• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಹುಬ್ಬಳ್ಳಿ ಧಾರವಾಡ
  • /PSI ಹುದ್ದೆ ಕೊಡಿಸುವುದಾಗಿ ₹60 ಲಕ್ಷ ವಂಚನೆ: ಬೆಂಗಳೂರು ಮೂಲದ 8 ಜನರ ವಿರುದ್ಧ FIR!

PSI ಹುದ್ದೆ ಕೊಡಿಸುವುದಾಗಿ ₹60 ಲಕ್ಷ ವಂಚನೆ: ಬೆಂಗಳೂರು ಮೂಲದ 8 ಜನರ ವಿರುದ್ಧ FIR!

ಯಾದಗಿರಿಯ ಕೆಂಭಾವಿಯಲ್ಲಿ ಪಿಎಸ್‌ಐ ಹುದ್ದೆ ಕೊಡಿಸುವುದಾಗಿ ನಂಬಿಸಿ ₹60 ಲಕ್ಷ ವಂಚಿಸಿದ ಆರೋಪದಡಿ ಎಂಟು ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಹಂತ ಹಂತವಾಗಿ ಹಣ ಪಡೆದು ವಂಚಿಸಲಾಗಿದೆ ಎಂದು ಆರೋಪಿಸಲಾಗಿದ್ದು, ಕೆಂಭಾವಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Reported ByPuttaraj K AlurEdited ByPuttaraj K Alur
Published: Sep 21, 2026, 08:47 PM IST|Updated: Sep 21, 2026, 08:59 PM IST
joinshare
PSI ಹುದ್ದೆ ಕೊಡಿಸುವುದಾಗಿ ₹60 ಲಕ್ಷ ವಂಚನೆ: ಬೆಂಗಳೂರು ಮೂಲದ 8 ಜನರ ವಿರುದ್ಧ FIR!
Image Credit: PSI Job Fraud

About the Author

Puttaraj K Alur

Puttaraj K Alur

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 
Read More

Trending

  • News
  • Photos
  • Videos
ನಾವೂ ಯಾರಿಗೂ ಜೀವ ಬೆದರಿಕೆ‌ ಹಾಕಿಲ್ಲ: ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ

ನಾವೂ ಯಾರಿಗೂ ಜೀವ ಬೆದರಿಕೆ‌ ಹಾಕಿಲ್ಲ: ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ

2

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

3

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

4

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

5

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

PSI Job Fraud: ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ (PSI) ಹುದ್ದೆ ಕೊಡಿಸುವುದಾಗಿ ನಂಬಿಸಿ ₹60 ಲಕ್ಷ ಹಣ ಪಡೆದು ವಂಚಿಸಿರುವ ಆರೋಪದ ಪ್ರಕರಣ ಯಾದಗಿರಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಸರ್ಕಾರಿ ಉದ್ಯೋಗದ ಆಸೆ ತೋರಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಲಾಗಿದೆ ಎಂದು ಆರೋಪಿಸಿ ಸುರಪುರ ತಾಲೂಕಿನ ತಳ್ಳಳ್ಳಿ (ಬಿ) ಗ್ರಾಮದ ದೇವೇಂದ್ರ ಎಂಬುವವರು ಕೆಂಭಾವಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಎಂಟು ಜನರ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

PSI ಹುದ್ದೆ ಕೊಡಿಸುವುದಾಗಿ ₹1 ಕೋಟಿ ಬೇಡಿಕೆ

ದೇವೇಂದ್ರ ಅವರ ಅಣ್ಣನ ಪತ್ನಿ PSI ಹುದ್ದೆಗೆ ತಯಾರಿ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಗಿರೀಶ್‌ ಎಂಬಾತನ ಪರಿಚಯವಾಗಿತ್ತು ಎನ್ನಲಾಗಿದೆ. ಆತ PSI ಹುದ್ದೆ ಕೊಡಿಸುವುದಾಗಿ ಭರವಸೆ ನೀಡಿ, ಇದಕ್ಕಾಗಿ ₹1 ಕೋಟಿ ಹಣ ನೀಡಬೇಕೆಂದು ಬೇಡಿಕೆ ಇಟ್ಟಿದ್ದಾನೆಂದು ದೂರಿನಲ್ಲಿ ಆರೋಪಿಸಲಾಗಿದೆ. ನಂತರ ಗಿರೀಶ್‌ ದೀಪಕ್‌, ಶಶಾಂಕ್‌ಗೌಡ, ಉತ್ತೇಜ, ಶ್ರೇಯಸ್‌ಗೌಡ ಹಾಗೂ ಆನಂದ್‌ ಸೇರಿದಂತೆ ಕೆಲವರ ಮೊಬೈಲ್‌ ಸಂಖ್ಯೆಯನ್ನ ದೇವೇಂದ್ರ ಅವರಿಗೆ ನೀಡಿದ್ದ ಎನ್ನಲಾಗಿದೆ. ಈ ಮೂಲಕ ಉದ್ಯೋಗ ಕೊಡಿಸುವ ವಿಚಾರದಲ್ಲಿ ಹಲವರು ಭಾಗಿಯಾಗಿರುವಂತೆ ನಂಬಿಕೆ ಮೂಡಿಸಲಾಗಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ.

