• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಮಂಗಳೂರು
  • /ಪ್ರದೀಪ್‌ ಪೂಜಾರಿ ಪ್ರಕರಣ: ಕರ್ತವ್ಯ ಲೋಪ ಎಸಗಿದ ಪೊಲೀಸ್‌ ಸಿಬ್ಬಂದಿ ವಿರುದ್ಧ ಕ್ರಮ

ಪ್ರದೀಪ್‌ ಪೂಜಾರಿ ಪ್ರಕರಣ: ಕರ್ತವ್ಯ ಲೋಪ ಎಸಗಿದ ಪೊಲೀಸ್‌ ಸಿಬ್ಬಂದಿ ವಿರುದ್ಧ ಕ್ರಮ

ಹಿರಿಯಡ್ಕದ ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣವನ್ನು ನಿರ್ವಹಿಸುವಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಉಡುಪಿ ಜಿಲ್ಲಾ ಪೊಲೀಸರು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಿದ್ದಾರೆ.

Written ByRamya. R. Gowda
Published: Nov 06, 2026, 18:00 IST|Updated: Nov 06, 2026, 18:08 IST
joinshare
ಪ್ರದೀಪ್‌ ಪೂಜಾರಿ ಪ್ರಕರಣ: ಕರ್ತವ್ಯ ಲೋಪ ಎಸಗಿದ ಪೊಲೀಸ್‌ ಸಿಬ್ಬಂದಿ ವಿರುದ್ಧ ಕ್ರಮ

About the Author

Ramya. R. Gowda

Ramya. R. Gowda

ರಮ್ಯಾ. ಆರ್‌ ಗೌಡ (Ramya. R. Gowda) : 2022ರಿಂದ ಮಾಧ್ಯಮ ಲೋಕದಲ್ಲಿದ್ದು ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಡೆಸ್ಕ್'ನಲ್ಲಿಯೂ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ. 2025ರಿಂದ ʼಜೀ ಕನ್ನಡ ನ್ಯೂಸ್‌' ವೆಬ್ ವಿಭಾಗದಲ್ಲಿ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಇವರು ಇತ್ತೀಚಿನ ಸುದ್ದಿಗಳ ಜೊತೆಗೆ ಮನರಂಜನೆ, ಕ್ರೀಡೆ, ವೈರಲ್‌, ಲೈಫ್‌ಸ್ಟೈಲ್‌ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ.
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಉಡುಪಿ: ಹಿರಿಯಡ್ಕದ ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣವನ್ನು ನಿರ್ವಹಿಸುವಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಉಡುಪಿ ಜಿಲ್ಲಾ ಪೊಲೀಸರು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಲ್ಲಿಸಿದ ವಿಚಾರಣಾ ವರದಿಯನ್ನು ಪಶ್ಚಿಮ ವಲಯದ ಉಪ ಪೊಲೀಸ್ ಮಹಾನಿರ್ದೇಶಕ (ಡಿಐಜಿ) ಅವರಿಗೆ ರವಾನಿಸಲಾಗಿದೆ ಎಂದು ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಶುಕ್ರವಾರ (ನವೆಂಬರ್ 6) ತಿಳಿಸಿದ್ದಾರೆ.

ವರದಿಯ ಆಧಾರದ ಮೇಲೆ, ಹಿರಿಯಡ್ಕ ಪೊಲೀಸ್ ಠಾಣೆಯ ಪೊಲೀಸ್ ಸಬ್-ಇನ್ಸ್‌ಪೆಕ್ಟ‌ರ್ (ಪಿಎಸ್‌ಐ) ಅವರನ್ನು ಪಶ್ಚಿಮ ವಲಯ ಡಿಐಜಿ ಕಚೇರಿಗೆ ನಿಯೋಜಿಸಲಾಗಿದ್ದು, ಅವರ ವಿರುದ್ಧ ಇಲಾಖಾ ಶಿಸ್ತು ಕ್ರಮಗಳನ್ನು ಪ್ರಾರಂಭಿಸಲಾಗಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.ಪ್ರದೀಪ್ ಪೂಜಾರಿ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ ಒಳರೋಗಿ ಚಿಕಿತ್ಸೆ ಪಡೆಯುತ್ತಿದ್ದಾಗ ಭದ್ರತಾ ಕರ್ತವ್ಯಕ್ಕೆ ನಿಯೋಜಿಸಲಾದ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಸಹ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಳಿಸಲಾಗಿದೆ.

ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಸಲ್ಲಿಸಿದ ವರದಿಯಲ್ಲಿ ಇಬ್ಬರು ಸಿಬ್ಬಂದಿ ಕರ್ತವ್ಯದಲ್ಲಿದ್ದಾಗ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಕಂಡುಬಂದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಅವರ ವಿರುದ್ಧ ಮತ್ತಷ್ಟು ಇಲಾಖಾ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಪಿ ತಿಳಿಸಿದ್ದಾರೆ.ಈ ಹಿಂದೆ, ಪ್ರದೀಪ್ ಪೂಜಾರಿ ಅವರು ಹಲ್ಲೆಗೊಳಗಾದ ನಂತರ ಸಲ್ಲಿಸಿದ ದೂರಿನ ಆಧಾರದ ಮೇಲೆ ಎಫ್‌ಐಆ‌ರ್ ಬದಲಿಗೆ ನಾನ್-ಕಾಗ್ನಿಸಬಲ್ (ಎನ್‌ಸಿ) ಪ್ರಕರಣವನ್ನು ದಾಖಲಿಸಿದ್ದಕ್ಕಾಗಿ ಹಿರಿಯಡ್ಕ ಪೊಲೀಸ್ ಠಾಣೆ ಪಿಎಸ್‌ಐ ವಿರುದ್ಧ ಇಲಾಖಾ ತನಿಖೆ ಆರಂಭಿಸಲಾಗಿತ್ತು. ಹೆಚ್ಚುವರಿ ಎಸ್‌ಪಿ ಸಲ್ಲಿಸಿದ ವಿಚಾರಣಾ ವರದಿಯ ಆಧಾರದ ಮೇಲೆ ಈಗ ಮುಂದಿನ ಕ್ರಮ ಕೈಗೊಳ್ಳಲಾಗಿದೆ.

