• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಮೈಸೂರು
  • /ರಾಜಕೀಯ ಲೇಪವಿಲ್ಲದೆ ವೈಭವದ ದಸರಾ ನಡೆಯಬೇಕು: ಸಿಎಂ ಡಿ ಕೆ ಶಿವಕುಮಾರ್

ರಾಜಕೀಯ ಲೇಪವಿಲ್ಲದೆ ವೈಭವದ ದಸರಾ ನಡೆಯಬೇಕು: ಸಿಎಂ ಡಿ ಕೆ ಶಿವಕುಮಾರ್

ಮೈಸೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಸರಾ ಪ್ರಗತಿ ಪರಿಶೀಲನಾ ಸಭೆ ಬಳಿಕ ಶಿವಕುಮಾರ್ ಅವರು ಪತ್ರಿಕಾಗೋಷ್ಠಿ ನಡೆಸಿ ಶನಿವಾರ ಮಾತನಾಡಿದರು.

Written ByChetana Devarmani
Published: Oct 03, 2026, 10:06 PM IST|Updated: Oct 03, 2026, 10:07 PM IST
joinshare
ರಾಜಕೀಯ ಲೇಪವಿಲ್ಲದೆ ವೈಭವದ ದಸರಾ ನಡೆಯಬೇಕು: ಸಿಎಂ ಡಿ ಕೆ ಶಿವಕುಮಾರ್

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

Trending

  • News
  • Photos
  • Videos
ಮನೆಯ ಮುಂದೆ ಮೆಟ್ಟಿಲುಗಳ ಸಂಖ್ಯೆ ಎಷ್ಟಿರಬೇಕು? ಇದರಲ್ಲೇ ಅಡಗಿದೆ ಸಂಪತ್ತಿನ ಸೀಕ್ರೇಟ್‌

