SOCIAL MEDIA

Newsletter

PARTNER SITES
Select Language Select State

ಸರ್ಕಾರದ ವಿರುದ್ಧ ಕಬ್ಬು ಬೆಳೆಗಾರರ ಸಿಂಹಗರ್ಜನೆ

ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸಬೇಕು ಎಂದು ಆಗ್ರಹಿಸಿ ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ ನಡೀತಿರೋ ಬೃಹತ್ ರೈತರ ಹೋರಾಟ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.

Written By Chetana Devarmani
Published: Oct 28, 2026, 05:26 PM IST | Updated: Oct 28, 2026, 05:28 PM IST
Join

ಬೆಳಗಾವಿ: ಗಡಿನಾಡು ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಆಕ್ರೋಶದ ಜ್ವಾಲೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸಬೇಕು ಎಂದು ಆಗ್ರಹಿಸಿ ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ ನಡೀತಿರೋ ಬೃಹತ್ ರೈತರ ಹೋರಾಟ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಎಲ್ಲೆಲ್ಲೂ ರೈತರೇ ರೈತರು... ಸರ್ಕಾರದ ವಿರುದ್ಧ ಕಬ್ಬು ಬೆಳೆಗಾರರ ಸಿಂಹಗರ್ಜನೆ. ಒಂದೆಡೆ ಧರಣಿ ಸತ್ಯಾಗ್ರಹ, ಮತ್ತೊಂದೆಡೆ ಸಕ್ಕರೆ ಕಾರ್ಖಾನೆಗಳಿಗೆ ಮುತ್ತಿಗೆ ಹಾಕುತ್ತಿರುವ ರೈತರು. ಹೌದು ಇದು ಅನ್ನದಾತರ ಒಗ್ಗಟ್ಟಿನ ಶಕ್ತಿಗೆ ಸಾಕ್ಷಿಯಾದ ಗುರ್ಲಾಪುರದ ರೌದ್ರಾವತಾರ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ ಕಬ್ಬು ಬೆಳೆಗಾರರ ಹೋರಾಟ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ! ನಮ್ಮ ಕಬ್ಬಿಗೆ ಸೂಕ್ತ ಬೆಲೆ ಕೊಡಿ, ಇಲ್ಲದಿದ್ರೆ ಹೋರಾಟ ಬಿಡಲ್ಲ ಅಂತ ಸಾವಿರಾರು ರೈತರು ಬೀದಿಗಿಳಿದು ಹೋರಾಟದ ಅಖಾಡದಲ್ಲೇ ಬೀಡುಬಿಟ್ಟಿದ್ದಾರೆ. ಗುರ್ಲಾಪುರದಲ್ಲಿ ಎಲ್ಲಿ ನೋಡಿದರೂ ಕಣ್ಣು ಹಾಯಿಸಿದಷ್ಟೂ ರೈತರೇ ರೈತರು. ನಮಗೆ ನ್ಯಾಯ ಸಿಗುವವರೆಗೂ ಒಂದು ಹೆಜ್ಜೆಯೂ ಹಿಂದೆ ಇಡಲ್ಲ ಅಂತ ಕಬ್ಬು ಬೆಳೆಗಾರರು ಸರ್ಕಾರಕ್ಕೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ರೈತರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲೇಬೇಕು. ಕಬ್ಬು ಬೆಳೆಗಾರರ ವರ್ಷಗಳ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲೇಬೇಕು ಇವೇ ಗುರ್ಲಾಪುರದಲ್ಲಿ ಧಗಧಗಿಸುತ್ತಿರೋ ರೈತ ಹೋರಾಟದ ಪ್ರಮುಖ ಬೇಡಿಕೆಗಳು. ನಾಲ್ಕು ದಿನ ಕಳೆದರೂ ಈ ಹೋರಾಟದ ಕಾವು ಎಳ್ಳಷ್ಟೂ ಕಡಿಮೆಯಾಗಿಲ್ಲ. ಬದಲಾಗಿ, ದಿನದಿಂದ ದಿನಕ್ಕೆ ರೈತರ ಒಗ್ಗಟ್ಟು ನೂರರಷ್ಟು ಬಲಗೊಳ್ಳುತ್ತಿದೆ. ನ್ಯಾಯ ಸಿಗೋವರೆಗೂ ವಿಶ್ರಮಿಸೋ ಮಾತೇ ಇಲ್ಲ ಅಂತ ಬಿಸಿಲನ್ನೂ ಲೆಕ್ಕಿಸದೆ ರೈತರು ಎಚ್ಚರಿಕೆಯ ಮುನ್ನೆಚ್ಚರಿಕೆ ನೀಡಿದ್ದಾರೆ. ಇತ್ತ ಹೋರಾಟದ ಕಾವು ಸಕ್ಕರೆ ಕಾರ್ಖಾನೆಗಳಿಗೂ ತಟ್ಟಿದೆ.‌ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಬಿಸಿ ಮುಟ್ಟಿಸೋ ಉದ್ದೇಶದಿಂದ ರೈತರ ಪಡೆ ಇದೀಗ ಸಕ್ಕರೆ ಕಾರ್ಖಾನೆಗಳ ಬಾಗಿಲು ತಟ್ಟುತ್ತಿದೆ.

