SOCIAL MEDIA

Newsletter

PARTNER SITES
Select Language Select State

ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ನೈರುತ್ಯ ರೈಲು ನಿಲ್ದಾಣಗಳಲ್ಲಿ ರೈಲ್ ಜನ ಸಂವಾದ ಯಶಸ್ವಿ

ಅಕ್ಟೋಬರ್ 22 ರಂದು ರಾಷ್ಟ್ರವ್ಯಾಪಿ ಸುಮಾರು 7,000 ಕ್ಕೂ ಹೆಚ್ಚು ರೈಲು ನಿಲ್ದಾಣಗಳಲ್ಲಿ ʼರೈಲ್‌ ಜನ ಸಂವಾದʼ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

Written By Yashaswini V
Published: Oct 22, 2026, 01:42 PM IST | Updated: Oct 22, 2026, 01:44 PM IST
Join

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ನೈಋತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದಾದ್ಯಂತ ವಿವಿಧ ರೈಲು ನಿಲ್ದಾಣಗಳಲ್ಲಿ ಅಕ್ಟೋಬರ್‌ 22, 2026ರಂದು 'ರೈಲ್ ಜನ ಸಂವಾದ'  ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಭಾರತೀಯ ರೈಲ್ವೆಯ ವಿಶೇಷ ಅಭಿಯಾನವಾದ 'ರೈಲ್ ಜನ ಸಂವಾದ' ಕಾರ್ಯಕ್ರಮದಲ್ಲಿ ರೈಲ್ವೆ ಅಧಿಕಾರಿಗಳು ಪ್ರಯಾಣಿಕರೊಂದಿಗೆ ನೇರವಾಗಿ ಸಂವಾದ ನಡೆಸುವ ಮೂಲಕ ಪ್ರಯಾಣದ ವೇಳೆ ಉಂಟಾಗುವ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸುತ್ತಾರೆ. ಇದೀಗ,  ನೈಋತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗಗಳಾದ ಹುಬ್ಬಳ್ಳಿ ವಿಭಾಗದ ಧಾರವಾಡ, ಗದಗ, ಮತ್ತು ಯಳವಿಗಿ, ವಾಸ್ಕೋ, ವಿಜಯಪುರ ಸೇರಿದಂತೆ ವಿಭಾಗದ ಎಲ್ಲ ನಿಲ್ದಾಣಗಳಲ್ಲಿ ಈ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನೆರವೇರಿದೆ.

ಹುಬ್ಬಳ್ಳಿ ವಿಭಾಗದ ಧಾರವಾಡ, ಗದಗ, ಮತ್ತು ಯಳವಿಗಿ, ವಾಸ್ಕೋ, ವಿಜಯಪುರ ಸೇರಿದಂತೆ ವಿಭಾಗದ ಎಲ್ಲ ನಿಲ್ದಾಣಗಳಲ್ಲಿ ಆಯೋಜಿಸಲಾಗಿದ್ದ ರೈಲ್ ಜನ ಸಂವಾದ ಕಾರ್ಯಕ್ರಮದ ಸಂದರ್ಭದಲ್ಲಿ ಹಿರಿಯ ರೈಲ್ವೆ ಅಧಿಕಾರಿಗಳು ಉಪಸ್ಥಿತರಿದ್ದರು.

'ರೈಲ್ ಜನ ಸಂವಾದ' ಕಾರ್ಯಕ್ರಮದ ಉದ್ದೇಶ ಏನು?
'ರೈಲ್ ಜನ ಸಂವಾದ' ಕಾರ್ಯಕ್ರಮದ ಪ್ರಮುಖ ಉದ್ದೇಶ ಪ್ರಯಾಣಿಕರ ಅಭಿಪ್ರಾಯಗಳಿಗೆ ಆದ್ಯತೆ ನೀಡುವುದು, ಸಾರ್ವಜನಿಕರ ಸಕ್ರಿಯ ಪಾಲ್ಗೊಳ್ಳುವಿಕೆಯನ್ನು ಉತ್ತೇಜಿಸುವುದು ಹಾಗೂ ಪ್ರಯಾಣಿಕರಿಂದ ನೇರವಾಗಿ ಸ್ವೀಕರಿಸಿದ ಸಲಹೆ ಮತ್ತು ಅಭಿಪ್ರಾಯಗಳ ಆಧಾರದ ಮೇಲೆ ರೈಲ್ವೆ ಸೌಲಭ್ಯಗಳಲ್ಲಿ ನಿರಂತರ ಸುಧಾರಣೆ ತರುವುದರ ಕುರಿತು ಚರ್ಚೆ ನಡೆಸಲಾಯಿತು.

