SOCIAL MEDIA

Newsletter

PARTNER SITES
Select Language Select State

ಇಂದಿನಿಂದ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವ: ಮಾದಪ್ಪನ ಸನ್ನಿಧಿಗೆ ಹೋಗೋ ಮುನ್ನ ಈ ನಿಯಮ ತಿಳಿಯಿರಿ

ಇಂದಿನಿಂದ ಕರ್ನಾಟಕದ ಪ್ರಸಿದ್ದ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವ ಜರುಗಲಿದೆ. ಇದು ಇಂದಿನಿಂದ ನವೆಂಬರ್‌ 10ರ ವರೆಗೆ ಭಾರೀ ಅದ್ದೂರಿಯಾಗಿ ನೆರವೇರಲಿದ್ದು, ಇಲ್ಲಿಗೆ ಭಕ್ತ ಸಾಗರವೇ ಹರಿದುಬರುತ್ತಿದೆ. ಇದರಿಂದ ಜನ ದಟ್ಟಣೆ ಹಾಗೂ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಜಿಲ್ಲಾಡಳಿತ ಹಾಗೂ ಪೊಲೀಸ್‌ ಇಲಾಖೆ ಕಟ್ಟುನಿಟ್ಟಿನ ಕ್ರಮ ನೀಡಿದೆ.

Written By Yashaswini V
Published: Nov 06, 2026, 14:05 IST | Updated: Nov 06, 2026, 14:09 IST
Join

ಇಂದಿನಿಂದ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವ ಜರುಗಲಿದ್ದು, ನ. 10ರ ವರೆಗೆ ಭಾರೀ ಸಂಭ್ರಮದಿಂದ ನಡೆಯಲಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ 5 ದಿನಗಳ ಕಾಲ ನಡೆಯುವ ಈ ಪ್ರಸಿದ್ಧ ಜಾತ್ರೆಗೆ ಇಂದು ಅದ್ದೂರಿ ಚಾಲನೆ ದೊರಕಿದೆ. ಕರುನಾಡಿನ ಆರಾಧ್ಯ ದೇವ ಮಹದೇಶ್ವರನ ದರ್ಶನ ಪಡೆಯಲು ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಲಕ್ಷಾಂತರ ಭಕ್ತ ಸಾಗರ ಹರಿದು ಬರುತ್ತಿದೆ. ಜಾತ್ರೆಯ ಮುಖ್ಯ ಆಕರ್ಷಣೆಯಾದ ದೀಪಾವಳಿ ಮಹಾರಥೋತ್ಸವವು ನ. 10ರ ಭಾನುವಾರ ಬೆಳಗ್ಗೆ 7.30ರಿಂದ 8.40ರ ಶುಭ ಲಗ್ನದಲ್ಲಿ ನೆರವೇರಲಿದೆ.  

ಕರ್ನಾಟಕ ಮಾತ್ರವಲ್ಲದೇ ನೆರೆಯ ರಾಜ್ಯಗಳಾದ ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಿಂದ ಮಾದಪ್ಪನ ಭಕ್ತರು ಬೆಟ್ಟದತ್ತ ಹೆಜ್ಜೆ ಹಾಕುತ್ತಿದ್ದಾರೆ. ಈ 5 ದಿನದ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ದೀಪಾವಳಿ ಮಹೋತ್ಸವವು  ಅತ್ಯಂತ ವಿಜೃಂಭಣೆಯಿಂದ ನೆರವೇರಲಿದೆ.

ಬೆಟ್ಟಕ್ಕೆ ದ್ವಿಚಕ್ರ ವಾಹನ ಮತ್ತು ಆಟೋ ಸಂಚಾರ ನಿರ್ಬಂಧ:
ಜಾತ್ರಾ ಮಹೋತ್ಸವದ ಕಾರಣದಿಂದ ಬೆಟ್ಟಕ್ಕೆ ಕಿಕ್ಕಿರಿದು ಭಕ್ತರು ಬರುತ್ತಾರೆ ಇದರಿಂದ ಜನ ದಟ್ಟಣೆ ಹಾಗೂ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳುವುದು ಪೊಲೀಸರಿಗೆ ಮತ್ತು ಜಿಲ್ಲಾಡಳಿತಕ್ಕೆ ಬಹು ದೊಡ್ಡ ಸವಾಲಾಗಿದೆ. ಇದನ್ನು ತಡೆಗಟ್ಟುವ ಉದ್ದೇಶದಿಂದ ನ. 6 ಅಂದರೆ ಇಂದು ಸಂಜೆಯಿಂದ ನ. 10 ಭಾನುವಾರದ ಸಂಜೆ 6 ಗಂಟೆವರೆಗೆ  ಮಲೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ ವಾಹನ ಮತ್ತು ಆಟೋ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಬೆಟ್ಟದ ಕಿರಿದಾದ ತಿರುವುಗಳಲ್ಲಿ ಅಪಘಾತಗಳನ್ನು ತಡೆಯಲು ಮತ್ತು ಪಾದಚಾರಿ ಭಕ್ತರಿಗೆ ತೊಂದರೆಯಾಗದಂತೆ ಈ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ. ಬೆಟ್ಟದ ಕಿರಿದಾದ ತಿರುವುಗಳಲ್ಲಿ ಅಪಘಾತಗಳನ್ನು ತಡೆಯಲು ಮತ್ತು ಪಾದಚಾರಿ ಭಕ್ತರಿಗೆ ತೊಂದರೆಯಾಗದಂತೆ ಈ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ.

