• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಹುಬ್ಬಳ್ಳಿ ಧಾರವಾಡ
  • /20 ವರ್ಷಗಳ ಆಸ್ತಿ ಜಗಳಕ್ಕೆ ತಾಯಿ-ಮಗ ಬಲಿ! ಮಾರಕಾಸ್ತ್ರಗಳಿಂದ ಬರ್ಬರ ಹ*ತ್ಯೆಗೈದ ದುಷ್ಕರ್ಮಿಗಳು!

20 ವರ್ಷಗಳ ಆಸ್ತಿ ಜಗಳಕ್ಕೆ ತಾಯಿ-ಮಗ ಬಲಿ! ಮಾರಕಾಸ್ತ್ರಗಳಿಂದ ಬರ್ಬರ ಹ*ತ್ಯೆಗೈದ ದುಷ್ಕರ್ಮಿಗಳು!

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕುಸನೂರು ಗ್ರಾಮದಲ್ಲಿ 20 ವರ್ಷಗಳ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ತಾಯಿ ಮತ್ತು ಮಗನನ್ನ ಬರ್ಬರವಾಗಿ ಹ*ತ್ಯೆ ಮಾಡಲಾಗಿದೆ. ನ್ಯಾಯಾಲಯದ ತೀರ್ಪಿನ ಬೆನ್ನಲ್ಲೇ ನಡೆದ ಈ ಜೋಡಿ ಕೊ*ಲೆ ಪ್ರಕರಣ ಗ್ರಾಮದಲ್ಲಿ ಆತಂಕ ಮೂಡಿಸಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Written ByPuttaraj K Alur
Published: Sep 25, 2026, 09:47 PM IST|Updated: Sep 25, 2026, 09:49 PM IST
joinshare
20 ವರ್ಷಗಳ ಆಸ್ತಿ ಜಗಳಕ್ಕೆ ತಾಯಿ-ಮಗ ಬಲಿ! ಮಾರಕಾಸ್ತ್ರಗಳಿಂದ ಬರ್ಬರ ಹ*ತ್ಯೆಗೈದ ದುಷ್ಕರ್ಮಿಗಳು!
Image Credit: Haveri Double Murder

About the Author

Puttaraj K Alur

Puttaraj K Alur

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 
Read More

Trending

  • News
  • Photos
  • Videos
ನಾವೂ ಯಾರಿಗೂ ಜೀವ ಬೆದರಿಕೆ‌ ಹಾಕಿಲ್ಲ: ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ

ನಾವೂ ಯಾರಿಗೂ ಜೀವ ಬೆದರಿಕೆ‌ ಹಾಕಿಲ್ಲ: ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ

2

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

3

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

4

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

5

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Haveri Double Murder Case: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ಬಂದ ಬೆನ್ನಲ್ಲೇ ತಾಯಿ ಮತ್ತು ಮಗನನ್ನ ಬರ್ಬರವಾಗಿ ಹ*ತ್ಯೆ ಮಾಡಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕುಸನೂರು ಗ್ರಾಮದಲ್ಲಿ ನಡೆದಿದೆ. ಸುಮಾರು 20 ವರ್ಷಗಳಿಂದ ನಡೆಯುತ್ತಿದ್ದ ಮನೆ ಮತ್ತು ಜಾಗದ ವಿವಾದ ಕೊಲೆಯಲ್ಲಿ ಅಂತ್ಯವಾಗಿದ್ದು, ಹಾಡಹಗಲೇ ನಡೆದಿರುವ ಈ ಭೀಕರ ಘಟನೆ ಇಡೀ ಗ್ರಾಮವನ್ನೇ ಬೆಚ್ಚಿಬೀಳಿಸಿದೆ.

ಮೃತರನ್ನ 55 ವರ್ಷದ ಪ್ರೇಮಾ ಬಡಿಗೇರ ಹಾಗೂ ಅವರ ಪುತ್ರ ಅವಿನಾಶ್ ಬಡಿಗೇರ (38) ಎಂದು ಗುರುತಿಸಲಾಗಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ತಿರಕಯ್ಯ ಹೀರೆಮಠ ಹಾಗೂ ಬಸವರಾಜ್ ಹೊಸಮಠ ಎಂಬುವವರ ವಿರುದ್ಧ ಕೊ*ಲೆ ಆರೋಪ ಕೇಳಿಬಂದಿದೆ. ನ್ಯಾಯಾಲಯದ ತೀರ್ಪಿನ ಬಳಿಕ ಉಂಟಾದ ಜಗಳ ವಿಕೋಪಕ್ಕೆ ತಿರುಗಿ ತಾಯಿ-ಮಗನ ಜೀವಕ್ಕೆ ಕುತ್ತು ತಂದಿದೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

20 ವರ್ಷಗಳ ಆಸ್ತಿ ವಿವಾದವೇ ಕೊ*ಲೆಗೆ ಕಾರಣ?

