• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಮೈಸೂರು
  • /ಆನೆಕಾಡು ಅಪಘಾತ ಪ್ರಕರಣ: ಮೃತರ ಕುಟುಂಬಸ್ಥರಿಗೆ ಪ್ರಸನ್ನ ಎಡಿಕೇರಿ ಸಾಂತ್ವನ

ಆನೆಕಾಡು ಅಪಘಾತ ಪ್ರಕರಣ: ಮೃತರ ಕುಟುಂಬಸ್ಥರಿಗೆ ಪ್ರಸನ್ನ ಎಡಿಕೇರಿ ಸಾಂತ್ವನ

ಕೊಡಗು ಜಿಲ್ಲೆಯ ಕುಶಾಲನಗರ ಸಮೀಪ ಆನೆಕಾಡು ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಯುವ ನಾಯಕ ಹಾಗೂ ಸಮಾಜ ಸೇವಕ ಎಡಿಕೇರಿ ಪ್ರಸನ್ನ ಅವರು ಗಾಯಾಳುಗಳು ಮತ್ತು ಮೃತರ ಕುಟುಂಬಸ್ಥರನ್ನ ಭೇಟಿ ಮಾಡಿ ಸಾಂತ್ವನ ಹೇಳಿದರು. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ, ಕುಟುಂಬಗಳಿಗೆ ಧೈರ್ಯ ಸಿಗಲಿ ಎಂದು ಹಾರೈಸಿ, ಸಂಕಷ್ಟದಲ್ಲಿ ಕುಟುಂಬಗಳೊಂದಿಗೆ ನಿಲ್ಲುವುದಾಗಿ ಭರವಸೆ ನೀಡಿದರು.

Written ByPuttaraj K Alur
Published: Sep 30, 2026, 13:50 IST|Updated: Sep 30, 2026, 13:57 IST
joinshare
ಆನೆಕಾಡು ಅಪಘಾತ ಪ್ರಕರಣ: ಮೃತರ ಕುಟುಂಬಸ್ಥರಿಗೆ ಪ್ರಸನ್ನ ಎಡಿಕೇರಿ ಸಾಂತ್ವನ
Image Credit: Anekadu Accident

About the Author

Puttaraj K Alur

Puttaraj K Alur

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Anekadu Accident: ಕೊಡಗು ಜಿಲ್ಲೆಯ ಕುಶಾಲನಗರ ಸಮೀಪ ರಾಷ್ಟ್ರೀಯ ಹೆದ್ದಾರಿ 275ರ ಆನೆಕಾಡು ಬಳಿ ಇತ್ತೀಚೆಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು. ಈ ದುರಂತದ ಹಿನ್ನೆಲೆಯಲ್ಲಿ ಉದ್ಯಮಿ, ಸಮಾಜ ಸೇವಕ ಹಾಗೂ ಬಿಜೆಪಿ ಯುವ ನಾಯಕ ಪ್ರಸನ್ನ ಎಡಿಕೇರಿ ಅವರು ಮೃತರ ಕುಟುಂಬಸ್ಥರನ್ನ ಭೇಟಿ ಮಾಡಿ ಸಾಂತ್ವನ ಹೇಳಿದರು. ಅಪಘಾತದ ಸುದ್ದಿ ತಿಳಿದ ಬಳಿಕ ಪ್ರಸನ್ನ ಎಡಿಕೇರಿ ಅವರು ಮೃತರ ನಿವಾಸಗಳಿಗೆ ತೆರಳಿ ಕುಟುಂಬಸ್ಥರನ್ನ ಭೇಟಿಯಾಗಿದ್ದಾರೆ. ದುಃಖದಲ್ಲಿದ್ದ ಕುಟುಂಬ ಸದಸ್ಯರೊಂದಿಗೆ ಮಾತನಾಡಿ, ಅವರ ನೋವನ್ನ ಆಲಿಸಿ ಧೈರ್ಯ ತುಂಬಿದರು. ಸಂಕಷ್ಟದ ಸಂದರ್ಭದಲ್ಲಿ ಕುಟುಂಬಗಳೊಂದಿಗೆ ನಿಲ್ಲುವುದಾಗಿ ಭರವಸೆ ನೀಡಿದರು.

