SOCIAL MEDIA

Newsletter

PARTNER SITES
Select Language Select State

ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ.. ನವದುರ್ಗೆಯರ ಪ್ರತಿಷ್ಠಾಪನೆ, ಆರಾಧನೆ, ನೃತ್ಯ- ಸಂಗೀತ ವೈಭವ

ಜ್ಞಾನದಾಯಿನಿ ಶಾರದಾ ಮಾತೆಯ ನಯನಮನೋಹರ ಮೂರ್ತಿಗಳ ಪ್ರತಿಷ್ಠಾಪನೆ ಮತ್ತು ಆರಾಧನೆ, ಭಕ್ತಿಪೂರ್ಣ ಭಜನೆ, ನೃತ್ಯ-ಸಂಗೀತ ವೈಭವ, ಕ್ರೀಡಾಕೂಟಗಳು ಮತ್ತು ಸಮೃದ್ಧ ಜಾನಪದ ಕಲಾ ಪ್ರಕಾರಗಳು ಅನಾವರಣಗೊಳ್ಳಲಿವೆ.

Written By Bhimappa
Published: Oct 08, 2026, 05:46 PM IST | Updated: Oct 08, 2026, 05:52 PM IST
Image Credit: Mangalore
Join

Historic Mangalore Dasara and Navratri Mahotsav-2026: ಐತಿಹಾಸಿಕ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವ-2026, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಅಕ್ಟೋಬರ್ 11 ರಿಂದ 22ರ ವರೆಗೆ ಅತ್ಯಂತ ವೈಭವದಿಂದ ನಡೆಯಲಿದೆ. ಕ್ಷೇತ್ರದ ನವೀಕರಣದ ರೂವಾರಿ, ಕೇಂದ್ರದ ಮಾಜಿ ವಿತ್ತ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಉತ್ಸವ ನಡೆಯಲಿದೆ ಎಂದು ಕೋಶಾಧಿಕಾರಿ ಪದ್ಮರಾಜ್ ಪೂಜಾರಿ ತಿಳಿಸಿದ್ದಾರೆ.

ಕುದ್ರೋಳಿ ಕ್ಷೇತ್ರದಲ್ಲಿ ನಡೆದ ಪ್ರೆಸ್ ಮೀಟ್‌ನಲ್ಲಿ ಮಾತನಾಡಿದ ಕೋಶಾಧಿಕಾರಿ ಪದ್ಮರಾಜ್ ಪೂಜಾರಿ ಅವರು, ಕ್ಷೇತ್ರದ ಭವ್ಯ ದರ್ಬಾರ್ ಹಾಲ್‌ನಲ್ಲಿ ಮಹಾಗಣಪತಿ, ಆದಿಶಕ್ತಿ, ನವದುರ್ಗೆಯರು ಹಾಗೂ ಜ್ಞಾನದಾಯಿನಿ ಶಾರದಾ ಮಾತೆಯ ನಯನಮನೋಹರ ಮೂರ್ತಿಗಳ ಪ್ರತಿಷ್ಠಾಪನೆ ಮತ್ತು ಆರಾಧನೆ, ಭಕ್ತಿಪೂರ್ಣ ಭಜನೆ, ನೃತ್ಯ-ಸಂಗೀತ ವೈಭವ, ಕ್ರೀಡಾಕೂಟಗಳು ಮತ್ತು ಸಮೃದ್ಧ ಜಾನಪದ ಕಲಾ ಪ್ರಕಾರಗಳು ಅನಾವರಣಗೊಳ್ಳಲಿವೆ ಎಂದು ಹೇಳಿದ್ದಾರೆ.

ಅಕ್ಟೋಬರ್ 11‌ ರಂದು ವೈದಿಕ ಕಾರ್ಯಕ್ರಮಗಳು ಆರಂಭಗೊಳ್ಳಲಿದ್ದು, ಮಧ್ಯಾಹ್ನ 12 ಗಂಟೆಗೆ ಶಾರದಾ ಮಾತೆ ಮತ್ತು ನವದುರ್ಗೆಯರ ಪ್ರತಿಷ್ಠಾಪನೆ ನೆರವೇರಲಿದೆ. ಅಕ್ಟೋಬರ್‌ 12 ರಂದು ಸಂಜೆ 6.30ಕ್ಕೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಂದ ಮಂಗಳೂರು ದಸರಾ ಮಹೋತ್ಸವಕ್ಕೆ ಅದ್ದೂರಿ ಚಾಲನೆ ಸಿಗಲಿದೆ. ಕರ್ನಾಟಕದ ವಿವಿಧ ಇಲಾಖೆಗಳ ಸಚಿವರು ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ. ಅಕ್ಟೋಬರ್‌ 21 ರಂದು ಸಂಜೆ 4 ಗಂಟೆಗೆ ಮಂಗಳೂರು ದಸರಾ ಮಹೋತ್ಸವದ ಐತಿಹಾಸಿಕ ಶೋಭಾಯಾತ್ರೆಗೆ ಚಾಲನೆ ನೀಡಲಿದ್ದಾರೆ.