ಕುಸನೂರು ಗ್ರಾಮದಲ್ಲಿ ನಡೆದಿರುವ ಈ ಡಬಲ್ ಮರ್ಡರ್ ಹಿಂದೆ ಸುಮಾರು ಎರಡು ದಶಕಗಳಷ್ಟು ಹಳೆಯ ಆಸ್ತಿ ವಿವಾದವಿದೆ ಎಂದು ತಿಳಿದುಬಂದಿದೆ. ಪ್ರೇಮಾ ಬಡಿಗೇರ ಅವರಿಗೆ ಸೇರಿದ ಮನೆ ಮತ್ತು ಖಾಲಿ ಜಾಗವನ್ನ ಆರೋಪಿಗಳ ಕುಟುಂಬ ಸುಮಾರು 20 ವರ್ಷಗಳ ಹಿಂದೆ ಖರೀದಿಸಿತ್ತು ಎನ್ನಲಾಗಿದೆ. ಆದರೆ ಆಸ್ತಿ ಖರೀದಿಸಿದ ಬಳಿಕ ಹಣದ ವ್ಯವಹಾರ ಹಾಗೂ ಆಸ್ತಿಯ ಮಾಲೀಕತ್ವಕ್ಕೆ ಸಂಬಂಧಿಸಿದಂತೆ ಎರಡೂ ಕುಟುಂಬಗಳ ನಡುವೆ ವಿವಾದ ಆರಂಭವಾಗಿತ್ತು. ಖರೀದಿಯ ನಂತರವೂ ಆಸ್ತಿ ಆರೋಪಿಗಳ ಹೆಸರಿಗೆ ವರ್ಗಾವಣೆಯಾಗಿರಲಿಲ್ಲ ಎನ್ನಲಾಗಿದ್ದು, ಇದೇ ವಿಚಾರವಾಗಿ ಎರಡೂ ಕಡೆಯವರ ನಡುವೆ ಮನಸ್ತಾಪ ಮುಂದುವರಿದಿತ್ತು.

ವಿವಾದವನ್ನ ಬಗೆಹರಿಸಲು ಗ್ರಾಮದಲ್ಲಿ ಹಲವು ಬಾರಿ ರಾಜಿ ಪಂಚಾಯಿತಿಗಳನ್ನ ನಡೆಸಲಾಗಿತ್ತು. ಆದರೂ ಸಮಸ್ಯೆ ಇತ್ಯರ್ಥವಾಗದ ಹಿನ್ನೆಲೆಯಲ್ಲಿ ಎರಡೂ ಕುಟುಂಬಗಳು ನ್ಯಾಯಾಲಯದ ಮೊರೆ ಹೋಗಿದ್ದವು. ಸುಮಾರು 20 ವರ್ಷಗಳಿಂದ ಕಾನೂನು ಹೋರಾಟ ನಡೆಯುತ್ತಿತ್ತು. ಈ ನಡುವೆ ಪ್ರೇಮಾ ಬಡಿಗೇರ ಅವರು ನ್ಯಾಯಾಲಯದ ಮೂಲಕ ಮನೆ ಮತ್ತು ಜಾಗವನ್ನ ಮರಳಿ ತಮ್ಮ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದರು ಎಂದು ತಿಳಿದುಬಂದಿದೆ.

ಕೋರ್ಟ್ ತೀರ್ಪಿನ ಬೆನ್ನಲ್ಲೇ ನಡೆದಿದ್ದೇನು?

