತುರ್ತು ಭೂಸ್ಪರ್ಶ! ತಪ್ಪಿದ ಭಾರೀ ದುರಂತ

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

Trending

  • News
  • Photos
  • Videos
ದಳಪತಿ ವಿಜಯ್‌ ಮನೆ ಸೊಸೆಯಾಗ ಬೇಕಿತ್ತು ಈ ಚೆಲುವೆ.. ಆದ್ರೆ! ಫಸ್ಟ್‌ ಲವ್‌ ಬಗ್ಗೆ ಜೇಸನ್ ಸಂಜಯ್ ಮುಕ್ತ ಮಾತು

ದಳಪತಿ ವಿಜಯ್‌ ಮನೆ ಸೊಸೆಯಾಗ ಬೇಕಿತ್ತು ಈ ಚೆಲುವೆ.. ಆದ್ರೆ! ಫಸ್ಟ್‌ ಲವ್‌ ಬಗ್ಗೆ ಜೇಸನ್ ಸಂಜಯ್ ಮುಕ್ತ ಮಾತು

2

ಮಂಡ್ಯದಲ್ಲಿ ಹೃದಯಾಘಾತದಿಂದ ಕೃಷಿ ಅಧಿಕಾರಿ ಸಾ*

3

ಕಲಬುರಗಿಯಲ್ಲಿ ವಿಮಾನ ತುರ್ತು ಭೂಸ್ಪರ್ಶ! ತಪ್ಪಿದ ಭಾರೀ ದುರಂತ

4

EPS ಪಿಂಚಣಿದಾರರಿಗೆ ಗುಡ್‌ನ್ಯೂಸ್: ವೇತನ ಮಿತಿ ₹25,000ಕ್ಕೆ ಏರಿಕೆ; ಪಿಂಚಣಿ ಎಷ್ಟು ಹೆಚ್ಚಾಗಬಹುದು?

5

"ನನ್ನ ಕಿಡ್ನಿ ಫೇಲ್ ಆಗಿದೆ, ಮೆದುಳಲ್ಲ!": ಪಿತೃಪಕ್ಷದ ನಂತರ ರಾಜ್ಯಾದ್ಯಂತ ಹೆಚ್.ಡಿ.ಡಿ ಸಕ್ರಿಯ ಪ್ರವಾಸ

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಕಲಬುರಗಿ: ಇಂದು ಕಲಬುರಗಿಯಲ್ಲಿ ಬಹುದೊಡ್ಡ ಗುರಂತವೊಂದು ಕೂದಲೆಳೆ ಅಂತರದಲ್ಲೇ ತಪ್ಪಿದೆ. ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆ ತರಬೇತಿ ವಿಮಾನವೊಂದು ತುರ್ತು ಭೂಸ್ಪರ್ಶ ಮಾಡಿದೆ. ಈ ಘಟನೆ ಕಲಬುರಗಿಯ ವಿಮಾನ ನಿಲ್ದಾಣದ ಸಮೀಪವೇ ನಡೆದಿದೆ. ವಿಮಾನದಲ್ಲಿದ್ದ ಇಬ್ಬರು ಸಿಬ್ಬಂದಿ ಬಹುದೊಡ್ಡ ಅಪಾಯದಿಂದ ಪಾರಾಗಿದ್ದಾರೆ. ತಾಂತ್ರಿಕ ದೋಷ ಕಂಡ ಕೂಡಲೇ ಸಮಯಪ್ರಜ್ಞೆ ಮೆರೆದ ಸಿಬ್ಬಂದಿ ವಿಮಾನವನ್ನು ನಿಯಂತ್ರಿಸಿ ರೈತರ ತೊಗರಿ ಹೊಲದಲ್ಲಿ ಸುರಕ್ಷಿತವಾಗಿ ಇಳಿಸಿದ್ದಾರೆ. ಕಲಬುರಗಿ ನಗರದ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಇದರಿಂದಾಗಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ತರಬೇತಿ ಹಾರಾಟದಲ್ಲಿದ್ದ ವಿಮಾನದಲ್ಲಿ ಏಕಾಏಕಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದೆ ಇದನ್ನು ಅರಿತ ಸಿಬ್ಬಂದಿ ತಕ್ಷಣವೇ ವಿಮಾನವನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ. ವಿಮಾನವನ್ನು ಮತ್ತೆ ವಿಮಾನ ನಿಲ್ದಾಣಕ್ಕೆ ಕೊಂಡೊಯ್ಯುವುದು ಅಪಾಯಕಾರಿಯಾಗಬಹುದು ಎಂಬ ಹಿನ್ನೆಲೆಯಲ್ಲಿ ಸಮೀಪದಲ್ಲಿದ್ದ ಕೃಷಿ ಜಮೀನಿನಲ್ಲಿ ತುರ್ತು ಭೂಸ್ಪರ್ಶ ಮಾಡಲು ನಿರ್ಧರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ತೊಗರಿ ಬೆಳೆದಿದ್ದ ಜಮೀನಿನಲ್ಲೇ ವಿಮಾನ ತುರ್ತು ಭೂಸ್ಪರ್ಷವಾಗಿದೆ. ಅದೃಷ್ಟವಶಾತ್ ಯಾವುದೇ ದೊಡ್ಡ ಅನಾಹುತ ಸಂಭವಿಸಿಲ್ಲ. ವಿಮಾನದಲ್ಲಿದ್ದ ಇಬ್ಬರು ಸಿಬ್ಬಂದಿ ಸುರಕ್ಷಿತವಾಗಿದ್ದು, ಘಟನೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ವಿಮಾನ ನಿಲ್ದಾಣದ ಸಮೀಪದಲ್ಲೇ ಘಟನೆ ನಡೆದಿರುವುದರಿಂದ ಸ್ಥಳೀಯರಲ್ಲಿ ಕೆಲಕಾಲ ಆತಂಕ ಮನೆಮಾಡಿತ್ತು. ವಿಮಾನವು ಹೊಲದಲ್ಲಿ ಇಳಿದಿರುವ ಸುದ್ದಿ ಹರಡುತ್ತಿದ್ದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ಸಾರ್ವಜನಿಕರು ಸ್ಥಳದತ್ತ ಆಗಮಿಸಿದರು. ಘಟನೆಯ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು.

