• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಮೈಸೂರು
  • /ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ತಲಕಾವೇರಿ ತಲುಪಿದ ದೇವ ಬಂಡಾರ... ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ತಲಕಾವೇರಿ ತಲುಪಿದ ದೇವ ಬಂಡಾರ... ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದ್ದು ದೇವ ಬಂಡಾರ ತಲಕಾವೇರಿ ಭಾಗಮಂಡಲ ದೇವಾಲಯದಿಂದ ತಲಕಾವೇರಿಗೆ ತಲುಪಿದೆ.

Written ByYashaswini V
Published: Oct 17, 2026, 07:25 AM IST|Updated: Oct 17, 2026, 07:27 AM IST
joinshare
ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ತಲಕಾವೇರಿ ತಲುಪಿದ ದೇವ ಬಂಡಾರ... ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

About the Author

Yashaswini V

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 
Read More

Trending

  • News
  • Photos
  • Videos
"ಐ ಲವ್ ಯು ಡ್ಯಾಡ್ ಆಂಡ್‌ ಮಾಮ್" : ತಂದೆ-ತಾಯಿಗೆ ಮೆಸೇಜ್ ಕಳುಹಿಸಿ ಯುವತಿ ಆತ್ಮಹ*ತ್ಯೆ

"ಐ ಲವ್ ಯು ಡ್ಯಾಡ್ ಆಂಡ್‌ ಮಾಮ್" : ತಂದೆ-ತಾಯಿಗೆ ಮೆಸೇಜ್ ಕಳುಹಿಸಿ ಯುವತಿ ಆತ್ಮಹ*ತ್ಯೆ

2

ಹಬ್ಬದ ಸೀಸನ್‌ನಲ್ಲಿ ಟೊಯೋಟಾ ಅಗ್ಗದ ಕಾರು ಬಿಡುಗಡೆ! ಸುರಕ್ಷತಾ ಫೀಚರ್ಸ್‌ ಮಾತ್ರ ಸೂಪರ್!

3

ಮಾಧ್ಯಮದ ಹೆಸರಲ್ಲಿ ವಸೂಲಿ: ಸಲೂನ್ ಮೇಲೆ ದಾಳಿ ಮಾಡಿ ಸಿಕ್ಕಿಬಿದ್ದ ಐನಾತಿ ಲೇಡಿ ಗ್ಯಾಂಗ್!

4

SBIಯಲ್ಲಿ 180 ದಿನಗಳ FD ಇಟ್ಟರೆ ಎಷ್ಟು ಬಡ್ಡಿ ಸಿಗುತ್ತೆ? ಹಿರಿಯ ನಾಗರಿಕರಿಗೆ ಎಷ್ಟು ಲಾಭ!

5

ಕಾವ್ಯ ಮಾರನ್‌ - ಅನಿರುದ್ಧ್​ ಮದುವೆ.. ಇಬ್ಬರ ಆಸ್ತಿ ಲೆಕ್ಕಚಾರ ಕೇಳಿದ್ರೆ ನಿಮ್ಮ ತಲೆ ಗಿರ್‌ ಅನ್ನುತ್ತೆ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಮಡಿಕೇರಿ: ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದೆ. ಅಕ್ಟೋಬರ್ 17 ರ ಈ ದಿನ ಶನಿವಾರ ರಾತ್ರಿ 7.50 ಗಂಟೆಗೆ ತುಲಾ ಸಂಕ್ರಮಣದಲ್ಲಿ ಕಾವೇರಿ ಪವಿತ್ರ ತೀರ್ಥೋದ್ಬವ ಆಗಲಿದೆ ಎನ್ನಲಾಗಿದೆ. ಕಾವೇರಿ ತೀರ್ಥೋದ್ಭವವನ್ನು ಕಣ್ತುಂಬಿಕೊಳ್ಳಲು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುವುದರಿಂದ ಇದಕ್ಕಾಗಿ ಜಿಲ್ಲಾಡಳಿತದ ವತಿಯಿಂದ ಅಗತ್ಯವಿರುವ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ.