ಹುಬ್ಬಳ್ಳಿಯ ಎಸ್‌ಎಸ್‌ಎಸ್‌ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ವಿಭಾಗೀಯ ರೈಲ್ವೆ ಹೆಚ್ಚುವರಿ ವ್ಯವಸ್ಥಾಪಕ  ಪ್ರೇಮಚಂದ್ರ ಹಾಗೂ ಹಣಕಾಸು ಅಧಿಕಾರಿ ಕುಮಾರಿ ಕಲ್ಯಾಣಿ  ಸೇತುರಾಮ್ ನೇತೃತ್ವದಲ್ಲಿ ನಡೆಯಿತು.‌ ಈ ಸಂದರ್ಭದಲ್ಲಿ ರೈಲ್ವೆ ಸೇವೆಗಳು ಮತ್ತು ಪ್ರಯಾಣಿಕರಿಗೆ ಒದಗಿಸಲಾಗಿರುವ ಸೌಲಭ್ಯಗಳ ಕುರಿತು ಅಭಿಪ್ರಾಯ ಹಾಗೂ ಸಲಹೆಗಳನ್ನು ಸಂಗ್ರಹಿಸಿದರು. ಪ್ರಯಾಣಿಕರು ನಿಲ್ದಾಣದ ಸ್ವಚ್ಛತೆ, ಸೂಚನಾ ಫಲಕಗಳು, ಪಾರ್ಕಿಂಗ್ ಸೌಲಭ್ಯದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರಧಾನ ವ್ಯವಸ್ಥಾಪಕರು ರೈಲು ನಿಲ್ದಾಣದ ಆವರಣವನ್ನು ಸ್ವಚ್ಛವಾಗಿ ಮತ್ತು ನೈರ್ಮಲ್ಯದಿಂದ ಕಾಪಾಡಿಕೊಳ್ಳುವ ಮಹತ್ವದ ಕುರಿತು ಪ್ರಯಾಣಿಕರಲ್ಲಿ ಜಾಗೃತಿ ಮೂಡಿಸಿದರು ಕಸವನ್ನು ಸೂಕ್ತ ರೀತಿಯಲ್ಲಿ ವಿಂಗಡಿಸುವುದು. ನಿಲ್ದಾಣದ ಆವರಣದಲ್ಲಿ ಎಲ್ಲೆಂದರಲ್ಲಿ ಕಸ ಎಸೆಯದಿರುವುದು ಹಾಗೂ ಲಭ್ಯವಿರುವ ಸೌಲಭ್ಯಗಳನ್ನು ಜವಾಬ್ದಾರಿಯುತವಾಗಿ ಬಳಸುವಂತೆ ಪ್ರಯಾಣಿಕರಿಗೆ ಮನವಿ ಮಾಡಿದರು.

ಪ್ರಯಾಣಿಕರು ನಿಲ್ದಾಣದ ನಿರ್ವಹಣೆ. ಡಿಜಿಟಲ್ ಸೂಚನಾ ಫಲಕಗಳು, ಎಸ್ಕಲೇಟರ್ ಪಾರ್ಸೆಲ್ ವಿಭಾಗದ ಕಾರ್ಯ ಚಟುವಟಿಕೆಗಳು ಸೇರಿದಂತೆ ವಿವಿಧ ಸೌಲಭ್ಯಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು ಹಾಗೂ ಲಭ್ಯವಿರುವ ಸೌಲಭ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಗಮನಾರ್ಹವಾಗಿ, ಅಕ್ಟೋಬರ್ 22 ರಂದು ದೇಶಾದ್ಯಂತ 7,000 ಕ್ಕೂ ಹೆಚ್ಚು ರೈಲು ನಿಲ್ದಾಣಗಳಲ್ಲಿ ರೈಲ್ ಜನ ಸಂವಾದ ಕಾರ್ಯಕ್ರಮ ನಡೆಸಲಾಗಿದೆ. ಇದು ಒಂದು ದಿನದ ವಿಶೇಷ ಕಾರ್ಯಕ್ರಮವಾಗಿದ್ದು ನಾಗರಿಕರು ಮತ್ತು ಪ್ರಯಾಣಿಕರ ಭಾಗವಹಿಸುವಿಕೆಯನ್ನು ಹೆಚ್ಚಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ರೈಲ್‌ ಜನ ಸಂವಾದ ಕಾರ್ಯಕ್ರಮದಲ್ಲಿ,  ರೈಲ್ವೆ ಅಧಿಕಾರಿಗಳು ನೇರವಾಗಿ ಪ್ರಯಾಣಿಕರು ಮತ್ತು ಸಾರ್ವಜನಿಕರೊಂದಿಗೆ ಸಂವಹನ ನಡೆಸುತ್ತಾರೆ. ರೈಲು ಸೇವೆಗಳು, ಪ್ರಯಾಣಿಕರ ಸೌಲಭ್ಯಗಳು, ಸ್ವಚ್ಛತೆ, ನೈರ್ಮಲ್ಯ ಮತ್ತು ಸುರಕ್ಷತೆಯ ಕುರಿತು ಸಲಹೆಗಳು, ಪ್ರತಿಕ್ರಿಯೆ ಮತ್ತು ದೂರುಗಳನ್ನು ಅವರು ಸ್ವೀಕರಿಸಿ ರೈಲು ನಿಲ್ದಾಣಗಳು ಹಾಗೂ ರೈಲುಗಳಲ್ಲಿ ಸಾರ್ವಜನಿಕರಿಗೆ ಉಂಟಾಗುತ್ತಿರುವ ಸಮಸ್ಯೆಗಳನ್ನು ಬಗೆಹರಿಸಲು ಅಗತ್ಯ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಾರೆ ಎನ್ನಲಾಗಿದೆ. 
 

Add Zee News as a Preferred Source
TAGS:

About the Author

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 

ZEENEWS TRENDING STORIES