ಮನೆಯ ಮುಂದೆ ಮೆಟ್ಟಿಲುಗಳ ಸಂಖ್ಯೆ ಎಷ್ಟಿರಬೇಕು? ಇದರಲ್ಲೇ ಅಡಗಿದೆ ಸಂಪತ್ತಿನ ಸೀಕ್ರೇಟ್‌

2

ಟೊಮೆಟೊ ತಿನ್ನೋ ಮುನ್ನ ಎಚ್ಚರ! ಈ 4 ಸಮಸ್ಯೆ ಇರುವವರು ದೂರವಿರುವುದೇ ಉತ್ತಮ

3

ಲಕ್ಷಾಂತರ ಭಕ್ತರ ನಡುವೆ ಅದ್ಧೂರಿಯಾಗಿ ನಡೆದ ಹಿಂದೂ ಮಹಾ ಗಣಪತಿ ಶೋಭಾಯಾತ್ರೆ

4

ರಾಜಕೀಯ ಲೇಪವಿಲ್ಲದೆ ವೈಭವದ ದಸರಾ ನಡೆಯಬೇಕು: ಸಿಎಂ ಡಿ ಕೆ ಶಿವಕುಮಾರ್

5

ಸುದೀಪ್‌ ಎದುರಲ್ಲೇ ಸ್ಪರ್ಧಿಗಳ ರಂಪಾಟ ಸ್ಟೇಜ್‌ ಬಿಟ್ಟು ಹೊರ ನಡೆದ ಕಿಚ್ಚ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಮೈಸೂರು: ರಾಜಕೀಯಕ್ಕೆ ಅವಕಾಶವಿಲ್ಲದಂತೆ ವೈಭವದಿಂದ ದಸರಾ ನಡೆಯಬೇಕು. ದಸರಾ ಮಹೋತ್ಸವದಲ್ಲಿ ಅಂಬಾರಿ ಹೊರಲು ಧನಂಜಯ, ಏಕಲವ್ಯ ಸೇರಿ ಐದು ಆನೆಗಳಿಗೆ ತರಬೇತಿ ನೀಡಲಾಗಿದೆ. ಇನ್ನೂ ಹೆಚ್ಚಿನ ತರಬೇತಿ ನೀಡಲುಅಧಿಕಾರಿಗಳಿಗೆ ಸೂಚಿಸಲಾಗಿದೆ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. "ರಾಜ ವಂಶಸ್ಥರಿಗೂ ಗೌರವ ಪೂರ್ವಕ ಆಹ್ವಾನ ನೀಡಬೇಕು. ಯಾರ ಸ್ಥಾನ, ಸ್ವಾಭಿಮಾನಕ್ಕೂ ಧಕ್ಕೆ ತರುವ ಕೆಲಸ ಆಗಬಾರದು. ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಹೋಗಬೇಕು. ಇಲ್ಲಿ ರಾಜಕೀಯಕ್ಕೆ ಅವಕಾಶವಿಲ್ಲದಂತೆ ವೈಭವದಿಂದ ದಸರಾ ನಡೆಸಲು ಸೂಚಿಸಲಾಗಿದೆ" ಎಂದರು. ಏಷ್ಯನ್ ಗೇಮ್ ನಲ್ಲಿ ಪದಕ‌ ಗೆದ್ದಿರುವ ರಾಜ್ಯದ ಕ್ರೀಡಾಪಟುಗಳನ್ನು ದಸರಾ ಕ್ರೀಡಾಕೂಟಕ್ಕೆ ಆಹ್ವಾನಿಸಿ ಗೌರವ ನೀಡಬೇಕು ಎಂದು ಸೂಚನೆ ನೀಡಿದರು.

"ದಸರಾ‌ ಹನ್ನೊಂದು ದಿನವೂ ದಿನಕ್ಕೆ ಇಬ್ಬರು ಸಚಿವರಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಬೆಂಬಲವಾಗಿ ಕೆಲಸ ಮಾಡಬೇಕು. ಏಕೆಂದರೆ ಒಬ್ಬರ ಮೇಲೆಯೇ ಒತ್ತಡ ಹೆಚ್ಚುವುದನ್ನು ತಪ್ಪಿಸಬೇಕು ಎನ್ನುವ ಕಾರಣಕ್ಕೆ ಈ ಕ್ರಮ ತೆಗೆದುಕೊಳ್ಳಲಾಗಿದೆ. ಎಲ್ಲರ ಸಲಹೆಯಂತೆ ದಸರಾ ಕಾರ್ಯಕ್ರಮ ನಡೆಸಬೇಕು" ಎಂದು ಸೂಚನೆ ನೀಡಿದರು.

"ನಗರದಲ್ಲಿ ಎಲ್ಲಿಯೂ ಖಾಸಗಿ ಪ್ಲೆಕ್ಸ್ ಗಳಿಗೆ ಅವಕಾಶ ನೀಡಬಾರದು. ನನ್ನ ಫೋಟೊ ಸೇರಿದಂತೆ ಯಾವ ಫೋಟೊಗಳನ್ನೂ ಹಾಕಬಾರದು. ದಸರಾ ಹಬ್ಬ ಮಾತ್ರ ವಿಜೃಂಭಿಸಬೇಕು. ದಸರಾ ಸೌಂದರ್ಯವನ್ನು ಯಾವ ಕಾರಣಕ್ಕೂ ಹಾಳುಗೆಡವಬಾರದು" ಎಂದು ಸೂಚಿಸಿದರು.

"ಈ ವರ್ಷ ದೀಪಾಲಂಕಾರವನ್ನು ವಿಶೇಷವಾಗಿ ಆಯೋಜನೆ ಮಾಡಲಾಗುವುದು. 21 ದಿನಗಳ ಕಾಲ ಇದು ನಡೆಯಲಿದೆ. ಯುವದಸರಾ ಕಂಬಳ ಸೇರಿದಂತೆ ಇತರೆಡೆ ಆಹಾರ ಮೇಳ ಆಯೋಜನೆ ಮಾಡಬೇಕು.‌ ಅಲ್ಲಲ್ಲಿ ಶೌಚಾಲಯ, ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚಿಸಿದರು. ಈ ಬಾರಿ ಯುವ ದಸರಾದಲ್ಲಿ ಎರಡು ಲಕ್ಷ ಜನ ಆಗಮಿಸುವ ನಿರೀಕ್ಷೆ ಇದೆ" ಎಂದರು.

