• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಹುಬ್ಬಳ್ಳಿ ಧಾರವಾಡ
  • /ಕಬ್ಬಿನ ದರ ನಿಗದಿಗೆ ರೈತರ ಹೋರಾಟ: ಕೇಂದ್ರ ಸರ್ಕಾರಕ್ಕೆ ಮತ್ತೆ ಡೆಡ್‌ಲೈನ್ ನೀಡಿದ ರೈತರು

ಕಬ್ಬಿನ ದರ ನಿಗದಿಗೆ ರೈತರ ಹೋರಾಟ: ಕೇಂದ್ರ ಸರ್ಕಾರಕ್ಕೆ ಮತ್ತೆ ಡೆಡ್‌ಲೈನ್ ನೀಡಿದ ರೈತರು

ಇಂದು ಸಂಜೆ ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮಕ್ಕೆ ರೈತರ ಪಾದಯಾತ್ರೆ ಆಗಮಿಸಲಿದೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಚೂನಪ್ಪ ಪೂಜಾರಿ ತಿಳಿಸಿದ್ದಾರೆ.

Written ByChetana Devarmani
Published: Oct 18, 2026, 03:46 PM IST|Updated: Oct 18, 2026, 03:47 PM IST
joinshare
ಕಬ್ಬಿನ ದರ ನಿಗದಿಗೆ ರೈತರ ಹೋರಾಟ: ಕೇಂದ್ರ ಸರ್ಕಾರಕ್ಕೆ ಮತ್ತೆ ಡೆಡ್‌ಲೈನ್ ನೀಡಿದ ರೈತರು

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

Trending

  • News
  • Photos
  • Videos
‘ರಾಹುಲ್ ಗಾಂಧಿ ಒರಿಜಿನಲ್ ಬ್ರೀಡ್ ಅಲ್ಲ’; ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ತೀವ್ರ ವಾಗ್ದಾಳಿ

‘ರಾಹುಲ್ ಗಾಂಧಿ ಒರಿಜಿನಲ್ ಬ್ರೀಡ್ ಅಲ್ಲ’; ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ತೀವ್ರ ವಾಗ್ದಾಳಿ

2

ಕರ್ನಾಟಕ ಬಂದ್‌..! ವಾರದೊಳಗೆ ರೈತರ ಬೇಡಿಕೆ ಈಡೇರದಿದ್ದರೆ ವಾಟಾಳ್‌ ಉಗ್ರ ಹೋರಾಟದ ಎಚ್ಚರಿಕೆ

3

ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಸುನಾಮಿ .. ಸಿದ್ದರಾಮಯ್ಯ ಪರ ಬ್ಯಾಟ್

4

ಕೊಟ್ಟಿಗೆಗೆ ನುಗ್ಗಿ ಬೀದಿ ನಾಯಿಗಳಿಂದ ಕುರಿ-ಮೇಕೆಗಳ ಮಾರಣಹೋಮ : ಪಿಡಿಒ ನಿರ್ಲಕ್ಷ್ಯಕ್ಕೆ ರೈತರು ಕಂಗಾಲು