ಅಕ್ಟೋಬರ್‌ 12 ರಿಂದ 20 ರ ವರೆಗೆ ಪ್ರತಿದಿನವೂ ಬೆಳಗ್ಗೆ 8.30ಕ್ಕೆ ಶ್ರೀಕ್ಷೇತ್ರದಲ್ಲಿ ಚಂಡಿಕಾಹೋಮ ನೆರವೇರಲಿದೆ. ಅಕ್ಟೋಬರ್‌ 17 ರಂದು ಸಾಮೂಹಿಕ ವಿಶೇಷ ಚಂಡಿಕಾಹೋಮ ಜರುಗಲಿದ್ದು, ಬೆಳಗ್ಗೆ 11.30ಕ್ಕೆ ಪೂರ್ಣಾಹುತಿ ನೆರವೇರಲಿದೆ. ಸಾರ್ವಜನಿಕರಿಗೆ ಚಂಡಿಕಾ ಹೋಮ ನೆರವೇರಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ. ಈ ಬಾರಿ ವೈಭವದಿಂದ ಮಂಗಳೂರು ದಸರಾ ನಡೆಯಲಿದೆ. ಎಲ್ಲರಿಗೂ ಅವಕಾಶ ಇದೆ. ಎಲ್ಲರೂ ದೇವರ ಆಶೀರ್ವಾದ, ದರ್ಶನ ಪಡೆಯಬಹುದು. ಜ್ಞಾನದಾಯಿನಿ ಶಾರದಾ ಮಾತೆಯ ನಯನಮನೋಹರ ಮೂರ್ತಿಗಳ ಪ್ರತಿಷ್ಠಾಪನೆ ಮತ್ತು ಆರಾಧನೆ, ಭಕ್ತಿಪೂರ್ಣ ಭಜನೆ, ನೃತ್ಯ-ಸಂಗೀತ ವೈಭವ, ಕ್ರೀಡಾಕೂಟಗಳು ಮತ್ತು ಸಮೃದ್ಧ ಜಾನಪದ ಕಲಾ ಪ್ರಕಾರಗಳು ಅನಾವರಣಗೊಳ್ಳಲಿವೆ.

ಪ್ರತ್ಯೇಕ ಸುದ್ದಿ; ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಕಾಪಾಡುವಂತೆ ಆಗ್ರಹ

ಎಸ್‌ಐಆರ್ ವಿರೋಧಿಸಿ, ಜ್ಞಾನೇಶ್ ಕುಮಾರ್ ಅವರ ಅಮಾನತಿಗೆ ಒತ್ತಾಯಿಸಿ, ಮತದಾರರ ಹಕ್ಕುಗಳ ರಕ್ಷಣೆ ಹಾಗೂ ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಕಾಪಾಡುವಂತೆ ಆಗ್ರಹಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ಮಂಗಳೂರಿನ ಕ್ಲಾಕ್ ಟವರ್ ಬಳಿ ಬೃಹತ್ ಪ್ರತಿಭಟನಾ ಸಭೆ ನಡೆಯಿತು.

ಇದೇ ವೇಳೆ ಮಾತನಾಡಿದ ಹಿರಿಯ ಚಿಂತಕ, ಪತ್ರಕರ್ತ ಹಾಗೂ ಸಾಮಾಜಿಕ ಹೋರಾಟಗಾರ ಶಿವಸುಂದರ್, ಭಾರತದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ತಮ್ಮ ಎಲ್ಲ ಅಧಿಕಾರವನ್ನು ಬಳಸಿಕೊಂಡು ಈ ದೇಶದ 140 ಕೋಟಿ ಜನರ ಪ್ರಜಾತಂತ್ರದ ಭವಿಷ್ಯದ ಮೇಲೆ ಆಟವಾಡುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

ಭಾರತದಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಭಾರತ ಸರ್ಕಾರದ ಮುಖ್ಯ ಚುನಾವಣಾ ಆಯುಕ್ತರಾಗಿ ಮಾತ್ರ ಅಲ್ಲ. ಅವರು ಬಿಜೆಪಿಯ ಚುನಾವಣಾ ಆಯುಕ್ತರಾಗಿ ಕೆಲಸ ಮಾಡುತ್ತಿದ್ದಾರೆ. ಒಂದು ಪಕ್ಷದ ಪರವಾಗಿ, ಸಂವಿಧಾನಕ್ಕೆ ವಿರುದ್ಧವಾಗಿ, ದೇಶದ್ರೋಹಿ ಆಗಿ ಕೆಲಸ ಮಾಡುತ್ತಿದ್ದಾರೆ. ಈ ದೇಶದ ಅತೀ ದೊಡ್ಡ ಗದ್ದಾರ್ ಆಗಿ ಯಾರಾದರೂ ಇದ್ದರೆ ಅವರು ಜ್ಞಾನೇಶ್ ಕುಮಾರ್ ಎಂದು ಹರಿಹಾಯ್ದರು. 
 

Add Zee News as a Preferred Source
TAGS:

About the Author

ಭೀಮಪ್ಪ (Bhimappa) ಜೀ ಕನ್ನಡ ನ್ಯೂಸ್‌ನಲ್ಲಿ ಸದ್ಯ ಡಿಜಿಟಲ್ (ವೆಬ್‌ಸೈಟ್‌) ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ರಾಜಕೀಯ, ಸ್ಫೋರ್ಟ್ಸ್‌, ಸಿನಿಮಾ, ಆರೋಗ್ಯ, ಎಂಟರ್ಟೈನ್‌ಮೆಂಟ್, ಲೈಫ್‌ಸ್ಟೈಲ್‌, ವೈರಲ್‌ ಸುದ್ದಿಗಳನ್ನು ಓದುಗರಿಗೆ ನೀಡುತ್ತಿದ್ದಾರೆ. ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಪತ್ರಿಕೋದ್ಯಮವನ್ನು ಅಧ್ಯಯನ ಮಾಡಿರುವ ಇವರು ಪ್ರಜಾವಾಣಿಯಲ್ಲಿ ಒಂದು ವರ್ಷ ಅಪ್ರೆಂಟಿಸ್‌ ಹಾಗೂ ನ್ಯೂಸ್‌ಫಸ್ಟ್‌ನಲ್ಲಿ ಡಿಜಿಟಲ್ ವಿಭಾಗದಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. 

ZEENEWS TRENDING STORIES