• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಹುಬ್ಬಳ್ಳಿ ಧಾರವಾಡ
  • /ಪಶ್ಚಿಮ ಪದವೀಧರರ ಕ್ಷೇತ್ರದಲ್ಲಿ ಎಸ್.ವಿ.ಸಂಕನೂರ್‌ಗೆ ಭರ್ಜರಿ ಗೆಲುವು; ಕಾಂಗ್ರೆಸ್ ಅಭ್ಯರ್ಥಿಗಿಂತ 9,323 ಮತಗಳ ಮುನ್ನಡೆ!

ಪಶ್ಚಿಮ ಪದವೀಧರರ ಕ್ಷೇತ್ರದಲ್ಲಿ ಎಸ್.ವಿ.ಸಂಕನೂರ್‌ಗೆ ಭರ್ಜರಿ ಗೆಲುವು; ಕಾಂಗ್ರೆಸ್ ಅಭ್ಯರ್ಥಿಗಿಂತ 9,323 ಮತಗಳ ಮುನ್ನಡೆ!

ಪಶ್ಚಿಮ ಪದವೀಧರರ ಕ್ಷೇತ್ರಕ್ಕೆ ಅಕ್ಟೋಬರ್ 23ರಂದು ಮತದಾನ ನಡೆದಿತ್ತು. ಕ್ಷೇತ್ರದಲ್ಲಿ ಒಟ್ಟು 97,400 ಮತದಾರರಿದ್ದು, ಅವರಲ್ಲಿ 73,658 ಮಂದಿ ಮತ ಚಲಾಯಿಸಿದ್ದರು. ಈ ಮೂಲಕ ಶೇ.75.62ರಷ್ಟು ಮತದಾನ ದಾಖಲಾಗಿತ್ತು. ಮತ ಚಲಾಯಿಸಿದವರಲ್ಲಿ 45,110 ಪುರುಷರು ಮತ್ತು 28,548 ಮಹಿಳೆಯರು ಸೇರಿದ್ದರು.

Written ByPuttaraj K Alur
Published: Oct 28, 2026, 07:53 AM IST|Updated: Oct 28, 2026, 08:29 AM IST
joinshare
ಪಶ್ಚಿಮ ಪದವೀಧರರ ಕ್ಷೇತ್ರದಲ್ಲಿ ಎಸ್.ವಿ.ಸಂಕನೂರ್‌ಗೆ ಭರ್ಜರಿ ಗೆಲುವು; ಕಾಂಗ್ರೆಸ್ ಅಭ್ಯರ್ಥಿಗಿಂತ 9,323 ಮತಗಳ ಮುನ್ನಡೆ!
Image Credit: SV Sankannur

About the Author

Puttaraj K Alur

Puttaraj K Alur

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 
Read More

Trending

  • News
  • Photos
  • Videos
ಬೆಂಗಳೂರಿನಲ್ಲಿ ಡಿಆರ್‌ಡಿಒ ಹಿರಿಯ ವಿಜ್ಞಾನಿ ಆತ್ಮಹ*ತ್ಯೆ: ಸೀಗೇಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ದುರಂತ!

ಬೆಂಗಳೂರಿನಲ್ಲಿ ಡಿಆರ್‌ಡಿಒ ಹಿರಿಯ ವಿಜ್ಞಾನಿ ಆತ್ಮಹ*ತ್ಯೆ: ಸೀಗೇಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ದುರಂತ!

2

ಪರಿಷತ್ ಚುನಾವಣೆಯಲ್ಲಿ ಎನ್‌ಡಿಎಗೆ ಗೆಲುವಿನ ಸಿಹಿ; ಕಾಂಗ್ರೆಸ್‌ಗೆ ಸೋಲಿನ ಕಹಿ!

3

ಪಶ್ಚಿಮ ಪದವೀಧರರ ಕ್ಷೇತ್ರದಲ್ಲಿ ಎಸ್.ವಿ.ಸಂಕನೂರ್‌ಗೆ ಭರ್ಜರಿ ಗೆಲುವು; ಕಾಂಗ್ರೆಸ್ ಅಭ್ಯರ್ಥಿಗಿಂತ 9,323 ಮತಗಳ ಮುನ್ನಡೆ!

