• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಹುಬ್ಬಳ್ಳಿ ಧಾರವಾಡ
  • /ಕಬ್ಬು ಬೆಳೆಗಾರರ ಬೇಡಿಕೆಗೆ ಸ್ಪಂದಿಸದಿದ್ದರೆ ಅಕ್ಟೋಬರ್ 27ರಂದು ಕರ್ನಾಟಕ ಬಂದ್: ಚೂನಪ್ಪ ಪೂಜಾರಿ ಎಚ್ಚರಿಕೆ

ಕಬ್ಬು ಬೆಳೆಗಾರರ ಬೇಡಿಕೆಗೆ ಸ್ಪಂದಿಸದಿದ್ದರೆ ಅಕ್ಟೋಬರ್ 27ರಂದು ಕರ್ನಾಟಕ ಬಂದ್: ಚೂನಪ್ಪ ಪೂಜಾರಿ ಎಚ್ಚರಿಕೆ

ಅಕ್ಟೋಬರ್ 26 ರಂದು ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ರೈತರ ಬೇಡಿಕೆಗಳಿಗೆ ಸೂಕ್ತ ಸ್ಪಂದನೆ ಸಿಗದಿದ್ದರೆ ರಾಜ್ಯಾದ್ಯಂತ ಹೋರಾಟ ತೀವ್ರಗೊಳಿಸುವುದಾಗಿ ಅವರು ತಿಳಿಸಿದ್ದಾರೆ.

Written ByChetana Devarmani
Published: Oct 24, 2026, 12:55 PM IST|Updated: Oct 24, 2026, 12:58 PM IST
joinshare
ಕಬ್ಬು ಬೆಳೆಗಾರರ ಬೇಡಿಕೆಗೆ ಸ್ಪಂದಿಸದಿದ್ದರೆ ಅಕ್ಟೋಬರ್ 27ರಂದು ಕರ್ನಾಟಕ ಬಂದ್: ಚೂನಪ್ಪ ಪೂಜಾರಿ ಎಚ್ಚರಿಕೆ

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

Trending

  • News
  • Photos
  • Videos
ಶಿವಮೊಗ್ಗ ಬ್ರೇಕಿಂಗ್: ಗಂಡನ ಮನೆಯವರ ಕಿರುಕುಳ ತಾಳದೇ ಗೃಹಿಣಿ ಸಾ*

ಶಿವಮೊಗ್ಗ ಬ್ರೇಕಿಂಗ್: ಗಂಡನ ಮನೆಯವರ ಕಿರುಕುಳ ತಾಳದೇ ಗೃಹಿಣಿ ಸಾ*

2

ವರ್ಷಕ್ಕೆ 475 ಕೋಟಿ ಗಳಿಕೆ, 5000 ಕೋಟಿ ಆಸ್ತಿ... 100 ಕೋಟಿಗೂ ಅಧಿಕ ಸಂಭಾವನೆ ಪಡೆಯುವ ಸ್ಟಾರ್‌ ನಟ ಈತ!

3

ತೀರ್ಥಹಳ್ಳಿಯಲ್ಲಿ ಭೀಕರ ಅಪಘಾತ.. ಹನಗೇರಕಟ್ಟೆ ಬಳಿ ಟಾಟಾ ಏಸ್‌ ಉರುಳಿ ಹಲವರಿಗೆ ಗಾಯ!

