• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಮಂಗಳೂರು
  • /ಹೊನ್ನಾವರದಲ್ಲಿ ಭೀಕರ ಅಪಘಾತ: ಬೈಕ್‌ಗೆ ಟಾಟಾ ಏಸ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾ*ವು!

ಹೊನ್ನಾವರದಲ್ಲಿ ಭೀಕರ ಅಪಘಾತ: ಬೈಕ್‌ಗೆ ಟಾಟಾ ಏಸ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾ*ವು!

ಹೊನ್ನಾವರ: ಹೊನ್ನಾವರ ಪಟ್ಟಣದ ಬಸ್ ನಿಲ್ದಾಣದ ಬಳಿ ಬಂದರಿಗೆ ಹೋಗುವ ರಸ್ತೆಯಲ್ಲಿ ಟಾಟಾ ಏಸ್ ವಾಹನವು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ 68 ವರ್ಷದ ಬೈಕ್ ಸವಾರ ಸಾವನ್ನಪ್ಪಿದ್ದಾರೆ.

Written ByRamya. R. Gowda
Published: Oct 07, 2026, 07:25 AM IST|Updated: Oct 07, 2026, 07:28 AM IST
joinshare
ಹೊನ್ನಾವರದಲ್ಲಿ ಭೀಕರ ಅಪಘಾತ: ಬೈಕ್‌ಗೆ ಟಾಟಾ ಏಸ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾ*ವು!

About the Author

Ramya. R. Gowda

Ramya. R. Gowda

ರಮ್ಯಾ. ಆರ್‌ ಗೌಡ (Ramya. R. Gowda) : 2022ರಿಂದ ಮಾಧ್ಯಮ ಲೋಕದಲ್ಲಿದ್ದು ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಡೆಸ್ಕ್'ನಲ್ಲಿಯೂ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ. 2025ರಿಂದ ʼಜೀ ಕನ್ನಡ ನ್ಯೂಸ್‌' ವೆಬ್ ವಿಭಾಗದಲ್ಲಿ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಇವರು ಇತ್ತೀಚಿನ ಸುದ್ದಿಗಳ ಜೊತೆಗೆ ಮನರಂಜನೆ, ಕ್ರೀಡೆ, ವೈರಲ್‌, ಲೈಫ್‌ಸ್ಟೈಲ್‌ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ.
Read More

Trending

  • News
  • Photos
  • Videos
ಹೊನ್ನಾವರದಲ್ಲಿ ಭೀಕರ ಅಪಘಾತ: ಬೈಕ್‌ಗೆ ಟಾಟಾ ಏಸ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾ*ವು!

ಹೊನ್ನಾವರದಲ್ಲಿ ಭೀಕರ ಅಪಘಾತ: ಬೈಕ್‌ಗೆ ಟಾಟಾ ಏಸ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾ*ವು!

2

ಟಿವಿ ವಿಚಾರಕ್ಕೆ ಶುರುವಾದ ಜಗಳ.. 17 ವರ್ಷದ ಮಗಳನ್ನೇ ಕ್ರಿಕೆಟ್ ಬ್ಯಾಟ್‌ನಿಂದ ಕೊಂ*ದ ತಂದೆ!

3

ಬಿಗ್‌ಬಾಸ್ ಮನೆಯಲ್ಲಿ ರಾಕ್ಷಸರ ಅಟ್ಟಹಾಸ..! ಮಂಜು-ಯಶಸ್‌ ನಡುವೆ ವಾಕ್ಸಮರ.. ಆಸಿಯಾ ಬಳಿ ದೂರು ಕೊಟ್ಟ ಮಂಜು!

4

ತೆರೆದ ಕೊಳವೆಬಾವಿಗಳಿಗೆ ಸರ್ಕಾರದ ಬಿಗ್‌ ಆ್ಯಕ್ಷನ್‌! ‘ಅಸುರಕ್ಷಿತ ಬೋರ್‌ವೆಲ್‌’ ಮುಕ್ತ ಕರ್ನಾಟಕಕ್ಕೆ ಮೆಗಾ ಅಭಿಯಾನ