4

Today Horoscope October 28th: ಈ ರಾಶಿಯವರಿಗೆ ದೇವರ ಅನುಗ್ರಹದಿಂದ ದೊಡ್ಡ ಯಶಸ್ಸು, ಸುಖ-ಸಮೃದ್ಧಿ!

5

ಆಂಧ್ರ, ಒಡಿಶಾಗೆ ‘ಅರ್ನಬ್’ ಚಂಡಮಾರುತ ಭೀತಿ: 50 ರೈಲು, 21 ವಿಮಾನ ರದ್ದು; 30 ಸಾವಿರಕ್ಕೂ ಹೆಚ್ಚು ಜನರ ಸ್ಥಳಾಂತರ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Karnataka Legislative Council Election 2026: ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ-2026ರ ಮತ ಎಣಿಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಎಸ್.ವಿ.ಸಂಕನೂರ ಅವರು ಗೆಲುವು ಸಾಧಿಸಿದ್ದಾರೆ. ಮೊದಲ ಪ್ರಾಶಸ್ತ್ಯದ ಮತಗಳ ಎಣಿಕೆಯಲ್ಲಿ 33,711 ಮತಗಳನ್ನ ಪಡೆದ ಅವರು, ಕಾಂಗ್ರೆಸ್ ಅಭ್ಯರ್ಥಿ ಮೋಹನ ಲಿಂಬಿಕಾಯಿ ಅವರಿಗಿಂತ 9,323 ಮತಗಳ ಅಂತರದ ಮುನ್ನಡೆ ಸಾಧಿಸಿ ಚುನಾಯಿತರಾಗಿದ್ದಾರೆಂದು ಚುನಾವಣಾಧಿಕಾರಿ ಹಾಗೂ ಬೆಳಗಾವಿ ಪ್ರಾದೇಶಿಕ ಆಯುಕ್ತೆ ಕೆ.ಎಂ.ಜಾನಕಿ ತಿಳಿಸಿದ್ದಾರೆ. ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಅಕ್ಟೋಬರ್ 27ರಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಿತ್ತು. ಅಕ್ಟೋಬರ್ 28ರ ಮಧ್ಯರಾತ್ರಿ 2 ಗಂಟೆಗೆ ಮತ ಎಣಿಕೆ ಕಾರ್ಯ ಶಾಂತಿಯುತವಾಗಿ ಮುಕ್ತಾಯಗೊಂಡಿತು.

ಶೇ.75.62ರಷ್ಟು ಮತದಾನ

ಪಶ್ಚಿಮ ಪದವೀಧರರ ಕ್ಷೇತ್ರಕ್ಕೆ ಅಕ್ಟೋಬರ್ 23ರಂದು ಮತದಾನ ನಡೆದಿತ್ತು. ಕ್ಷೇತ್ರದಲ್ಲಿ ಒಟ್ಟು 97,400 ಮತದಾರರಿದ್ದು, ಅವರಲ್ಲಿ 73,658 ಮಂದಿ ಮತ ಚಲಾಯಿಸಿದ್ದರು. ಈ ಮೂಲಕ ಶೇ.75.62ರಷ್ಟು ಮತದಾನ ದಾಖಲಾಗಿತ್ತು. ಮತ ಚಲಾಯಿಸಿದವರಲ್ಲಿ 45,110 ಪುರುಷರು ಮತ್ತು 28,548 ಮಹಿಳೆಯರು ಸೇರಿದ್ದರು. ಮತದಾನದ ಬಳಿಕ ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆದ ಮತ ಎಣಿಕೆ ಪ್ರಕ್ರಿಯೆ ಅಕ್ಟೋಬರ್ 28ರ ಮಧ್ಯರಾತ್ರಿ ಪೂರ್ಣಗೊಂಡಿತು.

