• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಹುಬ್ಬಳ್ಳಿ ಧಾರವಾಡ
  • /ಕಬ್ಬಿಗೆ ₹3,600 ಬೆಲೆಗೆ ಆಗ್ರಹ: ಹಾವೇರಿಯಲ್ಲಿ ರಸ್ತೆ ತಡೆದು ರೈತರ ಆಕ್ರೋಶ, ನಿಷೇಧಾಜ್ಞೆ ಜಾರಿ!

ಕಬ್ಬಿಗೆ ₹3,600 ಬೆಲೆಗೆ ಆಗ್ರಹ: ಹಾವೇರಿಯಲ್ಲಿ ರಸ್ತೆ ತಡೆದು ರೈತರ ಆಕ್ರೋಶ, ನಿಷೇಧಾಜ್ಞೆ ಜಾರಿ!

ಹಾವೇರಿಯಲ್ಲಿ ಕಬ್ಬಿಗೆ ಪ್ರತಿ ಟನ್‌ಗೆ ₹3,600 ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟ ತೀವ್ರಗೊಂಡಿದೆ. ಸಚಿವ ರುದ್ರಪ್ಪ ಲಮಾಣಿ ನಿವಾಸದ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಮುತ್ತಿಗೆ ಹಾಕಲು ಯತ್ನಿಸಿದ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮತ್ತೊಂದೆಡೆ, ಬಂಕಾಪುರ ಟೋಲ್ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು ರೈತರು ಪ್ರತಿಭಟನೆ ನಡೆಸಿದ್ದರಿಂದ ಸಂಚಾರ ಅಸ್ತವ್ಯಸ್ತಗೊಂಡಿದೆ.. ಹೆಚ್ಚಿನ ಮಾಹಿತಿ ಇಲ್ಲಿದೆ..

Written ByKrishna NK
Published: Nov 18, 2026, 17:47 IST|Updated: Nov 18, 2026, 17:49 IST
joinshare
ಕಬ್ಬಿಗೆ ₹3,600 ಬೆಲೆಗೆ ಆಗ್ರಹ: ಹಾವೇರಿಯಲ್ಲಿ ರಸ್ತೆ ತಡೆದು ರೈತರ ಆಕ್ರೋಶ, ನಿಷೇಧಾಜ್ಞೆ ಜಾರಿ!
Image Credit: Farmers protest

About the Author

Krishna NK

Krishna NK

ಕೃಷ್ಣಕುಮಾರ್‌ ಎನ್‌.ಕೆ. (Krishna Kumar NK) 'ಜೀ ಕನ್ನಡ ನ್ಯೂಸ್‌' ಜಾಲತಾಣದ ಉಪ ಸಂಪಾದಕರಾಗಿ 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೂ ಮೊದಲು ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ "ಜೀ ನ್ಯೂಸ್‌ ಕನ್ನಡ" ವೆಬ್‌ ಸೈಟ್‌ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಹಾವೇರಿ : ಕಬ್ಬಿಗೆ ಸೂಕ್ತ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ಹಾವೇರಿಯಲ್ಲಿ ಕಬ್ಬು ಬೆಳೆಗಾರರು ರಣಕಹಳೆ ಮೊಳಗಿಸಿದ್ದಾರೆ. ಪ್ರತಿ ಟನ್ ಕಬ್ಬಿಗೆ 3,600 ರೂಪಾಯಿ ದರ ನಿಗದಿ ಮಾಡಲೇಬೇಕು ಅಂತ ಪಟ್ಟು ಹಿಡಿದಿರುವ ರೈತರು, ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ಮನೆ ಮುಂದೆ ಅಹೋರಾತ್ರಿ ಧರಣಿಗೆ ಸಜ್ಜಾಗಿದ್ದಾರೆ. ಆದ್ರೆ ರೈತರ ಹೋರಾಟಕ್ಕೆ ಜಿಲ್ಲಾಡಳಿತ ಬ್ರೇಕ್ ಹಾಕಿದ್ದು, ಸಚಿವರ ನಿವಾಸದ ಸುತ್ತ 250 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದೆ.