ಪ್ರಾಥಮಿಕ ಮಾಹಿತಿಯ ಪ್ರಕಾರ, ವಿಮಾನದಲ್ಲಿ ಕಾಣಿಸಿಕೊಂಡಿರುವ ತಾಂತ್ರಿಕ ದೋಷವೇ ತುರ್ತು ಭೂಸ್ಪರ್ಶಕ್ಕೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ ನಿಖರವಾಗಿ ಯಾವ ತಾಂತ್ರಿಕ ಸಮಸ್ಯೆ ಉಂಟಾಗಿತ್ತು ಎಂಬುದು ಸಂಬಂಧಪಟ್ಟ ಅಧಿಕಾರಿಗಳ ಪರಿಶೀಲನೆ ಹಾಗೂ ತಾಂತ್ರಿಕ ತಜ್ಞರ ತನಿಖೆಯ ಬಳಿಕವೇ ಸ್ಪಷ್ಟವಾಗಬೇಕಿದೆ.

ವಿಮಾನವನ್ನು ಸುರಕ್ಷಿತವಾಗಿ ಹೊಲದಲ್ಲಿ ಇಳಿಸಿದ ಸಿಬ್ಬಂದಿಯ ಸಮಯಪ್ರಜ್ಞೆ ಮತ್ತು ಪರಿಸ್ಥಿತಿಯನ್ನು ನಿಭಾಯಿಸಿದ ರೀತಿಯಿಂದಾಗಿ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದಂತಾಗಿದೆ. ವಿಮಾನವನ್ನು ಜನವಸತಿ ಪ್ರದೇಶ ಅಥವಾ ಕಟ್ಟಡಗಳಿರುವ ಪ್ರದೇಶದಲ್ಲಿ ಇಳಿಸುವ ಬದಲು ಕೃಷಿ ಜಮೀನಿನಲ್ಲಿ ತುರ್ತು ಲ್ಯಾಂಡಿಂಗ್ ಮಾಡಿರುವುದು ಸ್ಥಳೀಯರ ಗಮನ ಸೆಳೆದಿದೆ.

ಘಟನೆಯ ಬಳಿಕ ಪೊಲೀಸರು ಸ್ಥಳದಲ್ಲಿ ಭದ್ರತೆ ಕೈಗೊಂಡಿದ್ದು, ವಿಮಾನದ ಸುತ್ತ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವುದನ್ನು ನಿಯಂತ್ರಿಸಿದರು. ವಿಮಾನಕ್ಕೆ ಯಾವುದೇ ದೊಡ್ಡ ಪ್ರಮಾಣದ ಹಾನಿಯಾಗಿದೆಯೇ, ತಾಂತ್ರಿಕ ದೋಷದ ಸ್ವರೂಪವೇನು ಮತ್ತು ಹಾರಾಟದ ವೇಳೆ ನಿಖರವಾಗಿ ಏನಾಯಿತು ಎಂಬುದರ ಕುರಿತು ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.

ತರಬೇತಿ ವಿಮಾನವಾಗಿರುವ ಹಿನ್ನೆಲೆಯಲ್ಲಿ ಅದರ ಹಾರಾಟಕ್ಕೆ ಸಂಬಂಧಿಸಿದ ದಾಖಲೆಗಳು, ತಾಂತ್ರಿಕ ಸ್ಥಿತಿ ಹಾಗೂ ತುರ್ತು ಲ್ಯಾಂಡಿಂಗ್‌ಗೆ ಕಾರಣವಾದ ಅಂಶಗಳ ಕುರಿತು ಕೂಡ ಪರಿಶೀಲನೆ ನಡೆಯುವ ಸಾಧ್ಯತೆಯಿದೆ. ಘಟನೆಗೆ ಸಂಬಂಧಿಸಿದಂತೆ ಅಧಿಕೃತ ತನಿಖೆಯ ಬಳಿಕವೇ ಸಂಪೂರ್ಣ ಚಿತ್ರಣ ಹೊರಬರಲಿದೆ. ಕಲಬುರಗಿಯಲ್ಲಿ ತಾಂತ್ರಿಕ ದೋಷದ ಶಂಕೆಯಿಂದ ತರಬೇತಿ ವಿಮಾನ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ಆತಂಕಕ್ಕೆ ಕಾರಣವಾದರೂ, ವಿಮಾನದಲ್ಲಿದ್ದ ಇಬ್ಬರು ಸಿಬ್ಬಂದಿ ಸುರಕ್ಷಿತವಾಗಿ ಪಾರಾಗಿರುವುದು ಸಮಾಧಾನದ ಸಂಗತಿಯಾಗಿದೆ. ಸಮಯಪ್ರಜ್ಞೆಯಿಂದ ಕೈಗೊಂಡ ತುರ್ತು ಕ್ರಮದಿಂದಾಗಿ ದೊಡ್ಡ ಮಟ್ಟದ ದುರಂತವೊಂದು ತಪ್ಪಿದಂತಾಗಿದೆ.
 

Add Zee News as a Preferred Source
TAGS:
Kannada News