ಸಂಕನೂರಗೆ 33,711 ಮತ

ಮೊದಲ ಪ್ರಾಶಸ್ತ್ಯದ ಮತಗಳ ಎಣಿಕೆಯಲ್ಲಿ ಎಸ್.ವಿ.ಸಂಕನೂರ ಅವರು 33,711 ಮತಗಳನ್ನ ಪಡೆದು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮೋಹನ ಲಿಂಬಿಕಾಯಿ ಅವರು 24,388 ಮತಗಳನ್ನ ಪಡೆದಿದ್ದಾರೆ. ಇಬ್ಬರ ನಡುವಿನ ಮತಗಳ ಅಂತರ 9,323 ಆಗಿದೆ. ಇತರ ಅಭ್ಯರ್ಥಿಗಳ ಪೈಕಿ ಪಕ್ಷೇತರ ಅಭ್ಯರ್ಥಿ ಕಾಂತಕುಮಾರ ಆರ್. ಅವರು 4,055 ಮತಗಳನ್ನ ಪಡೆದಿದ್ದಾರೆ. ಪಕ್ಷೇತರ ಅಭ್ಯರ್ಥಿ ಡಾ.ಜಿ.ಎಚ್.ಇಮ್ರಾಪುರ ಅವರಿಗೆ 338 ಮತಗಳು ಲಭಿಸಿವೆ. ಉಮೇಶ ಕೃಷ್ಣಪ್ಪ ದೈವಜ್ಞ ಅವರು 228 ಮತಗಳನ್ನ ಪಡೆದರೆ, ನಿಶಾಂತ ಶಂಕರ ಬಂಕಾಪುರ ಅವರಿಗೆ 143 ಮತಗಳು ಬಂದಿವೆ.

ಕೆಆರ್‌ಎಸ್ ಪಕ್ಷದ ಅಭ್ಯರ್ಥಿ ಕೃಷ್ಣಾ ಎಚ್.ಬಳೆಗಾರ ಅವರು 141 ಮತಗಳನ್ನ ಪಡೆದಿದ್ದಾರೆ. ಪಕ್ಷೇತರ ಅಭ್ಯರ್ಥಿ ಅಬ್ದುಲ್ ಮನ್ನಾನರಿಗೆ 120 ಮತಗಳು ಲಭಿಸಿವೆ. ಸಂತೋಷ ಮನೋಹರ ವೆರ್ಣಿಕರ ಅವರು 85 ಮತಗಳನ್ನ ಪಡೆದಿದ್ದಾರೆ. ಇನ್ನು ಜೀಶಾನ್ ಅಹ್ಮದಖಾನ್ ಪಟ್ಹಾನ್ ಅವರಿಗೆ 62 ಮತಗಳು, ಮಲ್ಲಿಕಾರ್ಜುನ ಚನ್ನಪ್ಪ ಗಂಗಾಧರ ಅವರಿಗೆ 55 ಮತಗಳು, ತಳವಾರ ಶಿವಕುಮಾರ ಅವರಿಗೆ 42 ಮತಗಳು ಹಾಗೂ ಜಿಶಾನ್ ಡಿ. ಶಿರಸಂಗಿ ಮತ್ತು ಬಸವರಾಜ ಶಂಕರಪ್ಪ ಕೊಟಗಿ ಅವರಿಗೆ ತಲಾ 39 ಮತಗಳು ಲಭಿಸಿವೆ.

10,245 ಮತಗಳು ತಿರಸ್ಕೃತ

ಮತ ಎಣಿಕೆಯ ವಿವರಗಳ ಪ್ರಕಾರ, ಒಟ್ಟು 73,691 ಮತಗಳಲ್ಲಿ 63,446 ಮತಗಳು ಮಾನ್ಯವಾಗಿದ್ದು, 10,245 ಮತಗಳು ತಿರಸ್ಕೃತಗೊಂಡಿವೆ ಎಂದು ಚುನಾವಣಾಧಿಕಾರಿ ಕೆ.ಎಂ.ಜಾನಕಿ ತಿಳಿಸಿದ್ದಾರೆ. ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮೊದಲ ಪ್ರಾಶಸ್ತ್ಯದ ಮತಗಳ ಆಧಾರದಲ್ಲಿ ಎಸ್.ವಿ.ಸಂಕನೂರ ಅವರು ಚುನಾಯಿತರಾಗಿದ್ದಾರೆ ಎಂದು ಅಧಿಕಾರಿಗಳು ಘೋಷಿಸಿದ್ದಾರೆ.

Add Zee News as a Preferred Source
TAGS:
Karnataka Politics
Kannada News