• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಹುಬ್ಬಳ್ಳಿ ಧಾರವಾಡ
  • /ಶಾಸಕ ಸ್ಥಾನಕ್ಕೆ ಇಂಡಿ ಶಾಸಕ ರಾಜೀನಾಮೆ

ಶಾಸಕ ಸ್ಥಾನಕ್ಕೆ ಇಂಡಿ ಶಾಸಕ ರಾಜೀನಾಮೆ

ಕಾಂಗ್ರೆಸ್‌ ಪಕ್ಷದ ಶಾಸಕ ಯಶವಂತರಾಯಗೌಡ ವಿ. ಪಾಟೀಲ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಘೋಷಿಸುವ ಮೂಲಕ ರಾಜ್ಯ ರಾಜಕೀಯದಲ್ಲಿ ತಲ್ಲಣ ಸೃಷ್ಟಿಸಿದ್ದಾರೆ. ಹಲವು ಬಾರಿ ಮನವಿ ಮಾಡಿದ್ರು ಸರ್ಕಾರ ಮನವಿಗೆ ಸ್ಪಂದಿಸದ ಹಿನ್ನಲೆ ಬೇಸತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಶಾಸಕ ಯಶವಂತರಾಯಗೌಡ ಪಾಟೀಲ್‌ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Written ByYashaswini V
Published: Sep 23, 2026, 01:36 PM IST|Updated: Sep 23, 2026, 01:37 PM IST
joinshare
ಶಾಸಕ ಸ್ಥಾನಕ್ಕೆ ಇಂಡಿ ಶಾಸಕ ರಾಜೀನಾಮೆ

About the Author

Yashaswini V

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಒಂದೆಡೆ ಕಸ್ತೂರಿ ರಂಗನ್‌ ವರದಿ ಹಾಗೂ ರಾಜ್ಯದಲ್ಲಿ ತಲೆದೂರಿರುವ ಬರಗಾಲ ಪರಿಸ್ಥಿತಿಯ ಬಗ್ಗೆ ಚರ್ಚೆ ನಡೆಸಲು ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್‌ ನೇತೃತ್ವದ ಕರ್ನಾಟಕ ಸರ್ಕಾರ ವಿಶೇಷ ಅಧಿವೇಶನ ನಡೆಸುತ್ತಿದೆ. ಏತನ್ಮಧ್ಯೆ, ಆಡಳಿತ ಪಕ್ಷದ ಶಾಸಕರೇ ಆಗಿರುವ ಇಂಡಿ ಶಾಸಕ ಯಶವಂತರಾಯಗೌಡ ವಿ. ಪಾಟೀಲ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಘೋಷಿಸುವ ಮೂಲಕ ರಾಜ್ಯ ಸರ್ಕಾರಕ್ಕೆ ಶಾಕ್‌ ನೀಡಿದ್ದಾರೆ.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವ ಬಗ್ಗೆ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾಗಿರುವ ಜಿ.ಎಸ್ ಪಾಟೀಲ್‌ ಅವರಿಗೆ ಪತ್ರ ಬರೆದಿರುವ ಇಂಡಿ ವಿಧಾನಸಭಾ ಕ್ಷೇತ್ರದ ಶಾಸಕ ಯಶವಂತರಾಯಗೌಡ ವಿ. ಪಾಟೀಲ ಈ ರೀತಿ ಬರೆದಿದ್ದಾರೆ.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವ ಬಗ್ಗೆ...
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ವಿಜಯಪುರ ಜಿಲ್ಲೆಯ ನಾನು ಪ್ರತಿನಿಧಿಸುವ ಇಂಡಿ ತಾಲ್ಲೂಕು 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ತೀವ್ರ ಬರಗಾಲಕ್ಕೆ ತುತ್ತಾಗಿದ್ದು, ಆರಂಭದಲ್ಲಿ ಸ್ವಲ್ಪ ಮಳೆ ಬಿದ್ದ ಪ್ರಯುಕ್ತ ರೈತರು ಸಾಲಮಾಡಿ ಬೀಜ, ಗೊಬ್ಬರಗಳನ್ನು ಖರೀದಿಸಿ, ಭಿತ್ನನೆ ಮಾಡಿರುತ್ತಾರೆ. ಆದರೆ ಸಕಾಲಕ್ಕೆ ಮಳೆ ಆಗದ ಕಾರಣ ಬೆಳೆಗಳು ಬತ್ತಿ ಹೋಗಿದ್ದು ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ಉಂಟಾಗಿರುತ್ತದೆ.

