• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಹುಬ್ಬಳ್ಳಿ ಧಾರವಾಡ
  • /ವಿಬಿಜಿ-ರಾಮ್-ಜಿ ಯೋಜನೆಯಡಿ ಅಳತೆಗೆ ತಕ್ಕಂತೆ ಕೂಲಿ ಪಡೆಯಿರಿ! ಡಿಐಇಸಿ ವೀರಭದ್ರಪ್ಪ ಸಜ್ಜನ

ವಿಬಿಜಿ-ರಾಮ್-ಜಿ ಯೋಜನೆಯಡಿ ಅಳತೆಗೆ ತಕ್ಕಂತೆ ಕೂಲಿ ಪಡೆಯಿರಿ! ಡಿಐಇಸಿ ವೀರಭದ್ರಪ್ಪ ಸಜ್ಜನ

ವಿಬಿಜಿ-ರಾಮ್-ಜಿ ಯೋಜನೆಯಡಿ ಗ್ರಾಮೀಣ ಕುಟುಂಬಗಳಿಗೆ ದೊರೆಯುವ 125 ದಿನಗಳ ಉದ್ಯೋಗಾವಕಾಶವನ್ನ ಅರ್ಹರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಡಿಐಇಸಿ ವೀರಭದ್ರಪ್ಪ ಸಜ್ಜನ ಹೇಳಿದರು. ಕಾಮಗಾರಿಯಲ್ಲಿ ಅಳತೆಗೆ ಅನುಗುಣವಾಗಿ ಕೂಲಿ ಪಾವತಿಯಾಗಲಿದ್ದು, ಕೆಲಸದ ಅಗತ್ಯವಿರುವವರು ನಮೂನೆ-6 ಮೂಲಕ ಅಧಿಕೃತವಾಗಿ ಉದ್ಯೋಗದ ಬೇಡಿಕೆ ಸಲ್ಲಿಸಬೇಕು ಎಂದು ತಿಳಿಸಿದರು. ಯಾವಗಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕೆರೆ ಪುನಶ್ಚೇತನ ಕಾಮಗಾರಿಯ ವೇಳೆ ಕಾರ್ಮಿಕರಿಗೆ ಯೋಜನೆಯ ನಿಯಮಗಳು, ಕೂಲಿ ಪಾವತಿ ಹಾಗೂ ಉದ್ಯೋಗ ಬೇಡಿಕೆ ಸಲ್ಲಿಕೆ ಕುರಿತು ಮಾಹಿತಿ ನೀಡಲಾಯಿತು.

Written ByPuttaraj K Alur
Published: Oct 08, 2026, 04:25 PM IST|Updated: Oct 08, 2026, 04:37 PM IST
joinshare
ವಿಬಿಜಿ-ರಾಮ್-ಜಿ ಯೋಜನೆಯಡಿ ಅಳತೆಗೆ ತಕ್ಕಂತೆ ಕೂಲಿ ಪಡೆಯಿರಿ! ಡಿಐಇಸಿ ವೀರಭದ್ರಪ್ಪ ಸಜ್ಜನ
Image Credit: VBG RAM G Yojana

About the Author

Puttaraj K Alur

Puttaraj K Alur

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 
Read More

Trending

  • News
  • Photos
  • Videos
ಶ್ರೇಯಸ್‌ ಅಯ್ಯರ್‌ ನೇತೃತ್ವದ T20 ತಂಡದಲ್ಲಿ ಭಾರೀ ಬದಲಾವಣೆ.. ವೈಭವ್‌ ಸೂರ್ಯವಂಶಿ ಸೇರಿ ಈ ಪ್ಲೇಯರ್ಸ್‌ಗೆ ಚಾನ್ಸ್‌

ಶ್ರೇಯಸ್‌ ಅಯ್ಯರ್‌ ನೇತೃತ್ವದ T20 ತಂಡದಲ್ಲಿ ಭಾರೀ ಬದಲಾವಣೆ.. ವೈಭವ್‌ ಸೂರ್ಯವಂಶಿ ಸೇರಿ ಈ ಪ್ಲೇಯರ್ಸ್‌ಗೆ ಚಾನ್ಸ್‌

2

ವಿಲ್ಲಾದಲ್ಲಿ ಸೀಕ್ರೆಟ್ ಟ್ರೇನಿಂಗ್, 40-50 ಲಕ್ಷ ಡೀಲ್ : KPSC ನೇಮಕಾತಿ ಹಗರಣದ ಸ್ಫೋಟಕ ಮಾಹಿತಿ

3

ಅಪ್ರಾಪ್ತ ಮಗಳ ಮೇಲೆಯೇ ಅ*ತ್ಯಾಚಾರ: ತಂದೆಗೆ 20 ವರ್ಷ ಕಠಿಣ ಜೈಲು ಶಿಕ್ಷೆ!

