• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಹುಬ್ಬಳ್ಳಿ ಧಾರವಾಡ
  • /ಹಂಪಿಗೆ ಯುನೆಸ್ಕೋ ತಜ್ಞರ ತಂಡ ಭೇಟಿ: ವಿಶ್ವ ಪಾರಂಪರಿಕ ಸ್ಮಾರಕಗಳ ರಕ್ಷಣೆ ಕುರಿತು ಮಹತ್ವದ ಪರಿಶೀಲನೆ

ಹಂಪಿಗೆ ಯುನೆಸ್ಕೋ ತಜ್ಞರ ತಂಡ ಭೇಟಿ: ವಿಶ್ವ ಪಾರಂಪರಿಕ ಸ್ಮಾರಕಗಳ ರಕ್ಷಣೆ ಕುರಿತು ಮಹತ್ವದ ಪರಿಶೀಲನೆ

ವಿಶ್ವ ಪಾರಂಪರಿಕ ತಾಣ ಹಂಪಿಯಲ್ಲಿ ಸ್ಮಾರಕಗಳ ಸಂರಕ್ಷಣೆಗಾಗಿ ಪರಿಶೀಲನೆ ನಡೆಸಲು ಯುನೆಸ್ಕೋ ತಜ್ಞರ ತಂಡ ಭೇಟಿ ನೀಡಿದೆ.

Written ByYashaswini V
Published: Oct 24, 2026, 09:53 AM IST|Updated: Oct 24, 2026, 09:58 AM IST
joinshare
ಹಂಪಿಗೆ ಯುನೆಸ್ಕೋ ತಜ್ಞರ ತಂಡ ಭೇಟಿ: ವಿಶ್ವ ಪಾರಂಪರಿಕ ಸ್ಮಾರಕಗಳ ರಕ್ಷಣೆ ಕುರಿತು ಮಹತ್ವದ ಪರಿಶೀಲನೆ

About the Author

Yashaswini V

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 
Read More

Trending

  • News
  • Photos
  • Videos
ದರ್ಶನ್ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಧನ್ವೀರ್ ತಂದೆಯಿಂದ ದೂರು: ಮನೆಗೆ ಬಂದು ಬೆದರಿಕೆ ಹಾಕಿದ ಆರೋಪ!

ದರ್ಶನ್ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಧನ್ವೀರ್ ತಂದೆಯಿಂದ ದೂರು: ಮನೆಗೆ ಬಂದು ಬೆದರಿಕೆ ಹಾಕಿದ ಆರೋಪ!

2

ಹಂಪಿಗೆ ಯುನೆಸ್ಕೋ ತಜ್ಞರ ತಂಡ ಭೇಟಿ: ವಿಶ್ವ ಪಾರಂಪರಿಕ ಸ್ಮಾರಕಗಳ ರಕ್ಷಣೆ ಕುರಿತು ಮಹತ್ವದ ಪರಿಶೀಲನೆ

3

ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೇಂದ್ರ ಸಚಿವ ಹೆಚ್‌ಡಿಕೆ ಹೇಳಿಕೆಗೆ ಖಂಡನೆ.. ಅನ್ನದಾನಿಗೂ ತಿರುಗೇಟು

4

ದಿನ ಭವಿಷ್ಯ 24-10-2026: ಶನಿವಾರದಂದು ವ್ಯಾಘಾತ ಯೋಗ.. ಈ ರಾಶಿಯವರಿಗೆ ಆಕಸ್ಮಿಕ ಧನ ಲಾಭ

5

ಅದೃಷ್ಟ ಅಂದ್ರೆ ಇದು! ಅಮ್ಮನ ಹುಟ್ಟಿದ ಡೇಟ್‌ನಿಂದ 240 ಕೋಟಿ ಒಡೆಯನಾದ ಭಾರತೀಯ ಯುವಕ.. ಹೇಗೆ ಗೊತ್ತೆ?

