• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಮಂಗಳೂರು
  • /ಸೌಜನ್ಯ ಕೇಸ್‌, 14 ವರ್ಷಗಳ ಸುದೀರ್ಘ ಹೋರಾಟ.. ನೈಜ ಕೊ*ಲೆಗಾರ ಯಾರು, ಯಕ್ಷ ಪ್ರಶ್ನೆಗೆ ಸಿಗುತ್ತಾ ಉತ್ತರ?

ಸೌಜನ್ಯ ಕೇಸ್‌, 14 ವರ್ಷಗಳ ಸುದೀರ್ಘ ಹೋರಾಟ.. ನೈಜ ಕೊ*ಲೆಗಾರ ಯಾರು, ಯಕ್ಷ ಪ್ರಶ್ನೆಗೆ ಸಿಗುತ್ತಾ ಉತ್ತರ?

ಪ್ರಕರಣದ ಮರುತನಿಖೆಗೆ ಆದೇಶಿಸಿರುವ ದೇಶದ ಅತ್ಯುನ್ನತ ನ್ಯಾಯಾಲಯ, ಘಟನೆಯ ತನಿಖೆಗಾಗಿ ವಿಶೇಷ ತನಿಖಾ ತಂಡ ರಚಿಸುವಂತೆ ರಾಜ್ಯ ಸರ್ಕಾರಕ್ಕೆ ಸ್ಪಷ್ಟ ನಿರ್ದೇಶನ ನೀಡಿದೆ.

Written ByBhimappa
Published: Sep 21, 2026, 05:43 PM IST|Updated: Sep 21, 2026, 05:52 PM IST
joinshare
ಸೌಜನ್ಯ ಕೇಸ್‌, 14 ವರ್ಷಗಳ ಸುದೀರ್ಘ ಹೋರಾಟ.. ನೈಜ ಕೊ*ಲೆಗಾರ ಯಾರು, ಯಕ್ಷ ಪ್ರಶ್ನೆಗೆ ಸಿಗುತ್ತಾ ಉತ್ತರ?
Image Credit: Supreme_Court

About the Author

Bhimappa

Bhimappa

ಭೀಮಪ್ಪ (Bhimappa) ಜೀ ಕನ್ನಡ ನ್ಯೂಸ್‌ನಲ್ಲಿ ಸದ್ಯ ಡಿಜಿಟಲ್ (ವೆಬ್‌ಸೈಟ್‌) ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ರಾಜಕೀಯ, ಸ್ಫೋರ್ಟ್ಸ್‌, ಸಿನಿಮಾ, ಆರೋಗ್ಯ, ಎಂಟರ್ಟೈನ್‌ಮೆಂಟ್, ಲೈಫ್‌ಸ್ಟೈಲ್‌, ವೈರಲ್‌ ಸುದ್ದಿಗಳನ್ನು ಓದುಗರಿಗೆ ನೀಡುತ್ತಿದ್ದಾರೆ. ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಪತ್ರಿಕೋದ್ಯಮವನ್ನು ಅಧ್ಯಯನ ಮಾಡಿರುವ ಇವರು ಪ್ರಜಾವಾಣಿಯಲ್ಲಿ ಒಂದು ವರ್ಷ ಅಪ್ರೆಂಟಿಸ್‌ ಹಾಗೂ ನ್ಯೂಸ್‌ಫಸ್ಟ್‌ನಲ್ಲಿ ಡಿಜಿಟಲ್ ವಿಭಾಗದಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. 
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Supreme Court orders re-investigation of Saujanya case‌; ಧರ್ಮಸ್ಥಳ ಸೌಜನ್ಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸೌಜನ್ಯ ಕುಟುಂಬದ 14 ವರ್ಷಗಳ ಸುದೀರ್ಘ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಂತಾಗಿದೆ. ಮರುತನಿಖೆಗೆ ಆದೇಶ ನೀಡಿರುವ ಸುಪ್ರೀಂ ಕೋರ್ಟ್ 3 ತಿಂಗಳ ಗಡುವು ನೀಡಿದ್ದಾರೆ. ಹೊಸ ತನಿಖಾ ತಂಡ ಮರು ತನಿಖೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಸಂಪೂರ್ಣವಾಗಿ ತನಿಖೆ ಮಾಡಿ ಮೂರು ತಿಂಗಳ ಒಳಗೆ ಪೂರ್ಣವಾದ ವರದಿ ಸಲ್ಲಿಸಬೇಕು ಎಂದು ನ್ಯಾಯಾಲಯ ಹೇಳಿದೆ. ಇದೊಂದು ಆದೇಶದಿಂದ ದಶಕಕ್ಕೂ ಅಧಿಕ ಕಾಲದಿಂದ ನ್ಯಾಯಕ್ಕಾಗಿ ಹೋರಾಡುತ್ತಿದ್ದ ಸೌಜನ್ಯ ಕುಟುಂಬಕ್ಕೆ ಹಾಗೂ ಹೋರಾಟಗಾರರಿಗೆ ಮತ್ತೊಮ್ಮೆ ನ್ಯಾಯದ ಭರವಸೆ ಮೂಡಿದೆ. ಈ ಪ್ರಕರಣದ ತನಿಖೆ ನಡೆಸಿದ್ದ ಕೇಂದ್ರ ತನಿಖಾ ದಳ ಅಥವಾ ಸಿಬಿಐ ಆರೋಪಿಗಳನ್ನು ಖುಲಾಸೆ ಮಾಡಿತ್ತು. ಇದರಿಂದಾಗಿ ಸೌಜನ್ಯ ತಾಯಿ ಕುಸುಮಾವತಿ ಗೌಡ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಆದರೆ ಹೈಕೋರ್ಟ್‌ ಅರ್ಜಿಯನ್ನು ವಜಾ ಮಾಡಿತ್ತು. ಇದಾದ ಮೇಲೆ ಸುಪ್ರೀಂ ಕೋರ್ಟ್‌ಗೆ ವಿಶೇಷ ಮೇಲ್ಮನವಿ ಸಲ್ಲಿಕೆ ಮಾಡಲಾಗಿತ್ತು.      

