• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಹುಬ್ಬಳ್ಳಿ ಧಾರವಾಡ
  • /ವಿದ್ಯುತ್ ತಂತಿಗಳ ಸ್ಪಾರ್ಕ್‌ನಿಂದ 20 ಎಕರೆ ಕಬ್ಬಿನ ಗದ್ದೆ ಬೆಂಕಿಗಾಹುತಿ

ವಿದ್ಯುತ್ ತಂತಿಗಳ ಸ್ಪಾರ್ಕ್‌ನಿಂದ 20 ಎಕರೆ ಕಬ್ಬಿನ ಗದ್ದೆ ಬೆಂಕಿಗಾಹುತಿ

ಸುಮಾರು 20 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬಿನ ಗದ್ದೆಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.

Written ByChetana Devarmani
Published: Oct 04, 2026, 05:27 PM IST|Updated: Oct 04, 2026, 05:28 PM IST
joinshare
ವಿದ್ಯುತ್ ತಂತಿಗಳ ಸ್ಪಾರ್ಕ್‌ನಿಂದ 20 ಎಕರೆ ಕಬ್ಬಿನ ಗದ್ದೆ ಬೆಂಕಿಗಾಹುತಿ

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

Trending

  • News
  • Photos
  • Videos
ರಿಯಲ್ ಹೀರೋ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ : ಭಾರತೀಯ ಪೈಲಟ್‌‌ಗೆ ಇಸ್ರೇಲ್‌ನಿಂದ ಅತ್ಯುನ್ನತ ಗೌರವ!

ರಿಯಲ್ ಹೀರೋ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ : ಭಾರತೀಯ ಪೈಲಟ್‌‌ಗೆ ಇಸ್ರೇಲ್‌ನಿಂದ ಅತ್ಯುನ್ನತ ಗೌರವ!

2

6,6,6,6,6,6 ಆರು ಸಿಕ್ಸರ್​ ಸಿಡಿಸಿ ಅಬ್ಬರಿಸಿದ ಭಾರತೀಯ ಸ್ಟಾರ್‌ ಕ್ರಿಕೆಟರ್!

3

ಸಂಜು, ಶ್ರೇಯಸ್‌ ಅಯ್ಯರ್‌ ಅಲ್ಲ.. ವಿರಾಟ್‌ ಕೊಹ್ಲಿ 3ನೇ ಬ್ಯಾಟಿಂಗ್‌ ಸ್ಲಾಟ್‌ಗೆ ಬೆಸ್ಟ್ ಬ್ಯಾಟ್ಸ್‌ಮನ್‌‌ ಆಯ್ಕೆ

4

ನಕಲಿ ಮೆಡಿಸನ್ ಕಿಂಗ್ ಪಿನ್ ಪ್ರಶಾಂತನ ಕಳ್ಳಾಟ ಬಯಲು : ಟರ್ಕಿ ಭೇಟಿ ಸಿಕ್ರೇಟ್‌ ರಿವೀಲ್‌

5

ಎಚ್ಚರ.. ರಾಜ್ಯದ 12 ಜಿಲ್ಲೆಗಳಿಗೆ ಅಲರ್ಟ್‌ ಘೋಷಣೆ : ಮುಂದಿನ 3 ಗಂಟೆಗಳಲ್ಲಿ ಭಾರಿ ಮಳೆ ಸಾಧ್ಯತೆ

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಧಾರವಾಡ: ಸಾಲಸೂಲ ಮಾಡಿ ಬೆಳೆ ಬೆಳೆದಿದ್ದ ರೈತನಿಗೆ ವಿದ್ಯುತ್ ತಂತಿಗಳ ಸ್ಪಾರ್ಕ್‌ ದೊಡ್ಡ ಆಘಾತ ನೀಡಿದೆ. ಧಾರವಾಡ ತಾಲೂಕಿನ ತೇಗೂರ ಗ್ರಾಮದಲ್ಲಿ ಸುಮಾರು 20 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬಿನ ಗದ್ದೆಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ. ರೈತ ಮೋಹನ್ ಹುದ್ದಾರ ಅವರಿಗೆ ಸೇರಿದ ಕಬ್ಬಿನ ಗದ್ದೆ ಬೆಂಕಿಗಾಹುತಿಯಾಗಿದ್ದು, ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ.

