• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಮೈಸೂರು
  • /ಕರ್ನಾಟಕದಲ್ಲಿ ‘ಬ್ಲ್ಯಾಕ್‌ಮೇಲ್ ಸರ್ಕಾರ’ದ ಆಡಳಿತ! ಸಿದ್ದರಾಮಯ್ಯ ರಾಜೀನಾಮೆ ವಿಚಾರವಾಗಿ ಶೋಭಾ ಕರಂದ್ಲಾಜೆ ಗಂಭೀರ ಆರೋಪ

ಕರ್ನಾಟಕದಲ್ಲಿ ‘ಬ್ಲ್ಯಾಕ್‌ಮೇಲ್ ಸರ್ಕಾರ’ದ ಆಡಳಿತ! ಸಿದ್ದರಾಮಯ್ಯ ರಾಜೀನಾಮೆ ವಿಚಾರವಾಗಿ ಶೋಭಾ ಕರಂದ್ಲಾಜೆ ಗಂಭೀರ ಆರೋಪ

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಪಕ್ಷದ ಒಳಗೇ ಬ್ಲ್ಯಾಕ್‌ಮೇಲ್ ನಡೆಯುತ್ತಿದೆ ಎಂದು ಶೋಭಾ ಕರಂದ್ಲಾಜೆ ಆರೋಪಿಸಿದರು. ಸರ್ಕಾರದ ಒಳಗಿನ ರಾಜಕೀಯ ಬೆಳವಣಿಗೆಗಳನ್ನ ಪ್ರಸ್ತಾಪಿಸಿದ ಅವರು, ಸಿಡಿಗಳನ್ನ ಇಟ್ಟುಕೊಂಡು ಕೆಲವರಿಗೆ ಬೆದರಿಕೆ ಹಾಕಲಾಗುತ್ತಿದೆ ಅಂತಾ ಗಂಭೀರ ಆರೋಪ ಮಾಡಿದ್ದಾರೆ.

Written ByPuttaraj K Alur
Published: Oct 19, 2026, 02:27 PM IST|Updated: Oct 19, 2026, 02:43 PM IST
joinshare
ಕರ್ನಾಟಕದಲ್ಲಿ ‘ಬ್ಲ್ಯಾಕ್‌ಮೇಲ್ ಸರ್ಕಾರ’ದ ಆಡಳಿತ! ಸಿದ್ದರಾಮಯ್ಯ ರಾಜೀನಾಮೆ ವಿಚಾರವಾಗಿ ಶೋಭಾ ಕರಂದ್ಲಾಜೆ ಗಂಭೀರ ಆರೋಪ
Image Credit: Shobha Karandlaje

About the Author

Puttaraj K Alur

Puttaraj K Alur

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 
Read More

Trending

  • News
  • Photos
  • Videos
ಚಿತ್ರದುರ್ಗದಲ್ಲಿ ಕಾಂಗ್ರೆಸ್ ಪ್ರಮುಖ ನಾಯಕರ ಫೋಟೋ ಮಿಸ್ - ಕಾರ್ಯಕರ್ತರ ಮಧ್ಯೆ ತಳ್ಳಾಟ, ನೂಕಾಟ!

ಚಿತ್ರದುರ್ಗದಲ್ಲಿ ಕಾಂಗ್ರೆಸ್ ಪ್ರಮುಖ ನಾಯಕರ ಫೋಟೋ ಮಿಸ್ - ಕಾರ್ಯಕರ್ತರ ಮಧ್ಯೆ ತಳ್ಳಾಟ, ನೂಕಾಟ!

2

ಆಯುಧ ಪೂಜೆ, ವಿಜಯದಶಮಿಗೆ ಹೂವು-ಹಣ್ಣಿನ ಬೆಲೆ ಎಷ್ಟು? ಇಲ್ಲಿದೆ ಇಂದಿನ ದರ ಪಟ್ಟಿ!

3

ರೈಲ್ವೆ ಇಲಾಖೆಯ ಮಹತ್ವದ ನಿಯಮ: ರೈಲಿನಲ್ಲಿ ಈ ತಪ್ಪು ಮಾಡಿದ್ರೆ 6 ತಿಂಗಳು ಜೈಲು, ₹5,000 ದಂಡ

4

ಕರ್ನಾಟಕದಲ್ಲಿ ‘ಬ್ಲ್ಯಾಕ್‌ಮೇಲ್ ಸರ್ಕಾರ’ದ ಆಡಳಿತ! ಸಿದ್ದರಾಮಯ್ಯ ರಾಜೀನಾಮೆ ವಿಚಾರವಾಗಿ ಶೋಭಾ ಕರಂದ್ಲಾಜೆ ಗಂಭೀರ ಆರೋಪ