‌17 ವರ್ಷದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ದುರಂತದ ಬಗ್ಗೆ 2012 ರಿಂದ ಕುಟುಂಬಸ್ಥರು ಮತ್ತು ರಾಜ್ಯದ ಸಾರ್ವಜನಿಕರು ನೈಜ ಆರೋಪಿಗಳಿಗೆ ಶಿಕ್ಷೆಯಾಗಬೇಕು ಎಂದು ನಿರಂತರ ಹೋರಾಟ ನಡೆಸಿಕೊಂಡು ಬಂದಿದ್ದರು. 2012ರ ಅಕ್ಟೋಬರ್‌ನಲ್ಲಿ ಕಾಲೇಜು ವಿದ್ಯಾರ್ಥಿನಿ ಸೌಜನ್ಯಾ ಅವರ ಅ*ತ್ಯಾಚಾರ ಹಾಗೂ ಕ್ರೂರ ಹತ್ಯೆ ನಡೆಯಿತು. ಈ ಪ್ರಕರಣದಲ್ಲಿ ಸಂತೋಷ್ ರಾವ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಸಿಬಿಐ ವಿಶೇಷ ನ್ಯಾಯಾಲಯವು 2023ರಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದ ಸಂತೋಷ್ ರಾವ್ ಅವರನ್ನು ದೋಷ ಮುಕ್ತಗೊಳಿಸಿ ತೀರ್ಪು ನೀಡಿತ್ತು.

2024ರಲ್ಲಿ ಕುಸುಮಾವತಿ ಹೊಸ ಸಿಬಿಐ ತನಿಖೆ ಕೋರಿ ಕರ್ನಾಟಕ ಹೈಕೋರ್ಟ್‌ನ ಮೊರೆ ಹೋಗಿದ್ದರು. 2024ರ ಆಗಸ್ಟ್ 20 ರಂದು ಹೈಕೋರ್ಟ್ ಅವರ ಅರ್ಜಿಯನ್ನು ವಜಾಗೊಳಿಸಿತು. ಆದರೆ ಹೆಚ್ಚಿನ ತನಿಖೆಯ ಅಗತ್ಯತೆಯ ಬಗ್ಗೆ ಅವಲೋಕನಗಳನ್ನು ಮಾಡಿತು. ಈ ಆದೇಶದ ವಿರುದ್ಧ ಕುಸುಮಾವತಿ ಗೌಡ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.

ವಿಚಾರಣಾ ನ್ಯಾಯಾಲಯವು ಈ ಹಿಂದೆ ಬಂಧಿತನಾಗಿದ್ದ ಆರೋಪಿಯನ್ನು ಖುಲಾಸೆಗೊಳಿಸಿದ ನಂತರ, ನೈಜ ಕೊಲೆಗಾರ ಯಾರು ಎಂಬ ಯಕ್ಷ ಪ್ರಶ್ನೆ ಇನ್ನೂ ಇರುವಾಗಲೇ ಸೌಜನ್ಯ ಅ*ತ್ಯಾಚಾರ ಹಾಗೂ ಭೀಕರ ಕೊಲೆ ಕೇಸ್‌ ಅಲ್ಲಿ ಸುಪ್ರೀಂ ಕೋರ್ಟ್ ಅತ್ಯಂತ ಮಹತ್ವದ ತೀರ್ಪು ಪ್ರಕಟ ಮಾಡಿದೆ. ಪ್ರಕರಣದ ಮರುತನಿಖೆಗೆ ಆದೇಶಿಸಿರುವ ದೇಶದ ಅತ್ಯುನ್ನತ ನ್ಯಾಯಾಲಯ, ಘಟನೆಯ ತನಿಖೆಗಾಗಿ ವಿಶೇಷ ತನಿಖಾ ತಂಡ ರಚಿಸುವಂತೆ ರಾಜ್ಯ ಸರ್ಕಾರಕ್ಕೆ ಸ್ಪಷ್ಟ ನಿರ್ದೇಶನ ನೀಡಿದೆ. ಸೌಜನ್ಯ ಅವರ ತಾಯಿ ಕುಸುಮಾವತಿ ಗೌಡ ಅವರು ಅರ್ಜಿ ಸಲ್ಲಿಸಿ ಪ್ರಕರಣದ ನೈಜ ಆರೋಪಿಗಳನ್ನು ಬಂಧಿಸಿ, ನ್ಯಾಯ ಒದಗಿಸಬೇಕು ಎಂದು ಕೋರಿ ಸಲ್ಲಿಸಿದ್ದರು. ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜಯ್ ಕುಮಾರ್ ನೇತೃತ್ವದ ಪೀಠವು ಈ ಮಹತ್ವದ ತೀರ್ಪನ್ನು ಪ್ರಕಟ ಮಾಡಿದೆ.