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ವಿಜಯನಗರ ಜಿಲ್ಲೆಯ ವಿಶ್ವ ಪಾರಂಪರಿಕ ತಾಣವಾದ ಹಂಪಿಯಲ್ಲಿ ಸ್ಮಾರಕಗಳ ಸಂರಕ್ಷಣೆಯ ಉದ್ದೇಶದಿಂದ ಪರಿಶೀಲನೆ ನಡೆಸಲು ಯುನೆಸ್ಕೋ ತಜ್ಞರ ತಂಡ ಭೇಟಿ ನೀಡಿದೆ. ತಜ್ಞರ ಪರಿಶೀಲನೆ ಬಳಿಕ  ಹಂಪಿಯ ವಿಶ್ವ ಪಾರಂಪರಿಕ ಸ್ಥಾನಮಾನ ಉಳಿಸಿಕೊಳ್ಳಲು ಸಂರಕ್ಷಣಾ ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆ ಇದ್ದು, ಹಂಪಿ ಅಭಿವೃದ್ಧಿ ಹಾಗೂ ನಿರ್ವಹಣೆಯಲ್ಲಿ ಮಹತ್ವದ ಬದಲಾವಣೆಗಳ ನಿರೀಕ್ಷೆ ಇದೆ ಎಂದು ಹೇಳಲಾಗುತ್ತಿದೆ.

ಹಂಪಿಗೆ ಯುನೆಸ್ಕೋ ತಂಡ ಎಂಟ್ರಿ.. ಮೂರು ದಿನಗಳ ಕಾಲ ಸೂಕ್ಷ್ಮ ಪರಿಶೀಲನೆ:
ವಿಶ್ವ ಪಾರಂಪರಿಕ ತಾಣ ಹಂಪಿಗೆ ಯುನೆಸ್ಕೋ ತಜ್ಞರ ತಂಡ ಭೇಟಿ ಕೊಟ್ಟಿದ್ದು, ಹಂಪಿಯ ಐತಿಹಾಸಿಕ ಸ್ಮಾರಕಗಳ ಸ್ಥಿತಿಗತಿ ಕುರಿತು ಮೂರು ದಿನಗಳ ಕಾಲ ಸೂಕ್ಷ್ಮ ಅಧ್ಯಯನ ನಡೆಸಲಿದ್ದಾರೆ.

ಹಂಪಿಯ ವಿಶ್ವ ಪಾರಂಪರಿಕ ಸ್ಮಾರಕಗಳ ರಕ್ಷಣೆಗೆ ವಿದೇಶಿ ತಜ್ಞರ ತಂಡದಿಂದ ಪರಿಶೀಲನೆ ನಡೆಸಲಾಗುತ್ತಿದ್ದು ಸ್ಮಾರಕಗಳ ಸಂರಕ್ಷಣೆ ಮತ್ತು ನಿರ್ವಹಣೆ ಕುರಿತು ತಜ್ಞರಿಂದ ಅಧ್ಯಯನ ಮಾಡಲಾಗುತ್ತಿದೆ.

ಅಕ್ಟೋಬರ್ 25 ಮತ್ತು 26ರಂದು ಪ್ರಮುಖ ಸ್ಮಾರಕಗಳಿಗೆ ತಜ್ಞರು ಭೇಟಿ ನೀಡಲಿದ್ದು, ಹಂಪಿಯ ಪಾರಂಪರಿಕ ಸ್ಮಾರಕಗಳ ಪ್ರಸ್ತುತ ಸ್ಥಿತಿಯ ಬಗ್ಗೆ ಸಮಗ್ರ ಪರಿಶೀಲನೆ ನಡೆಸಲಿದ್ದಾರೆ.

ಹಂಪಿಯಲ್ಲಿರುವ ಪ್ರಾಚೀನ ದೇವಾಲಯಗಳು, ಕಲ್ಲಿನ ರಥ, ಮಂಟಪಗಳು ಹಾಗೂ ಐತಿಹಾಸಿಕ ಕಟ್ಟಡಗಳ ಸಂರಕ್ಷಣೆಗೆ ಒತ್ತು ನೀಡಲಿದ್ದು, ಹವಾಮಾನ ವೈಪರೀತ್ಯದಿಂದ ಸ್ಮಾರಕಗಳ ಮೇಲಾಗುತ್ತಿರುವ ಪರಿಣಾಮಗಳ ಬಗ್ಗೆ ಅಧ್ಯಯನ ನಡೆಸಲಿದ್ದಾರೆ. ಸ್ಮಾರಕಗಳ ಶಿಥಿಲಾವಸ್ಥೆ ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಚರ್ಚೆ ಸಾಧ್ಯತೆ ಇದೆ ಎನ್ನಲಾಗಿದೆ.