4

ಪೆಟ್ರೋಲ್ ಬಂಕ್‌ಗೆ ನುಗ್ಗಿದ ಜಾಗ್ವಾರ್ ಕಾರು, ಧಗಧಗ.. ಯುವಕ ಕುಡಿದ ಮತ್ತಿನಲ್ಲಿ ಸ್ಟೆರಿಂಗ್ ಹಿಡಿದ್ರೆ ಏನಾಗುತ್ತೆ..

5

ಹಣ್ಣು ಮಾತ್ರವಲ್ಲ, ಎಲೆಗಳೂ ಸೂಪರ್! ಸೀತಾಫಲದ ಎಲೆಗಳಲ್ಲಿರುವ ಆರೋಗ್ಯಕಾರಿ ಗುಣಗಳೇನು?

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಳವಣಿಕಿ (ರೋಣ): ಸಮೀಪದ ಯಾವಗಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಬಿಜಿ-ರಾಮ್-ಜಿ ಯೋಜನೆಯಡಿ ಗ್ರಾಮೀಣ ಕುಟುಂಬಗಳಿಗೆ ದೊರೆಯುವ 125 ದಿನಗಳ ಉದ್ಯೋಗಾವಕಾಶವನ್ನು ಅರ್ಹರು ಸಂಪೂರ್ಣವಾಗಿ ಸದುಪಯೋಗ ಪಡಿಸಿಕೊಳ್ಳಬೇಕು. ಕೈಗೆತ್ತಿಕೊಳ್ಳುವ ಕಾಮಗಾರಿಯಲ್ಲಿ ಅಳತೆಗೆ ತಕ್ಕಂತೆ ಕೂಲಿ ಪಾವತಿಯಾಗಲಿದ್ದು, ಕೆಲಸದ ಅಗತ್ಯವಿರುವವರು ನಮೂನೆ-6 ಸಲ್ಲಿಸಿ ತಮ್ಮ ಬೇಡಿಕೆಯನ್ನು ದಾಖಲಿಸಿಕೊಳ್ಳಬೇಕು ಎಂದು ಡಿಐಇಸಿ ವೀರಭದ್ರಪ್ಪ ಸಜ್ಜನ ಹೇಳಿದರು.

ರೋಣ ತಾಲೂಕಿನ ಯಾವಗಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಬಿಜಿ-ರಾಮ್-ಜಿ ಯೋಜನೆಯಡಿ ನಡೆಯುತ್ತಿರುವ ಕೆರೆ ಪುನಶ್ಚೇತನ ಕಾಮಗಾರಿಯ ಎರಡನೇ ದಿನದ ಸಂದರ್ಭದಲ್ಲಿ ಆಯೋಜಿಸಿದ್ದ ಐಇಸಿ ಸಭೆಯಲ್ಲಿ ಅವರು ಮಾತನಾಡಿದರು. ಈ ಯೋಜನೆಯಡಿ ಗ್ರಾಮೀಣ ಜನರಿಗೆ ಉದ್ಯೋಗ ಕಲ್ಪಿಸುವುದರ ಜೊತೆಗೆ ಗ್ರಾಮದ ಅಗತ್ಯಕ್ಕೆ ಅನುಗುಣವಾಗಿ ಕೆರೆ ಪುನಶ್ಚೇತನ, ನೀರು ಸಂರಕ್ಷಣೆ ಹಾಗೂ ಸಾರ್ವಜನಿಕ ಬಳಕೆಯ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಇಂತಹ ಕಾಮಗಾರಿಗಳಲ್ಲಿ ಸ್ಥಳೀಯ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಉದ್ಯೋಗದ ಅವಕಾಶವನ್ನು ಬಳಸಿಕೊಳ್ಳಬೇಕು ಎಂದು ಹೇಳಿದರು.

ಕಾಮಗಾರಿ ಸ್ಥಳದಲ್ಲಿ ಕಾರ್ಮಿಕರಿಗೆ ಯೋಜನೆಯ ನಿಯಮಗಳು, ಕೆಲಸದ ಬೇಡಿಕೆ ಸಲ್ಲಿಸುವ ವಿಧಾನ, ಹಾಜರಾತಿ, ಕೂಲಿ ಪಾವತಿ ಸೇರಿದಂತೆ ವಿವಿಧ ಅಂಶಗಳ ಕುರಿತು ಮಾಹಿತಿ ನೀಡಲಾಯಿತು. ಕಾರ್ಮಿಕರು ನಿರ್ವಹಿಸುವ ಕೆಲಸದ ಪ್ರಮಾಣಕ್ಕೆ ಅನುಗುಣವಾಗಿ ಅಳತೆ ಕೈಗೊಂಡು ಅದರ ಆಧಾರದ ಮೇಲೆ ಕೂಲಿ ಪಾವತಿಸಲಾಗುತ್ತದೆ. ಹೀಗಾಗಿ ಕಾಮಗಾರಿಯ ವೇಳೆ ನಿಗದಿತ ಅಳತೆಯಂತೆ ಕೆಲಸ ನಿರ್ವಹಿಸುವಂತೆ ತಿಳಿಸಲಾಯಿತು.

ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಐ.ಎಫ್.ಬೊದ್ಲೆಖಾನ ಮಾತಾನಾಡಿ, ಕೆಲಸದ ಅವಶ್ಯಕತೆ ಇರುವ ಕುಟುಂಬಗಳು ಗ್ರಾಮ ಪಂಚಾಯಿತಿಗೆ ನಮೂನೆ-6 ಸಲ್ಲಿಸುವ ಮೂಲಕ ಉದ್ಯೋಗದ ಬೇಡಿಕೆ ಇಡಬೇಕು. ಕೇವಲ ಮೌಖಿಕವಾಗಿ ಕೆಲಸ ಕೇಳುವುದಕ್ಕಿಂತ ಅಧಿಕೃತವಾಗಿ ನಮೂನೆ-6 ಸಲ್ಲಿಸಿ ಬೇಡಿಕೆ ದಾಖಲಿಸಿಕೊಳ್ಳುವುದರಿಂದ ಉದ್ಯೋಗ ಕಲ್ಪಿಸುವ ಪ್ರಕ್ರಿಯೆಗೆ ಅನುಕೂಲವಾಗಲಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.

ಕೆರೆ ಪುನಶ್ಚೇತನ ಕಾಮಗಾರಿಯಿಂದ ಕಾರ್ಮಿಕರಿಗೆ ಉದ್ಯೋಗ ದೊರೆಯುವುದರ ಜೊತೆಗೆ ಗ್ರಾಮದ ಪ್ರಮುಖ ಜಲಮೂಲ ಅಭಿವೃದ್ಧಿಯಾಗಲಿದೆ. ಮಳೆಗಾಲದಲ್ಲಿ ನೀರು ಸಂಗ್ರಹಿಸುವ ಸಾಮರ್ಥ್ಯ ಹೆಚ್ಚಿಸುವುದು, ಅಂತರ್ಜಲ ಮಟ್ಟ ಸುಧಾರಿಸುವುದು ಹಾಗೂ ಮುಂದಿನ ದಿನಗಳಲ್ಲಿ ಕೃಷಿ ಚಟುವಟಿಕೆಗಳಿಗೆ ನೀರಿನ ಲಭ್ಯತೆ ಹೆಚ್ಚಿಸುವ ನಿಟ್ಟಿನಲ್ಲಿ ಇಂತಹ ಕಾಮಗಾರಿಗಳು ಮಹತ್ವದ್ದಾಗಿವೆ ಎಂದು ವಿವರಿಸಲಾಯಿತು.

ಯೋಜನೆಯ ಕುರಿತು ಗ್ರಾಮಸ್ಥರಿಗೆ ಸಂಪೂರ್ಣ ಮಾಹಿತಿ ತಲುಪಿಸುವ ಉದ್ದೇಶದಿಂದ ಕಾಮಗಾರಿ ಸ್ಥಳದಲ್ಲೇ ಐಇಸಿ ಸಭೆ ನಡೆಸಲಾಯಿತು. ಕಾರ್ಮಿಕರು ಹಾಗೂ ಗ್ರಾಮಸ್ಥರು ಕೇಳಿದ ಪ್ರಶ್ನೆಗಳಿಗೆ ಸಿಬ್ಬಂದಿ ಮಾಹಿತಿ ನೀಡಿದರು. ಯೋಜನೆಯಡಿ ದೊರೆಯುವ ಅವಕಾಶಗಳು ಹಾಗೂ ತಮ್ಮ ಹಕ್ಕುಗಳ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು ಎಂದು ಕರೆ ನೀಡಲಾಯಿತು.

ಈ ಸಂದರ್ಭದಲ್ಲಿ ಯಾವಗಲ್ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ತಾಲೂಕ ಐಇಸಿ, BFT ಮೌನೇಶ್ ದಂಡಿನ ಸೇರಿದಂತೆ ಕೂಲಿ ಕಾರ್ಮಿಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Add Zee News as a Preferred Source
TAGS:
Kannada News
Karnataka Politics