• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಹುಬ್ಬಳ್ಳಿ ಧಾರವಾಡ
  • /ಕೊಪ್ಪಳ: ಕಾರ್-ಬೈಕ್ ಭೀಕರ ಅಪಘಾತಕ್ಕೆ ಬಾಣಂತಿ ಸಾವು, ಪತಿಗೆ ಗಂಭೀರ ಗಾಯ!

ಕೊಪ್ಪಳ: ಕಾರ್-ಬೈಕ್ ಭೀಕರ ಅಪಘಾತಕ್ಕೆ ಬಾಣಂತಿ ಸಾವು, ಪತಿಗೆ ಗಂಭೀರ ಗಾಯ!

ಅಪಘಾತದಲ್ಲಿ ಮೃತಪಟ್ಟ ಮಹಿಳೆಯನ್ನು ಫರ್ವಿನಬಾನು ಎಂದು ಗುರುತಿಸಲಾಗಿದೆ. ಬೈಕ್ ಚಲಾಯಿಸುತ್ತಿದ್ದ ಅವರ ಪತಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.

Reported ByManjunath NaragundEdited ByManjunath Naragund
Published: Sep 27, 2026, 06:44 PM IST|Updated: Sep 27, 2026, 07:12 PM IST
joinshare
ಕೊಪ್ಪಳ: ಕಾರ್-ಬೈಕ್ ಭೀಕರ ಅಪಘಾತಕ್ಕೆ ಬಾಣಂತಿ ಸಾವು, ಪತಿಗೆ ಗಂಭೀರ ಗಾಯ!
Image Credit: Koppal Accident

About the Author

Manjunath Naragund

Manjunath Naragund

ಮಂಜುನಾಥ ನರಗುಂದ (Manjunath Naragund) 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಕೊಪ್ಪಳ: ಮದುವೆ ಶುಭ ಸಮಾರಂಭ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ದಂಪತಿಯ ಬೈಕ್‌ಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ, ಪತ್ನಿ ಸ್ಥಳದಲ್ಲೇ ದುರ್ಮರಣಕ್ಕೀಡಾಗಿ, ಪತಿ ತೀವ್ರ ಗಾಯಗೊಂಡಿರುವ ಆಘಾತಕಾರಿ ಘಟನೆ ಕೊಪ್ಪಳ ತಾಲೂಕಿನ ಚುಕನಕಲ್ಲು ಗ್ರಾಮದ ಬಳಿ ಇರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟ ಮಹಿಳೆಯನ್ನು ಫರ್ವಿನಬಾನು ಎಂದು ಗುರುತಿಸಲಾಗಿದೆ. ಬೈಕ್ ಚಲಾಯಿಸುತ್ತಿದ್ದ ಅವರ ಪತಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.

ಮದುವೆ ಕಾರ್ಯಕ್ರಮವನ್ನು ಮುಗಿಸಿಕೊಂಡು ದಂಪತಿ ಬೈಕ್‌ನಲ್ಲಿ ಸ್ವಗ್ರಾಮದತ್ತ ತೆರಳುತ್ತಿದ್ದರು. ಚುಕನಕಲ್ಲು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯನ್ನು ದಾಟುವ ಸಮಯದಲ್ಲಿ ವೇಗವಾಗಿ ಬಂದ ಕಾರು ಬೈಕ್‌ಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಫರ್ವಿನಬಾನು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ಪತಿಯನ್ನು ಸ್ಥಳೀಯರು ಕೊಪ್ಪಳ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.

ರೊಚ್ಚಿಗೆದ್ದ ಗ್ರಾಮಸ್ಥರು, ಹೆದ್ದಾರಿಗೆ ಮಣ್ಣು ಸುರಿದು ರಸ್ತೆ ತಡೆ:

ಈ ಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಪದೇ ಪದೇ ಸರಣಿ ಅಪಘಾತಗಳು ಸಂಭವಿಸಿ ಸಾವು-ನೋವುಗಳು ಸಂಭವಿಸುತ್ತಿರುವುದರಿಂದ ಕಂಗಾಲಾಗಿದ್ದ ಚುಕನಕಲ್ಲು ಗ್ರಾಮಸ್ಥರು ಘಟನೆ ತಿಳಿಯುತ್ತಿದ್ದಂತೆಯೇ ಆಕ್ರೋಶಗೊಂಡರು. ಹಲವು ವರ್ಷಗಳಿಂದ ಈ ಅಪಾಯಕಾರಿ ಸ್ಥಳದಲ್ಲಿ ಮೇಲ್ಸೇತುವೆ ನಿರ್ಮಿಸುವಂತೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಮನವಿ ಸಲ್ಲಿಸುತ್ತಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಟ್ರ್ಯಾಕ್ಟರ್‌ಗಳ ಮೂಲಕ ಮಣ್ಣು ತಂದು ರಾಷ್ಟ್ರೀಯ ಹೆದ್ದಾರಿಗೆ ಅಡ್ಡಲಾಗಿ ಸುರಿದು ದಿಢೀರ್ ರಸ್ತೆ ತಡೆ ಪ್ರತಿಭಟನೆ ನಡೆಸಿದರು.

ಗ್ರಾಮಸ್ಥರ ದಿಢೀರ್ ರಸ್ತೆ ತಡೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯ ಇರುವ ಬದಿಗಳಲ್ಲಿ ನೂರಾರು ವಾಹನಗಳು ಸಾಲುಗಟ್ಟಿ ನಿಂತು ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಯಿತು. ಪ್ರಯಾಣಿಕರು ಹಾಗೂ ಚಾಲಕರು ತೀವ್ರ ಪರದಾಡುವಂತಾಯಿತು. ಸ್ಥಳಕ್ಕೆ ಧಾವಿಸಿದ ಪೊಲೀಸರು ಗ್ರಾಮಸ್ಥರ ದಿಢೀರ್ ಪ್ರತಿಭಟನೆಯಿಂದ ಕಂಗಾಲಾಗಿದ್ದು, ಸ್ಥಳದಲ್ಲೇ ಮೊಕ್ಕಾಂ ಹೂಡಿ ಜನರನ್ನು ಸಮಾಧಾನಪಡಿಸಲು ಹಾಗೂ ಸಂಚಾರ ಸುಗಮಗೊಳಿಸಲು ಹರಸಾಹಸ ಪಡುತ್ತಿದ್ದಾರೆ.

Add Zee News as a Preferred Source
TAGS:
Kannada News