SOCIAL MEDIA

Newsletter

PARTNER SITES
Select Language Select State

ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಗ್ಯದಲ್ಲಿ ದಿಢೀರ್ ವ್ಯತ್ಯಾಸ: ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ವಿಶ್ರಾಂತಿ!

ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ಇಂದಿನ ಅವರ ಎಲ್ಲಾ ಪೂರ್ವನಿಗದಿತ ಸಾರ್ವಜನಿಕ ಹಾಗೂ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಮಧ್ಯಾಹ್ನ 3 ಗಂಟೆಯ ನಂತರ ಅವರು ಹುಬ್ಬಳ್ಳಿಯಿಂದ ನೇರವಾಗಿ ದೆಹಲಿಗೆ ನಿರ್ಗಮಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Reported By Manjunath Naragund Written By Manjunath Naragund
Published: Sep 19, 2026, 02:14 PM IST | Updated: Sep 19, 2026, 02:28 PM IST
Image Credit: Amit Shah
Join

ಹುಬ್ಬಳ್ಳಿ:  ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಆರೋಗ್ಯದಲ್ಲಿ ದಿಢೀರ್ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ಅವರ ಇಂದಿನ ಹುಬ್ಬಳ್ಳಿ ಪ್ರವಾಸದ ಕಾರ್ಯಕ್ರಮಗಳಲ್ಲಿ ಪ್ರಮುಖ ಬದಲಾವಣೆಗಳಾಗಿವೆ. ವೈದ್ಯರ ಸಲಹೆಯ ಮೇರೆಗೆ ಸದ್ಯ ಹುಬ್ಬಳ್ಳಿಯ ಖಾಸಗಿ ಹೋಟೆಲ್ ಒಂದರಲ್ಲಿ ವಿಶ್ರಾಂತಿ ಪಡೆಯುತ್ತಿರುವ ಅವರು, ಮಧ್ಯಾಹ್ನದ ನಂತರ ದೆಹಲಿಗೆ ಪ್ರಯಾಣ ಬೆಳೆಸುವ ಸಾಧ್ಯತೆಯಿದೆ.

ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸಿದ್ದ ಅಮಿತ್ ಶಾ ಅವರಿಗೆ ದಿಢೀರ್ ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ತಕ್ಷಣವೇ ವೈದ್ಯರು ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ. ಹೀಗಾಗಿ ಅವರು ತಂಗಿರುವ ಖಾಸಗಿ ಹೋಟೆಲ್‌ನಲ್ಲಿಯೇ ವೈದ್ಯರ ತಂಡ ಬೀಡುಬಿಟ್ಟಿದೆ. ಅಮಿತ್ ಶಾ ಅವರ ವೈಯಕ್ತಿಕ ವೈದ್ಯಕೀಯ ತಂಡದ ಜೊತೆಗೆ ಹುಬ್ಬಳ್ಳಿಯ ಪ್ರತಿಷ್ಠಿತ ಕೆಎಂಸಿ ಹಾಗೂ ಕೆಎಲ್‌ಇ ಆಸ್ಪತ್ರೆಯ ಪ್ರಮುಖ ತಜ್ಞ ವೈದ್ಯರು ಹೋಟೆಲ್‌ಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ನಡೆಸಿದ್ದು, ಸೂಕ್ತ ಸಲಹೆಗಳನ್ನು ನೀಡಿದ್ದಾರೆ.

ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ಇಂದಿನ ಅವರ ಎಲ್ಲಾ ಪೂರ್ವನಿಗದಿತ ಸಾರ್ವಜನಿಕ ಹಾಗೂ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಮಧ್ಯಾಹ್ನ 3 ಗಂಟೆಯ ನಂತರ ಅವರು ಹುಬ್ಬಳ್ಳಿಯಿಂದ ನೇರವಾಗಿ ದೆಹಲಿಗೆ ನಿರ್ಗಮಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಮಿತ್ ಶಾ ಅನುಪಸ್ಥಿತಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯಿಂದ ಉದ್ಘಾಟನೆ:

ಅಮಿತ್ ಶಾ ಅವರ ಆರೋಗ್ಯ ಸಮಸ್ಯೆಯಿಂದಾಗಿ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗದ ಕಾರಣ, ನಿಗದಿಯಾಗಿದ್ದ ಪ್ರಮುಖ ಕಾರ್ಯಕ್ರಮವನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ನೆರವೇರಿಸಿದರು.

ಹುಬ್ಬಳ್ಳಿಯ ಗಬ್ಬೂರು ಕ್ರಾಸ್ ಬಳಿ ನೂತನವಾಗಿ ನಿರ್ಮಿಸಲಾಗಿರುವ 'ಕೆಎಲ್‌ಇ  ಹೈಯರ್ ಎಜುಕೇಶನ್ ಅಂಡ್ ರಿಸರ್ಚ್ ಅಕಾಡೆಮಿ  - ಜೆಜಿಎಂಎಂ (JGMM)' ವೈದ್ಯಕೀಯ ಕಾಲೇಜು ಕಟ್ಟಡ ಹಾಗೂ ಕೆಎಲ್‌ಇ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರದ ವಿವಿಧ ನೂತನ ವಿಭಾಗಗಳನ್ನು ಪ್ರಲ್ಹಾದ್ ಜೋಶಿ ಅವರು ಅಧಿಕೃತವಾಗಿ ಉದ್ಘಾಟಿಸಿದರು.

ಅಮಿತ್ ಶಾ ಅವರ ಅನುಪಸ್ಥಿತಿಯಲ್ಲೂ ಅತ್ಯಂತ ಶಿಸ್ತುಬದ್ಧವಾಗಿ ನಡೆದ ಈ ಉದ್ಘಾಟನಾ ಸಮಾರಂಭದಲ್ಲಿ ಉತ್ತರ ಕರ್ನಾಟಕ ಭಾಗದ ಪ್ರಮುಖ ಜನಪ್ರತಿನಿಧಿಗಳು ಭಾಗವಹಿಸಿದ್ದರು. ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಾಸಕರಾದ ಮಹೇಶ್ ಟೆಂಗಿನಕಾಯಿ, ಅರವಿಂದ ಬೆಲ್ಲದ ಸೇರಿದಂತೆ ಹಲವು ಗಣ್ಯರು ಹಾಗೂ ಕೆಎಲ್‌ಇ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕೇಂದ್ರ ಗೃಹ ಸಚಿವರ ಆರೋಗ್ಯದಲ್ಲಿ ಸಣ್ಣಮಟ್ಟದ ಏರುಪೇರಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ವೈದ್ಯರ ಸೂಚನೆಯಂತೆ ವಿಶ್ರಾಂತಿ ಪಡೆಯುತ್ತಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಪಕ್ಷದ ಮೂಲಗಳು ಹಾಗೂ ವೈದ್ಯಕೀಯ ಸಿಬ್ಬಂದಿ ಸ್ಪಷ್ಟಪಡಿಸಿದ್ದಾರೆ.

Add Zee News as a Preferred Source
TAGS:

About the Author

ಮಂಜುನಾಥ ನರಗುಂದ (Manjunath Naragund) 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.

ZEENEWS TRENDING STORIES