ಲೋಕಾಯುಕ್ತ ದಾಳಿ: ಚಿಕ್ಕಮಗಳೂರು ಜಿಲ್ಲೆಯಲ್ಲಿ ಭ್ರಷ್ಟಾಚಾರದ ಆರೋಪ ಕೇಳಿಬಂದ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಸಮರ ಸಾರಿದ್ದಾರೆ. ಜಿಲ್ಲೆಯ ಬರೋಬ್ಬರಿ 8 ತಾಲೂಕುಗಳ ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ (ADLR) ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಭ್ರಷ್ಟಾಚಾರದ ಆರೋಪ ಕೇಳಿಬಂದ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಸಮರ ಸಾರಿದ್ದಾರೆ. ಜಿಲ್ಲೆಯ ಬರೋಬ್ಬರಿ 8 ತಾಲೂಕುಗಳ ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ (ADLR) ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ನಿರಂತರವಾಗಿ ಲೋಕಾಯುಕ್ತ ಕಚೇರಿಗೆ ಭ್ರಷ್ಟಾಚಾರದ ದೂರುಗಳು ಬರುತ್ತಿದ್ದ ಹಿನ್ನೆಲೆಯಲ್ಲಿ ಸುಮೋಟೋ ಪ್ರಕರಣ ದಾಖಲಿಸಿಕೊಂಡು ಈ ಕಾರ್ಯಾಚರಣೆ ನಡೆಸಲಾಗಿದೆ. ಲೋಕಾಯುಕ್ತ ಎಸ್‌ಪಿ ನಂದಿನಿ ನೇತೃತ್ವದಲ್ಲಿ 8 ತಂಡಗಳು ಏಕಕಾಲದಲ್ಲಿ ದಾಳಿ ನಡೆಸಿದ್ದು, ಕಚೇರಿಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸಿವೆ. ಅಷ್ಟಕ್ಕೂ ಲೋಕಾಯುಕ್ತ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದ್ದೇಕೆ? ಏನೆಲ್ಲಾ ಪರಿಶೀಲನೆ ನಡೆಸಿದ್ದಾರೆ? ಈ ಕುರಿತ ಕಂಪ್ಲೀಟ್ ಮಾಹಿತಿ ಇಲ್ಲಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ ನಡೆದಿದೆ. ಜಿಲ್ಲೆಯ ಒಟ್ಟು 8 ADLR ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಆರೋಪಗಳು ಕೇಳಿಬಂದಿದ್ದವು. ಅಲ್ಲದೆ, ಈ ಸಂಬಂಧ ಲೋಕಾಯುಕ್ತ ಕಚೇರಿಗೆ ನಿರಂತರವಾಗಿ ದೂರುಗಳು ಸಲ್ಲಿಕೆಯಾಗುತ್ತಿದ್ದವು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಸುಮೋಟೋ ಪ್ರಕರಣ ದಾಖಲಿಸಿಕೊಂಡು ದಾಳಿಗೆ ಮುಂದಾಗಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು, ಮೂಡಿಗೆರೆ, ಕಡೂರು, ತರೀಕೆರೆ, ಶೃಂಗೇರಿ, ಅಜ್ಜಂಪುರ, ಕೊಪ್ಪ ಹಾಗೂ ನರಸಿಂಹರಾಜಪುರ ತಾಲೂಕಿನ ADLR ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ಲೋಕಾಯುಕ್ತ ಎಸ್‌ಪಿ ನಂದಿನಿ ಅವರ ನೇತೃತ್ವದಲ್ಲಿ ಎಂಟು ಪ್ರತ್ಯೇಕ ತಂಡಗಳನ್ನು ರಚಿಸಿ ಏಕಕಾಲದಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಪ್ರತಿ ತಂಡವೂ ಆಯಾ ತಾಲೂಕಿನ ಕಚೇರಿಗಳಿಗೆ ತೆರಳಿ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯವೈಖರಿ ಕುರಿತು ಪರಿಶೀಲನೆ ನಡೆಸಿದೆ.
ವಿಶೇಷವಾಗಿ ಭೂಮಿ ಸರ್ವೆ, ಜಮೀನಿನ ದಾಖಲೆಗಳ ತಿದ್ದುಪಡಿ, ಸರ್ವೆ ಸಂಬಂಧಿತ ಅರ್ಜಿಗಳ ವಿಲೇವಾರಿ ಸೇರಿದಂತೆ ಸಾರ್ವಜನಿಕರಿಗೆ ಸಂಬಂಧಿಸಿದ ಕೆಲಸಗಳಲ್ಲಿ ಅಕ್ರಮ ಅಥವಾ ಭ್ರಷ್ಟಾಚಾರ ನಡೆದಿದೆಯೇ ಎಂಬ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಕಚೇರಿಗಳಲ್ಲಿನ ಕಡತಗಳು, ದಾಖಲೆಗಳು ಹಾಗೂ ಸಾರ್ವಜನಿಕರ ಅರ್ಜಿಗಳ ವಿಲೇವಾರಿ ಪ್ರಕ್ರಿಯೆಯನ್ನೂ ಪರಿಶೀಲಿಸಲಾಗುತ್ತಿದೆ.
ಸಾಮಾನ್ಯವಾಗಿ ಜಮೀನಿನ ಸರ್ವೆ, ಗಡಿ ಗುರುತು, ಭೂದಾಖಲೆಗಳ ತಿದ್ದುಪಡಿ ಸೇರಿದಂತೆ ಹಲವು ಕೆಲಸಗಳಿಗಾಗಿ ಸಾರ್ವಜನಿಕರು ADLR ಕಚೇರಿಗಳನ್ನು ಅವಲಂಬಿಸಿದ್ದಾರೆ. ಆದರೆ, ಕೆಲಸ ಮಾಡಿಕೊಡಲು ಹಣದ ಬೇಡಿಕೆ ಇಡಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿದ್ದವು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ನೇರವಾಗಿ ಅಖಾಡಕ್ಕಿಳಿದಿದ್ದಾರೆ. ಎಂಟು ತಂಡಗಳಿಂದ ಏಕಕಾಲದಲ್ಲಿ ನಡೆದಿರುವ ಈ ದಾಳಿಯಿಂದ ಸರ್ವೆ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯಲ್ಲಿ ಆತಂಕ ಮೂಡಿದೆ.
ಒಟ್ಟಿನಲ್ಲಿ, ನಿರಂತರ ಭ್ರಷ್ಟಾಚಾರದ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ನಡೆಸಿರುವ ಈ ದಾಳಿ ಮಹತ್ವ ಪಡೆದುಕೊಂಡಿದೆ. ಪರಿಶೀಲನೆ ವೇಳೆ ಏನೆಲ್ಲಾ ಅಕ್ರಮಗಳು ಪತ್ತೆಯಾಗಲಿವೆ? ಯಾರಾದರೂ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವುದು ಸಾಬೀತಾಗಲಿದೆಯೇ? ಎಂಬುದು ಮುಂದಿನ ತನಿಖೆಯಿಂದ ತಿಳಿದುಬರಬೇಕಿದೆ.