• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಹುಬ್ಬಳ್ಳಿ ಧಾರವಾಡ
  • /ಉತ್ತರ ಕರ್ನಾಟಕ ಹೆಬ್ಬಾಗಿಲಲ್ಲ ಅದ್ದೂರಿ ಹೋರಿ ಹಬ್ಬ..!

ಉತ್ತರ ಕರ್ನಾಟಕ ಹೆಬ್ಬಾಗಿಲಲ್ಲ ಅದ್ದೂರಿ ಹೋರಿ ಹಬ್ಬ..!

ದೀಪಾವಳಿ ಹಬ್ಬ ಬಂತೆಂದರೆ ಸಾಕು, ಕೃಷಿ ಪ್ರಧಾನ ಹಾವೇರಿ ಜಿಲ್ಲೆಯಲ್ಲಿ ಸಂಭ್ರಮವೋ ಸಂಭ್ರಮ. ಅದರಲ್ಲೂ ಹೋರಿ ಬೆದರಿಸುವ ಸ್ಪರ್ಧೆಯದ್ದೇ ವಿಶೇಷ ಆಕರ್ಷಣೆ. ಯುವಕರ ಮೈನವಿರೇಳಿಸುವ ಸಾಹಸ, ಕೊಂಬಿಗೆ ಕಟ್ಟಿದ ಬಹುಮಾನಗಳನ್ನು ಪಡೆಯಲು ಹೋರಿಗಳ ಹಿಂದೆ ಓಡುವ ಯುವಕರ ಉತ್ಸಾಹ. ಹೀಗೆ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿ ನಗರದ ವೀರಭದ್ರೇಶ್ವರ ದೇವಸ್ಥಾನದ ಮುಂಬಾಗದಲ್ಲಿ ಅದ್ಧೂರಿಯಾಗಿ ಹೋರಿ ಬೆದರಿಸುವ ಸ್ಪರ್ಧೆ ಆಯೋಜಿಸಲಾಗಿತ್ತು.‌. ಈ ಸ್ಪರ್ಧೆಯ ರೋಚಕತೆ ಹೇಗಿತ್ತು ಎಂಬುದರ ಕಂಪ್ಲೀಟ್ ವರದಿ ಇಲ್ಲಿದೆ ನೋಡಿ...

Written ByRamya. R. Gowda
Published: Nov 10, 2026, 14:33 IST|Updated: Nov 10, 2026, 15:12 IST
joinshare
ಉತ್ತರ ಕರ್ನಾಟಕ ಹೆಬ್ಬಾಗಿಲಲ್ಲ ಅದ್ದೂರಿ ಹೋರಿ ಹಬ್ಬ..!