ಈ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 25ರಂದು ನ್ಯಾಯಾಲಯದಲ್ಲಿ ತೀರ್ಪು ಪ್ರಕಟವಾಗಿತ್ತು. ಪ್ರೇಮಾ ಬಡಿಗೇರ ಹಾಗೂ ಅವರ ಪುತ್ರ ಅವಿನಾಶ್ ಪರವಾಗಿ ತೀರ್ಪು ಬಂದಿತ್ತು ಎನ್ನಲಾಗಿದೆ. ಇದರಿಂದ ಮನೆ ಮತ್ತು ಜಾಗವನ್ನ ಮರಳಿ ಪಡೆಯುವ ಪ್ರಕ್ರಿಯೆಗೆ ಮುಂದಾಗಿದ್ದರು. ತೀರ್ಪಿನ ಬಳಿಕ ಮಲಗುಂದ ಕ್ರಾಸ್ ಬಳಿ ಎರಡೂ ಕಡೆಯವರ ನಡುವೆ ಜಗಳ ನಡೆದಿತ್ತು ಎಂದು ವರದಿಯಾಗಿದೆ. ನಂತರ ನ್ಯಾಯಾಲಯದ ತೀರ್ಪಿನಂತೆ ಮನೆ ಖಾಲಿ ಮಾಡಿಸುವ ಉದ್ದೇಶದಿಂದ ಪ್ರೇಮಾ ಮತ್ತು ಅವಿನಾಶ್ ಕುಸನೂರು ಗ್ರಾಮಕ್ಕೆ ಬಂದಿದ್ದರು.

ಈ ವೇಳೆ ಮತ್ತೆ ಎರಡೂ ಕುಟುಂಬಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಆರಂಭದಲ್ಲಿ ಮಾತಿನ ವಾಗ್ವಾದವಾಗಿ ಶುರುವಾದ ಜಗಳ ಕ್ಷಣಾರ್ಧದಲ್ಲೇ ವಿಕೋಪಕ್ಕೆ ತಿರುಗಿದೆ ಎನ್ನಲಾಗಿದೆ. ಆರೋಪಿಗಳಾದ ತಿರಕಯ್ಯ ಹೀರೆಮಠ ಹಾಗೂ ಬಸವರಾಜ್ ಹೊಸಮಠ ತಾಯಿ ಮತ್ತು ಮಗನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಲ್ಲಿನಿಂದ ಜಜ್ಜಿ ಇಬ್ಬರನ್ನೂ ಬರ್ಬರವಾಗಿ ಹ*ತ್ಯೆ ಮಾಡಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.

ಮೃತದೇಹಗಳ ಮುಂದೆಯೇ ಊಟ ಮಾಡಿದ ಆರೋಪ!

ಈ ಪ್ರಕರಣದಲ್ಲಿ ಮತ್ತಷ್ಟು ಆಘಾತಕಾರಿ ಸಂಗತಿಯೊಂದು ಬೆಳಕಿಗೆ ಬಂದಿದೆ. ತಾಯಿ ಮತ್ತು ಮಗನನ್ನ ಹ*ತ್ಯೆ ಮಾಡಿದ ಬಳಿಕ ಆರೋಪಿಗಳು ಮೃತದೇಹಗಳ ಮುಂದೆಯೇ ಕುಳಿತು ಊಟ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕೊ*ಲೆ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಹಾಡುಹಗಲೇ ನಡೆದ ಈ ಭೀಕರ ಕೃತ್ಯದಿಂದ ಕುಸನೂರು ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಆಸ್ತಿ ವಿಚಾರವಾಗಿ ಹಲವು ವರ್ಷಗಳಿಂದ ನಡೆಯುತ್ತಿದ್ದ ವಿವಾದ ಕೊನೆಗೆ ಎರಡು ಜೀವಗಳನ್ನ ಬಲಿ ಪಡೆದಿರುವುದು ಸ್ಥಳೀಯರಲ್ಲಿ ಆಘಾತ ಮೂಡಿಸಿದೆ. ಆದರೆ ಆರೋಪಿಗಳ ವಿರುದ್ಧ ಕೇಳಿಬಂದಿರುವ ಆರೋಪಗಳು ತನಿಖೆಯ ಹಂತದಲ್ಲಿದ್ದು, ಘಟನೆಯ ಸಂಪೂರ್ಣ ವಿವರಗಳು ಪೊಲೀಸ್ ತನಿಖೆಯ ಬಳಿಕವೇ ಸ್ಪಷ್ಟವಾಗಬೇಕಿದೆ.

ಕೆಇಬಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರೇಮಾ, ಫೋಟೋಗ್ರಾಫರ್ ಆಗಿದ್ದ ಅವಿನಾಶ್

ಮೃತ ಪ್ರೇಮಾ ಬಡಿಗೇರ ಅವರು ಕೆಇಬಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಅವರ ಪುತ್ರ ಅವಿನಾಶ್ ಬಡಿಗೇರ ಫೋಟೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದರು. ಇಬ್ಬರೂ ಶಿರಸಿ ಪಟ್ಟಣದಲ್ಲಿ ವಾಸವಾಗಿದ್ದರು ಎನ್ನಲಾಗಿದೆ. ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ತಮ್ಮ ಪರವಾಗಿ ಬಂದ ಹಿನ್ನೆಲೆಯಲ್ಲಿ ಮನೆ ಮತ್ತು ಜಾಗದ ವಿಚಾರವಾಗಿ ಕುಸನೂರು ಗ್ರಾಮಕ್ಕೆ ಬಂದಿದ್ದ ತಾಯಿ-ಮಗ ಕೊ*ಲೆಯಾಗಿರುವುದು ಕುಟುಂಬಸ್ಥರು ಮತ್ತು ಗ್ರಾಮಸ್ಥರಲ್ಲಿ ದುಃಖ ಮೂಡಿಸಿದೆ.

ಸ್ಥಳಕ್ಕೆ ಪೊಲೀಸರ ಭೇಟಿ, ಆರೋಪಿಗಳಿಗಾಗಿ ಶೋಧ

ಘಟನೆ ನಡೆದ ಕೂಡಲೇ ಆಡೂರು ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊ*ಲೆ ನಡೆದ ಸ್ಥಳದಿಂದ ಸಾಕ್ಷ್ಯಗಳನ್ನ ಸಂಗ್ರಹಿಸುವ ಕಾರ್ಯ ಕೈಗೊಳ್ಳಲಾಗಿದೆ. ಕೊ*ಲೆಗೆ ಬಳಸಲಾಗಿದೆ ಎನ್ನಲಾದ ಕಲ್ಲು ಸೇರಿದಂತೆ ಇತರ ಸಾಕ್ಷ್ಯಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳು ಘಟನೆ ಬಳಿಕ ಪರಾರಿಯಾಗಿರುವ ಹಿನ್ನೆಲೆಯಲ್ಲಿ ಅವರ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಆಸ್ತಿ ವಿವಾದದ ಹಿನ್ನೆಲೆ, ನ್ಯಾಯಾಲಯದ ತೀರ್ಪಿನ ನಂತರ ನಡೆದ ಘಟನೆಗಳು, ಕೊ*ಲೆಗೆ ಬಳಸಲಾದ ಆಯುಧಗಳು ಹಾಗೂ ಆರೋಪಿಗಳ ಪಾತ್ರದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಒಟ್ನಲ್ಲಿ ಹಾವೇರಿ ಜಿಲ್ಲೆಯ ಕುಸನೂರು ಗ್ರಾಮದಲ್ಲಿ ನಡೆದಿರುವ ಈ ದುರಂತವು ಸುಮಾರು 20 ವರ್ಷಗಳ ಆಸ್ತಿ ವಿವಾದದ ಭೀಕರ ಪರಿಣಾಮವನ್ನ ತೋರಿಸಿದೆ. ನ್ಯಾಯಾಲಯದ ತೀರ್ಪಿನ ಬಳಿಕ ವಿವಾದಕ್ಕೆ ಕಾನೂನುಬದ್ಧ ಪರಿಹಾರ ದೊರೆಯುವ ನಿರೀಕ್ಷೆಯಿದ್ದ ಸಂದರ್ಭದಲ್ಲಿ ತಾಯಿ-ಮಗನ ಹ*ತ್ಯೆಯಾಗಿರುವುದು ಆಘಾತಕಾರಿ ಬೆಳವಣಿಗೆಯಾಗಿದೆ. ಆರೋಪಿಗಳ ಬಂಧನ ಮತ್ತು ಪೊಲೀಸ್ ತನಿಖೆಯ ನಂತರ ಪ್ರಕರಣದ ಸಂಪೂರ್ಣ ಸತ್ಯಾಂಶ ಹೊರಬರಬೇಕಿದೆ.

Add Zee News as a Preferred Source
TAGS:
Kannada News
Crime