ತೇಗೂರ ಗ್ರಾಮದ ಹೊರವಲಯದಲ್ಲಿ ಮೋಹನ್ ಹುದ್ದಾರ ಅವರು ಸಾಲಸೂಲ ಮಾಡಿ ಕಬ್ಬು ಬೆಳೆದಿದ್ದರು. ಉತ್ತಮ ಫಸಲಿನ ನಿರೀಕ್ಷೆಯಲ್ಲಿದ್ದ ರೈತನಿಗೆ ಏಕಾಏಕಿ ಸಂಭವಿಸಿದ ಬೆಂಕಿ ಅವಘಡ ಭಾರೀ ಸಂಕಷ್ಟ ತಂದೊಡ್ಡಿದೆ. ಕಬ್ಬಿನ ಗದ್ದೆಯ ಮೇಲ್ಭಾಗದಲ್ಲಿ ವಿದ್ಯುತ್ ತಂತಿಗಳು ಹಾದು ಹೋಗಿದ್ದು, ಎರಡು ತಂತಿಗಳು ಪರಸ್ಪರ ತಾಗಿ ಸ್ಪಾರ್ಕ್ ಉಂಟಾದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ವಿದ್ಯುತ್ ತಂತಿಗಳಿಂದ ಹೊತ್ತಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ಒಣಗಿದ್ದ ಕಬ್ಬಿನ ಗದ್ದೆಯಾದ್ಯಂತ ವ್ಯಾಪಿಸಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸ್ಥಳೀಯ ರೈತರು ಹಾಗೂ ಗ್ರಾಮಸ್ಥರು ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಆದರೆ ಗಾಳಿಯ ರಭಸ ಹಾಗೂ ಕಬ್ಬಿನ ಗದ್ದೆಯಲ್ಲಿ ಬೆಂಕಿ ವೇಗವಾಗಿ ಹರಡಿದ್ದರಿಂದ ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಸಾಧ್ಯವಾಗಲಿಲ್ಲ. ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಲಾಗಿದ್ದು, ಅವರು ಸ್ಥಳಕ್ಕೆ ಆಗಮಿಸುವಷ್ಟರಲ್ಲಿ ಹೆಚ್ಚಿನ ಪ್ರಮಾಣದ ಕಬ್ಬು ಬೆಂಕಿಗೆ ಆಹುತಿಯಾಗಿತ್ತು. ಸುಮಾರು 20 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬು ಸುಟ್ಟು ಕರಕಲಾಗಿದ್ದು, ರೈತ ಮೋಹನ್ ಹುದ್ದಾರ ಅವರಿಗೆ ಭಾರೀ ಆರ್ಥಿಕ ನಷ್ಟ ಸಂಭವಿಸಿದೆ.

ವಿದ್ಯುತ್ ತಂತಿಗಳ ಸಮಸ್ಯೆ ಕುರಿತು ಹಲವು ಬಾರಿ ಹೆಸ್ಕಾಂ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ರೈತರು ಆರೋಪಿಸಿದ್ದಾರೆ. ಕಬ್ಬಿನ ಗದ್ದೆಯ ಮೇಲ್ಭಾಗದಲ್ಲಿ ಹಾದು ಹೋಗಿರುವ ವಿದ್ಯುತ್ ತಂತಿಗಳನ್ನು ಸರಿಪಡಿಸುವಂತೆ ಹಲವು ಬಾರಿ ಮನವಿ ಮಾಡಿದ್ದರೂ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಇದೀಗ ಈ ಅವಘಡ ಸಂಭವಿಸಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಕಿ ಅವಘಡಕ್ಕೆ ವಿದ್ಯುತ್ ತಂತಿಗಳ ಸಮಸ್ಯೆಯೇ ಕಾರಣ ಎಂದು ಆರೋಪಿಸಿರುವ ರೈತರು ಹೆಸ್ಕಾಂ ಸಿಬ್ಬಂದಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಂತಿಗಳು ಪರಸ್ಪರ ತಾಗಿ ಸ್ಪಾರ್ಕ್ ಉಂಟಾಗಿರುವುದರಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗುತ್ತಿದ್ದು, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. ಇತ್ತ, ಬೆಂಕಿ ಅವಘಡದಿಂದ ಕಬ್ಬು ಸಂಪೂರ್ಣ ಸುಟ್ಟುಹೋಗಿರುವುದರಿಂದ ರೈತ ಮೋಹನ್ ಹುದ್ದಾರ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈಗಾಗಲೇ ಸಾಲ ಮಾಡಿ ಬೆಳೆ ಬೆಳೆದಿದ್ದ ರೈತನಿಗೆ ಕೈಗೆ ಬಂದ ಫಸಲು ಕಳೆದುಕೊಂಡಿರುವುದು ದೊಡ್ಡ ಹೊಡೆತವಾಗಿದೆ.