ಇನ್ನೂ ಈ‌ ಕೇಸ್‌ಗೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿದ್ದ ಸಂತೋಷ್ ರಾವ್ ಅವರನ್ನು 2023ರ ಜೂನ್ 16 ರಂದು ಸಿಬಿಐ ನ್ಯಾಯಾಲಯವು ಖುಲಾಸೆಗೊಳಿಸಿತ್ತು. ತನಿಖೆಯಲ್ಲಿ ಗಂಭೀರವಾಗಿ ಲೋಪಗಳಾಗಿದ್ದು, ನಿಜವಾದ ಆರೋಪಿಗಳನ್ನು ರಕ್ಷಿಸಲಾಗಿದೆ. ಪ್ರಕರಣದ ನೈಜ ಆರೋಪಿಗಳನ್ನು ಪತ್ತೆ ಹಚ್ಚಿ ನ್ಯಾಯ ಒದಗಿಸಬೇಕು ಎಂದು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.  ಪ್ರಕರಣದ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್, ಪ್ರಕರಣದ ಹಿಂದಿನ ತನಿಖೆ ನಡೆಸಿದ್ದ ಸಿಬಿಐನ ತನಿಖೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿತ್ತು. ಸಿಐಡಿ ತನಿಖೆಯಲ್ಲಿ ಸಂಗ್ರಹಿಸಲಾಗಿದ್ದ ಸಾಕ್ಷ್ಯಗಳನ್ನೇ ಆಧರಿಸಿ ವರದಿ ಸಿದ್ಧಪಡಿಸಲಾಗಿದೆ. ಸ್ವತಂತ್ರ ತನಿಖೆ ನಡೆದಿಲ್ಲ, ತನಿಖಾಧಿಕಾರಿ ಘಟನಾ ಸ್ಥಳಕ್ಕೆ ಹೋಗದೇ ಹೇಗೆ ತನಿಖೆ ಮಾಡಲಾಯಿತು ಎಂದು ಪ್ರಶ್ನೆ ಮಾಡಲಾಗಿತ್ತು.

ವಿಚಾರಣೆ ಸಮಯದಲ್ಲಿ ನ್ಯಾಯಾಲಯ ಹೊಸದಾಗಿ ತನಿಖೆ ನಡೆಸಲು ಆದೇಶಿಸಿದರೆ, ಹೊಸ ವಿಶೇಷ ತನಿಖಾ ತಂಡವನ್ನು ರಚಿಸಲು ಸಿದ್ಧವಿದೆ ಎಂದು ರಾಜ್ಯ ಸರ್ಕಾರ ಹೇಳಿತ್ತು. ಇದರ ಅನ್ವಯ ಕೋರ್ಟ್ ಇಂದು ಆದೇಶ ನೀಡಿದ್ದು ಎಸ್‌ಐಟಿ ಹೊಸದಾಗಿ ತನಿಖೆ ಮಾಡಬೇಕು. ಎಸ್‌ಐಟಿಯಲ್ಲಿ ಹಿಂದೆ ಪ್ರಕರಣದ ತನಿಖೆಯಲ್ಲಿ ಭಾಗಿಯಾಗಿದ್ದ ಪೊಲೀಸ್ ಅಥವಾ ಸಿಬಿಐ ಅಧಿಕಾರಿಗಳನ್ನು ಸೇರಿಸಬಾರದು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಸೌಜನ್ಯ ಕೊಲೆಯ ಹಿಂದಿನ ಕರಾಳ ಮುಖ ಮರುತನಿಖೆಯಲ್ಲಿ ಬಯಲಾಗುತ್ತಾ ಎಂದು ಕಾದು ನೋಡಬೇಕು.
 

Add Zee News as a Preferred Source
TAGS:
Crime