ರೂಮ್‌ನಲ್ಲಿ ₹20 ಲಕ್ಷ ನಗದು ನೀಡಿದ್ದ ಆರೋಪ

ಆರೋಪಿಗಳ ಮಾತನ್ನ ನಂಬಿದ ದೇವೇಂದ್ರ ಅವರು 2026ರ ಏಪ್ರಿಲ್‌ 7ರಂದು ಅರಸಿನಕುಂಟೆಯಲ್ಲಿರುವ ರೂಮ್‌ವೊಂದರಲ್ಲಿ ಗಿರೀಶ್‌ ಹಾಗೂ ದೀಪಕ್‌ಗೆ ₹20 ಲಕ್ಷ ನಗದು ನೀಡಿದ್ದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಇದಾದ ಬಳಿಕ ವಿವಿಧ ಖಾತೆಗಳಿಗೆ ಹಣ ವರ್ಗಾವಣೆ ಮಾಡಲಾಗಿದೆ ಎನ್ನಲಾಗಿದೆ. ಲಕ್ಷ್ಮೀ ವೆಂಕಟೇಶ್ವರ ಎಂಟರ್‌ಪ್ರೈಸಸ್‌, ಉತ್ತೇಜ ಹಾಗೂ ಎಂ.ಸಿ.ರಂಗನಾಥ್‌ ಅವರ ಖಾತೆಗಳಿಗೆ ಒಟ್ಟು ₹40 ಲಕ್ಷ ಹಣ ವರ್ಗಾವಣೆ ಮಾಡಲಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ. ನಗದು ಮತ್ತು ಬ್ಯಾಂಕ್‌ ವರ್ಗಾವಣೆ ಸೇರಿದಂತೆ ಹಂತ ಹಂತವಾಗಿ ಒಟ್ಟು ₹60 ಲಕ್ಷ ನೀಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸಾಲ, ಜಮೀನು ಮಾರಾಟ ಮಾಡಿ ಹಣ ಹೊಂದಿಸಿದ್ದ

PSI ಹುದ್ದೆ ಸಿಗಲಿದೆ ಎಂಬ ನಿರೀಕ್ಷೆಯಲ್ಲಿ ದೇವೇಂದ್ರ ಅವರು ದೊಡ್ಡ ಮೊತ್ತದ ಹಣ ಹೊಂದಿಸಲು ಹಲವು ಮಾರ್ಗಗಳನ್ನ ಅವಲಂಬಿಸಿದ್ದರು ಎನ್ನಲಾಗಿದೆ. ಹೋಮ್‌ ಲೋನ್‌ ಮಾಡುವುದು, ಹೊಲ ಮಾರಾಟ ಮಾಡುವುದು ಹಾಗೂ ಸಂಬಂಧಿಕರಿಂದ ಸಾಲ ಪಡೆಯುವ ಮೂಲಕ ಹಣ ಸಂಗ್ರಹಿಸಿ ಆರೋಪಿಗಳಿಗೆ ನೀಡಿದ್ದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಆದರೆ ನಂತರ PSI ನೇಮಕಾತಿ ನಡೆಯದ ಹಿನ್ನೆಲೆಯಲ್ಲಿ ನೀಡಿದ್ದ ಹಣ ವಾಪಸ್‌ ಕೇಳಲಾಗಿದೆ. ಈ ವೇಳೆ ಆರೋಪಿಗಳು ಹಣ ಹಿಂದಿರುಗಿಸದೆ ಯಾವುದೇ ರೀತಿಯ ಸ್ಪಂದನೆ ನೀಡಿಲ್ಲವೆಂದು ದೇವೇಂದ್ರ ಆರೋಪಿಸಿದ್ದಾರೆ. ಹೀಗಾಗಿ ಉದ್ಯೋಗವೂ ಸಿಗದೆ, ನೀಡಿದ್ದ ₹60 ಲಕ್ಷ ಹಣವೂ ವಾಪಸ್‌ ಬಾರದ ಹಿನ್ನೆಲೆಯಲ್ಲಿ ದೇವೇಂದ್ರ ಅವರು ಪೊಲೀಸರ ಮೊರೆ ಹೋಗಿದ್ದಾರೆ.

ಎಂಟು ಜನರ ವಿರುದ್ಧ ಪ್ರಕರಣ ದಾಖಲು

ದೂರಿನ ಆಧಾರದ ಮೇಲೆ ಕೆಂಭಾವಿ ಪೊಲೀಸರು ಗಿರೀಶ್‌, ದೀಪಕ್‌, ಶಶಾಂಕ್‌ಗೌಡ, ಉತ್ತೇಜ, ಶ್ರೇಯಸ್‌ಗೌಡ, ಆನಂದ್‌, ಎಂ.ಸಿ.ರಂಗನಾಥ್‌ ಹಾಗೂ ಸತ್ಯ ಅಲಿಯಾಸ್‌ ಸತೀಶ್‌ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS)ಯ ಕಲಂ 316(2), 318(2) ಹಾಗೂ 318(4) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಹಣದ ವಹಿವಾಟು, ಆರೋಪಿಗಳ ಪಾತ್ರ ಹಾಗೂ ಉದ್ಯೋಗ ಕೊಡಿಸುವುದಾಗಿ ನೀಡಿದ್ದ ಭರವಸೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಯಾರಾದರೂ ಹಣ ಕೇಳಿದರೆ ಸಾರ್ವಜನಿಕರು ಎಚ್ಚರಿಕೆ ವಹಿಸುವ ಅಗತ್ಯವಿದೆ. ನೇಮಕಾತಿ ಪ್ರಕ್ರಿಯೆಗಳು ಅಧಿಕೃತ ಮಾರ್ಗದಲ್ಲಿ ನಡೆಯುವುದರಿಂದ, ಮಧ್ಯವರ್ತಿಗಳ ಮಾತನ್ನ ನಂಬಿ ಹಣ ನೀಡುವ ಮುನ್ನ ದಾಖಲೆಗಳು ಮತ್ತು ಅಧಿಕೃತ ಮಾಹಿತಿಯನ್ನ ಪರಿಶೀಲಿಸುವುದು ಮುಖ್ಯವಾಗಿದೆ.

Add Zee News as a Preferred Source
TAGS:
Kannada News
Crime