4

Healthy Liver Drinks | ಲಿವರ್‌ ಆರೋಗ್ಯಕ್ಕೆ ಪ್ರತಿದಿನ ಈ ಹೆಲ್ತಿ ಡ್ರಿಂಕ್ಸ್‌ ಕುಡಿಯಿರಿ

5

ಕಿತ್ತೂರು ಉತ್ಸವದ ಎರಡನೇ ದಿನ ವಿವಿಧ ಮನರಂಜನೆ ಕಾರ್ಯಕ್ರಮ

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಳಗಾವಿ: ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಕ್ಟೋಬರ್ 27 ರಂದು ಕರ್ನಾಟಕ ಬಂದ್‌ಗೆ ಕರೆ ನೀಡುವ ಎಚ್ಚರಿಕೆಯನ್ನು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಚೂನಪ್ಪ ಪೂಜಾರಿ ನೀಡಿದ್ದಾರೆ. ಅಕ್ಟೋಬರ್ 26 ರಂದು ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ರೈತರ ಬೇಡಿಕೆಗಳಿಗೆ ಸೂಕ್ತ ಸ್ಪಂದನೆ ಸಿಗದಿದ್ದರೆ ರಾಜ್ಯಾದ್ಯಂತ ಹೋರಾಟ ತೀವ್ರಗೊಳಿಸುವುದಾಗಿ ಅವರು ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಚೂನಪ್ಪ ಪೂಜಾರಿ, ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಮುಖ್ಯಮಂತ್ರಿಗಳ ಸಭೆಯಲ್ಲಿ ಬೇಡಿಕೆಗಳು ಈಡೇರುವ ಭರವಸೆ ಇದೆ. ಆದರೆ ಸಭೆಯಲ್ಲಿ ರೈತರ ಸಮಸ್ಯೆಗಳಿಗೆ ಸ್ಪಂದನೆ ಸಿಗದಿದ್ದರೆ ಅನಿವಾರ್ಯವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಪ್ರತಿ ಟನ್ ಕಬ್ಬಿಗೆ ₹4,500 ದರಕ್ಕೆ ಆಗ್ರಹ

ಕಬ್ಬು ಬೆಳೆಗಾರರ ಪರವಾಗಿ ರಾಜ್ಯ ಸರ್ಕಾರದ ಮುಂದೆ ಮೂರು ಪ್ರಮುಖ ಬೇಡಿಕೆಗಳನ್ನು ಮಂಡಿಸಲಾಗುವುದು ಎಂದು ಚೂನಪ್ಪ ಪೂಜಾರಿ ಹೇಳಿದರು. ಸಕ್ಕರೆ ಕಾರ್ಖಾನೆಗಳು ಪ್ರತಿ ಟನ್ ಕಬ್ಬಿಗೆ ಕನಿಷ್ಠ ₹4,500 ದರ ನೀಡುವಂತೆ ಕ್ರಮ ಕೈಗೊಳ್ಳಬೇಕು ಎಂಬುದು ರೈತರ ಪ್ರಮುಖ ಆಗ್ರಹವಾಗಿದೆ. ಇದರ ಜೊತೆಗೆ ರಾಜ್ಯ ಸರ್ಕಾರ ಎಸ್‌ಎಪಿ (ರಾಜ್ಯ ಸಲಹಾ ಬೆಲೆ) ಮೂಲಕ ಪ್ರತಿ ಟನ್‌ಗೆ ಕನಿಷ್ಠ ₹1,000 ಹೆಚ್ಚುವರಿ ಬೆಂಬಲ ನೀಡಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಸರ್ಕಾರವೂ ಕಬ್ಬಿಗೆ ಸಂಬಂಧಿಸಿದ ಎಂಎಸ್‌ಪಿ ಹೆಚ್ಚಳದ ಕುರಿತು ಕ್ರಮ ಕೈಗೊಳ್ಳಬೇಕು. ಕೇಂದ್ರ ಸಚಿವರು ತಕ್ಷಣವೇ ಸಕ್ಕರೆ ಕಾರ್ಖಾನೆಗಳ ಮಾಲೀಕರ ಸಭೆ ಕರೆದು ರೈತರ ಸಮಸ್ಯೆಗಳ ಕುರಿತು ಚರ್ಚಿಸಬೇಕು ಎಂದು ಅವರು ಆಗ್ರಹಿಸಿದರು.