ತಲಕಾವೇರಿ ತಲುಪಿದ ದೇವ ಬಂಡಾರ: 
ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿರುವ ಹಿನ್ನಲೆಯಲ್ಲಿ ದೇವ ಬಂಡಾರ  ಭಾಗಮಂಡಲ ದೇವಾಲಯದಿಂದ ತಲಕಾವೇರಿಗೆ ತಲುಪಿದೆ. ಕೊಡಗಿನ ಸಾಂಪ್ರದಾಯಿಕ ಮತ್ತು ಧಾರ್ಮಿಕ ಇತಿಹಾಸದಲ್ಲಿ ಪ್ರಮುಖ ಸ್ಥಾನ ಹೊಂದಿರುವ ʼದೇವ ತಕ್ಕ‌ʼ ಕೋಡಿ ಕುಟುಂಬಸ್ಥರ ಮುಂದಾಳತ್ವದಲ್ಲಿ ಬಂಡಾರ ಪೆಟ್ಟಿಗೆ ಸಾಂಪ್ರದಾಯಿಕ ಉಡುಪಿನಲ್ಲಿ ತಲಕಾವೇರಿ ಕ್ಷೇತ್ರಕ್ಕೆ ಆಗಮಿಸಿದೆ.

ಬಂಡಾರ ಪೆಟ್ಟಿಗೆಯಲ್ಲಿ ಏನೆಲ್ಲಾ ಇರಲಿದೆ?
ಭಾಗಮಂಡದ ತಿಜೋರಿಯಿಂದ ತಲಕಾವೇರಿ ಕ್ಷೇತ್ರಕ್ಕೆ ಆಗಮಿಸಿದ ಈ ದೇವರ ಬಂಡಾರ ಪೆಟ್ಟಿಗೆಯಲ್ಲಿ ದೇವಿಯ ಆಭರಣಗಳು,  ಗುಡಿಗೆ ತೊಡಿಸುವ ಬೆಳ್ಳಿಯ ಕವಚ, ಅಗತ್ಸ್ಯ  ಹಾಗೂ ಗಣಪತಿ ಗುಡಿಗೆ ತೊಡಿಸುವ ಆಭರಣಗಳಿರುತ್ತವೆ.

ಮೇಷ ಲಗ್ನದಲ್ಲಿ ತುಲಾ ಸಂಕ್ರಮಣದಲ್ಲಿ ಪವಿತ್ರ ಕಾವೇರಿ ತೀರ್ಥೋದ್ಭವ:
ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಮೇಷ ಲಗ್ನದಲ್ಲಿ ಕಾವೇರಿ ತುಲಾ ಸಂಕ್ರಮಣದಲ್ಲಿ ಪವಿತ್ರ ತೀರ್ಥೋದ್ಭವ ಜರುಗಲಿದ್ದು, ಈ ಅಪೂರ್ವ ಕ್ಷಣಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕೃಷಿ ಸಚಿವ ಪಿ.ಎಂ.ನರೇಂದ್ರಸ್ವಾಮಿ ಅವರು ಸಾಕ್ಷಿಯಾಗಲಿದ್ದು, ಈ ಸಂದರ್ಭದಲ್ಲಿ ಕಾವೇರಿ ಮಾತೆಗೆ ವಿಶೇಷ ಪೂಜೆ ನೆರವೇರಿಸಲಿದ್ದಾರೆ.

ಕಾವೇರಿ ತೀರ್ಥೋದ್ಭವಕ್ಕೆ ಜಿಲ್ಲಾಡಳಿತದಿಂದ ಸಿದ್ಧತೆ:
ತಲಕಾವೇರಿಯಲ್ಲಿ ಪವಿತ್ರ ತೀರ್ಥ ಪಡೆಯಲು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಭಕ್ತರಿಗೆ ಕುಡಿಯುವ ನೀರಿನ ವ್ಯವಸ್ಥೆ ಜೊತೆಗೆ ಸಾರ್ವಜನಿಕರು, ಗಣ್ಯರು ಹಾಗೂ ಪತ್ರಕರ್ತರಿಗೆ ಪ್ರತ್ಯೇಕ ಬ್ಯಾರಿಕೇಡ್ ಅಳವಡಿಸಲಾಗಿದೆ.