ಇಷ್ಟಾದರೂ ರೈತರ ಆಕ್ರೋಶ ಮಾತ್ರ ತಣ್ಣಗಾಗಿಲ್ಲ. ಸಚಿವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮತ್ತೊಂದೆಡೆ ಬಂಕಾಪುರ ಟೋಲ್ ಬಳಿ ರಾಷ್ಟ್ರೀಯ ಹೆದ್ದಾರಿಯನ್ನೇ ಬಂದ್ ಮಾಡಿ ರೈತರು ಆಕ್ರೋಶ ಹೊರಹಾಕಿದ್ದಾರೆ. ಹಾವೇರಿಯಲ್ಲಿ ಕಬ್ಬು ಬೆಳೆಗಾರರ ಆಕ್ರೋಶ ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಬೆಳಗಾವಿ ಮಾದರಿಯಲ್ಲೇ ಹಾವೇರಿ ಜಿಲ್ಲೆಯ ರೈತರಿಗೂ ಪ್ರತಿ ಟನ್ ಕಬ್ಬಿಗೆ 3,600 ರೂಪಾಯಿ ದರ ನಿಗದಿ ಮಾಡಬೇಕು ಅನ್ನೋದು ರೈತರ ಪ್ರಮುಖ ಆಗ್ರಹ. ಆದ್ರೆ ಜಿಲ್ಲೆಯ 3 ಸಕ್ಕರೆ ಕಾರ್ಖಾನೆಗಳು ಪ್ರತಿ ಟನ್ ಕಬ್ಬಿಗೆ 3,100 ರೂಪಾಯಿ ದರ ನಿಗದಿ ಮಾಡಿವೆ ಎನ್ನಲಾಗಿದೆ.

ಇದರಿಂದ ಕೆರಳಿರುವ ರೈತರು ಹೆಚ್ಚುವರಿ 500 ರೂಪಾಯಿ ನೀಡುವಂತೆ ಪಟ್ಟು ಹಿಡಿದಿದ್ದಾರೆ. ಇನ್ನೂ ತಮ್ಮ ಬೇಡಿಕೆ ಈಡೇರಿಸುವಂತೆ ಸಕ್ಕರೆ ಮತ್ತು ಜವಳಿ ಸಚಿವ ರುದ್ರಪ್ಪ ಲಮಾಣಿ ಮನೆ ಮುಂದೆ ಅಹೋರಾತ್ರಿ ಧರಣಿ ನಡೆಸಲು ರೈತರು ನಿರ್ಧರಿಸಿದ್ದರು. ಸಾಮೂಹಿಕ ನಾಯಕತ್ವದಲ್ಲಿ ನಡೆಯಲಿರುವ ಈ ಹೋರಾಟಕ್ಕೆ ಶಶಿಕಾಂತ್ ಗುರೂಜಿ ಗೈರಾಗಿದ್ರು. ಇನ್ನೂ ಚುನ್ನಪ್ಪ ಪೂಜಾರಿ ಈ ಹೋರಾಟಕ್ಕೆ ಸಾಥ್ ನೀಡಿದ್ದಾರೆ. ಆದ್ರೆ ಪ್ರತಿಭಟನೆಗೆ ಅನುಮತಿ ನಿರಾಕರಿಸಿರುವ ಜಿಲ್ಲಾಡಳಿತ, ಸಚಿವರ ನಿವಾಸದ ಸುತ್ತ 250 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದೆ.