5

ಗಜಕೇಸರಿ ಯೋಗ.. ಈ 4 ರಾಶಿಯವರಿಗೆ ಶುಭವಾಗಲಿ! ಹಣ ಮತ್ತು ಉದ್ಯೋಗದಲ್ಲಿ ಉತ್ತಮ ಫಲಿತಾಂಶ

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಹೊನ್ನಾವರ: ಹೊನ್ನಾವರ ಪಟ್ಟಣದ ಬಸ್ ನಿಲ್ದಾಣದ ಬಳಿ ಬಂದರಿಗೆ ಹೋಗುವ ರಸ್ತೆಯಲ್ಲಿ ಟಾಟಾ ಏಸ್ ವಾಹನವು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ 68 ವರ್ಷದ ಬೈಕ್ ಸವಾರ ಸಾವನ್ನಪ್ಪಿದ್ದಾರೆ.
ಮೃತ ವ್ಯಕ್ತಿಯನ್ನು ಹೊನ್ನಾವರ ಪಟ್ಟಣದ ಗಾಂಧಿನಗರ ನಿವಾಸಿ ಮೊಹಮ್ಮದ್ ಶೇಖ್ (68) ಎಂದು ಗುರುತಿಸಲಾಗಿದೆ. ದೂರಿನ ಪ್ರಕಾರ, ಟಾಟಾ ಏಸ್ ಚಾಲಕ ಬಂದರಿನಿಂದ ದುರ್ಗಾಕೇರಿ ಕಡೆಗೆ ಅತಿ ವೇಗ ಮತ್ತು ನಿರ್ಲಕ್ಷ್ಯದಿಂದ ಪ್ರಯಾಣಿಸುತ್ತಿದ್ದಾಗ ವಾಹನವು ಹಿಂದಿನಿಂದ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದಿದೆ.

ಪರಿಣಾಮ ಮೊಹಮ್ಮದ್ ಶೇಖ್ ಮೋಟಾರ್ ಸೈಕಲ್ ನಿಂದ ಕೆಳಗೆ ಬಿದ್ದರು. ಅವರ ತಲೆಗೆ ಗಂಭೀರ ಗಾಯಗಳಾಗಿದ್ದವು. ಅವರನ್ನು ತಕ್ಷಣ ಚಿಕಿತ್ಸೆಗಾಗಿ ತಾಲ್ಲೂಕು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ದಾರಿಯಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಾಹನವನ್ನು ಪತ್ತೆಹಚ್ಚಲು ಪೊಲೀಸರು ಪ್ರಯತ್ನ ಮುಂದುವರಿಸಿದ್ದಾರೆ.

ಹೊನ್ನಾವರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 68 ವರ್ಷದ ಬೈಕ್ ಸವಾರ ಮೃತಪಟ್ಟಿದ್ದಾರೆ. ಬಸ್ ನಿಲ್ದಾಣದ ಬಳಿ ಬಂದರಿಗೆ ತೆರಳುವ ರಸ್ತೆಯಲ್ಲಿ ಟಾಟಾ ಏಸ್ ವಾಹನ ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.

ಹೊನ್ನಾವರ ಪಟ್ಟಣದ ಬಸ್ ನಿಲ್ದಾಣದ ಬಳಿ ನಡೆದ ಅಪಘಾತದಲ್ಲಿ 68 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ.ಮೃತರನ್ನು ಹೊನ್ನಾವರ ಪಟ್ಟಣದ ಗಾಂಧಿನಗರ ನಿವಾಸಿ ಮೊಹಮ್ಮದ್ ಶೇಖ್ ಎಂದು ಗುರುತಿಸಲಾಗಿದೆ.
ಮೊಹಮ್ಮದ್ ಶೇಖ್ ಅವರು ಮೋಟಾರ್ ಸೈಕಲ್‌ನಲ್ಲಿ ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದಿದೆ.ದೂರಿನ ಪ್ರಕಾರ, ಟಾಟಾ ಏಸ್ ಚಾಲಕ ಬಂದರಿನಿಂದ ದುರ್ಗಾಕೇರಿ ಕಡೆಗೆ ಅತಿ ವೇಗ ಮತ್ತು ನಿರ್ಲಕ್ಷ್ಯದಿಂದ ವಾಹನ ಚಲಾಯಿಸುತ್ತಿದ್ದ ಎನ್ನಲಾಗಿದೆ.ಡಿಕ್ಕಿಯ ರಭಸಕ್ಕೆ ಮೊಹಮ್ಮದ್ ಶೇಖ್ ಬೈಕ್‌ನಿಂದ ಕೆಳಗೆ ಬಿದ್ದಿದ್ದಾರೆ.ಈ ವೇಳೆ ಅವರ ತಲೆಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಅವರನ್ನು ಚಿಕಿತ್ಸೆಗಾಗಿ ಹೊನ್ನಾವರ ತಾಲೂಕು ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಆದರೆ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಮೊಹಮ್ಮದ್ ಶೇಖ್ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆ ಸಂಬಂಧ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಅಪಘಾತಕ್ಕೆ ಕಾರಣವಾದ ಟಾಟಾ ಏಸ್ ವಾಹನವನ್ನು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದಾರೆ ಚಾಲಕನ ಅಜಾಗರೂಕತೆ ಮತ್ತು ಅತಿ ವೇಗವೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಒಟ್ಟಿನಲ್ಲಿ, ಹೊನ್ನಾವರದಲ್ಲಿ ನಡೆದ ರಸ್ತೆ ಅಪಘಾತಕ್ಕೆ 68 ವರ್ಷದ ಬೈಕ್ ಸವಾರ ಬಲಿಯಾಗಿದ್ದು, ಅಪಘಾತಕ್ಕೆ ಕಾರಣವಾದ ವಾಹನ ಹಾಗೂ ಚಾಲಕನ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ.
 

Add Zee News as a Preferred Source
TAGS:
Kannada News