ಈ ವೇಳೆ ಮಾತನಾಡಿದ ಪ್ರಸನ್ನ ಎಡಿಕೇರಿ, ಆನೆಕಾಡು ಬಳಿ ಸಂಭವಿಸಿದ ಅಪಘಾತದಲ್ಲಿ ಅಮೂಲ್ಯ ಜೀವಗಳು ಕಳೆದುಕೊಂಡಿರುವುದು ಅತ್ಯಂತ ನೋವಿನ ಸಂಗತಿ ಎಂದು ಹೇಳಿದರು. ದುರಂತದಿಂದ ಮೃತಪಟ್ಟವರ ಕುಟುಂಬಗಳ ದುಃಖದಲ್ಲಿ ತಾನೂ ಭಾಗಿಯಾಗಿದ್ದು, ಅವರ ನೋವನ್ನ ಹಂಚಿಕೊಳ್ಳುವ ಸಣ್ಣ ಪ್ರಯತ್ನ ಮಾಡಿರುವುದಾಗಿ ತಿಳಿಸಿದರು. ʼಅಪಘಾತದಲ್ಲಿ ಅಮೂಲ್ಯ ಜೀವಗಳು ಕಳೆದುಕೊಂಡಿರುವುದು ಅತ್ಯಂತ ನೋವಿನ ಸಂಗತಿ. ಮೃತರ ಕುಟುಂಬಗಳ ದುಃಖದಲ್ಲಿ ತಾನೂ ಭಾಗಿಯಾಗಿದ್ದೇನೆ. ಈ ಕಷ್ಟದ ಸಮಯದಲ್ಲಿ ಕುಟುಂಬಸ್ಥರಿಗೆ ಧೈರ್ಯ ಹಾಗೂ ಆತ್ಮಸ್ಥೈರ್ಯ ದೊರೆಯಲಿʼ ಎಂದು ಪ್ರಸನ್ನ ಎಡಿಕೇರಿ ಹೇಳಿದರು. ಅಪಘಾತದಲ್ಲಿ ಗಾಯಗೊಂಡಿರುವವರು ಶೀಘ್ರವಾಗಿ ಚೇತರಿಸಿಕೊಂಡು ಆರೋಗ್ಯದಿಂದ ತಮ್ಮ ಮನೆಗಳಿಗೆ ಮರಳಲಿ ಎಂದು ಅವರು ಆಶಿಸಿದರು. ಮೃತರ ಕುಟುಂಬಸ್ಥರಿಗೆ ಈ ದುಃಖವನ್ನ ಭರಿಸುವ ಶಕ್ತಿಯನ್ನ ಭಗವಂತ ನೀಡಲಿ ಎಂದು ಪ್ರಾರ್ಥಿಸಿದರು.

ಆನೆಕಾಡಿನಲ್ಲಿ ಸಂಭವಿಸಿದ್ದ ಭೀಕರ ಅಪಘಾತ!

ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯ ಆನೆಕಾಡು ಬಳಿ ಕಾರು, ಬೈಕ್ ಹಾಗೂ ಪಿಕ್‌ಅಪ್ ವಾಹನದ ನಡುವೆ ಸರಣಿ ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಸೇರಿದಂತೆ ಇತರ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿತ್ತು.  

ವರದಿಗಳ ಪ್ರಕಾರ, ಅತಿವೇಗವಾಗಿ ಸಾಗುತ್ತಿದ್ದ ಕಾರು ಬೈಕ್‌ಗೆ ಡಿಕ್ಕಿ ಹೊಡೆದು ಬಳಿಕ ನಿಯಂತ್ರಣ ತಪ್ಪಿ ಪಿಕ್‌ಅಪ್ ವಾಹನಕ್ಕೆ ಅಪ್ಪಳಿಸಿತ್ತು. ಘಟನೆಯ ಬಳಿಕ ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದರು. ಈ ದುರಂತದಿಂದ ಮೃತರ ಕುಟುಂಬಗಳಲ್ಲಿ ಆಘಾತ ಮತ್ತು ದುಃಖದ ವಾತಾವರಣ ನಿರ್ಮಾಣವಾಗಿತ್ತು. ಇಂತಹ ಸಂದರ್ಭದಲ್ಲಿ ಕುಟುಂಬಸ್ಥರನ್ನ ಖುದ್ದಾಗಿ ಭೇಟಿ ಮಾಡಿ ಸಾಂತ್ವನ ಹೇಳಿರುವ ಪ್ರಸನ್ನ ಎಡಿಕೇರಿ ಅವರ ನಡೆ ಸ್ಥಳೀಯವಾಗಿ ಗಮನ ಸೆಳೆದಿದೆ. ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಪ್ರಸನ್ನ ಎಡಿಕೇರಿ ಅವರು ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಧೈರ್ಯ ತುಂಬುವ ಉದ್ದೇಶದಿಂದ ಈ ಭೇಟಿ ನಡೆಸಿರುವುದಾಗಿ ತಿಳಿಸಿದ್ದಾರೆ.

ದುಃಖದಲ್ಲಿರುವ ಕುಟುಂಬಗಳಿಗೆ ಮಾನಸಿಕ ಬೆಂಬಲ ನೀಡುವುದು ಹಾಗೂ ಅವರೊಂದಿಗೆ ನಿಲ್ಲುವುದು ಮುಖ್ಯವೆಂಬ ಸಂದೇಶವನ್ನ ಈ ಸಂದರ್ಭದಲ್ಲಿ ಅವರು ನೀಡಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಂತಾಪ ಸೂಚಿಸಿದ ಅವರು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು. ಕುಟುಂಬಸ್ಥರ ನೋವನ್ನ ಆಲಿಸಿ, ಅವರ ಕಷ್ಟದ ಸಂದರ್ಭದಲ್ಲಿ ಸಾಧ್ಯವಾದಷ್ಟು ನೆರವಾಗುವ ಭರವಸೆಯನ್ನೂ ನೀಡಿದರು. ಆನೆಕಾಡು ಅಪಘಾತದ ಬಳಿಕ ಮೃತರ ಕುಟುಂಬಗಳ ಮನೆಗಳಿಗೆ ತೆರಳಿ ಸಾಂತ್ವನ ಹೇಳಿದ ಪ್ರಸನ್ನ ಎಡಿಕೇರಿ ಅವರ ಮಾನವೀಯ ಸ್ಪಂದನೆಗೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Add Zee News as a Preferred Source
TAGS:
Kannada News