ಯುನೆಸ್ಕೋ ತಂಡ ಅಧ್ಯಯನದ ಸಂದರ್ಭದಲ್ಲಿ ಹಂಪಿಯ ಪಾರಂಪರಿಕ ಸೌಂದರ್ಯ ಮತ್ತು ಐತಿಹಾಸಿಕ ಮಹತ್ವವನ್ನು ಕಾಪಾಡಲು ಆದ್ಯತೆ ನೀಡುವ ನಿರೀಕ್ಷೆ ಇದ್ದು, ಪ್ರವಾಸಿಗರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ಕುರಿತು ಪರಿಶೀಲನೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಹಂಪಿ ಪ್ರವಾಸೋದ್ಯಮ ಅಭಿವೃದ್ಧಿ ಮತ್ತು ಪಾರಂಪರಿಕ ಸಂರಕ್ಷಣೆಯ ನಡುವೆ ಸಮತೋಲನಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಸ್ಮಾರಕಗಳ ಸಂರಕ್ಷಣೆಯ ಜೊತೆಗೆ ಹಂಪಿ ಅಭಿವೃದ್ಧಿಯ ಮಾಸ್ಟರ್ ಪ್ಲಾನ್ ಕುರಿತು ಸಹ ಮಹತ್ವದ ಚರ್ಚೆ ನಡೆಸುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಹಂಪಿಯ ಜೊತೆಗೆ ಅಲ್ಲಿನ ಸುತ್ತಮುತ್ತಲಿನ ಪ್ರಸಿದ್ಧ ತಾಣಗಳಾದ ಆನೆಗುಂದಿ ಹಾಗೂ ಅಂಜನಾದ್ರಿ ಪ್ರದೇಶಗಳ ಸಮಗ್ರ ಅಭಿವೃದ್ಧಿಯ ಯೋಜನೆ ಬಗ್ಗೆಯೂ ಯುನೆಸ್ಕೋ ತಜ್ಞರ ತಂಡ ಪರಿಶೀಲನೆ ನಡೆಸಲಿದೆ.

ಪಾರಂಪರಿಕ ಪ್ರದೇಶಗಳಲ್ಲಿ ನಿರ್ಮಾಣ ಚಟುವಟಿಕೆಗಳ ನಿಯಂತ್ರಣ ಕುರಿತು ಚರ್ಚೆ ನಡೆಸಲಿರುವ ಯುನೆಸ್ಕೋ ತಜ್ಞರ ತಂಡ, ಸ್ಮಾರಕಗಳ ಸುತ್ತಮುತ್ತಲಿನ ಪ್ರದೇಶಗಳ ನಿರ್ವಹಣೆ ಮತ್ತು ಸ್ವಚ್ಛತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಸಮಾಲೋಚನೆ ನಡೆಸಲಿದೆ.

ಹಂಪಿಯ ಪಾರಂಪರಿಕ ವಲಯದಲ್ಲಿ ಪ್ರವಾಸಿಗರ ಸಂಚಾರ ನಿರ್ವಹಣೆ ಕುರಿತು ಪರಿಶೀಲನೆ ನಡೆಸಿ, ಭವಿಷ್ಯದಲ್ಲಿ ಸ್ಮಾರಕಗಳ ಸಂರಕ್ಷಣೆಗೆ ಹೊಸ ಮಾರ್ಗಸೂಚಿ ರೂಪಿಸುವ ಸಾಧ್ಯತೆ ಇದೆ.

ಯುನೆಸ್ಕೋ ಶಿಫಾರಸುಗಳ ಆಧಾರದ ಮೇಲೆ ಮುಂದಿನ ಅಭಿವೃದ್ಧಿ ಕಾರ್ಯಗಳಿಗೆ ಯೋಜನೆ ರೂಪಿಸಲಿದ್ದು, ಸ್ಥಳೀಯ ಆಡಳಿತ ಮತ್ತು ಪಾರಂಪರಿಕ ಸಂರಕ್ಷಣಾ ಇಲಾಖೆಗಳ ಕಾರ್ಯವೈಖರಿ ಪರಿಶೀಲನೆ ನಡೆಸಲಾಗುವುದು ಎನ್ನಲಾಗುತ್ತಿದೆ.

ಸಾರ್ವಜನಿಕರಿಗೆ ನಿರ್ಬಂಧ:
ಇನ್ನು ಹಂಪಿಗೆ ಯುನೆಸ್ಕೋ ತಂಡದ ಭೇಟಿ ಹಿನ್ನೆಲೆಯಲ್ಲಿ ಪ್ರಮುಖ ಸ್ಮಾರಕಗಳ ವೀಕ್ಷಣೆಗೆ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿದೆ. 

Add Zee News as a Preferred Source
TAGS:
Travel
Kannada News