ಮನವಿ ಪತ್ರ ಸಲ್ಲಿಸಿದ್ದರೂ ನಮ್ಮ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಿಲ್ಲ!
ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳಿಗೆ ದಿನಾಂಕ 28.08.2026 ರಂದು ಇಂಡಿ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸುವಂತೆ ಮನವಿ ಪತ್ರ ಸಲ್ಲಿಸಲಾಗಿತ್ತು. ಆದರೆ ವಿಜಯಪುರ ಜಿಲ್ಲೆಯ ಒಟ್ಟು 13 ತಾಲ್ಲೂಕುಗಳ ಪೈಕಿ ನನ್ನ ಇಂಡಿ ಮತ್ತು ಚಡಚಣ ಈ 2 ತಾಲ್ಲೂಕುಗಳನ್ನು ಹೊರತುಪಡಿಸಿ, ಇದುವರೆಗೂ ರಾಜ್ಯದ 188 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಲಾಗಿರುತ್ತದೆ ಎಂದು ತಮ್ಮ ಬರಪೀಡಿತ ತಾಲ್ಲೂಕುಗಳ ಪಟ್ಟಿಯಲ್ಲಿ ತಮ್ಮ ತಾಲ್ಲೂಕು ಇಲ್ಲದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಮ್ಮ ಮಾತಿಗೆ... ನಮ್ಮ ಭಾವನೆಗಳಿಗೆ... ಬೆಲೆಯೇ ಇಲ್ಲ..!
ಮುಂದುವರೆದು ನಾನು ಆಡಳಿತ ಪಕ್ಷದ ಶಾಸಕನಾಗಿದ್ದು, ನಮ್ಮ ಸರ್ಕಾರಕ್ಕೆ ಮುಜಗರವಾಗಬಾರದೆಂದು ಸೂಕ್ಷ್ಮ ಮತಿಯನಾಗಿ ಹಲವಾರು ಬಾರಿ ಮನವಿ ಮಾಡಿಕೊಂಡಿದ್ದೇನೆ. ಆದರೂ ಸಹ ನಮ್ಮ ಮಾತಿಗೆ, ನಮ್ಮ ಭಾವನೆಗಳಿಗೆ ಬೆಲೆ ಇಲ್ಲದಂತಾಗಿದ್ದು, ಈಗಿನ ರಾಜಕೀಯ ವಾತಾವರಣದಲ್ಲಿ ಬಲಾಡ್ಯರಿಗೆ, ಒತ್ತಡ ತಂತ್ರಗಳನ್ನು ಎಳೆಯುವವರಿಗೆ ಮನ್ನಣೆ ನೀಡಲಾಗುತ್ತಿದೆ. ನಮ್ಮಂತಹ ಸೌಮ್ಯ ಸ್ವಭಾವದವರಿಗೆ ಯಾವುದೇ ಕೆಲಸಗಳಿಗೆ ಮನ್ನಣೆ ದೊರೆಯುತ್ತಿಲ್ಲ. ಆದ್ದರಿಂದ ನನ್ನ ಕ್ಷೇತ್ರದ ಜನರ ಆಸೆ, ಆಶೋತ್ತರಗಳಿಗೆ ಸ್ಪಂದಿಸಲು ಸಾಧ್ಯವಾಗದ ಪ್ರಯುಕ್ತ ನಾನು ಸ್ವರಾಜ್ಞೆಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ದಯವಿಟ್ಟು ಅಂಗೀಕರಿಸಿ." 
ವಂದನೆಗಳೊಂದಿಗೆ ಯಶವಂತರಾಯಗೌಡ ವಿ. ಪಾಟೀಲ ಎಂದು ಬರೆದಿದ್ದಾರೆ.
 

Add Zee News as a Preferred Source
TAGS:
Karnataka Politics
D K Shivakumar
Congress