ಪ್ರದೀಪ್‌ ಪೂಜಾರಿಯವರ ಸಾವಿಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯ ನಿರ್ಲಕ್ಷ್ಯದ ಬಗ್ಗೆ ವ್ಯಾಪಕ ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿತ್ತು. ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳು ಜಿಲ್ಲಾಧಿಕಾರಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದ್ದವು.ಈ ಪ್ರತಿಭಟನೆಗಳ ನಂತರ, ಪೊಲೀಸ್ ಇಲಾಖೆ ಆಂತರಿಕ ವಿಚಾರಣೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಕ್ರಮ ಕೈಗೊಂಡಿತು ಎಂದು ಹರಿರಾಮ್ ಶಂಕರ್ ಹೇಳಿದರು.

ಹಿರಿಯಡ್ಕ ಪೊಲೀಸರ ಕರ್ತವ್ಯ ಲೋಪಕ್ಕೆ ಬಿತ್ತು ಶಿಸ್ತು ಕ್ರಮ ಪಿಎಸ್‌ಐ ವರ್ಗಾವಣೆ, ಇಬ್ಬರು ಸಿಬ್ಬಂದಿ ಸಸ್ಪೆಂಡ್‌

ಉಡುಪಿ ಜಿಲ್ಲೆಯ ಹಿರಿಯಡ್ಕದ ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ ಈಗ ಪೊಲೀಸ್ ಇಲಾಖೆಯಲ್ಲೇ ಸಂಚಲನ ಸೃಷ್ಟಿಸಿದೆ. ಪ್ರಕರಣ ನಿರ್ವಹಣೆಯಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಶಾಕ್ ನೀಡಿದ್ದಾರೆ.

ಪ್ರದೀಪ್ ಪೂಜಾರಿ ಮೇಲೆ ಹಲ್ಲೆ ನಡೆದಿದ್ದ ಸಂದರ್ಭದಲ್ಲಿ ಅವರು ನೀಡಿದ್ದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸುವ ಬದಲು ನಾನ್‌ ಕಾಗ್ನಿಸಬಲ್‌ (ಎನ್‌ಸಿ) ಪ್ರಕರಣ ದಾಖಲಿಸಲಾಗಿತ್ತು. ಈ ನಿರ್ಲಕ್ಷ್ಯದ ಆರೋಪದ ಹಿನ್ನೆಲೆಯಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಯ ಪಿಎಸ್‌ಐ ವಿರುದ್ಧ ಈಗಾಗಲೇ ಇಲಾಖಾ ತನಿಖೆ ಆರಂಭಿಸಲಾಗಿತ್ತು.

ಇದೀಗ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳು ಸಲ್ಲಿಸಿರುವ ವಿಚಾರಣಾ ವರದಿಯ ಆಧಾರದ ಮೇಲೆ ಮತ್ತಷ್ಟು ಕ್ರಮ ಕೈಗೊಳ್ಳಲಾಗಿದೆ. ಹಿರಿಯಡ್ಕ ಪೊಲೀಸ್ ಠಾಣೆಯ ಪಿಎಸ್‌ಐ ಅವರನ್ನು ಪಶ್ಚಿಮ ವಲಯದ ಡಿಐಜಿ ಕಚೇರಿಗೆ ನಿಯೋಜಿಸಲಾಗಿದ್ದು, ಅವರ ವಿರುದ್ಧ ಇಲಾಖಾ ಶಿಸ್ತು ಕ್ರಮ ಆರಂಭಿಸಲಾಗಿದೆ.

ಇನ್ನು ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ ಪ್ರದೀಪ್ ಪೂಜಾರಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಭದ್ರತಾ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಮಹಿಳಾ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಲ್ಲಿಸಿದ ವರದಿಯಲ್ಲಿ ಇಬ್ಬರೂ ಕರ್ತವ್ಯ ನಿರ್ವಹಿಸುವಾಗ ನಿರ್ಲಕ್ಷ್ಯ ವಹಿಸಿರುವುದು ಕಂಡುಬಂದಿದೆ.

ಪ್ರದೀಪ್ ಪೂಜಾರಿ ಸಾವಿನ ಪ್ರಕರಣದಲ್ಲಿ ಪೊಲೀಸರ ನಿರ್ಲಕ್ಷ್ಯದ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಿವಿಧ ಸಂಘಟನೆಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದವು. ಈ ಪ್ರತಿಭಟನೆಗಳ ಬೆನ್ನಲ್ಲೇ ಪೊಲೀಸ್ ಇಲಾಖೆ ಆಂತರಿಕ ವಿಚಾರಣೆ ನಡೆಸಿ ಇದೀಗ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಮುಂದಾಗಿದೆ. ಒಟ್ಟಿನಲ್ಲಿ ಪ್ರದೀಪ್ ಪೂಜಾರಿ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪ ಎದುರಿಸುತ್ತಿರುವ ಪೊಲೀಸರಿಗೆ ಇಲಾಖೆಯ ಶಿಸ್ತು ಕ್ರಮದ ಬಿಸಿ ತಟ್ಟಿದೆ.

 

Add Zee News as a Preferred Source
TAGS:
Kannada News