• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಮೈಸೂರು
  • /ನಾಲೆಯಲ್ಲಿ ಈಜಲು ಹೋದ ಬಾಲಕನ ಮೇಲೆ ಮೊಸಳೆ ದಾಳಿ... ಬಾಲಕನಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ನಾಲೆಯಲ್ಲಿ ಈಜಲು ಹೋದ ಬಾಲಕನ ಮೇಲೆ ಮೊಸಳೆ ದಾಳಿ... ಬಾಲಕನಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ನಾಲೆಯಲ್ಲಿ ಈಜಲು ಹೋಗಿದ್ದ ಬಾಲಕನ ಮೇಲೆ ಮೊಸಳೆ ದಾಳಿ ನಡೆದಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿ ಬಳಿ ನಡೆದಿದೆ.

Written ByYashaswini V
Published: Oct 07, 2026, 01:01 PM IST|Updated: Oct 07, 2026, 01:03 PM IST
joinshare
ನಾಲೆಯಲ್ಲಿ ಈಜಲು ಹೋದ ಬಾಲಕನ ಮೇಲೆ ಮೊಸಳೆ ದಾಳಿ... ಬಾಲಕನಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

About the Author

Yashaswini V

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 
Read More

Trending

  • News
  • Photos
  • Videos
ಪ್ರತಿಷ್ಠಿತ ಆಶ್ರಮಕ್ಕೆ ಭೇಟಿಗೆ ಕೋಟಿ ಕೋಟಿ ಹಣ ಪಡೆದ್ರಾ ಕಿಂಗ್‌ ಕೊಹ್ಲಿ.. 5 ಕೋಟಿ ಕೊಟ್ಟಿದ್ದು ನಿಜನಾ?

ಪ್ರತಿಷ್ಠಿತ ಆಶ್ರಮಕ್ಕೆ ಭೇಟಿಗೆ ಕೋಟಿ ಕೋಟಿ ಹಣ ಪಡೆದ್ರಾ ಕಿಂಗ್‌ ಕೊಹ್ಲಿ.. 5 ಕೋಟಿ ಕೊಟ್ಟಿದ್ದು ನಿಜನಾ?

2

ನಾಲೆಯಲ್ಲಿ ಈಜಲು ಹೋದ ಬಾಲಕನ ಮೇಲೆ ಮೊಸಳೆ ದಾಳಿ... ಬಾಲಕನಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

3

ಸಚಿವರ ದಿಢೀರ್‌ ಭೇಟಿ ಎಫೆಕ್ಟ್‌.. ಪಾಲಿಕೆ ಕಾಮಗಾರಿಗಳ ಪರಿಶೀಲನೆಗೆ ಇಳಿದ ಲೋಖಂಡೆ ಸ್ನೇಹಲ್‌ ಸುಧಾಕರ್‌

4

ಸರ್ಕಾರಿ ಬೊಕ್ಕಸಕ್ಕೆ ಕೋಟ್ಯಾಂತರ ರೂಪಾಯಿ ವಂಚನೆ.. ಅಕ್ರಮವಾಗಿ ಖಾಯಂಗೊಂಡ ಪೌರ ಕಾರ್ಮಿಕರು

5

RBI MPC: ಮೂರೂವರೆ ವರ್ಷಗಳ ಬಳಿಕ ರೆಪೋ ರೇಟ್‌ ಹೆಚ್ಚಿಸಿದ ಆರ್‌ಬಿಐ.. ಬ್ಯಾಂಕ್‌ ಗ್ರಾಹಕರ ಮೇಲೆ ನೇರ ಪರಿಣಾಮ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಸ್ನೇಹಿತರೊಂದಿಗೆ ನಾಲೆಗೆ ಈಜಲು ಹೋಗಿದ್ದ ಮಹಾರಾಷ್ಟ್ರ ಮೂಲದ ಬಾಲಕನ ಮೇಲೆ ಮೊಸಳೆ ದಾಳಿ ನಡೆಸಿರುವ ಆತಂಕಕಾರಿ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿ ಗ್ರಾಮದ ಬಳಿ ಇರುವ ವಿರಿಜಾ ನಾಲೆಯಲ್ಲಿ ನಡೆದಿದೆ. ಈ ದುರ್ಘಟನೆಯಲ್ಲಿ ಬಾಲಕನಿಗೆ ಗಂಭೀರ ಗಾಯಗಳಾಗಿದ್ದು ಆತನನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕಬ್ಬು ಕಡಿಯುವ ಕೆಲಸಕ್ಕೆಂದು ಕುಟುಂಬದೊಂದಿಗೆ ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿ ಬಳಿ ಬಂದಿದ್ದ ಮಹಾರಾಷ್ಟ್ರ ಮೂಲದ ವಿಶಾಲ್ ರಾವತ್ (13) ನೆನ್ನೆ (ಅ.6 ಮಂಗಳವಾರ) ಸಂಜೆ  ಸ್ನೇಹಿತರೊಂದಿಗೆ ಕೂಡಿ ಈಜಲು ವಿರಿಜಾ ನಾಲೆ ಬಳಿ ಹೋಗಿದ್ದಾಗ ಯಮರಾಯನಂತೆ ಬಂದ ಮೊಸಳೆ ಬಾಲಕನ ಮೇಲೆ ದಾಳಿ ನಡೆಸಿದೆ.

