ದಸರಾ ಸಂಭ್ರಮದ ನಡುವೆ ಪರೀಕ್ಷೆ ಕಿರಿಕ್.. ನವರಾತ್ರಿ ಹೊತ್ತಲ್ಲಿ ಪರೀಕ್ಷೆ ಆಯೋಜನೆಗೆ ವಿದ್ಯಾರ್ಥಿಗಳ ಆಕ್ರೋಶ
student protest: ಮಂಗಳೂರಿನಲ್ಲಿ ದಸರಾ ಸಂಭ್ರಮ ಮನೆಮಾಡಿದೆ. ನಾಡಹಬ್ಬವನ್ನು ಸಂಭ್ರಮದಿಂದ ಆಚರಿಸಲು ಜನರು ಸಿದ್ಧತೆ ನಡೆಸಿದ್ದಾರೆ. ಆದ್ರೆ, ಇದೇ ದಸರಾ ರಜೆಯ ಹೊತ್ತಲ್ಲಿ ಪದವಿ ವಿದ್ಯಾರ್ಥಿಗಳಿಗೆ ಸೆಮಿಸ್ಟರ್ ಪರೀಕ್ಷೆ ಆಯೋಜಿಸಿರುವ ಮಂಗಳೂರಿನ ಬೆಂದೂರ್‌ವೆಲ್ ಬಳಿಯ ಸೈಂಟ್ ಆಗ್ನೆಸ್ ಕಾಲೇಜು ಆಡಳಿತದ ನಡೆಗೆ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳೂರಿನಲ್ಲಿ ದಸರಾ ಸಂಭ್ರಮ ಮನೆಮಾಡಿದೆ. ನಾಡಹಬ್ಬವನ್ನು ಸಂಭ್ರಮದಿಂದ ಆಚರಿಸಲು ಜನರು ಸಿದ್ಧತೆ ನಡೆಸಿದ್ದಾರೆ. ಆದ್ರೆ, ಇದೇ ದಸರಾ ರಜೆಯ ಹೊತ್ತಲ್ಲಿ ಪದವಿ ವಿದ್ಯಾರ್ಥಿಗಳಿಗೆ ಸೆಮಿಸ್ಟರ್ ಪರೀಕ್ಷೆ ಆಯೋಜಿಸಿರುವ ಮಂಗಳೂರಿನ ಬೆಂದೂರ್‌ವೆಲ್ ಬಳಿಯ ಸೈಂಟ್ ಆಗ್ನೆಸ್ ಕಾಲೇಜು ಆಡಳಿತದ ನಡೆಗೆ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರೀಕ್ಷೆ ಮುಂದೂಡುವಂತೆ ಮನವಿ ಮಾಡಿದ್ರೂ ಕಾಲೇಜು ಆಡಳಿತ ಸ್ಪಂದಿಸಿಲ್ಲ ಅನ್ನೋ ಆರೋಪ ಕೇಳಿಬಂದಿದೆ. ಇದರಿಂದ ಕೆರಳಿದ ವಿದ್ಯಾರ್ಥಿಗಳು ಪರೀಕ್ಷೆ ಬಹಿಷ್ಕರಿಸಿ ಕಾಲೇಜು ಗೇಟ್ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಗೆ ಎಬಿವಿಪಿ ಸಂಘಟನೆಯೂ ಬೆಂಬಲ ನೀಡಿದೆ.
ಒಂದೆಡೆ ನಾಡಹಬ್ಬ ದಸರಾ ಸಂಭ್ರಮ.. ಮತ್ತೊಂದೆಡೆ ಪರೀಕ್ಷೆಯ ಟೆನ್ಷನ್ ಶುರುವಾಗಿದೆ. ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ಪದವಿ ವಿದ್ಯಾರ್ಥಿಗಳಿಗೆ ಇಂದಿನಿಂದ ಅಕ್ಟೋಬರ್ 28ರವರೆಗೆ ಸೆಮಿಸ್ಟರ್ ಪರೀಕ್ಷೆ ಆಯೋಜಿಸಲಾಗಿದೆ. ದಸರಾ ಹಬ್ಬದ ಸಂದರ್ಭದಲ್ಲಿ ಪರೀಕ್ಷೆ ನಡೆಸುತ್ತಿರುವ ಕಾಲೇಜು ಆಡಳಿತದ ನಿರ್ಧಾರಕ್ಕೆ ವಿದ್ಯಾರ್ಥಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ದಸರಾ ಆಚರಣೆಯಲ್ಲಿ ಭಾಗವಹಿಸಲು ಪರೀಕ್ಷೆಯಿಂದ ತೊಂದರೆಯಾಗಲಿದೆ. ಹಬ್ಬದ ಸಂಭ್ರಮದ ಹೊತ್ತಲ್ಲಿ ಪರೀಕ್ಷೆ ನಡೆಸುವುದು ಸರಿಯಲ್ಲ ಅನ್ನೋದು ವಿದ್ಯಾರ್ಥಿಗಳ ಆಕ್ಷೇಪ. ಪರೀಕ್ಷೆಯನ್ನು ಮುಂದೂಡುವಂತೆ ಕಾಲೇಜು ಆಡಳಿತಕ್ಕೆ ಮನವಿ ಸಲ್ಲಿಸಿದ್ರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಕಾಲೇಜು ಆಡಳಿತದ ನಿರ್ಧಾರ ಖಂಡಿಸಿ ವಿದ್ಯಾರ್ಥಿಗಳು ಪರೀಕ್ಷೆ ಬಹಿಷ್ಕರಿಸಿದ್ದಾರೆ. ಕಾಲೇಜಿನ ಗೇಟ್ ಎದುರು ನೂರಾರು ವಿದ್ಯಾರ್ಥಿಗಳು ಜಮಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ವಿದ್ಯಾರ್ಥಿಗಳ ಹೋರಾಟಕ್ಕೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ಎಬಿವಿಪಿ ಕೂಡ ಬೆಂಬಲ ನೀಡಿದೆ. ಇನ್ನು, ಈ ವಿಚಾರವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೂ ವಿದ್ಯಾರ್ಥಿ ಸಂಘಟನೆಗಳು ದೂರು ಸಲ್ಲಿಸಿವೆ.