About the Author

Ramya. R. Gowda

Ramya. R. Gowda

ರಮ್ಯಾ. ಆರ್‌ ಗೌಡ (Ramya. R. Gowda) : 2022ರಿಂದ ಮಾಧ್ಯಮ ಲೋಕದಲ್ಲಿದ್ದು ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಡೆಸ್ಕ್'ನಲ್ಲಿಯೂ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ. 2025ರಿಂದ ʼಜೀ ಕನ್ನಡ ನ್ಯೂಸ್‌' ವೆಬ್ ವಿಭಾಗದಲ್ಲಿ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಇವರು ಇತ್ತೀಚಿನ ಸುದ್ದಿಗಳ ಜೊತೆಗೆ ಮನರಂಜನೆ, ಕ್ರೀಡೆ, ವೈರಲ್‌, ಲೈಫ್‌ಸ್ಟೈಲ್‌ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ.
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ದೀಪಾವಳಿ ಹಬ್ಬ ಬಂತೆಂದರೆ ಸಾಕು, ಕೃಷಿ ಪ್ರಧಾನ ಹಾವೇರಿ ಜಿಲ್ಲೆಯಲ್ಲಿ ಸಂಭ್ರಮವೋ ಸಂಭ್ರಮ. ಅದರಲ್ಲೂ ಹೋರಿ ಬೆದರಿಸುವ ಸ್ಪರ್ಧೆಯದ್ದೇ ವಿಶೇಷ ಆಕರ್ಷಣೆ. ಯುವಕರ ಮೈನವಿರೇಳಿಸುವ ಸಾಹಸ, ಕೊಂಬಿಗೆ ಕಟ್ಟಿದ ಬಹುಮಾನಗಳನ್ನು ಪಡೆಯಲು ಹೋರಿಗಳ ಹಿಂದೆ ಓಡುವ ಯುವಕರ ಉತ್ಸಾಹ. ಹೀಗೆ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿ ನಗರದ ವೀರಭದ್ರೇಶ್ವರ ದೇವಸ್ಥಾನದ ಮುಂಬಾಗದಲ್ಲಿ ಅದ್ಧೂರಿಯಾಗಿ ಹೋರಿ ಬೆದರಿಸುವ ಸ್ಪರ್ಧೆ ಆಯೋಜಿಸಲಾಗಿತ್ತು.‌. ಈ ಸ್ಪರ್ಧೆಯ ರೋಚಕತೆ ಹೇಗಿತ್ತು ಎಂಬುದರ ಕಂಪ್ಲೀಟ್ ವರದಿ ಇಲ್ಲಿದೆ ನೋಡಿ...

ಹೀಗೆ ಮೈದಾನದಲ್ಲಿ ಭಯವಿಲ್ದೆ ಓಡುವ ಹೋರಿಗಳು. ಮತ್ತೊಂದೆಡೆ ಹೋರಿ ಅಖಾಡದಲ್ಲಿ ದಷ್ಟ ಪುಷ್ಟವಾದ ಹೋರಿ ಹಿಡಿಯುವ ಸಾಹಸಕ್ಕೆ ಕೈ ಹಾಕಿದ ಯುವಕರು. ಈ ಎಲ್ಲ ದೃಶ್ಯ ಹಾವೇರಿ ನಗರದ ಶ್ರೀ ವೀರಭದ್ರೇಶ್ವರ ದೇವಸ್ಥಾನ ಎದುರು ಕಂಡು ಬಂದಿದೆ... ಪ್ರತಿ ವರ್ಷದಂತೆ ಈ ವರ್ಷ ದೇವಸ್ಥಾನದದ ಎದುರು ಆಯೋಜನಕರು ಹೋರಿ ಭೆದರಿಸುವ ಸ್ಪರ್ಧೆ ಏರ್ಪಡಿಸಿದ್ದರು. ಈ ಸ್ಪರ್ಧೆಯಲ್ಲಿ ನಗರದ ಸುತ್ತಮುತ್ತಲಿನ ಹಳ್ಳಿಯ ರೈತರು & ಯುವಕರು ತಮ್ಮ ಹೋರಿ ಸಮೇತ ಆಗಮಿಸಿ ಅಖಾಡಕ್ಕೆ ತಮ್ಮ ಹೋರಿಯನ್ನ ಇಳಿಸಿ ಅದ್ದೂರಿಯಾಗಿ ಹೋರಿ ಹಬ್ಬ ಆಚರಿಸುತ್ತಾರೆ. ಹೌದು, ದೀಪಗಳ ಹಬ್ಬ ದೀಪಾವಳಿ. ಎಲ್ಲೆಡೆ ಹಬ್ಬದ ಸಂಭ್ರಮ ಮನೆಮಾಡಿದೆ. ಅದರಲ್ಲೂ ಕೃಷಿ ಪ್ರಧಾನ ಹಾವೇರಿ ಜಿಲ್ಲೆಯಲ್ಲಿ ದೀಪಾವಳಿ ಅಂದರೆ ಹೋರಿ ಹಬ್ಬದ ಸಡಗರ. ಹಳ್ಳಿಗಳಲ್ಲಿ ಹೋರಿ ಬೆದರಿಸುವ ಸ್ಪರ್ಧೆ ನಡೆಸುವುದು ಇಲ್ಲಿನ ಬಹುದೊಡ್ಡ ಸಂಪ್ರದಾಯ. ಈ ಬಾರಿ ಹಾವೇರಿ ನಗರದ ವೀರಭದ್ರೇಶ್ವರ ದೇವಸ್ಥಾನದ ಬಳಿ ಹೋರಿ ಬೆದರಿಸುವ ಸ್ಪರ್ಧೆ ಆಯೋಜಿಸಲಾಗಿತ್ತು.