ಸ್ನೇಹಿತರ ಸಮಯ ಪ್ರಜ್ಞೆಯಿಂದ ಬದುಕಿ ಬಂದ ವಿಶಾಲ್ ರಾವತ್!
ವಿಶಾಲ್ ರಾವತ್ ಮೇಲೆ ಮೊಸಳೆ ದಾಳಿ ಮಾಡುವುದನ್ನು ಗಮನಿಸಿದ ಜೊತೆಗಿದ್ದ ಸ್ನೇಹಿತರು ಈ ವೇಳೆ ಸಮಯ ಪ್ರಜ್ಞೆ ಮೆರೆದಿದ್ದು ಮೊಸಳೆ ದಾಳಿ ಮಾಡುತ್ತಿದ್ದಂತೆ ಕೈಗೆ ಸಿಕ್ಕ ಕಲ್ಲು ಕಟ್ಟಿಗೆಯಿಂದ ಮೊಸಳೆಗೆ ಹೊಡೆಯಲು ಯತ್ನಿಸಿದ್ದು ಈ ಸಂದರ್ಭದಲ್ಲಿ ಮೊಸಳೆ ಆ ಜಾಗದಿಂದ ಕಾಲ್ಕಿತ್ತಿದೆ.

ವಿಶಾಲ್‌ ರಾವುತ್‌ ಸ್ನೇಹಿತರು ಮೊಸಳೆಯ ಪಾಶದಿಂದ ಆತನನ್ನು ರಕ್ಷಿಸುವಲ್ಲಿ ಯಶಸ್ವಿ ಆದರಾದರೂ, ಈ ಭಯಾನಕ ಘಟನೆಯಲ್ಲಿ ಬಾಲಕನಿಗೆ ತೀವ್ರ ಗಾಯಗಳಾಗಿವೆ. ಸದ್ಯ ಬಾಲಕನನ್ನು ಮೈಸೂರಿನ   ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ವರದಿ ಆಗಿದೆ.

ರಂಗನತಿಟ್ಟು ಪಕ್ಷಿಧಾಮದಿಂದ ಮೊಸಳೆ ನಾಲೆಗೆ ಬಂದಿರುವ ಶಂಕೆ!
ಇನ್ನು ಘಟನೆ ಬಗ್ಗೆ ಮಾಹಿತಿ ಪಡೆಯುತ್ತಿದ್ದಂತೆ ಆಸ್ಪತ್ರೆಗೆ ಭೇಟಿ ನೀಡಿ ಬಾಲಕನ ಆರೋಗ್ಯ ವಿಚಾರಿಸಿ ಮೊಸಳೆ ಬಗ್ಗೆ ಮಾಹಿತಿ ಪಡೆದಿರುವ ಅರಣ್ಯ ಇಲಾಖೆ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ರೀರಂಗಪಟ್ಟಣದ ಪಾಲಹಳ್ಳಿ ಬಳಿ ಇರುವ ವಿರಿಜಾ ನಾಲೆಗೆ ಪಕ್ಕದ ರಂಗನತಿಟ್ಟು ಪಕ್ಷಿಧಾಮದಿಂದ ಮೊಸಳೆ ಬಂದಿರಬಹುದು ಎಂದು ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.

ಮೊಸಳೆ ಸೆರೆಗೆ ಕೂಬಿಂಗ್:
ಈಜಲು ಹೋಗಿದ್ದ ಬಾಲಕನ ಮೇಲೆ ಮೊಸಳೆ ದಾಳಿಯಿಂದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ಇಂದು (ಅ. 7) ನಾಲೆಯಲ್ಲಿರುವ ಮೊಸಳೆ ಸೆರೆಗೆ ಕೂಬಿಂಗ್ ಕಾರ್ಯಾಚರಣೆಗೆ ಸಿದ್ದತೆ ನಡೆಸಲಾಗಿದೆ. ಇನ್ನು ಈ ಘಟನೆ ಸಂಬಂಧ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. 

Add Zee News as a Preferred Source
TAGS:
Kannada News