ತೂಕದ ಮೋಸ ತಡೆಯಲು ₹500 ಕೋಟಿ ಮೀಸಲಿಡಲು ಒತ್ತಾಯ

ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬಿನ ತೂಕ ಮಾಡುವ ಸಂದರ್ಭದಲ್ಲಿ ರೈತರಿಗೆ ಅನ್ಯಾಯವಾಗುತ್ತಿದೆ ಎಂಬ ಆರೋಪವನ್ನು ಪ್ರಸ್ತಾಪಿಸಿದ ಚೂನಪ್ಪ ಪೂಜಾರಿ, ತೂಕದ ವ್ಯತ್ಯಾಸ ಮತ್ತು ಅಕ್ರಮಗಳನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು. ಈ ಉದ್ದೇಶಕ್ಕಾಗಿ ₹500 ಕೋಟಿ ಮೀಸಲಿಡಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. ಅಲ್ಲದೆ, ಬೆಳಗಾವಿಯ ಸಕ್ಕರೆ ಆಯುಕ್ತರ ಕಚೇರಿಗೆ ಆಯುಕ್ತರನ್ನು ನೇಮಕ ಮಾಡಬೇಕು. ಸಕ್ಕರೆ ಕಾರ್ಖಾನೆಗಳ ಮಾಲೀಕರ ಸಭೆಯಲ್ಲಿ ಮುಖ್ಯಮಂತ್ರಿ ಗಂಭೀರ ನಿರ್ಧಾರ ಗಳನ್ನು ಕೈಗೊಂಡು ರೈತರ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.

ರೈತರ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರಲು ಅಕ್ಟೋಬರ್ 25 ರಿಂದ ಗುರ್ಲಾಪುರದಲ್ಲಿ ಸಾಂಕೇತಿಕ ಪ್ರತಿಭಟನೆ ಆರಂಭಿಸಲಾಗುವುದು ಎಂದು ಚೂನಪ್ಪ ಪೂಜಾರಿ ತಿಳಿಸಿದರು. ಅಕ್ಟೋಬರ್ 26 ರಂದು ನಡೆಯಲಿರುವ ಮುಖ್ಯಮಂತ್ರಿ ನೇತೃತ್ವದ ಸಭೆಯ ಫಲಿತಾಂಶ ವನ್ನು ಆಧರಿಸಿ ಮುಂದಿನ ಹೋರಾಟದ ರೂಪುರೇಷೆ ನಿರ್ಧರಿಸಲಾಗುವುದು ಎಂದರು.

ಸಭೆಯಲ್ಲಿ ರೈತರ ಬೇಡಿಕೆಗಳಿಗೆ ಸ್ಪಂದನೆ ದೊರೆತರೆ ಸಮಸ್ಯೆ ಪರಿಹಾರವಾಗುವ ನಿರೀಕ್ಷೆಯಿದೆ. ಇಲ್ಲದಿದ್ದರೆ ಅಕ್ಟೋಬರ್ 27 ರಂದು ಕರ್ನಾಟಕ ಬಂದ್‌ ಗೆ ಕರೆ ನೀಡಲಾಗುವುದು ಎಂದು ಅವರು ಸ್ಪಷ್ಟ ಪಡಿಸಿದರು. ಕಬ್ಬಿನ ಬೆಲೆ ನಿಗದಿ, ಹೆಚ್ಚುವರಿ ಬೆಂಬಲ ಮತ್ತು ತೂಕದ ಅಕ್ರಮ ತಡೆಗೆ ಸಂಬಂಧಿಸಿದ ಬೇಡಿಕೆಗಳು ಈಗ ರೈತ ಸಂಘಟನೆಯ ಪ್ರಮುಖ ಒತ್ತಾಯಗಳಾಗಿವೆ. ಸರ್ಕಾರದ ಸಭೆಯಲ್ಲಿ ಈ ವಿಚಾರಗಳ ಕುರಿತು ಯಾವ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂಬುದರ ಮೇಲೆ ಮುಂದಿನ ಬೆಳವಣಿಗೆಗಳು ಅವಲಂಬಿತವಾಗಿವೆ.
 

Add Zee News as a Preferred Source
TAGS:
Kannada News