5

ತಿರುಮಲಕ್ಕೆ ಹೋಗುವ ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್‌.. ಹಬ್ಬದ ರಜೆಗೆ ಈ ರೈಲುಗಳಲ್ಲಿ ಸೀಟು ಖಾಲಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಧಾರವಾಡ: ಕಬ್ಬಿನ ದರ ನಿಗದಿಗೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ. ಕಬ್ಬಿನ ದರದ ಕುರಿತು ರೈತರ ಬೇಡಿಕೆ ಈಡೇರಿಸಲು ಕೇಂದ್ರ ಸರ್ಕಾರಕ್ಕೆ ಮತ್ತೊಮ್ಮೆ ಗಡುವು ನೀಡಲಾಗಿದ್ದು, ಇಂದು ಸಂಜೆ ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮಕ್ಕೆ ರೈತರ ಪಾದಯಾತ್ರೆ ಆಗಮಿಸಲಿದೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಚೂನಪ್ಪ ಪೂಜಾರಿ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಚೂನಪ್ಪ ಪೂಜಾರಿ, ಇಂದು ಸಂಜೆ ಗುಳೇದಕೊಪ್ಪ ಗ್ರಾಮಕ್ಕೆ ಪಾದಯಾತ್ರೆ ಮೂಲಕ ಆಗಮಿಸಲಿದ್ದೇವೆ. ರೈತರ ಸಮಸ್ಯೆ ಆಲಿಸಲು ಕೇಂದ್ರ ಸರ್ಕಾರದ ನಿಯೋಗ ಗ್ರಾಮಕ್ಕೆ ಬರಲಿದ್ದು, ಧಾರವಾಡ ಹಾಗೂ ಬೆಳಗಾವಿ ಜಿಲ್ಲಾಧಿಕಾರಿಗಳು ಕೂಡ ಉಪಸ್ಥಿತರಿರಲಿದ್ದಾರೆ. ಈ ವೇಳೆ ರೈತರೊಂದಿಗೆ ಜಿಲ್ಲಾಧಿಕಾರಿಗಳು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಮಾತುಕತೆ ನಡೆಸಲಿದ್ದಾರೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರದ ನಿಯೋಗ ರೈತರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಬೇಡಿಕೆಗಳನ್ನು ಈಡೇರಿಸಲು ಒಪ್ಪಿದರೆ ಹಬ್ಬವನ್ನು ಆಚರಿಸುತ್ತೇವೆ. ಇಲ್ಲವಾದರೆ ಹೋರಾಟವನ್ನು ಮುಂದುವರಿಸುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಅಕ್ಟೋಬರ್ 22ರಂದು ಯರಿಕೊಪ್ಪ ಗ್ರಾಮಕ್ಕೆ ರೈತರ ಪಾದಯಾತ್ರೆ ಆಗಮಿಸಲಿದ್ದು, ಅಂದು ಬೃಹತ್ ಸಂಖ್ಯೆಯಲ್ಲಿ ರೈತರು ಸೇರಲಿದ್ದಾರೆ ಎಂದು ಚೂನಪ್ಪ ಪೂಜಾರಿ ತಿಳಿಸಿದ್ದಾರೆ. ಆ ಬಳಿಕವೂ ರೈತರ ಬೇಡಿಕೆಗಳಿಗೆ ಸ್ಪಂದನೆ ಸಿಗದಿದ್ದರೆ ದೊಡ್ಡ ಮಟ್ಟದ ಜನಾಂದೋಲನ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಇಂದು ಸಂಜೆ ನಡೆಯಲಿರುವ ಸಭೆಗೆ ಕೇಂದ್ರ ಸಚಿವರು ಆಗಮಿಸಿ ರೈತರ ಸಮಸ್ಯೆಗಳನ್ನು ಆಲಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂಬುದು ನಮ್ಮ ಆಗ್ರಹ. ಸಭೆಗೆ ಬರುವ ಸಚಿವರಿಗೆ ಯಾವುದೇ ತೊಂದರೆಯಾಗದಂತೆ ರೈತರು ನೋಡಿಕೊಳ್ಳಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರ ಹೋರಾಟದ ಸ್ಥಳಕ್ಕೆ ಬಂದು ತೆರಳಿದ್ದು, ಅವರಿಗೂ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗಿದೆ. ಅದೇ ರೀತಿ ಕೇಂದ್ರ ಸಚಿವರಿಗೂ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ. ಹೀಗಾಗಿ ಕೇಂದ್ರ ಸಚಿವರು ಇಂದು ಸಂಜೆ ಗುಳೇದಕೊಪ್ಪಕ್ಕೆ ಆಗಮಿಸಿ ರೈತರ ಬೇಡಿಕೆಗಳ ಕುರಿತು ನಿರ್ಧಾರ ಕೈಗೊಳ್ಳಬೇಕು ಎಂದು ಚೂನಪ್ಪ ಪೂಜಾರಿ ಒತ್ತಾಯಿಸಿದ್ದಾರೆ.

 

Add Zee News as a Preferred Source
TAGS:
Kannada News