SOCIAL MEDIA

Newsletter

PARTNER SITES
Select Language Select State

ಬೆಲೆ ಏರಿಕೆ ವಿರುದ್ಧ ಚಿಕ್ಕಮಗಳೂರಿನಲ್ಲಿ ಬಿಜೆಪಿ ಸಮರ!.. ಸರ್ಕಾರದ ವಿರುದ್ಧ BJP ಕಾರ್ಯಕರ್ತರ ಆಕ್ರೋಶ

price Hike: ಚಿಕ್ಕಮಗಳೂರು ಜಿಲ್ಲೆಯಲ್ಲಿ ಹಾಲು, ಬಸ್‌ ಚಾರ್ಜ್‌ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಲಾಗಿದ್ದು, ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

Written By Ramya. R. Gowda
Published: Nov 11, 2026, 12:57 IST | Updated: Nov 11, 2026, 12:59 IST
Join

 price Hike: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗ್ತಿದೆ. ಹಾಲಿನ ದರದಿಂದ ಹಿಡಿದು ಬಸ್ ಪ್ರಯಾಣ ದರದವರೆಗೆ ಜನಸಾಮಾನ್ಯರ ಜೇಬಿಗೆ ಕತ್ತರಿ ಬೀಳ್ತಿದೆ. ಇದನ್ನೇ ಅಸ್ತ್ರವಾಗಿಸಿಕೊಂಡ ಬಿಜೆಪಿ, ಚಿಕ್ಕಮಗಳೂರಿನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದೆ. ಗ್ಯಾರಂಟಿ ಹೆಸರಲ್ಲಿ ಅಧಿಕಾರಕ್ಕೆ ಬಂದ ಸರ್ಕಾರ ಜನರ ಮೇಲೆ ಬೆಲೆ ಏರಿಕೆಯ ಹೊರೆ ಹಾಕ್ತಿದೆ ಅಂತ ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.

ಚಿಕ್ಕಮಗಳೂರಿನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಆಕ್ರೋಶ ಹೊರಹಾಕಿದ್ದಾರೆ. ಹಾಲಿನ ದರ, ಬಸ್ ಪ್ರಯಾಣ ದರ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ.

ಕಳೆದ ಮೂರೂವರೆ ವರ್ಷಗಳಿಂದ ತಿಂಗಳಿಗೊಂದು ಬಾರಿ ಬೆಲೆ ಏರಿಕೆ ಮಾಡಲಾಗ್ತಿದೆ. ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ ಅಧಿಕಾರಕ್ಕೆ ಬಂದ ಸರ್ಕಾರ ಇದೀಗ ಆರ್ಥಿಕ ಸಂಕಷ್ಟದಲ್ಲಿದೆ. ಬೆಲೆ ಏರಿಕೆಯನ್ನೇ ಅಭಿವೃದ್ಧಿ ಎಂದು ಭಾವಿಸಿದಂತಿದೆ. ಉಚಿತ ಯೋಜನೆಗಳ ಹೆಸರಿನಲ್ಲಿ ಜನರ ಮೇಲೆ ಬೆಲೆ ಏರಿಕೆಯ ಹೊರೆ ಹಾಕಿ ಸಂಕಷ್ಟಕ್ಕೆ ದೂಡಲಾಗುತ್ತಿದೆಎಂದು ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಇನ್ನು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆಯ ಜೊತೆಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ. ಬಸ್ ನಿಲ್ದಾಣಕ್ಕೆ ಬಂದಿದ್ದ ಪ್ರಯಾಣಿಕರನ್ನು ಭೇಟಿಯಾಗಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ ಹಾಕದಂತೆ ಮನವಿ ಮಾಡಿದ್ದಾರೆ. ಬಿಜೆಪಿ ಪರ ಮತ ಚಲಾಯಿಸುವಂತೆ ಕೈ ಮುಗಿದು ಮನವಿ ಮಾಡಿದ್ದಾರೆ.

100ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿದ್ದಾರೆ. ಒಟ್ನಲ್ಲಿ ಬೆಲೆ ಏರಿಕೆ ವಿಚಾರ ಮುಂದಿಟ್ಟುಕೊಂಡು ಚಿಕ್ಕಮಗಳೂರಿನಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಸಮರ ಸಾರಿದೆ ಕಾಂಗ್ರೆಸ್‌ ಸರ್ಕಾರ ಬಂದಾಗಿನಿಂದಲೂ ದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಾಗುತ್ತಲೆ ಇದೆ, ಇತ್ತೀಚೆಕೆ ನಂದಿನಿ ಹಾಲೂ ಹಾಗೂ ನಂದಿನಿ ಮೊಸರು ಬೆಲೆಯನ್ನು ಏರಿಕೆ ಮಾಡಲಾಯಿತ್ತು. ಇದರ ಬೆನ್ನಲ್ಲೇ ಕಾಫಿ ಟೀಯ ಬೆಲೆಯೂ ಹೆಚ್ಚಾಗಿದೆ ಇದ್ದರಿಂದ ಸಿಟ್ಟಿಗಿದ್ದ ಬಿಜೆಪಿ ಕಾರ್ಯಕರ್ತರು ಚಿಕ್ಕಮಗಳೂರಿನಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಜನರಿಗೆ ಬೆಲೆ ಏರಿಕೆ ಬರೆ
ಕರ್ನಾಟಕದಲ್ಲಿ ಇತ್ತೀಚಿನ ದಿನಗಳಲ್ಲಿ ಹಾಲು, ಬಸ್ ಪ್ರಯಾಣ ದರ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ತೀವ್ರ ಆರ್ಥಿಕ ಹೊರೆಯಾಗಿದೆ.

ಹಾಲಿನ ದರ ಏರಿಕೆ: ನಂದಿನಿ ಹಾಲಿನ ದರದಲ್ಲಿ ಲೀಟರ್‌ಗೆ ₹8 ರಷ್ಟು ಏರಿಕೆ ಮಾಡಲಾಗಿದೆ.
ಬಸ್ ಪ್ರಯಾಣ ದರ ಏರಿಕೆ: ದೀಪಾವಳಿ ಸಂದರ್ಭದಲ್ಲಿ ಕೆಎಸ್‌ಆರ್‌ಟಿಸಿ (KSRTC) ಬಸ್ ಪ್ರಯಾಣ ದರವನ್ನು ಶೇ. 25 ರಿಂದ 35 ರಷ್ಟು (ಸುಮಾರು ಶೇ. 34) ಹೆಚ್ಚಿಸಲಾಗಿದೆ.
ಅಗತ್ಯ ವಸ್ತುಗಳ ಬೆಲೆ: ಅಕ್ಕಿ, ಬೇಳೆ, ಸಕ್ಕರೆ, ಗೋಧಿ ಮತ್ತು ಜೋಳದಂತಹ ದಿನಬಳಕೆಯ ಹಾಗೂ ಆಹಾರ ಪದಾರ್ಥಗಳ ಬೆಲೆ ಗಗನಕ್ಕೇರಿದೆ
 

 

 

Add Zee News as a Preferred Source
TAGS:

About the Author

ರಮ್ಯಾ. ಆರ್‌ ಗೌಡ (Ramya. R. Gowda) : 2022ರಿಂದ ಮಾಧ್ಯಮ ಲೋಕದಲ್ಲಿದ್ದು ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಡೆಸ್ಕ್'ನಲ್ಲಿಯೂ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ. 2025ರಿಂದ ʼಜೀ ಕನ್ನಡ ನ್ಯೂಸ್‌' ವೆಬ್ ವಿಭಾಗದಲ್ಲಿ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಇವರು ಇತ್ತೀಚಿನ ಸುದ್ದಿಗಳ ಜೊತೆಗೆ ಮನರಂಜನೆ, ಕ್ರೀಡೆ, ವೈರಲ್‌, ಲೈಫ್‌ಸ್ಟೈಲ್‌ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ.
Read More

ZEENEWS TRENDING STORIES