ದಸರಾ ಹಬ್ಬದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ರಜೆ ನೀಡದೆ ಪರೀಕ್ಷೆ ನಡೆಸಲು ಮುಂದಾಗಿರುವ ಕಾಲೇಜು ಆಡಳಿತದ ಕ್ರಮದ ಬಗ್ಗೆ ಆಕ್ರೋಶ ವ್ಯಕ್ತವಾಗುತ್ತಿದೆ. ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿ ಪರೀಕ್ಷೆಯನ್ನು ಮುಂದೂಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಸದ್ಯ ಸೈಂಟ್ ಆಗ್ನೆಸ್ ಕಾಲೇಜಿನ ಗೇಟ್ ಎದುರು ಪ್ರತಿಭಟನೆ ಮುಂದುವರಿದಿದ್ದು, ಕಾಲೇಜು ಆಡಳಿತದ ಮುಂದಿನ ನಡೆ ಏನು ಅನ್ನೋ ಕುತೂಹಲ ಮೂಡಿದೆ.
ಒಟ್ಟಿನಲ್ಲಿ, ದಸರಾ ಸಂಭ್ರಮದ ನಡುವೆ ಪರೀಕ್ಷೆ ವಿವಾದ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ಪ್ರತಿಭಟನೆಯ ಕಿಚ್ಚು ಹೊತ್ತಿಸಿದೆ. ವಿದ್ಯಾರ್ಥಿಗಳ ಬೇಡಿಕೆಗೆ ಕಾಲೇಜು ಆಡಳಿತ ಸ್ಪಂದಿಸುತ್ತಾ? ಪರೀಕ್ಷೆ ಮುಂದೂಡಿಕೆಯಾಗುತ್ತಾ? ಅನ್ನೋದನ್ನು ಕಾದು ನೋಡಬೇಕಿದೆ.
ಮಂಗಳೂರು ದಸರಾ ಸಂಭ್ರಮ
• ನವದುರ್ಗೆಯರ ಭವ್ಯ ದರ್ಶನ
• ಅರಮನೆ ಶೈಲಿಯ ದರ್ಬಾರ್ ಸಭಾಂಗಣ ಮತ್ತು ಕಲಾತ್ಮಕ ಮಂಟಪಗಳು
• ಕರಾವಳಿಯ ಸಂಪ್ರದಾಯದ ಹುಲಿವೇಷ (ಪಿಲಿನಲಿಕೆ) ಕುಣಿತ ಮತ್ತು ಚಂಡೆ ವಾದನ
• ನಗರದಾದ್ಯಂತ 10 ದಿನಗಳ ಕಾಲ ವಿದ್ಯುತ್ ದೀಪಾಲಂಕಾರ
ಭವ್ಯ ಶೋಭಾಯಾತ್ರೆ (ಹೊರಡುವ ದಿನ): ಅಕ್ಟೋಬರ್ 21, 2026 ರಂದು ಶಾರದಾ ಮಾತೆ ಸೇರಿದಂತೆ ಎಲ್ಲಾ ದೇವರುಗಳ ಭವ್ಯ ಶೋಭಾಯಾತ್ರೆ ನಡೆಯಲಿದೆ ಅಕ್ಟೋಬರ್ 11, 2026 ರಂದು ಶ್ರೀ ಶಾರದಾ ಮಾತೆ ಹಾಗೂ ನವದುರ್ಗೆಯರ ಮೂರ್ತಿಗಳ ಪ್ರತಿಷ್ಠಾಪನೆಯೊಂದಿಗೆ ದಸರಾ ಮಹೋತ್ಸವ ಆರಂಭಗೊಂಡಿದೆ.