ಜೀವನದಿ ಕಾವೇರಿ ಉಗಮ ಸ್ಥಾನ ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವದ ಹಿನ್ನಲೆಯಲ್ಲಿ ತಲಕಾವೇರಿ ನವ ವಧುವಿನಂತೆ ಸಿಂಗಾರಗೊಂಡಿದ್ದು, ಹೂವಿನ ಅಲಂಕಾರ ಸೇರಿದಂತೆ ಹಲವು ಸಿದ್ಧತೆಗಳು ಭರದಿಂದ ಸಾಗಿವೆ. ಕೊಡಗು ಏಕೀಕರಣ ರಂಗದಿಂದ ಪ್ರಸಾದ ವಿತರಣೆ ನಡೆಯಲಿದೆ. ಭಾಗಮಂಡಲದಿಂದ-ತಲಕಾವೇರಿವರೆಗೆ ಬೆಳಕಿನ ವ್ಯವಸ್ಥೆ ಮಾಡಲಾಗಿದೆ.

ಕೆಎಸ್‌ಆರ್‌ಟಿಸಿಯಿಂದ ಭಕ್ತರಿಗೆ ಉಚಿತ ಪ್ರಯಾಣಕ್ಕೆ ಅವಕಾಶ‌:
ಕಳೆದ ಬಾರಿಯಂತೆ ಈ ಬಾರಿಯೂ ಕೆಎಸ್ಆರ್‌ಟಿಸಿಯಿಂದ 25 ಬಸ್ ವ್ಯವಸ್ಥೆ ಮಾಡಲಾಗಿದ್ದು, ಭಕ್ತರಿಗೆ ಉಚಿತ ಪ್ರಯಾಣಕ್ಕೆ ಅವಕಾಶ‌ ಕಲ್ಪಿಸಲಾಗಿದೆ.

ಕಾವೇರಿ ತೀರ್ಥೋದ್ಭವಕ್ಕೆ ಆಗಮಿಸುವ ಭಕ್ತರಿಗೆ ಮನರಂಜನೆ ನೀಡುವ ನಿಟ್ಟಿನಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸಹಯೋಗದಲ್ಲಿ ಗೀತಾ ಗಾಯನ ಕಾರ್ಯಕ್ರಮವನ್ನೂ ಸಹ ಆಯೋಜಿಸಲಾಗಿದೆ.  

ಭಕ್ತರ ವಾಹನಗಳ ನಿಲುಗಡೆಗೂ ಸೂಕ್ತ ವ್ಯವಸ್ಥೆ:
ಪೊಲೀಸ್ ಇಲಾಖೆಯಿಂದ ಅಗತ್ಯ ಬಂದೋಬಸ್ತ್ ಮಾಡಲಾಗಿದೆ. ಅಗತ್ಯ ಇರುವ ಕಡೆಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. ತೀರ್ಥೋದ್ಭವಕ್ಕೆ ಆಗಮಿಸುವ ಭಕ್ತರ ವಾಹನಗಳ ನಿಲುಗಡೆಗಾಗಿ ಒಟ್ಟು 4 ಕಡೆ ವ್ಯವಸ್ಥೆ ಕಲ್ಪಿಸಲಾಗಿದೆ.

ತಲಕಾವೇರಿಯಲ್ಲಿ ಪಾರ್ಕಿಂಗ್ ಸ್ಥಳ ಭರ್ತಿಯಾದ ನಂತರ, ಭಾಗಮಂಡಲದ ಪ್ರಾಥಮಿಕ ಶಾಲಾ ಮೈದಾನದಲ್ಲಿ ವಾಹನಗಳನ್ನು ನಿಲ್ಲಿಸಿ ಮಾರುಕಟ್ಟೆ ಜಂಕ್ಷನ್‌ನಿಂದ ಬಸ್ ಮೂಲಕ ತಲಕಾವೇರಿಗೆ ತೆರಳಬೇಕು.

ಭಾಗಮಂಡಲದ ಚಾಮುಂಡಿಕಳದಲ್ಲಿ ವಾಹನ ಪಾರ್ಕಿಂಗ್ ವ್ಯವಸ್ಥೆ ಇದ್ದು, ಅಲ್ಲಿ ವಾಹನ ನಿಲ್ಲಿಸಿ ಬಸ್ಸಿನಲ್ಲಿ ತಲಕಾವೇರಿಗೆ ತೆರಳಲು ವ್ಯವಸ್ಥೆ ಮಾಡಲಾಗಿದೆ.

ಭಾಗಮಂಡಲದಲ್ಲೂ ವಾಹನ ನಿಲುಗಡೆ ಭರ್ತಿಯಾದರೆ, ತಾವೂರು ಕಾವೇರಿ ಕಾಲೇಜು ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ.
 

Add Zee News as a Preferred Source
TAGS:
Kannada News