350ಕ್ಕೂ ಹೆಚ್ಚು ಬಸ್‌ಗಳ ನಿಯೋಜನೆ: 
ಜಾತ್ರಾ ಅವಧಿಯಲ್ಲಿ ಬೆಟ್ಟಕ್ಕೆ ದ್ವಿಚಕ್ರ ವಾಹನ ಮತ್ತು ಆಟೋ ಸಂಚಾರ ನಿಷೇಧಿಸಿರುವುದರಿಂದ, ಭಕ್ತಾಧಿಗಳಿಗೆ ಯಾವುದೇ ರೀತಿಯ ಸಾರಿಗೆ ತೊಂದರೆಯಾಗದಂತೆ ಹೆಚ್ಚುವರಿ ಕೆಎಸ್‌ಆರ್ಟಿಸಿ ಬಸ್‌ ಬಿಡುಗಡೆ ಮಾಡಿದ್ದಾರೆ. ಚಾಮರಾಜನಗರ, ಕೊಳ್ಳೇಗಾಲ, ಮೈಸೂರು, ಬೆಂಗಳೂರು ರಾಜ್ಯದ ಪ್ರಮುಖ ಕೇಂದ್ರಗಳಿಂದ ಬಸ್‌ ಬಿಡುಗಡೆ ಮಾಡಲಾಗಿದ್ದು, ಭಕ್ತಾಧಿಗಳು ಈ ಬಸ್‌ ವ್ಯವಸ್ಥೆ ಬಳಸಿಕೊಂಡು ಸುರಕ್ಷಿತವಾಗಿ ಮಾದಪ್ಪನ ದರ್ಶನ ಪಡೆಯುವಂತೆ ಕೋರಲಾಗಿದೆ

ದೀಪಾವಳಿ ಮಹಾ ರಥೋತ್ಸವದ ಸಿದ್ದತೆ:
ಜಾತ್ರೆಯ ಮೊದಲ ದಿನವಾದ ಇಂದು (ನ. 6) ಬೆಟ್ಟದಲ್ಲಿ ವಿಶೇ಼ ಪೂಜೆ, ಧಾರ್ಮಿಕ ವಿಧಿವಿಧಾನಗಳು ಆರಂಭಗೊಂಡಿದ್ದು, ಇಡೀ ದೇವಸ್ಥಾನದ ಆವರಣವನ್ನು ಮಿನುಗುವ ದೀಪಗಳಿಂದ ಹಾಗೂ ಆಕರ್ಷಕ ಹೂವುಗಳಿಂದ ಅಲಂಕರಿಸಲಾಗಿದೆ. ನ. 10ರಂದು ನಡೆಯುವ ಈ ಮಹಾರಥೋತ್ಸವವನ್ನು ಕಂಣ್ತುಂಬಿಸಿಕೊಳ್ಳಲು ಲಕ್ಷಾಂತರ ಜನರು ಈಗಾಗಲೇ ಬೆಟ್ಟದಲ್ಲೇ ಬೀಡುಬಿಟ್ಟಿದ್ದಾರೆ. ಭಕ್ತರಿಗಾಗಿ ಕುಡಿಯುವ ನೀರು, ವಸತಿ, ಶೌಚಾಲಯ ಹಾಗೂ ಪ್ರಸಾದದ ವ್ಯವಸ್ಥೆಯನ್ನು ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರವು ಅಚ್ಚು ಕಟ್ಟಾಗಿ ನಿರ್ವಹಿಸುತ್ತಿದೆ. ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಬೆಟ್ಟದ ಸುತ್ತಮುತ್ತ ನೂರಾರು ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಸಿಸಿಟಿವಿ ಕ್ಯಾಮೆರಾಗಳ ಮೂಲಕ ಕಣ್ಗಾವಲು ಇಡಲಾಗಿದೆ. ಇದೀಗ ಜಿಲ್ಲಾಡಳಿತವು ಖಾಸಗಿ ವಾಹನಗಳನ್ನು ಬಿಟ್ಟು ಸರ್ಕಾರ ಕಲ್ಪಿಸಿರುವ ವಿಶೇಷ ಬಸ್‌ ವ್ಯವಸ್ಥೆಯನ್ನು ಸದುಪಯೋಗ ಪಡೆಸಿಕೊಳ್ಳಬೇಕೆಂದು ಜಿಲ್ಲಾಡಳಿತ ವಿನಂತಿಸಿದೆ. 
 

Add Zee News as a Preferred Source
TAGS:

About the Author

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 
Read More

ZEENEWS TRENDING STORIES