ಹೋಟೆಲ್ ಗಳು ಯಾವುದೇ ಕಾರಣಕ್ಕೂ ಪ್ರವಾಸಿಗರಿಂದ ಸುಲಿಗೆ ಮಾಡಬಾರದು. ಗೌರವಯುತ ಮೊತ್ತ ಪಡೆಯಬೇಕು ಎಂದು ಸೂಚಿಸಲಾಗಿದೆ. ದೇಶ- ವಿದೇಶಗಳ ರಾಯಬಾರಿಗಳಿಗೆ ಆಹ್ವಾನ ನೀಡಲಾಗಿದೆ. ಅವರಿಗೂ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಲಾಗುವುದು. ಹಣ ಕೊಟ್ಟು ಜಂಬೂ ಸವಾರಿ ವೀಕ್ಷಣೆ ಮಾಡುವವರಿಗೆ ಸೂಕ್ತ ಆಸನ ವ್ಯವಸ್ಥೆ, ಆಸನಗಳಿಗೆ ನಂಬರ್ ಹಾಗೂ ಹೆಸರು ಹಾಕಬೇಕು. ಯಾರೋ ಬಂದು ಕೂರಬಾರದು. ಜೊತೆಗೆ ಎಷ್ಟು ಗಂಟೆಗೆ ಒಳಗೆ ಬರಬೇಕು ಎಂಬುದನ್ನೂ ತಿಳಿಸಬೇಕು ಎಂದು ಸೂಚಿಸಿದರು.

ದಸರಾ ಮೆರವಣಿಗೆ ಹೋಗುವಾಗ ಒಂದೇ ರೀತಿಯ ತಂಡಗಳಿಗೆ ಅವಕಾಶ ನೀಡಬಾರದು. ವೈವಿಧ್ಯಮಯ ಕಲಾ ತಂಡಗಳಿಗೆ ಅವಕಾಶ ನೀಡಬೇಕು. ಟ್ಯಾಬ್ಲೋಗಳೂ ಸಹ ಶಿಸ್ತು ಕಾಪಾಡಬೇಕು ಎಂದರು. "ಭಾನುವಾರ ಗವಿಸಿದ್ದೇಶ್ವರ‌ ಶ್ರೀಗಳನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಲು ಜಿಲ್ಲಾಡಳಿತ ತೆರಳಲಿದೆ. ಜಾತಿ, ಧರ್ಮ ಬೇಧವಿಲ್ಲದೆ ಎಲ್ಲ ಮಠಾಧೀಶರು, ಕ್ರೈಸ್ತ, ಬೌದ್ಧ, ಸಿಖ್, ಅಲ್ಪಸಂಖ್ಯಾತರು ಮತ್ತಿತರ ಧರ್ಮಗಳ ಗುರುಗಳನ್ನು ಆಹ್ವಾನಿಸಲು ಸೂಚಿಸಲಾಗಿದೆ. ಧಾರ್ಮಿಕ ಪ್ರಮುಖರಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಲಾಗುವುದು" ಎಂದರು.

"ಟಿಬೆಟಿಯನ್ನರಿಗೂ ದಸರಾ ಮೆರವಣಿಗೆಯಲ್ಲಿ ಟ್ಯಾಬ್ಲೋ ಪ್ರದರ್ಶನಕ್ಕೆ ಅವಕಾಶ ನೀಡಲಾಗಿದೆ. ಮಂಗಳೂರಿನ ಇತಿಹಾಸ ಬಿಂಬಿಸುವ ಟ್ಯಾಬ್ಲೋ, ಕೇರಳ,‌ ತಮಿಳುನಾಡು ಹಾಗೂ ಆಂದ್ರಪ್ರದೇಶದವರಿಗೂ ಅವರ ಪರಂಪರೆ ಬಿಂಬಿಸುವ ಟ್ಯಾಬ್ಲೋಗಳನ್ನು ಕಳುಹಿಸಿ ಎಂದು ಪತ್ರ ಬರೆಯಲಾಗಿದೆ. ಜೊತೆಗೆ ಚಿತ್ರರಂಗದವರೂ ಸಹ ಈ ಬಾರಿ ಭಾಗವಹಿಸಲು ಆಹ್ವಾನ ನೀಡಲಾಗಿದೆ. ಜಯಮಾಲ ಅವರೊಟ್ಟಿಗೆ ಈ ಬಗ್ಗೆ ಸಂವಹನ ನಡೆಸಲಾಗಿದೆ" ಎಂದರು.