BNS ಕಲಂ 163ರ ಅಡಿಯಲ್ಲಿ ಜಿಲ್ಲಾಧಿಕಾರಿ ವಿಜಯಮಹಾಂತೇಶ್ ದಾನಮ್ಮನವರ್ ಆದೇಶ ಹೊರಡಿಸಿದ್ದಾರೆ. ಹಿಂದಿನ ಪ್ರತಿಭಟನೆಯಿಂದ ಸ್ಥಳೀಯ ನಿವಾಸಿಗಳಿಗೆ ತೊಂದರೆಯಾಗಿರುವ ಆರೋಪ ಹಾಗೂ ಪೊಲೀಸ್ ಇಲಾಖೆಯ ವರದಿ ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ. ಇತ್ತ ಸಚಿವರ ನಿವಾಸಕ್ಕೆ ಸಂಪರ್ಕ ಕಲ್ಪಿಸುವ ಎರಡೂ ರಸ್ತೆಗಳನ್ನ ಬಂದ್ ಮಾಡಲಾಗಿದ್ದು, ನಾಲ್ಕು ಹಂತಗಳಲ್ಲಿ ಬ್ಯಾರಿಕೇಡ್ ಅಳವಡಿಸಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.. ಇಷ್ಟೆಲ್ಲ ಭದ್ರತೆಯ ನಡುವೆಯೂ ರೈತರ ಆಕ್ರೋಶ ಮಾತ್ರ ಕಡಿಮೆಯಾಗಿಲ್ಲ. ಕಬ್ಬು ಹಿಡಿದು ಸಚಿವರ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾದ ರೈತರನ್ನು ಪೊಲೀಸರು ತಡೆದಿದ್ದಾರೆ.

ರಾಣೇಬೆನ್ನೂರು ಪಟ್ಟಣದ ಉಮಾಶಂಕರ ನಗರದಲ್ಲಿರುವ ಸಚಿವರ ಮೂಲ ನಿವಾಸದ ಎದುರು ಹೈಡ್ರಾಮಾವೇ ನಡೆದಿದೆ. ಸಚಿವರ ಮನೆ ಮುಂದೆ ಪ್ರತಿಭಟನೆಗೆ ಮುಂದಾದ 50ಕ್ಕೂ ಹೆಚ್ಚು ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಬಂಕಾಪುರ ಟೋಲ್ ಬಳಿಯೂ ರೈತರ ಆಕ್ರೋಶ ಸ್ಫೋಟಗೊಂಡಿದೆ. ಶಿಗ್ಗಾವಿ ತಾಲೂಕಿನ ಬಂಕಾಪುರದಲ್ಲಿ ಏಕಾಏಕಿ ರಾಷ್ಟ್ರೀಯ ಹೆದ್ದಾರಿಗೆ ಇಳಿದ ನೂರಾರು ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ರಸ್ತೆಯಲ್ಲೇ ಅಡ್ಡಲಾಗಿ ಮಲಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಣಾಮ ರಾಷ್ಟ್ರೀಯ ಹೆದ್ದಾರಿಯ ಎರಡೂ ಬದಿಗಳಲ್ಲಿ ವಾಹನ ಸಂಚಾರ ಸ್ಥಗಿತಗೊಂಡು ವಾಹನ ಸವಾರರು ಪರದಾಡುವಂತಾಗಿದೆ.

ಒಂದೆಡೆ ಸಚಿವರ ನಿವಾಸದ ಸುತ್ತ ನಿಷೇಧಾಜ್ಞೆ, ಮತ್ತೊಂದೆಡೆ ರೈತರ ಬಂಧನ, ಮಗದೊಂದೆಡೆ ರಾಷ್ಟ್ರೀಯ ಹೆದ್ದಾರಿ ಬಂದ್. ಹೀಗೆ ಕಬ್ಬಿನ ಬೆಲೆ ವಿಚಾರವಾಗಿ ಹಾವೇರಿಯಲ್ಲಿ ಹೋರಾಟದ ಕಿಚ್ಚು ಜೋರಾಗಿದೆ. ರೈತರ ಬೇಡಿಕೆಗೆ ಸರ್ಕಾರ ಸ್ಪಂದಿಸುತ್ತಾ..? ಕಬ್ಬಿಗೆ 3,600 ರೂಪಾಯಿ ದರ ನಿಗದಿಯಾಗುತ್ತಾ..? ಅಥವಾ ರೈತರ ಹೋರಾಟ ಮತ್ತಷ್ಟು ತೀವ್ರಗೊಳ್ಳುತ್ತಾ ಅನ್ನೋದನ್ನ ಕಾದು ನೋಡಬೇಕಿದೆ.

Add Zee News as a Preferred Source
TAGS:
Kannada News