ಇದಲ್ಲದೆ, ಕಬ್ಬಿನ ಕಾರ್ಖಾನೆ ಕೂಡ ಬಂದ್ ಆಗಿರುವ ಹಿನ್ನೆಲೆಯಲ್ಲಿ ಸುಟ್ಟುಹೋದ ಕಬ್ಬನ್ನು ಯಾವುದೇ ರೀತಿಯಲ್ಲಿ ಬಳಕೆ ಮಾಡಲು ಅಥವಾ ಮಾರಾಟ ಮಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಬೆಳೆ ಸಂಪೂರ್ಣ ನಷ್ಟವಾಗಿದ್ದು, ರೈತನಿಗೆ ಪರಿಹಾರವೇ ಪ್ರಮುಖ ಆಶ್ರಯವಾಗಿದೆ. ಸುಟ್ಟು ಕರಕಲಾದ ಕಬ್ಬಿನ ಗದ್ದೆಯನ್ನು ಕಂಡು ರೈತ ಹಾಗೂ ಕುಟುಂಬಸ್ಥರು ಕಂಗಾಲಾಗಿದ್ದಾರೆ. ಬೆಳೆ ನಷ್ಟದಿಂದ ಉಂಟಾಗಿರುವ ಆರ್ಥಿಕ ಸಂಕಷ್ಟದಿಂದ ರೈತನನ್ನು ರಕ್ಷಿಸಲು ಸರ್ಕಾರ ಕೂಡಲೇ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಹಾಗೂ ರೈತರು ಮನವಿ ಮಾಡಿದ್ದಾರೆ.

ಈ ಘಟನೆ ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ವಿದ್ಯುತ್ ತಂತಿಗಳಿಂದಲೇ ಬೆಂಕಿ ಹೊತ್ತಿಕೊಂಡಿತೇ ಎಂಬುದರ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸಬೇಕಿದೆ. ರೈತರು ಈ ಹಿಂದೆ ನೀಡಿದ್ದ ಮನವಿಗಳ ಬಗ್ಗೆ ಕೂಡ ಪರಿಶೀಲಿಸಿ, ನಿರ್ಲಕ್ಷ್ಯ ಕಂಡುಬಂದಿದ್ದರೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಸಾಲ ಮಾಡಿ ಬೆಳೆದಿದ್ದ 20 ಎಕರೆ ಕಬ್ಬು ಬೆಂಕಿಗಾಹುತಿಯಾಗಿರುವುದು ತೇಗೂರ ಗ್ರಾಮದ ರೈತನಿಗೆ ದೊಡ್ಡ ಆಘಾತ ತಂದಿದೆ. ಕೈಗೆ ಬಂದಿದ್ದ ಫಸಲು ಕಳೆದುಕೊಂಡಿರುವ ರೈತನಿಗೆ ಸರ್ಕಾರ ಸೂಕ್ತ ಪರಿಹಾರ ಒದಗಿಸಿ ನೆರವಾಗಬೇಕು ಎಂಬ ಒತ್ತಾಯ ಇದೀಗ ಕೇಳಿಬಂದಿದೆ.

 

Add Zee News as a Preferred Source
TAGS:
Kannada News