ಇನ್ನೂ ಬಣ್ಣಬಣ್ಣದ ಅಲಂಕಾರಗಳಿಂದ ಕಂಗೊಳಿಸುವ ಹೋರಿ. ಹೋರಿಗಳ ಕೊಂಬಿಗೆ ಕಟ್ಟಿದ ಬಹುಮಾನ. ಅವುಗಳನ್ನು ಹಿಡಿಯಲು ಮುನ್ನುಗ್ಗುವ ಯುವಕರು. ನೋಡುಗರ ಕಣ್ಣಿಗೆ ಹಬ್ಬದಂತಿದೆ. ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಯುವಕರು ತಮ್ಮ ಸಾಹಸ ಪ್ರದರ್ಶಿಸಿದರೆ, ಸುತ್ತಲೂ ನೆರೆದಿದ್ದ ಜನರು ಶಿಳ್ಳೆ, ಚಪ್ಪಾಳೆಗಳ ಮೂಲಕ ಹುರಿದುಂಬಿಸಿದರು. ಇನ್ನು ಗ್ರಾಮೀಣ ಸಂಸ್ಕೃತಿ ಮತ್ತು ರೈತರ ಬದುಕಿನ ಅವಿಭಾಜ್ಯ ಅಂಗವಾಗಿರುವ ಹೋರಿ ಬೆದರಿಸುವ ಸ್ಪರ್ಧೆ ಇಂದಿಗೂ ತನ್ನ ಜನಪ್ರಿಯತೆಯನ್ನ ಹಾಗೆ ಉಳಿಸಿಕೊಂಡಿದೆ. ತಲೆತಲಾಂತರಗಳಿಂದ ನಡೆದುಕೊಂಡು ಬಂದಿರುವ ಸಂಪ್ರದಾಯವನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಉದ್ದೇಶದಿಂದ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ. ಆದ್ರೆ ಸ್ಪರ್ಧೆಗಳಲ್ಲಿ ಹೋರಿಗಳಿಗೂ, ಭಾಗವಹಿಸುವ ಯುವಕರಿಗೂ ಯಾವುದೇ ಅಪಾಯವಾಗದಂತೆ ಸುರಕ್ಷತ ಕ್ರಮ ಕೈಗೊಳ್ಳುವುದು ಅತ್ಯಗತ್ಯವಾಗಿದೆ..

ಒಟ್ಟಿನಲ್ಲಿ ದೀಪಾವಳಿ ಹಬ್ಬದ ಸಂಭ್ರಮಕ್ಕೆ ಕೋಬರಿ ಹೋರಿ ಬೆದರಿಸುವ ಸ್ಪರ್ಧೆ ಮತ್ತಷ್ಟು ಕಳೆ ತಂದಿದೆ. ಹಾವೇರಿ ಜಿಲ್ಲೆಯ ಗ್ರಾಮೀಣ ಸಂಸ್ಕೃತಿ & ಪರಂಪರೆ ಅನಾವರಣಗೊಳಿಸಿದೆ. ಹಬ್ಬದ ಸಂಭ್ರಮದ ಜೊತೆಗೆ ನಮ್ಮ ನೆಲದ ಸಂಸ್ಕೃತಿ, ಪರಂಪರೆಯನ್ನು ಉಳಿಸಿ ಬೆಳೆಸುವ ಈ ಕಾರ್ಯಕ್ರಮಗಳು ನಿಜಕ್ಕೂ ಶ್ಲಾಘನೀಯ....

 

Add Zee News as a Preferred Source
TAGS:
Kannada News