ಬೇಡಕಿಹಾಳ, ಜೈನಾಪುರ, ಉಗಾರ ಸೇರಿದಂತೆ ವಿವಿಧ ಸಕ್ಕರೆ ಕಾರ್ಖಾನೆಗಳಿಗೆ ದಿಢೀರ್ ಭೇಟಿ ನೀಡಿದ ರೈತರ ತಂಡ, ಕಾರ್ಖಾನೆ ಮಾಲೀಕರಿಗೆ ಮನವಿ ಪತ್ರ ಸಲ್ಲಿಸಿದೆ. ಎಂಎಸ್‌ಪಿ ದರ ನಿಗದಿಯಾಗುವವರೆಗೂ ಯಾವುದೇ ಕಾರಣಕ್ಕೂ ಸಕ್ಕರೆ ಮಾರಾಟ ಮಾಡಬೇಡಿ, ಎಂದು ಪಟ್ಟು ಹಿಡಿದಿದ್ದಾರೆ. ರೈತರ ಈ ಧರ್ಮಸಂಕಟಕ್ಕೆ ಸಕ್ಕರೆ ಕಾರ್ಖಾನೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಕೂಡ ಧನಾತ್ಮಕವಾಗಿ ಸ್ಪಂದಿಸಿರುವುದು ಈ ಹೋರಾಟಕ್ಕೆ ಮತ್ತಷ್ಟು ಆನೆಬಲ ತಂದಿದೆ.

ಒಂದೆಡೆ ಗುರ್ಲಾಪುರದಲ್ಲಿ ಬೃಹತ್ ಜನಸ್ತೋಮದ ಧರಣಿ. ಮತ್ತೊಂದೆಡೆ ಸಕ್ಕರೆ ಕಾರ್ಖಾನೆಗಳ ಮೇಲೆ ಒತ್ತಡ ಹೇರೋ ತಂತ್ರ. ಕಬ್ಬು ಬೆಳೆಗಾರರ ಈ ಕ್ರಾಂತಿಕಾರಿ ಹೋರಾಟ ಇದೀಗ ಇಡೀ ರಾಜ್ಯದ ಗಮನ ಸೆಳೆದಿದೆ. ಒಟ್ಟಿನಲ್ಲಿ ಅನ್ನದಾತರ ಈ ಕಣ್ಣೀರು ಮತ್ತು ಆಕ್ರೋಶಕ್ಕೆ ಸರ್ಕಾರ ಸ್ಪಂದಿಸುತ್ತಾ? ಕಬ್ಬಿಗೆ ಸೂಕ್ತ ಬೆಲೆ ಸಿಗುತ್ತಾ? ನಿರಂತರವಾಗಿ ಬೀದಿಯಲ್ಲಿ ಕುಳಿತಿರೋ ರೈತರ ಹೋರಾಟಕ್ಕೆ ನ್ಯಾಯ ಸಿಗೋದು ಯಾವಾಗ? ಉತ್ತರ ಏನೇ ಇರಲಿ... ನ್ಯಾಯ ಸಿಗುವವರೆಗೂ ಹೋರಾಟದ ಅಖಾಡದಿಂದ ಹಿಂದೆ ಸರಿಯಲ್ಲ ಎಂಬ ರೈತರ ಎಚ್ಚರಿಕೆ ಮಾತ್ರ ಅತ್ಯಂತ ಸ್ಪಷ್ಟವಾಗಿದೆ.
 

Add Zee News as a Preferred Source
TAGS:

About the Author

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."

ZEENEWS TRENDING STORIES