5

ಸರ್ಕಾರಿ ವೈದ್ಯರಿಗೆ ಹೊಸ ರೂಲ್ಸ್‌.. ನವೆಂಬರ್‌ 1ರಿಂದ ರಾತ್ರಿ 9ಕ್ಕೆ ಆ್ಯಪ್‌ನಲ್ಲಿ ಹಾಜರಾತಿ ಕಡ್ಡಾಯ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Sting Operation Row: ಕರ್ನಾಟಕದಲ್ಲಿ ಸ್ಟಿಂಗ್ ಆಪರೇಷನ್, ಬ್ಲ್ಯಾಕ್‌ಮೇಲ್ ಮತ್ತು ಸಿಡಿ ರಾಜಕಾರಣದ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಬ್ಲ್ಯಾಕ್‌ಮೇಲ್ ಮೂಲಕ ಆಡಳಿತ ನಡೆಸಲಾಗುತ್ತಿದೆ ಎಂಬ ಗಂಭೀರ ಆರೋಪ ಮಾಡಿರುವ ಅವರು, ಈ ಪ್ರಕರಣದ ಕುರಿತು ತಕ್ಷಣವೇ ವಿಶೇಷ ತನಿಖಾ ತಂಡದ (SIT) ಮೂಲಕ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಶೋಭಾ ಕರಂದ್ಲಾಜೆ, ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಅಧಿಕಾರ ಪಡೆಯಲು ಬ್ಲ್ಯಾಕ್‌ಮೇಲ್ ತಂತ್ರಗಳನ್ನ ಬಳಸಲಾಗುತ್ತಿದೆ ಎಂಬ ಆರೋಪ ಮಾಡಿದ ಅವರು, ಇಂತಹ ಬೆಳವಣಿಗೆಗಳು ಕರ್ನಾಟಕದ ಗೌರವಕ್ಕೆ ಧಕ್ಕೆ ತರುತ್ತವೆ ಎಂದು ಅಭಿಪ್ರಾಯಪಟ್ಟರು.

ಸರ್ಕಾರದ ಒಳಗೇ ಬ್ಲ್ಯಾಕ್‌ಮೇಲ್ ನಡೆಯುತ್ತಿದೆಯೇ?

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಪಕ್ಷದ ಒಳಗೇ ಬ್ಲ್ಯಾಕ್‌ಮೇಲ್ ನಡೆಯುತ್ತಿದೆ ಎಂದು ಶೋಭಾ ಕರಂದ್ಲಾಜೆ ಆರೋಪಿಸಿದರು. ಸರ್ಕಾರದ ಒಳಗಿನ ರಾಜಕೀಯ ಬೆಳವಣಿಗೆಗಳನ್ನ ಪ್ರಸ್ತಾಪಿಸಿದ ಅವರು, ಸಿಡಿಗಳನ್ನ ಇಟ್ಟುಕೊಂಡು ಕೆಲವರಿಗೆ ಬೆದರಿಕೆ ಹಾಕಲಾಗುತ್ತಿದೆ ಅಂತಾ ಗಂಭೀರ ಆರೋಪ ಮಾಡಿದರು. “ರಾಜ್ಯದಲ್ಲಿ ಬ್ಲ್ಯಾಕ್‌ಮೇಲ್ ಸರ್ಕಾರ ಇದೆ. ಅವರ ಪಾರ್ಟಿಯ ಒಳಗಡೆಯೇ, ಸರ್ಕಾರದ ಒಳಗೆ ಬ್ಲ್ಯಾಕ್‌ಮೇಲ್ ಮಾಡಿಕೊಂಡು ಆಡಳಿತ ನಡೆಸುತ್ತಿದ್ದಾರೆ” ಎಂದು ಅವರು ಟೀಕಿಸಿದರು.

ಸಿದ್ದರಾಮಯ್ಯ ರಾಜೀನಾಮೆ ವಿಚಾರದ ಸುತ್ತ ಚರ್ಚೆ

ಮಾಜಿ ಸಿಎಂ ಸಿದ್ದರಾಮಯ್ಯರ ರಾಜೀನಾಮೆ ವಿಚಾರವನ್ನೂ ಪ್ರಸ್ತಾಪಿಸಿದ ಶೋಭಾ ಕರಂದ್ಲಾಜೆ, ಅವರನ್ನ ಬ್ಲ್ಯಾಕ್‌ಮೇಲ್ ಮಾಡಿ ರಾಜೀನಾಮೆ ಕೊಡಿಸಲಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ ಎಂದು ಹೇಳಿದರು. ಈ ಬೆಳವಣಿಗೆಯನ್ನ ರಾಜ್ಯದ ರಾಜಕೀಯ ಪರಿಸ್ಥಿತಿಗೆ ಸಂಬಂಧಿಸಿದ ಗಂಭೀರ ವಿಷಯವೆಂದು ಬಣ್ಣಿಸಿದ ಅವರು, ಅಧಿಕಾರಕ್ಕಾಗಿ ಇಂತಹ ತಂತ್ರಗಳನ್ನ ಅನುಸರಿಸುವುದು ಪ್ರಜಾಪ್ರಭುತ್ವದ ವ್ಯವಸ್ಥೆಗೆ ಶೋಭೆ ತರುವುದಿಲ್ಲವೆಂಬ ಅಭಿಪ್ರಾಯ ವ್ಯಕ್ತಪಡಿಸಿದರು.

