• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಹುಬ್ಬಳ್ಳಿ ಧಾರವಾಡ
  • /ಕಬ್ಬಿಣದ ಪ್ಲೇಟ್ ತಲೆಯ ಮೇಲೆ ಬಿದ್ದು ಕಾರ್ಮಿಕ ಸಾವು

ಕಬ್ಬಿಣದ ಪ್ಲೇಟ್ ತಲೆಯ ಮೇಲೆ ಬಿದ್ದು ಕಾರ್ಮಿಕ ಸಾವು

ಧಾರವಾಡ ತಾಲೂಕಿನ ಅಳ್ನಾವರ ಪಟ್ಟಣದ ಹರಿಕೃಷ್ಣ ಸಾ ಮಿಲ್ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ತಲೆಯ ಮೇಲೆ ಕಬ್ಬಿಣದ ಪ್ಲೇಟ್ ಬಿದ್ದು ಕಾರ್ಮಿಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

Written ByChetana Devarmani
Published: Nov 14, 2026, 21:47 IST|Updated: Nov 14, 2026, 21:48 IST
joinshare
ಕಬ್ಬಿಣದ ಪ್ಲೇಟ್ ತಲೆಯ ಮೇಲೆ ಬಿದ್ದು ಕಾರ್ಮಿಕ ಸಾವು

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಧಾರವಾಡ: ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ ವೇಳೆ ಆಕಸ್ಮಿಕವಾಗಿ ಕಬ್ಬಿಣದ ಪ್ಲೇಟ್ ತಲೆಯ ಮೇಲೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಕಾರ್ಮಿಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದಾರುಣ ಘಟನೆ ಧಾರವಾಡ ತಾಲೂಕಿನ ಅಳ್ನಾವರ ಪಟ್ಟಣದಲ್ಲಿ ನಡೆದಿದೆ. ಮೃತಪಟ್ಟ ದುರ್ದೈವಿಯನ್ನು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ತಿಮ್ಮಾಪೂರ ಗ್ರಾಮದ ನಿವಾಸಿ 44 ವರ್ಷದ ಹಸನಸಾಬ ಪಠಾಣ ಎಂದು ಗುರುತಿಸಲಾಗಿದೆ.

ಮಾಹಿತಿ ಪ್ರಕಾರ, ಹಸನಸಾಬ ಪಠಾಣ ಅವರು ಅಳ್ನಾವರ ಪಟ್ಟಣದ ಹರಿಕೃಷ್ಣ ಸಾ ಮಿಲ್‌ (Saw Mill) ಆವರಣದಲ್ಲಿ ನಡೆಯುತ್ತಿದ್ದ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ಕಟ್ಟಡದ ಕೆಲಸದಲ್ಲಿ ನಿರತರಾಗಿದ್ದಾಗ, ಮೇಲ್ಭಾಗದಿಂದ ಭಾರವಾದ ಕಬ್ಬಿಣದ ಪ್ಲೇಟ್ ಆಕಸ್ಮಿಕವಾಗಿ ಜಾರಿ ನೇರವಾಗಿ ಅವರ ತಲೆಯ ಮೇಲೆ ಬಿದ್ದಿದೆ ಎನ್ನಲಾಗಿದೆ. ಕಬ್ಬಿಣದ ಪ್ಲೇಟ್ ಬಿದ್ದ ರಭಸಕ್ಕೆ ಹಸನಸಾಬ ಅವರ ತಲೆಗೆ ತೀವ್ರ ಪೆಟ್ಟು ಬಿದ್ದು, ಸ್ಥಳದಲ್ಲೇ ರಕ್ತ ಸ್ರಾವವಾಗಿ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ.

ಘಟನೆ ನಡೆದ ತಕ್ಷಣವೇ ಅಲ್ಲಿದ್ದ ಸಹ ಕಾರ್ಮಿಕರು ಹಾಗೂ ಸ್ಥಳೀಯರು ಗಾಯಾಳು ಹಸನಸಾಬ ನನ್ನು ರಕ್ಷಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್‌  (KIMS) ಆಸ್ಪತ್ರೆಗೆ ದಾಖಲಿಸಿದ್ದರು. ತೀವ್ರ ನಿಗಾ ಘಟಕದಲ್ಲಿ (ICU) ವೈದ್ಯರು ಸತತ ಚಿಕಿತ್ಸೆ ನೀಡಿದರಾದರೂ, ತಲೆಗೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಹಸನಸಾಬ ಮೃತ ಪಟ್ಟಿದ್ದಾರೆ. ಇದೀಗ ಮರಣೋತ್ತರ ಪರೀಕ್ಷೆ ನಡೆಸಿ ಮೃತ ದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ ಎನ್ನಲಾಗಿದೆ.

ದುಡಿಮೆಗಾಗಿ ಹಳಿಯಾಳ ತಾಲೂಕಿನ ತಿಮ್ಮಾಪೂರದಿಂದ ಅಳ್ನಾವರಕ್ಕೆ ಬಂದು ಕೆಲಸ ಮಾಡುತ್ತಿದ್ದ ಕುಟುಂಬದ ಆಧಾರ ಸ್ತಂಭವನ್ನು ಕಳೆದು ಕೊಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಕಟ್ಟಡ ನಿರ್ಮಾಣ ಸ್ಥಳದಲ್ಲಿ ಸುರಕ್ಷತಾ ಕ್ರಮಗಳ ಕೊರತೆಯೇ ಈ ದುರ್ಘಟನೆಗೆ ಕಾರಣವೇ ಎಂಬ ಬಗ್ಗೆ ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ.

ಇದೀಗ ಗುತ್ತಿಗೆದಾರರು ಕಟ್ಟಡ ನಿರ್ಮಾಣ ಸ್ಥಳದಲ್ಲಿ ಕಾರ್ಮಿಕರಿಗೆ ಹೆಲ್ಮೆಟ್ ಸೇರಿದಂತೆ ಅಗತ್ಯ ಸುರಕ್ಷತಾ ಸಾಧನಗಳನ್ನು ಒದಗಿಸದೇ ನಿರ್ಲಕ್ಷಿಸಿರುವುದೇ ಈ ದುರಂತಕ್ಕೆ ಕಾರಣ ಎಂಬ ಆರೋಪ ಕೇಳಿಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ಅಳ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಹಾಗೂ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

 

Add Zee News as a Preferred Source
TAGS:
Crime