"ತುಳುನಾಡಿಗೆ ಸುದೀರ್ಘ ಇತಿಹಾಸವಿದೆ. ಅವರ  ಭಾವನಾತ್ಮಕ ವಿಚಾರಕ್ಕೆ ಗೌರವ ಸಲ್ಲಿಸಿದ್ದು, ಅವರ ಸಂಸ್ಕೃತಿ ಬಿಂಬಿಸಲು ಪ್ರತ್ಯೇಕ ಸ್ತಬ್ಧಚಿತ್ರ ಸಿದ್ಧಪಡಿಸಲು ಆಹ್ವಾನಿಸಲಾಗಿದೆ" ಎಂದರು ಸೂಚಿಸಿದರು.

"ದಸರಾ ಸಂದರ್ಭದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುವ ಪೌರಕಾರ್ಮಿಕರ ಕಾರ್ಯವನ್ನು  ಸೂಕ್ತ ರೀತಿಯಲ್ಲಿ ಗೌರವ ನೀಡಲಾಗುವುದು. ಚಾಮರಾಜನಗರ, ಮಡಿಕೇರಿ, ಶ್ರೀರಂಗಪಟ್ಟಣ ‌ದಸರಾ ಎಂದಿನಂತೆ ನಡೆಯಲಿದೆ. ಐತಿಹಾಸಿಕವಾದ ಡ್ರೋ‌ಣ್ ಶೋ ಆಯೋಜನೆ ಮಾಡಲಾಗುವುದು" ಎಂದರು.

"ಭೂ ಸೇನೆ, ವಾಯು ಹಾಗೂ ಜಲಸೇನೆ ಮೂರು ತಂಡಗಳು ಜಂಬೂಸವಾರಿಯಲ್ಲಿ ಭಾಗವಹಿಸಲು ಒಪ್ಪಿಗೆ ನೀಡಿದ್ದು, ಇವರ ಶಿಸ್ತು ಎಲ್ಲರಿಗೂ‌ ಮಾದರಿಯಾಗಬೇಕು. ಕಂಬಳವು ಸಂಪ್ರದಾಯದ ಪ್ರಕಾರ ನಡೆಯಬೇಕು. ಜನರಿಗೆ ವೀಕ್ಷಿಸಲು ಅಲ್ಲಲ್ಲಿ ಎಲ್.ಇ.ಡಿ ಪರದೆಗಳನ್ನು ಅಳವಡಿಸಿ ನೇರ ಪ್ರಸಾರ ನಡೆಯುವಂತೆ ನೋಡಿಕೊಳ್ಳಬೇಕು. ರಸ್ತೆಗಳಲ್ಲಿ ಫ್ಲೆಕ್ಸ್ ಅಳವಡಿಸಬಾರದು ಎಂದು ಸೂಚಿಸಲಾಗಿದೆ" ಎಂದರು.

"ಮೆರವಣಿಗೆಯಲ್ಲಿ ಕಲಾತಂಡಗಳು ಪುನರಾವರ್ತನೆಯಾಗಬಾರದು. ಕಲಾವಿದರು ಹಾಗೂ ಸುತ್ತಮುತ್ತಲು ಮೊಬೈಲ್ ಬಳಕೆ ಮಾಡಬಾರದು. ಧರಿಸುವ ಸಮವಸ್ತ್ರಗಳು ಒಂದೇ ರೀತಿ ಇರಬೇಕು" ಎಂದು ತಿಳಿಸಿದರು.

ಹಣ ಕೊಟ್ಟು ಟಿಕೇಟ್ ಖರೀದಿಸಿ ಜಂಬೂಸವಾರಿ ವೀಕ್ಷಿಸಲು ಆಗಮಿಸುವವರಿಗೆ ಸೂಕ್ತ ಆಸನದ ವ್ಯವಸ್ಥೆಯಾಗಬೇಕು‌‌. ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಸಚಿವರಿಗೆ ಕಡ್ಡಾಯವಾಗಿ ಆಹ್ವಾನ ಪತ್ರಿಕೆ ತಲುಪಬೇಕು" ಎಂದು ಹೇಳಿದರು.

Add Zee News as a Preferred Source
TAGS:
Kannada News