‘ಕರ್ನಾಟಕಕ್ಕೆ ಕಪ್ಪು ಚುಕ್ಕೆ’

ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು ಬೇರೆ ರಾಜ್ಯಗಳಲ್ಲಿಯೂ ಚರ್ಚೆಗೆ ಕಾರಣವಾಗುತ್ತಿವೆ ಎಂದು ಶೋಭಾ ಕರಂದ್ಲಾಜೆ ಹೇಳಿದರು. ಕರ್ನಾಟಕದ ರಾಜಕೀಯ ವ್ಯವಸ್ಥೆಯ ಬಗ್ಗೆ ಹೊರರಾಜ್ಯದ ಜನರು ಪ್ರಶ್ನೆಗಳನ್ನ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. “ನಮ್ಮ ರಾಜ್ಯದಲ್ಲಿ ಏನಾಗುತ್ತಿದೆ ಎಂದು ಬೇರೆ ರಾಜ್ಯದವರು ಕೇಳುತ್ತಿದ್ದಾರೆ. ಇದು ಯಾರಿಗೂ ಶೋಭೆ ತರುವುದಿಲ್ಲ. ಕರ್ನಾಟಕ ರಾಜ್ಯಕ್ಕೆ ಇದೊಂದು ಕಪ್ಪು ಚುಕ್ಕೆ” ಎಂದು ಅವರು ಹೇಳಿದರು.

ತಕ್ಷಣ SIT ತನಿಖೆಗೆ ಆಗ್ರಹ

ಈ ವಿವಾದಕ್ಕೆ ಅಂತ್ಯ ಹಾಡಲು ಮುಖ್ಯಮಂತ್ರಿ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಶೋಭಾ ಕರಂದ್ಲಾಜೆ ಆಗ್ರಹಿಸಿದರು. ಪ್ರಕರಣದ ಕುರಿತು ವಿಶೇಷ ತನಿಖಾ ತಂಡ ರಚಿಸಿ, ಸಮಗ್ರ ತನಿಖೆ ನಡೆಸಬೇಕೆಂದು ಅವರು ಒತ್ತಾಯಿಸಿದರು. “ನಾನು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡುತ್ತೇನೆ. ಜನರು ನಿಮ್ಮತ್ತ ಬೊಟ್ಟು ಮಾಡುತ್ತಿದ್ದಾರೆ. ತಕ್ಷಣ ಎಸ್‌ಐಟಿ ತನಿಖೆ ನಡೆಸಿ, ಈ ರೀತಿ ಮಾಡುವವರಿಗೆ ಉಗ್ರವಾದ ಶಿಕ್ಷೆಯಾಗಬೇಕು” ಎಂದು ಅವರು ಹೇಳಿದರು.

ಸ್ಟಿಂಗ್ ಆಪರೇಷನ್ ಮತ್ತು ಬ್ಲ್ಯಾಕ್‌ಮೇಲ್ ಆರೋಪಗಳ ಹಿಂದೆ ಯಾರಿದ್ದಾರೆ, ಸಿಡಿಗಳನ್ನ ದುರುಪಯೋಗಪಡಿಸಿಕೊಳ್ಳಲಾಗಿದೆಯೇ ಹಾಗೂ ರಾಜಕೀಯ ಉದ್ದೇಶಕ್ಕಾಗಿ ಯಾರಿಗಾದರೂ ಬೆದರಿಕೆ ಹಾಕಲಾಗಿದೆಯೇ ಎಂಬ ಪ್ರಶ್ನೆಗಳಿಗೆ ತನಿಖೆಯ ಮೂಲಕ ಉತ್ತರ ಸಿಗಬೇಕಿದೆ ಎಂದು ಅವರ ಆಗ್ರಹದಿಂದ ಸ್ಪಷ್ಟವಾಗುತ್ತದೆ. ಒಟ್ನಲ್ಲಿ ಮೈಸೂರಿನಲ್ಲಿ ಶೋಭಾ ಕರಂದ್ಲಾಜೆ ನೀಡಿರುವ ಈ ಹೇಳಿಕೆ ರಾಜ್ಯದ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗುವ ಸಾಧ್ಯತೆಯಿದೆ. ಆರೋಪಗಳ ಕುರಿತು ಸರ್ಕಾರದ ಪ್ರತಿಕ್ರಿಯೆ, ಸಂಬಂಧಿತ ವ್ಯಕ್ತಿಗಳ ಸ್ಪಷ್ಟನೆ ಹಾಗೂ ತನಿಖೆಯ ಪ್ರಗತಿ ಮುಂದಿನ ದಿನಗಳಲ್ಲಿ ಮಹತ್ವ ಪಡೆದುಕೊಳ್ಳಲಿವೆ. 

Add Zee News as a Preferred Source
TAGS:
Kannada News